< 詩篇 34 >
1 ダビデがアビメレクの前で狂ったさまをよそおい、追われて出ていったときの歌 わたしは常に主をほめまつる。そのさんびはわたしの口に絶えない。
೧ದಾವೀದನು ಅಬೀಮೆಲೆಕನ ಎದುರಿನಲ್ಲಿ ಹುಚ್ಚನಂತೆ ತೋರ್ಪಡಿಸಿಕೊಂಡು ಅವನ ಬಳಿಯಿಂದ ಹೊರಟಾಗ ರಚಿಸಿದ ಕೀರ್ತನೆ. ನಾನು ಯೆಹೋವನನ್ನು ಎಡೆಬಿಡದೆ ಕೊಂಡಾಡುವೆನು; ಆತನ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿ ಇರುವುದು.
2 わが魂は主によって誇る。苦しむ者はこれを聞いて喜ぶであろう。
೨ನನ್ನ ಮನಸ್ಸು ಯೆಹೋವನಲ್ಲಿ ಹಿಗ್ಗುತ್ತಿರುವುದು; ಇದನ್ನು ದೀನರು ಕೇಳಿ ಸಂತೋಷಿಸುವರು.
3 わたしと共に主をあがめよ、われらは共にみ名をほめたたえよう。
೩ನನ್ನೊಡನೆ ಯೆಹೋವನನ್ನು ಕೊಂಡಾಡಿರಿ; ನಾವು ಒಟ್ಟಾಗಿ ಆತನ ಹೆಸರನ್ನು ಘನಪಡಿಸೋಣ.
4 わたしが主に求めたとき、主はわたしに答え、すべての恐れからわたしを助け出された。
೪ನಾನು ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳಲು, ಆತನು ಸದುತ್ತರವನ್ನು ಕೊಟ್ಟು ಎಲ್ಲಾ ಭೀತಿಯಿಂದ ನನ್ನನ್ನು ತಪ್ಪಿಸಿದನು.
5 主を仰ぎ見て、光を得よ、そうすれば、あなたがたは、恥じて顔を赤くすることはない。
೫ಆತನನ್ನೇ ದೃಷ್ಟಿಸಿದವರು ಪ್ರಕಾಶವನ್ನು ಹೊಂದಿದರು; ಅವರ ಮುಖವು ಅವಮಾನಕ್ಕೆ ಈಡಾಗುವುದೇ ಇಲ್ಲ.
6 この苦しむ者が呼ばわったとき、主は聞いて、すべての悩みから救い出された。
೬ಕಷ್ಟದಲ್ಲಿದ್ದ ಈ ಮನುಷ್ಯನು ಮೊರೆಯಿಡಲು, ಯೆಹೋವನು ಕೇಳಿ ಎಲ್ಲಾ ಬಾಧೆಗಳಿಂದ ಬಿಡಿಸಿದನು.
7 主の使は主を恐れる者のまわりに陣をしいて彼らを助けられる。
೭ಯೆಹೋವನ ಭಯಭಕ್ತಿಯುಳ್ಳವರ ಸುತ್ತಲು, ಆತನ ದೂತನು ದಂಡಿಳಿಸಿ, ಕಾವಲಾಗಿದ್ದು ಕಾಪಾಡುತ್ತಾನೆ.
8 主の恵みふかきことを味わい知れ、主に寄り頼む人はさいわいである。
೮ಯೆಹೋವನು ಸರ್ವೋತ್ತಮನೆಂದು ಅನುಭವದಿಂದ ತಿಳಿದುಕೊಳ್ಳಿರಿ; ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಧನ್ಯರು.
9 主の聖徒よ、主を恐れよ、主を恐れる者には乏しいことがないからである。
೯ಯೆಹೋವನ ಜನರೇ, ಆತನಲ್ಲಿ ಭಯಭಕ್ತಿಯುಳ್ಳವರಾಗಿರಿ; ಆತನಲ್ಲಿ ಭಯಭಕ್ತಿಯುಳ್ಳವರಿಗೆ ಯಾವ ಕೊರತೆಯೂ ಇರುವುದಿಲ್ಲ.
10 若きししは乏しくなって飢えることがある。しかし主を求める者は良き物に欠けることはない。
೧೦ಪ್ರಾಯದ ಸಿಂಹಗಳಾದರೋ ಹೊಟ್ಟೆಗಿಲ್ಲದೆ ಹಸಿದಾವು; ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳುವವರಿಗೆ ಯಾವ ಒಳಿತಿಗೆ ಕೊರತೆಯಿಲ್ಲ.
11 子らよ、来てわたしに聞け、わたしは主を恐るべきことをあなたがたに教えよう。
೧೧ಮಕ್ಕಳಿರಾ, ಬನ್ನಿರಿ, ನನ್ನ ಮಾತನ್ನು ಕೇಳಿರಿ; ನಾನು ಯೆಹೋವನ ಭಯವನ್ನು ನಿಮಗೆ ಕಲಿಸುವೆನು.
12 さいわいを見ようとして、いのちを慕い、ながらえることを好む人はだれか。
೧೨ದೀರ್ಘಾಯುಷ್ಯವು ಬೇಕೋ? ಬಹುದಿನ ಬದುಕಿ ಸುಖವನ್ನು ಅನುಭವಿಸಬೇಕೋ?
13 あなたの舌をおさえて悪を言わせず、あなたのくちびるをおさえて偽りを言わすな。
೧೩ಹಾಗಾದರೆ ಕೆಟ್ಟದ್ದಕ್ಕೆ ಹೋಗದಂತೆ ನಾಲಿಗೆಯನ್ನು ಕಾದುಕೋ; ವಂಚನೆಯ ಮಾತುಗಳಿಗೆ ಬಿಡದೆ ತುಟಿಗಳನ್ನು ಇಟ್ಟುಕೋ.
14 悪を離れて善をおこない、やわらぎを求めて、これを努めよ。
೧೪ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನೇ ಮಾಡು; ಸಮಾಧಾನವನ್ನು ಹಾರೈಸಿ ಅದಕ್ಕಾಗಿ ಪ್ರಯತ್ನಪಡು.
15 主の目は正しい人をかえりみ、その耳は彼らの叫びに傾く。
೧೫ಯೆಹೋವನು ನೀತಿವಂತರನ್ನು ಕಟಾಕ್ಷಿಸುತ್ತಾನೆ; ಅವರು ಮೊರೆಯಿಡುವಾಗ ಕಿವಿಗೊಡುತ್ತಾನೆ.
16 主のみ顔は悪を行う者にむかい、その記憶を地から断ち滅ぼされる。
೧೬ಕೆಡುಕರಿಗೋ ಯೆಹೋವನು ಕೋಪದ ಮುಖವುಳ್ಳವನಾಗಿರುವನು; ಲೋಕದಲ್ಲಿ ಅವರ ನೆನಪೇ ಉಳಿಯದಂತೆ ತೆಗೆದುಹಾಕುವನು.
17 正しい者が助けを叫び求めるとき、主は聞いて、彼らをそのすべての悩みから助け出される。
೧೭ಯೆಹೋವನು ನೀತಿವಂತರ ಕೂಗನ್ನು ಕೇಳಿ, ಎಲ್ಲಾ ಕಷ್ಟಗಳಿಂದ ಅವರನ್ನು ಬಿಡಿಸುತ್ತಾನೆ.
18 主は心の砕けた者に近く、たましいの悔いくずおれた者を救われる。
೧೮ಮುರಿದ ಮನಸ್ಸುಳ್ಳವರಿಗೆ ಯೆಹೋವನು ನೆರವಾಗುತ್ತಾನೆ; ಕುಗ್ಗಿಹೋದವರನ್ನು ಉದ್ಧಾರಮಾಡುತ್ತಾನೆ.
19 正しい者には災が多い。しかし、主はすべてその中から彼を助け出される。
೧೯ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ, ಯೆಹೋವನು ಅವೆಲ್ಲವುಗಳಿಂದ ಅವನನ್ನು ಬಿಡಿಸುತ್ತಾನೆ.
20 主は彼の骨をことごとく守られる。その一つだに折られることはない。
೨೦ಆತನು ಅವನ ಎಲುಬುಗಳನ್ನೆಲ್ಲಾ ಕಾಪಾಡುತ್ತಾನೆ; ಅವುಗಳಲ್ಲಿ ಒಂದಾದರೂ ಮುರಿದುಹೋಗುವುದಿಲ್ಲ.
21 悪は悪しき者を殺す。正しい者を憎む者は罪に定められる。
೨೧ದುಷ್ಟನ ಕೆಡುಕು ಅವನನ್ನೇ ಕೊಲ್ಲುವುದು; ನೀತಿವಂತನನ್ನು ದ್ವೇಷಿಸುವವರು ಅಪರಾಧಿಗಳೆಂದು ಎಣಿಸಲ್ಪಡುವರು.
22 主はそのしもべらの命をあがなわれる。主に寄り頼む者はひとりだに罪に定められることはない。
೨೨ಯೆಹೋವನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ. ಆತನ ಆಶ್ರಿತರಲ್ಲಿ ಒಬ್ಬರಾದರೂ ಅಪರಾಧಿಯೆಂದು ಎಣಿಸಲ್ಪಡುವುದಿಲ್ಲ.