< 詩篇 48 >

1 コラの子の歌、さんび 主は大いなる神であって、われらの神の都、その聖なる山で、大いにほめたたえらるべき方である。
ಹಾಡು; ಕೋರಹೀಯರ ಕೀರ್ತನೆ. ಯೆಹೋವನು ಮಹೋನ್ನತನು; ನಮ್ಮ ದೇವರು ತನ್ನ ಪರಿಶುದ್ಧ ಪರ್ವತ ನಗರದಲ್ಲಿ ಸರ್ವಸ್ತುತಿಗೆ ಪಾತ್ರನಾಗಿದ್ದಾನೆ.
2 シオンの山は北の端が高くて、うるわしく、全地の喜びであり、大いなる王の都である。
ರಾಜಾಧಿರಾಜನ ಪಟ್ಟಣವಿರುವ ಚೀಯೋನ್ ಪರ್ವತವು ಉತ್ತರದಿಕ್ಕಿನಲ್ಲಿ ಉನ್ನತವಾಗಿಯೂ, ರಮ್ಯವಾಗಿಯೂ, ಭೂಲೋಕದಲ್ಲೆಲ್ಲಾ ಕಂಗೊಳಿಸುತ್ತಿರುವುದು.
3 そのもろもろの殿のうちに神はみずからを高きやぐらとして現された。
ದೇವರು ಅದರ ಕೊತ್ತಲುಗಳಲ್ಲಿ, ತಾನೇ ಭದ್ರವಾದ ಬುರುಜೆಂದು ಕೀರ್ತಿಪಡೆದನು.
4 見よ、王らは相会して共に進んできたが、
ರಾಜರು ಕೂಡಿಕೊಂಡರು; ಅವರು ಒಗ್ಗಟ್ಟಾಗಿ ಬಂದರು.
5 彼らは都を見るや驚き、あわてふためき、急ぎ逃げ去った。
ನೋಡಿ ಬೆರಗಾದರು; ತಲ್ಲಣಿಸಿ ಓಡಿಹೋದರು.
6 おののきは彼らに臨み、その苦しみは産みの苦しみをする女のようであった。
ಕಂಪನವೂ ಹೆರುವವಳಂತೆ, ವೇದನೆಯೂ ಅವರಿಗೆ ಉಂಟಾಯಿತು.
7 あなたは東風を起してタルシシの舟を破られた。
ದೇವರೇ, ನೀನು ಬಿರುಗಾಳಿಯಿಂದ ತಾರ್ಷಿಷ್ ದೇಶದ ದೊಡ್ಡ ದೊಡ್ಡ ಹಡಗುಗಳನ್ನು ಒಡೆದುಬಿಟ್ಟಂತಾಯಿತು.
8 さきにわれらが聞いたように、今われらは万軍の主の都、われらの神の都でこれを見ることができた。神はとこしえにこの都を堅くされる。 (セラ)
ನಾವು ಕಿವಿಯಿಂದ ಕೇಳಿದಂತೆಯೇ ಈಗ ಕಣ್ಣಾರೆ ಕಂಡೆವು; ನಮ್ಮ ದೇವರೂ ಸೇನಾಧೀಶನೂ ಆಗಿರುವ ಯೆಹೋವನ ಸಂಸ್ಥಾನದಲ್ಲಿ ಆತನ ಮಹತ್ತನ್ನು ನೋಡಿದ್ದೇವೆ. ದೇವರು ಅದನ್ನು ಶಾಶ್ವತವಾಗಿ ಸ್ಥಾಪಿಸುವನು. (ಸೆಲಾ)
9 神よ、われらはあなたの宮のうちであなたのいつくしみを思いました。
ದೇವರೇ, ನಾವು ನಿನ್ನ ಆಲಯದಲ್ಲಿ, ನಿನ್ನ ಪ್ರೀತಿಯನ್ನು ಸ್ಮರಿಸುತ್ತೇವೆ;
10 神よ、あなたの誉は、あなたのみ名のように、地のはてにまで及びます。あなたの右の手は勝利で満ちています。
೧೦ದೇವರೇ, ನಿನ್ನ ನಾಮದ ಘನತೆಗೆ ತಕ್ಕಂತೆಯೇ, ಲೋಕವೆಲ್ಲಾ ನಿನ್ನನ್ನು ಹೊಗಳುವುದು. ನಿನ್ನ ಬಲಗೈ ನೀತಿಯನ್ನು ನೆರವೇರಿಸಿತು.
11 あなたのさばきのゆえに、シオンの山を喜ばせ、ユダの娘を楽しませてください。
೧೧ಚೀಯೋನ್ ಪಟ್ಟಣದವರು ಹರ್ಷಿಸಲಿ; ನೀನು ನ್ಯಾಯವನ್ನು ನಿರ್ಣಯಿಸಿದ್ದರಿಂದ, ಯೆಹೂದ ಸೀಮೆಯ ನಿವಾಸಿಗಳು ಆನಂದಪಡಲಿ.
12 シオンのまわりを歩き、あまねくめぐって、そのやぐらを数え、
೧೨ಚೀಯೋನ್ ಸಂಸ್ಥಾನದ ಸುತ್ತಲೂ ಸಂಚರಿಸಿ, ಅದರ ಬುರುಜುಗಳನ್ನು ಲೆಕ್ಕಿಸಿರಿ.
13 その城壁に心をとめ、そのもろもろの殿をしらべよ。これはあなたがたが後の代に語り伝えるためである。
೧೩ಅದರ ಪ್ರಾಕಾರಗಳನ್ನು ಚೆನ್ನಾಗಿ ನೋಡಿರಿ; ಅದರ ಕೊತ್ತಲುಗಳನ್ನು ಸೂಕ್ಷ್ಮವಾಗಿ ಗಮನಿಸಿರಿ.
14 これこそ神であり、世々かぎりなくわれらの神であって、とこしえにわれらを導かれるであろう。
೧೪ಆಗ ನೀವು ನಿಮ್ಮ ಮುಂದಣ ಸಂತತಿಯವರಿಗೆ, ದೇವರು ಇಂಥವನು; ಆತನು ಯುಗಯುಗಾಂತರಗಳಲ್ಲಿಯೂ ನಮ್ಮ ದೇವರು, ನಿರಂತರವೂ ನಮ್ಮನ್ನು ನಡೆಸುವವನಾಗಿದ್ದಾನೆ ಎಂದು ತಿಳಿಸುವಿರಿ.

< 詩篇 48 >