< 詩篇 50 >
1 アサフの歌 全能者なる神、主は詔して、日の出るところから日の入るところまであまねく地に住む者を召し集められる。
೧ಆಸಾಫನ ಕೀರ್ತನೆ. ಬಲಿಷ್ಠ ದೇವರಾದ ಯೆಹೋವನು ಪೂರ್ವದಿಂದ ಪಶ್ಚಿಮ ದಿಕ್ಕಿನವರೆಗೂ ಇರುವ ಭೂನಿವಾಸಿಗಳೆಲ್ಲರನ್ನೂ, ತನ್ನ ಸನ್ನಿಧಿಯಲ್ಲಿ ಬರಬೇಕೆಂದು ಕರೆಯುತ್ತಾನೆ.
2 神は麗しさのきわみであるシオンから光を放たれる。
೨ಅತ್ಯಂತ ರಮಣೀಯವಾದ ಚೀಯೋನಿನಲ್ಲಿರುವ, ದೇವರು ಪ್ರಕಾಶಿಸುತ್ತಾನೆ.
3 われらの神は来て、もだされない。み前には焼きつくす火があり、そのまわりには、はげしい暴風がある。
೩ನಮ್ಮ ದೇವರು ಪ್ರತ್ಯಕ್ಷನಾಗುವನು, ಎಷ್ಟು ಮಾತ್ರವೂ ಸುಮ್ಮನಿರುವುದಿಲ್ಲ; ಆತನ ಮುಂಭಾಗದಲ್ಲಿ ಬೆಂಕಿ ಪ್ರಜ್ವಲಿಸುತ್ತದೆ; ಆತನ ಸುತ್ತಲು ಬಿರುಗಾಳಿ ಬೀಸುತ್ತದೆ.
4 神はその民をさばくために、上なる天および地に呼ばわれる、
೪ಆತನು ತನ್ನ ಪ್ರಜೆಗಳ ನ್ಯಾಯವಿಚಾರಣೆಯಲ್ಲಿ ಭೂಮ್ಯಾಕಾಶಗಳನ್ನು ಸಾಕ್ಷಿಗಳನ್ನಾಗಿ ನೇಮಿಸುತ್ತಾನೆ.
5 「いけにえをもってわたしと契約を結んだわが聖徒をわたしのもとに集めよ」と。
೫“ನನ್ನೊಡನೆ ಯಜ್ಞದ ಮೂಲಕ ಒಡಂಬಡಿಕೆಯನ್ನು ಮಾಡಿಕೊಂಡ ನನ್ನ ಭಕ್ತರನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ” ಎಂದು ಆಜ್ಞಾಪಿಸುತ್ತಾನೆ.
6 天は神の義をあらわす、神はみずから、さばきぬしだからである。 (セラ)
೬ದೇವರು ತಾನೇ ನ್ಯಾಯಾಧಿಪತಿ; ಆತನು ನೀತಿಸ್ವರೂಪನೆಂದು ಆಕಾಶಮಂಡಲವು ಘೋಷಿಸುತ್ತದೆ. (ಸೆಲಾ)
7 「わが民よ、聞け、わたしは言う。イスラエルよ、わたしはあなたにむかってあかしをなす。わたしは神、あなたの神である。
೭ಆತನು ಆಜ್ಞಾಪಿಸುವುದು ಏನೆಂದರೆ, “ಪ್ರಜೆಗಳಿರಾ, ಇಸ್ರಾಯೇಲ್ಯರೇ, ದೇವರಾದ ನಾನೇ ನಿಮ್ಮ ದೇವರು; ನಿಮಗೆ ಖಂಡಿತವಾಗಿ ಹೇಳುತ್ತೇನೆ” ಕೇಳಿರಿ.
8 わたしがあなたを責めるのは、あなたのいけにえのゆえではない。あなたの燔祭はいつもわたしの前にある。
೮ನಾನು ನಿಮ್ಮ ಯಜ್ಞದ ವಿಷಯದಲ್ಲಿ ತಪ್ಪೆಣಿಸುವುದಿಲ್ಲ; ಸರ್ವಾಂಗಹೋಮಗಳನ್ನು ನೀವು ನಿತ್ಯವೂ ನನಗೆ ಸಮರ್ಪಿಸುತ್ತೀರಲ್ಲಾ.
9 わたしはあなたの家から雄牛を取らない。またあなたのおりから雄やぎを取らない。
೯ಆದರೂ ನಿಮ್ಮ ಮನೆಗಳಿಂದ ನನಗೆ ಹೋರಿ ಬೇಕಾಗಿಲ್ಲ; ನಿಮ್ಮ ದೊಡ್ಡಿಗಳಿಂದ ಹೋತ ಬೇಕಿಲ್ಲ.
10 林のすべての獣はわたしのもの、丘の上の千々の家畜もわたしのものである。
೧೦ಕಾಡಿನಲ್ಲಿರುವ ಸರ್ವಮೃಗಗಳೂ, ಗುಡ್ಡಗಳಲ್ಲಿರುವ ಸಾವಿರಾರು ಪಶುಗಳೂ ನನ್ನವೇ.
11 わたしは空の鳥をことごとく知っている。野に動くすべてのものはわたしのものである。
೧೧ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆ; ಅಡವಿಯ ಜೀವಜಂತುಗಳೆಲ್ಲಾ ನನಗೆ ಗೊತ್ತುಂಟು.
12 たといわたしは飢えても、あなたに告げない、世界とその中に満ちるものとはわたしのものだからである。
೧೨ನನಗೆ ಹಸಿವೆಯಿದ್ದರೆ ನಿಮಗೆ ತಿಳಿಸುವುದಿಲ್ಲ; ಏಕೆಂದರೆ ಲೋಕವೂ ಅದರಲ್ಲಿರುವುದೆಲ್ಲವೂ ನನ್ನದಲ್ಲವೇ.
13 わたしは雄牛の肉を食べ、雄やぎの血を飲むだろうか。
೧೩ನಾನು ಹೋರಿಗಳ ಮಾಂಸವನ್ನು ತಿನ್ನುವುದೂ, ಹೋತಗಳ ರಕ್ತವನ್ನು ಕುಡಿಯುವುದೂ ಉಂಟೇ?
14 感謝のいけにえを神にささげよ。あなたの誓いをいと高き者に果せ。
೧೪ಸ್ತುತಿಯಜ್ಞವನ್ನೇ ದೇವರಿಗೆ ಸಮರ್ಪಿಸಿರಿ; ವಾಗ್ದಾನ ಮಾಡಿದ ಹರಕೆಗಳನ್ನು ಪರಾತ್ಪರನಾದ ದೇವರಿಗೆ ಸಲ್ಲಿಸಿರಿ.
15 悩みの日にわたしを呼べ、わたしはあなたを助け、あなたはわたしをあがめるであろう」。
೧೫ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.
16 しかし神は悪しき者に言われる、「あなたはなんの権利があってわたしの定めを述べ、わたしの契約を口にするのか。
೧೬ದುಷ್ಟರಿಗಾದರೋ ದೇವರು ಹೇಳುವುದು ಏನೆಂದರೆ, “ನನ್ನ ವಿಧಿಗಳನ್ನು ಹೇಳುವುದಕ್ಕೆ ನಿಮಗೇನು ಬಾಧ್ಯತೆ ಉಂಟು? ನನ್ನ ಒಡಂಬಡಿಕೆಯನ್ನು ನಿಮ್ಮ ಬಾಯಲ್ಲಿ ಉಚ್ಚರಿಸುವುದೇಕೆ?
17 あなたは教を憎み、わたしの言葉を捨て去った。
೧೭ನೀವೋ ನನ್ನ ಸುಶಿಕ್ಷಣವನ್ನು ಹಗೆಮಾಡುತ್ತೀರಲ್ಲಾ; ನನ್ನ ಆಜ್ಞೆಯನ್ನು ಉಲ್ಲಂಘಿಸುತ್ತೀರಿ.
18 あなたは盗びとを見ればこれとむつみ、姦淫を行う者と交わる。
೧೮ನೀವು ಕಳ್ಳರೊಡನೆ ಸೇರಿ ಅವರಿಗೆ ಸಮ್ಮತಿ ನೀಡುತ್ತೀರಿ; ಜಾರರ ಒಡನಾಟದಲ್ಲಿ ನೀವು ಸಂತೋಷದಿಂದ ಇರುತ್ತೀರಿ.
19 あなたはその口を悪にわたし、あなたの舌はたばかりを仕組む。
೧೯ನಿಮ್ಮ ಬಾಯಿಯನ್ನು ಕೇಡಿಗೆ ಒಪ್ಪಿಸುತ್ತೀರಿ; ನಾಲಿಗೆಯು ಮೋಸವನ್ನು ನೇಯುತ್ತದೆ.
20 あなたは座してその兄弟をそしり、自分の母の子をののしる。
೨೦ನೀವು ಕುಳಿತುಕೊಂಡು ನಿಮ್ಮ ಸಹೋದರರ ವಿರುದ್ಧವಾಗಿ ಮಾತನಾಡುತ್ತೀರಿ; ನಿಮ್ಮ ಒಡಹುಟ್ಟಿದವರನ್ನು ದೂರುತ್ತೀರಿ.
21 あなたがこれらの事をしたのを、わたしが黙っていたので、あなたはわたしを全く自分とひとしい者と思った。しかしわたしはあなたを責め、あなたの目の前にその罪をならべる。
೨೧ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು. ಆದುದರಿಂದ, ‘ದೇವರೂ ನಮ್ಮಂಥವನೇ’ ಎಂದು ತಿಳಿದುಕೊಂಡಿರಿ. ಈಗಲಾದರೋ ನಾನು ಎಲ್ಲವನ್ನು, ನಿಮ್ಮ ಮುಂದೆ ವಿವರಿಸಿ ನಿಮ್ಮನ್ನು ಅಪರಾಧಿಗಳೆಂದು ಸ್ಥಾಪಿಸುವೆನು.
22 神を忘れる者よ、このことを思え。さもないとわたしはあなたをかき裂く。そのときだれも助ける者はないであろう。
೨೨ದೇವರನ್ನು ಬಿಟ್ಟವರೇ, ಇದನ್ನು ಮನದಟ್ಟು ಮಾಡಿಕೊಳ್ಳಿರಿ; ಇಲ್ಲವಾದರೆ ನಿಮ್ಮನ್ನು ಹರಿದುಬಿಟ್ಟೇನು. ನಿಮ್ಮನ್ನು ತಪ್ಪಿಸುವವರು ಯಾರೂ ಇರುವುದಿಲ್ಲ.
23 感謝のいけにえをささげる者はわたしをあがめる。自分のおこないを慎む者にはわたしは神の救を示す」。
೨೩ಯಾರು ಸ್ತುತಿಯಜ್ಞವನ್ನು ಸಮರ್ಪಿಸುತ್ತಾರೋ ಅವರೇ ನನ್ನನ್ನು ಗೌರವಿಸುವವರು; ತಮ್ಮ ನಡತೆಯನ್ನು ಸರಿಪಡಿಸಿಕೊಳ್ಳುವವರಿಗೆ ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.”