< 詩篇 51 >
1 聖歌隊の指揮者によってうたわせたダビデの歌、これはダビデがバテセバに通った後預言者ナタンがきたときによんだもの 神よ、あなたのいつくしみによって、わたしをあわれみ、あなたの豊かなあわれみによって、わたしのもろもろのとがをぬぐい去ってください。
೧ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನು ಬತ್ಷೆಬಳ ಬಳಿಗೆ ಹೋದ ಮೇಲೆ ಪ್ರವಾದಿಯಾದ ನಾತಾನನು ಎಚ್ಚರಿಸಿದಾಗ ರಚಿಸಿದ ಕೀರ್ತನೆ. ಪ್ರೀತಿಸ್ವರೂಪನಾದ ದೇವರೇ, ನನ್ನನ್ನು ಕರುಣಿಸು; ಕರುಣಾನಿಧಿಯೇ, ನನ್ನ ದ್ರೋಹವನ್ನೆಲ್ಲಾ ಅಳಿಸಿಬಿಡು.
2 わたしの不義をことごとく洗い去り、わたしの罪からわたしを清めてください。
೨ನನ್ನ ಪಾಪವನ್ನು ಸಂಪೂರ್ಣವಾಗಿ ತೊಳೆದುಬಿಡು; ನನ್ನ ದೋಷವನ್ನು ಪರಿಹರಿಸಿ, ನನ್ನನ್ನು ಶುದ್ಧಿಗೊಳಿಸು.
3 わたしは自分のとがを知っています。わたしの罪はいつもわたしの前にあります。
೩ನಾನು ದ್ರೋಹಿ ಎಂದು ನಾನೇ ಒಪ್ಪಿಕೊಂಡಿದ್ದೇನೆ; ನನ್ನ ಪಾಪವು ಯಾವಾಗಲೂ ನನ್ನ ಮುಂದೆ ಇದೆ.
4 わたしはあなたにむかい、ただあなたに罪を犯し、あなたの前に悪い事を行いました。それゆえ、あなたが宣告をお与えになるときは正しく、あなたが人をさばかれるときは誤りがありません。
೪ನಿನಗೇ, ಕೇವಲ ನಿನಗೇ ತಪ್ಪುಮಾಡಿದ್ದೇನೆ; ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವುದನ್ನೇ ಮಾಡಿದ್ದೇನೆ. ನಿನ್ನ ನಿರ್ಣಯ ನ್ಯಾಯವಾಗಿಯೂ, ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದೆ.
5 見よ、わたしは不義のなかに生れました。わたしの母は罪のうちにわたしをみごもりました。
೫ಹುಟ್ಟಿದಂದಿನಿಂದ ನಾನು ಪಾಪಿಯೇ; ಮಾತೃಗರ್ಭವನ್ನು ಹೊಂದಿದ ದಿನದಿಂದ ದ್ರೋಹಿಯೇ.
6 見よ、あなたは真実を心のうちに求められます。それゆえ、わたしの隠れた心に知恵を教えてください。
೬ಯಥಾರ್ಥಚಿತ್ತವೇ ನಿನಗೆ ಸಂತೋಷ; ಸುಜ್ಞಾನದ ರಹಸ್ಯಗಳನ್ನು ನನಗೆ ತಿಳಿಯಪಡಿಸು.
7 ヒソプをもって、わたしを清めてください、わたしは清くなるでしょう。わたしを洗ってください、わたしは雪よりも白くなるでしょう。
೭ಹಿಸ್ಸೋಪ್ ಗಿಡದ ಬರಲಿನಿಂದ ನೀರನ್ನು ಚಿಮಕಿಸಿಯೋ ಎಂಬಂತೆ ನನ್ನ ಅಶುದ್ಧತ್ವವನ್ನು ತೆಗೆದುಬಿಡು, ಆಗ ಶುದ್ಧನಾಗುವೆನು; ನನ್ನನ್ನು ತೊಳೆ, ಆಗ ಹಿಮಕ್ಕಿಂತಲೂ ಬೆಳ್ಳಗಾಗುವೆನು.
8 わたしに喜びと楽しみとを満たし、あなたが砕いた骨を喜ばせてください。
೮ನನ್ನಲ್ಲಿ ಸಂಭ್ರಮೋತ್ಸವದ ಧ್ವನಿ ಉಂಟಾಗುವಂತೆ ಮಾಡು; ಆಗ ನೀನು ಜಜ್ಜಿದ ಎಲುಬುಗಳು ಆನಂದಪಡುವವು.
9 み顔をわたしの罪から隠し、わたしの不義をことごとくぬぐい去ってください。
೯ನನ್ನ ದೋಷಕ್ಕೆ ವಿಮುಖನಾಗು; ನನ್ನ ಪಾಪಗಳನ್ನೆಲ್ಲಾ ಅಳಿಸಿಬಿಡು.
10 神よ、わたしのために清い心をつくり、わたしのうちに新しい、正しい霊を与えてください。
೧೦ದೇವರೇ, ನನ್ನಲ್ಲಿ ಶುದ್ಧಹೃದಯವನ್ನು ನಿರ್ಮಿಸು; ನನಗೆ ಸ್ಥಿರಚಿತ್ತವನ್ನು ಅನುಗ್ರಹಿಸಿ ನನ್ನನ್ನು ನೂತನಪಡಿಸು.
11 わたしをみ前から捨てないでください。あなたの聖なる霊をわたしから取らないでください。
೧೧ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಬೇಡ; ನಿನ್ನ ಪರಿಶುದ್ಧಾತ್ಮವನ್ನು ನನ್ನಿಂದ ತೆಗೆಯಬೇಡ.
12 あなたの救の喜びをわたしに返し、自由の霊をもって、わたしをささえてください。
೧೨ನಿನ್ನ ರಕ್ಷಣಾನಂದವನ್ನು ನಾನು ಪುನಃ ಅನುಭವಿಸುವಂತೆ ಮಾಡು; ನನ್ನಲ್ಲಿ ಸಿದ್ಧಮನಸ್ಸನ್ನು ಹುಟ್ಟಿಸಿ ನನಗೆ ಆಧಾರನಾಗು.
13 そうすればわたしは、とがを犯した者にあなたの道を教え、罪びとはあなたに帰ってくるでしょう。
೧೩ಆಗ ನಿನ್ನ ಮಾರ್ಗವನ್ನು ದ್ರೋಹಿಗಳಿಗೆ ಬೋಧಿಸುವೆನು; ಪಾಪಿಗಳು ನಿನ್ನ ಕಡೆಗೆ ತಿರುಗಿಕೊಳ್ಳುವರು.
14 神よ、わが救の神よ、血を流した罪からわたしを助け出してください。わたしの舌は声高らかにあなたの義を歌うでしょう。
೧೪ದೇವರೇ, ನನ್ನ ರಕ್ಷಣಾ ಕರ್ತನೇ, ಪ್ರಾಣಹತ್ಯದ ಅಪರಾಧದಿಂದ ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ಉತ್ಸಾಹದಿಂದ ನಿನ್ನ ನೀತಿಯನ್ನು ಕೊಂಡಾಡುವುದು.
15 主よ、わたしのくちびるを開いてください。わたしの口はあなたの誉をあらわすでしょう。
೧೫ಕರ್ತನೇ, ನನ್ನ ಬಾಯಿ ನಿನ್ನನ್ನು ಸ್ತೋತ್ರಮಾಡುವಂತೆ ನನ್ನ ತುಟಿಗಳನ್ನು ತೆರೆಯಮಾಡು.
16 あなたはいけにえを好まれません。たといわたしが燔祭をささげてもあなたは喜ばれないでしょう。
೧೬ನಿನಗೆ ಯಜ್ಞಗಳಲ್ಲಿ ಅಪೇಕ್ಷೆಯಿಲ್ಲ, ಇದ್ದರೆ ಸಮರ್ಪಿಸುತ್ತಿದ್ದೆನು; ಸರ್ವಾಂಗಹೋಮಗಳಲ್ಲಿ ನಿನಗೆ ಸಂತೋಷವಿಲ್ಲ.
17 神の受けられるいけにえは砕けた魂です。神よ、あなたは砕けた悔いた心をかろしめられません。
೧೭ಕುಗ್ಗಿದ ಮನಸ್ಸೇ ದೇವರಿಗೆ ಇಷ್ಟವಾದ ಯಜ್ಞ; ದೇವರೇ, ಪಶ್ಚಾತ್ತಾಪದಿಂದ ಜಜ್ಜಿಹೋದ ಮನಸ್ಸನ್ನು ನೀನು ತಿರಸ್ಕರಿಸುವುದಿಲ್ಲ.
18 あなたのみこころにしたがってシオンに恵みを施し、エルサレムの城壁を築きなおしてください。
೧೮ಚೀಯೋನ್ ಪಟ್ಟಣವನ್ನು ಕಟಾಕ್ಷಿಸಿ ಅದಕ್ಕೆ ಶುಭವನ್ನುಂಟುಮಾಡು; ಯೆರೂಸಲೇಮಿನ ಪೌಳಿಗೋಡೆಯನ್ನು ಕಟ್ಟಿಸು.
19 その時あなたは義のいけにえと燔祭と、全き燔祭とを喜ばれるでしょう。その時あなたの祭壇に雄牛がささげられるでしょう。
೧೯ಆಗ ಜನರು ನ್ಯಾಯವಾದ ಯಜ್ಞಗಳನ್ನೂ, ಸರ್ವಾಂಗಹೋಮಗಳನ್ನೂ ಸಮರ್ಪಿಸಿ, ದೇವರೇ ನಿನಗೆ ಸಂತೋಷವನ್ನು ಉಂಟುಮಾಡುವರು. ನಿನ್ನ ಯಜ್ಞವೇದಿಯ ಮೇಲೆ ಹೋರಿಗಳನ್ನು ಸಮರ್ಪಿಸುವರು.