< 詩篇 52 >
1 聖歌隊の指揮者によってうたわせたダビデのマスキールの歌。これはエドムびとドエグがサウルにきて、「ダビデはアヒメレクの家にきた」と告げたときにダビデがよんだもの 力ある者よ、何ゆえあなたは神を敬う人に与えた災について誇るのか。あなたはひねもす人を滅ぼすことをたくらむ。
೧ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನು ಅಹೀಮೆಲೆಕನ ಮನೆಗೆ ಬಂದ ವರ್ತಮಾನವನ್ನು ಎದೋಮ್ಯನಾದ ದೋಯೇಗನು ಸೌಲನಿಗೆ ತಿಳಿಸಿದಾಗ ದಾವೀದನು ರಚಿಸಿದ ಪದ್ಯ. ಪರಾಕ್ರಮಿಯೇ, ನೀನು ಕೆಡುಕುಮಾಡಿ ಹಿಗ್ಗುವುದೇನು? ದೇವರ ಕೃಪೆಯು ಯಾವಾಗಲೂ ಇರುವುದು.
2 虚偽を行う者よ、あなたの舌は鋭いかみそりのようだ。
೨ಮೋಸಗಾರನೇ, ನಿನ್ನ ನಾಲಿಗೆಯು ಹರಿತವಾದ ಕ್ಷೌರಕತ್ತಿಯಂತೆ ಅಪಾಯಗಳನ್ನೇ ಕಲ್ಪಿಸುತ್ತದೆ.
3 あなたは善よりも悪を好み、まことを語るよりも偽りを語ることを好む。 (セラ)
೩ಉಪಕಾರಕ್ಕಿಂತಲೂ ಅಪಕಾರವೇ ನಿನಗೆ ಇಷ್ಟ; ನೀತಿಯನ್ನು ಬಿಟ್ಟು ಅನೀತಿಯನ್ನು ಸ್ಥಾಪಿಸುವುದೇ ನಿನಗೆ ಸಂತೋಷ. (ಸೆಲಾ)
4 欺きの舌よ、あなたはすべての滅ぼす言葉を好む。
೪ಮೋಸದ ನಾಲಿಗೆಯೇ, ಹಾನಿಕರವಾದ ಮಾತುಗಳೇ ನಿನಗೆ ಇಷ್ಟ.
5 しかし神はとこしえにあなたを砕き、あなたを捕えて、その天幕から引き離し、生ける者の地から、あなたの根を絶やされる。 (セラ)
೫ದೇವರು ನಿನ್ನನ್ನು ಎಂದಿಗೂ ಏಳದಂತೆ ಕೆಡವಿಬಿಡುವನು; ನಿನ್ನನ್ನು ಹಿಡಿದು ಗುಡಾರದೊಳಗಿಂದ ಕಿತ್ತು ಬೀಸಾಡುವನು; ಆತನು ನಿನ್ನನ್ನು ಜೀವಲೋಕದಿಂದ ಬೇರು ಸಹಿತವಾಗಿ ಕಿತ್ತುಹಾಕುವನು.
6 正しい者はこれを見て恐れ、彼を笑って言うであろう、
೬ನೀತಿವಂತರು ಅದನ್ನು ನೋಡಿ ಭಯಪಡುವರು; ಅವರು ಪರಿಹಾಸ್ಯಮಾಡುತ್ತಾ,
7 「神をおのが避け所とせず、その富の豊かなるを頼み、その宝に寄り頼む人を見よ」と。
೭“ನೋಡಿರಿ, ದೇವರನ್ನು ಆಶ್ರಯಿಸಿಕೊಳ್ಳದೆ, ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು, ತನ್ನ ದುಷ್ಟತ್ವವೇ ತನಗೆ ಬಲವೆಂದು ನಂಬಿಕೊಂಡ ಮೂಢನು ಇವನೇ” ಎಂದು ಹೇಳುವರು.
8 しかし、わたしは神の家にある緑のオリブの木のようだ。わたしは世々かぎりなく神のいつくしみを頼む。
೮ಆದರೆ ನಾನು ದೇವಾಲಯದ ಸೊಗಸಾದ ಎಣ್ಣೇ ಮರದಂತಿರುವೆನು; ದೇವರ ಕೃಪೆಯನ್ನು ಯುಗಯುಗಾಂತರಗಳಲ್ಲಿಯೂ ನಂಬಿಕೊಂಡಿರುವೆನು.
9 あなたがこの事をなされたので、わたしはとこしえに、あなたに感謝し、聖徒の前であなたのみ名をふれ示そう。これはよいことだからである。
೯ದೇವರೇ, ನಿನ್ನ ಉಪಕಾರಕ್ಕಾಗಿ ಯಾವಾಗಲೂ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವು ಸರ್ವೋತ್ತಮವೆಂದು ನಿನ್ನ ಭಕ್ತರ ಮುಂದೆ ಹೊಗಳುವೆನು.