< 詩篇 57 >

1 聖歌隊の指揮者によって、「滅ぼすな」というしらべにあわせてうたわせたダビデのミクタムの歌。これはダビデが洞にはいってサウルの手をのがれたときによんだもの 神よ、わたしをあわれんでください。わたしをあわれんでください。わたしの魂はあなたに寄り頼みます。滅びのあらしの過ぎ去るまではあなたの翼の陰をわたしの避け所とします。
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು. ಅಲ್ತಷ್ಖೇತೆಂಬ ರಾಗ; ದಾವೀದನು ಸೌಲನ ಭೀತಿಯಿಂದ ಓಡಿಹೋಗಿ ಗುಹೆಯಲ್ಲಿ ಅಡಗಿಕೊಂಡಿದ್ದಾಗ ರಚಿಸಿದ ಕಾವ್ಯ. ದೇವರೇ, ಕರುಣಿಸು, ನನ್ನನ್ನು ಕರುಣಿಸು. ನೀನೇ ನನ್ನ ಆಶ್ರಯಸ್ಥಾನವಲ್ಲವೇ! ಆಪತ್ತುಗಳು ಕಳೆದುಹೋಗುವ ತನಕ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.
2 わたしはいと高き神に呼ばわります。わたしのためにすべての事をなしとげられる神に呼ばわります。
ಪರಾತ್ಪರನಾದ ದೇವರಿಗೆ ಮೊರೆಯಿಡುವೆನು, ನನ್ನ ಕಾರ್ಯವನ್ನು ಸಫಲಮಾಡುವ ದೇವರನ್ನು ಕೂಗಿ ಕರೆಯುವೆನು.
3 神は天から送ってわたしを救い、わたしを踏みつける者をはずかしめられます。[セラすなわち神はそのいつくしみとまこととを送られるのです。
ಆತನು ಪರಲೋಕದಿಂದ ಆಲಿಸಿ, ನಿಂದಕರ ಮಾತಿನಿಂದ ನನ್ನನ್ನು ತಪ್ಪಿಸುವನು; (ಸೆಲಾ) ತನ್ನ ಪ್ರೀತಿಯನ್ನು ಮತ್ತು ಸತ್ಯತೆಯನ್ನೂ ತೋರ್ಪಡಿಸುವನು.
4 わたしは人の子らをむさぼり食らうししの中に横たわっています。彼らの歯はほこ、また矢、彼らの舌は鋭いつるぎです。
ನಾನು ಸಿಂಹಗಳಂತಿರುವ ಶತ್ರುಗಳ ಮಧ್ಯದಲ್ಲಿ ಸಿಕ್ಕಿದ್ದೇನೆ; ದುರಾಶೆಯಿಂದ ಕಬಳಿಸುವಂತಹ ಮನುಷ್ಯರ ನಡುವೆ ಬಿದ್ದಿದ್ದೇನೆ. ಅವರ ಹಲ್ಲುಗಳು ಈಟಿ ಮತ್ತು ಬಾಣಗಳಂತಿವೆ, ನಾಲಿಗೆಗಳು ಹದವಾದ ಕತ್ತಿಗಳೇ.
5 神よ、みずからを天よりも高くし、みさかえを全地の上にあげてください。
ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.
6 彼らはわたしの足を捕えようと網を設けました。わたしの魂はうなだれました。彼らはわたしの前に穴を掘りました。しかし彼らはみずからその中に陥ったのです。 (セラ)
ನನ್ನ ಕಾಲಿಗೆ ಬಲೆಯನ್ನು ಹಾಸಿದ್ದಾರೆ; ನನ್ನ ಪ್ರಾಣವು ಕುಂದಿಹೋಯಿತು. ನನ್ನ ದಾರಿಯಲ್ಲಿ ಕುಣಿಯನ್ನು ಅಗೆದರು; ತಾವೇ ಅದರಲ್ಲಿ ಬಿದ್ದುಹೋದರು. (ಸೆಲಾ)
7 神よ、わたしの心は定まりました。わたしの心は定まりました。わたしは歌い、かつほめたたえます。
ದೇವರೇ, ನನ್ನ ಹೃದಯವು ಸ್ಥಿರವಾಗಿದೆ, ಸ್ಥಿರವಾಗಿದೆ. ನಾನು ವಾದ್ಯಗಳನ್ನು ನುಡಿಸುತ್ತಾ ಹಾಡುವೆನು.
8 わが魂よ、さめよ。立琴よ、琴よ、さめよ。わたしはしののめを呼びさまします。
ನನ್ನ ಮನವೇ, ಚುರುಕಾಗು; ಸ್ವರಮಂಡಲವೇ, ಕಿನ್ನರಿಯೇ, ಎಚ್ಚರವಾಗಿರಿ. ಸಂಕೀರ್ತನೆಯಿಂದ ಉದಯವನ್ನು ಎದುರುಗೊಳ್ಳುವೆನು.
9 主よ、わたしはもろもろの民の中であなたに感謝し、もろもろの国の中であなたをほめたたえます。
ಕರ್ತನೇ, ಜನಾಂಗಗಳಲ್ಲಿ ನಿನ್ನನ್ನು ಸ್ತುತಿಸುವೆನು; ಸರ್ವದೇಶದವರೊಳಗೆ ನಿನ್ನನ್ನು ಕೊಂಡಾಡುವೆನು.
10 あなたのいつくしみは大きく、天にまで及び、あなたのまことは雲にまで及びます。
೧೦ಏಕೆಂದರೆ ನಿನ್ನ ಕೃಪೆಯು ಆಕಾಶವನ್ನೂ, ನಿನ್ನ ಸತ್ಯತೆಯು ಮುಗಿಲನ್ನೂ ಮುಟ್ಟುವಷ್ಟು ದೊಡ್ಡವಾಗಿವೆ.
11 神よ、みずからを天よりも高くし、みさかえを全地の上にあげてください。
೧೧ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.

< 詩篇 57 >