< 詩篇 59 >

1 聖歌隊の指揮者によって、「滅ぼすな」というしらべにあわせてうたわせたダビデのミクタムの歌。これはサウルがダビデを殺そうとして人をつかわし、その家をうかがわせたときダビデのよんだもの わが神よ、どうかわたしをわが敵から助け出し、わたしに逆らって起りたつ者からお守りください。
ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ಅಲ್ತಷ್ಖೇತೆಂಬ ರಾಗವನ್ನು ಆಧರಿಸಿದೆ. ದಾವೀದನ ಮಿಕ್ಟಮ್ ಹಾಡಿನ ಸಂಯೋಜನೆ. ಸೌಲನು ಕಳುಹಿಸಿದವರು ದಾವೀದನ ಜೀವ ತೆಗೆಯಬೇಕೆಂದು ಅವನ ಮನೆಯ ಸುತ್ತಲೂ ಒಳಸಂಚುಮಾಡಿದಾಗ ಅವನು ರಚಿಸಿದ ಕಾವ್ಯ. ದೇವರೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸಿರಿ. ನನಗೆ ವಿರೋಧವಾಗಿ ಎದ್ದವರಿಂದ ನನ್ನನ್ನು ರಕ್ಷಿಸಿರಿ
2 悪を行う者からわたしを助け出し、血を流す人からわたしをお救いください。
ಕೆಡುಕನ್ನು ಮಾಡುವವರಿಂದ ನನ್ನನ್ನು ಬಿಡಿಸಿರಿ. ಕೊಲೆಪಾತಕರಿಂದ ನನ್ನನ್ನು ರಕ್ಷಿಸಿರಿ.
3 見よ、彼らはひそみかくれて、わたしの命をうかがい、力ある人々が共に集まってわたしを攻めます。主よ、わたしにとがも罪もなく、
ಇಗೋ, ನನ್ನ ಪ್ರಾಣಕ್ಕೆ ಅವರು ಒಳಸಂಚುಮಾಡುತ್ತಾರೆ. ಕ್ರೂರರು ನನಗೆ ವಿರೋಧವಾಗಿ ಕೂಡಿಕೊಳ್ಳುತ್ತಾರೆ. ಯೆಹೋವ ದೇವರೇ, ನನ್ನಲ್ಲಿ ಅಪರಾಧವಿಲ್ಲ, ನಾನು ಯಾವ ತಪ್ಪೂ ಮಾಡಿಲ್ಲ.
4 わたしにあやまちもないのに、彼らは走りまわって備えをします。わたしを助けるために目をさまして、ごらんください。
ನನ್ನಲ್ಲಿ ತಪ್ಪು ಇಲ್ಲದಿದ್ದರೂ ಅವರು ಹಾನಿಮಾಡಲು ಸಿದ್ಧರಾಗಿದ್ದಾರೆ. ನನ್ನ ಅವಸ್ಥೆಯನ್ನು ನೋಡಿರಿ, ನನಗೆ ಸಹಾಯ ಮಾಡುವುದಕ್ಕೆ ಸಿದ್ಧರಾಗಿರಿ.
5 万軍の神、主よ、あなたはイスラエルの神です。目をさまして、もろもろの国民を罰し、悪をたくらむ者どもに、あわれみを施さないでください。 (セラ)
ಸರ್ವಶಕ್ತರಾದ ಯೆಹೋವ ದೇವರೇ, ಇಸ್ರಾಯೇಲರ ದೇವರೇ, ನೀವು ಎಲ್ಲಾ ಜನಾಂಗಗಳನ್ನು ನ್ಯಾಯತೀರಿಸುವುದಕ್ಕೆ ಎಚ್ಚರವಾಗಿರಿ. ದುಷ್ಟ ಅಪರಾಧಿಗಳಲ್ಲಿ ಯಾರಿಗೂ ದಯೆಸಿಗದಿರಲಿ.
6 彼らは夕ごとに帰ってきて、犬のようにほえて町をあさりまわる。
ಅವರು ಸಂಜೆಗೆ ಹಿಂದಿರುಗುವರು. ನಾಯಿಯ ಹಾಗೆ ಬೊಗಳುವರು. ಪಟ್ಟಣವನ್ನು ಸುತ್ತುವರು.
7 見よ、彼らはその口をもってほえ叫び、そのくちびるをもってうなり、「だれが聞くものか」と言う。
ಇಗೋ, ತಮ್ಮ ಬಾಯಿಂದ ಬೊಗಳುತ್ತಾರೆ. ಅವರ ತುಟಿಗಳಲ್ಲಿ ಖಡ್ಗಗಳು ಇವೆ. ಅವರು, “ನಮ್ಮನ್ನು ಕೇಳುವವರು ಯಾರು?” ಎಂದು ಅಂದುಕೊಳ್ಳುತ್ತಾರೆ.
8 しかし、主よ、あなたは彼らを笑い、もろもろの国民をあざけり笑われる。
ಆದರೆ ಯೆಹೋವ ದೇವರೇ, ನೀವು ಅವರನ್ನು ನೋಡಿ ನಗುವಿರಿ. ಇತರ ಜನಾಂಗವೆಲ್ಲ ಅಪಹಾಸ್ಯಕ್ಕಿಡಾಗಲಿ.
9 わが力よ、わたしはあなたにむかってほめ歌います。神よ、あなたはわたしの高きやぐらです。
ದೇವರೇ, ನನ್ನ ಬಲವೇ, ನಿಮಗಾಗಿ ಕಾದುಕೊಂಡಿರುವೆನು. ನನ್ನ ದೇವರೇ, ನೀವು ನನ್ನ ಕೋಟೆಯಾಗಿರುವಿರಿ.
10 わが神はそのいつくしみをもってわたしを迎えられる。わが神はわたしに敵の敗北を見させられる。
ದೇವರು ಪ್ರಸನ್ನರಾಗಿ ನನ್ನ ಮುಂದೆ ಹೋಗುವರು. ದೇವರು ನನ್ನ ನಿಂದಕರ ಮೇಲೆ ಜಯಿಸುವಂತೆ ಮಾಡುವರು.
11 どうぞ、わが民の忘れることのないために、彼らを殺さないでください。主、われらの盾よ、み力をもって彼らをよろめかせ、彼らを倒れさせないでください。
ನಮ್ಮ ಗುರಾಣಿಯಾಗಿರುವ ಯೆಹೋವ ದೇವರೇ, ನನ್ನ ಜನರು ಮರೆಯದ ಹಾಗೆ ಅವರು ಉಳಿದಿರಲಿ. ನಿಮ್ಮ ಪರಾಕ್ರಮದಿಂದ ಅವರನ್ನು ದಂಡಿಸಿರಿ.
12 彼らの口の罪、そのくちびるの言葉のために彼らをその高ぶりに捕われさせてください。彼らが語るのろいと偽りのために
ಅವರ ಬಾಯಿಯ ಪಾಪಕ್ಕೂ, ಅವರ ತುಟಿಗಳ ಮಾತಿಗೂ, ಅವರು ನುಡಿಯುವ ಶಾಪಕ್ಕೂ ಅವರ ಗರ್ವವೇ ಅವರನ್ನು ಹಿಡಿಯಲಿ.
13 憤りをもって彼らを滅ぼし、もはやながらえることのないまでに、彼らを滅ぼしてください。そうすれば地のはてまで、人々は神がヤコブを治められることを知るに至るでしょう。 (セラ)
ಅವರು ದಂಡನೆಗೆ ತುತ್ತಾಗಲಿ. ಅವರು ನಿರ್ನಾಮವಾಗಿಬಿಡಲಿ. ಆಗ ಯಾಕೋಬರನ್ನು ಆಳುವವರು ದೇವರೇ ಎಂಬುದು ಇಡೀ ಲೋಕಕ್ಕೇ ಗೊತ್ತಾಗಲಿ.
14 彼らは夕ごとに帰ってきて、犬のようにほえて町をあさりまわる。
ಅವರು ಸಂಜೆಗೆ ಹಿಂದಿರುಗುವರು. ನಾಯಿಯ ಹಾಗೆ ಬೊಗಳುವರು. ಪಟ್ಟಣವನ್ನು ಸುತ್ತುವರು.
15 彼らは食い物のためにあるきまわり、飽くことを得なければ怒りうなる。
ಅವರು ಆಹಾರಕ್ಕಾಗಿ ಅಲೆದಾಡುವರು. ತೃಪ್ತಿಯಾಗದಿದ್ದರೆ ಗೊಣಗುಟ್ಟುವರು.
16 しかし、わたしはあなたのみ力をうたい、朝には声をあげてみいつくしみを歌います。あなたはわたしの悩みの日にわが高きやぐらとなり、わたしの避け所となられたからです。
ಆದರೆ ನಾನು ನಿಮ್ಮ ಬಲವನ್ನು ಕುರಿತು ಹಾಡುವೆನು. ಹೌದು, ಮುಂಜಾನೆ ನಿಮ್ಮ ಪ್ರೀತಿಯ ಕುರಿತು ಹಾಡುವೆನು. ಏಕೆಂದರೆ ನೀವು ನನಗೆ ಭದ್ರಕೋಟೆಯೂ, ನನ್ನ ಇಕ್ಕಟ್ಟಿನಲ್ಲಿ ಆಶ್ರಯವಾಗಿಯೂ ಇದ್ದೀರಿ.
17 わが力よ、わたしはあなたにむかってほめうたいます。神よ、あなたはわが高きやぐら、わたしにいつくしみを賜わる神であられるからです。
ನನ್ನ ಬಲವಾಗಿರುವವರೇ, ನಿಮ್ಮನ್ನು ಕೊಂಡಾಡುವೆನು. ಏಕೆಂದರೆ ದೇವರೇ, ನೀವು ನನ್ನ ಭದ್ರಕೋಟೆ ಆಗಿದ್ದೀರಿ. ನೀವು ನಾನು ಭರವಸೆ ಇಡುವ ಕರುಣೆಯುಳ್ಳ ದೇವರೂ ಆಗಿದ್ದೀರಿ.

< 詩篇 59 >