< 詩篇 76 >
1 聖歌隊の指揮者によって琴にあわせてうたわせたアサフの歌、さんび 神はユダに知られ、そのみ名はイスラエルにおいて偉大である。
೧ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ಕೀರ್ತನೆ; ಆಸಾಫನ ಹಾಡು. ದೇವರು ಯೆಹೂದ ದೇಶದಲ್ಲಿ ಪ್ರಸಿದ್ಧಗೊಂಡವನು; ಇಸ್ರಾಯೇಲರಲ್ಲಿ ಆತನ ನಾಮವು ದೊಡ್ಡದು.
2 その幕屋はサレムにあり、そのすまいはシオンにある。
೨ಸಾಲೇಮಿನಲ್ಲಿ ಆತನ ಬಿಡಾರವಿದೆ; ಚೀಯೋನಿನಲ್ಲಿ ಆತನು ವಾಸಿಸುತ್ತಾನೆ.
3 かしこで神は弓の火矢を折り、盾とつるぎと戦いの武器をこわされた。 (セラ)
೩ಅಲ್ಲಿ ಆತನು ಮಿಂಚಿನಂತೆ ಹಾರಿ ಬರುವ ಬಾಣಗಳನ್ನೂ, ಗುರಾಣಿ, ಖಡ್ಗ ಮುಂತಾದ ಯುದ್ಧ ಆಯುಧಗಳನ್ನೂ ಮುರಿದುಬಿಟ್ಟಿದ್ದಾನೆ. (ಸೆಲಾ)
4 あなたは永久の山々にまさって光栄あり、威厳がある。
೪ನೀನು ತೇಜೋಮಯನು; ಕೊಳ್ಳೆಹೊಡೆದ ಬೆಟ್ಟಗಳಿಗಿಂತ ಘನ ಗಾಂಭೀರ್ಯಯುಳ್ಳವನು.
5 雄々しい者はかすめられ、彼らは眠りに沈み、いくさびとは皆その手を施すことができなかった。
೫ಧೀರಹೃದಯರು ಸುಲಿಗೆಯಾಗಿ ದೀರ್ಘನಿದ್ರೆ ಮಾಡಿದ್ದಾರೆ; ಎಲ್ಲಾ ಶೂರರ ಕೈಗಳು ಬಿದ್ದುಹೋದವು.
6 ヤコブの神よ、あなたのとがめによって、乗り手と馬とは深い眠りに陥った。
೬ಯಾಕೋಬ ವಂಶದವರ ದೇವರೇ, ನಿನ್ನ ಗದರಿಕೆಯಿಂದ ರಥಬಲವೂ, ಅಶ್ವಬಲವೂ ಮೈಮರೆತು ಹೋದವು.
7 しかし、あなたこそは恐るべき方である。あなたが怒りを発せられるとき、だれがみ前に立つことができよう。
೭ನೀನು ಮಹಾಶಕ್ತಿಶಾಲಿ; ನೀನು ಸಿಟ್ಟುಗೊಂಡಾಗ ನಿನ್ನ ಮುಂದೆ ಯಾರು ನಿಂತಾರು?
೮ಪರಲೋಕದಲ್ಲಿರುವ ನೀನು ನಿನ್ನ ನ್ಯಾಯವಿಧಿಯನ್ನು ಆಜ್ಞಾಪಿಸುವಾಗ,
9 あなたは天からさばきを仰せられた。神が地のしえたげられた者を救うために、さばきに立たれたとき、地は恐れて、沈黙した。 (セラ)
೯ದೇವರು ಲೋಕದ ದೀನರನ್ನು ರಕ್ಷಿಸಿ, ನ್ಯಾಯವನ್ನು ಸ್ಥಾಪಿಸುವುದಕ್ಕೋಸ್ಕರ ಎದ್ದು ಬಂದಿದ್ದಾನೆಂದು ಭೂನಿವಾಸಿಗಳು ಭಯದಿಂದ ಸ್ತಬ್ಧರಾದರು. (ಸೆಲಾ)
10 まことに人の怒りはあなたをほめたたえる。怒りの余りをあなたは帯とされる。
೧೦ಮನುಷ್ಯರ ಮೇಲಿನ ಕೋಪವೂ ನಿನ್ನ ಘನತೆಗೆ ಸಾಧನವಾಗುವುದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ.
11 あなたがたの神、主に誓いを立てて、それを償え。その周囲のすべての者は恐るべき主に贈り物をささげよ。
೧೧ನಿಮ್ಮ ದೇವನಾದ ಯೆಹೋವನಿಗೆ ಹರಕೆಮಾಡಿ ಸಲ್ಲಿಸಿರಿ; ಅವನ ಸುತ್ತಲಿರುವ ಜನರು ಮಹಾಮಹಿಮನಿಗೆ ಕಾಣಿಕೆಗಳನ್ನು ಸಮರ್ಪಿಸಲಿ.
12 主はもろもろの君たちのいのちを断たれる。主は地の王たちの恐るべき者である。
೧೨ಆತನು ಭೂಪತಿಗಳಿಗೆ ಭಯಪ್ರದರಾಗಿದ್ದ ಪ್ರಭುಗಳ ಅಹಂಭಾವವನ್ನು ಮುರಿದುಬಿಡುವನು.