< 詩篇 82 >

1 アサフの歌 神は神の会議のなかに立たれる。神は神々のなかで、さばきを行われる。
ಆಸಾಫನ ಕೀರ್ತನೆ. ದೇವರು ತನ್ನ ಸಭೆಯಲ್ಲಿ ನಿಂತುಕೊಂಡವನಾಗಿ, ದೇವರುಗಳೆಂದು ಕರೆಯಲ್ಪಡುವವರೊಳಗೆ ನ್ಯಾಯವಿಧಿಸುತ್ತಾನೆ.
2 「あなたがたはいつまで不正なさばきをなし、悪しき者に好意を示すのか。 (セラ)
“ನೀವು ಅನ್ಯಾಯವಾಗಿ ತೀರ್ಪುಕೊಡುವುದೂ, ದುಷ್ಟರಿಗೆ ಮುಖದಾಕ್ಷಿಣ್ಯ ತೋರಿಸುವುದೂ ಇನ್ನೆಷ್ಟರವರೆಗೆ? (ಸೆಲಾ)
3 弱い者と、みなしごとを公平に扱い、苦しむ者と乏しい者の権利を擁護せよ。
ಕುಗ್ಗಿದವರ ಮತ್ತು ಅನಾಥರ ನ್ಯಾಯವನ್ನು ಸ್ಥಾಪಿಸಿರಿ, ದುಃಖಿತರ ಮತ್ತು ದರಿದ್ರರ ನೀತಿಯನ್ನು ಉಳಿಸಿರಿ.
4 弱い者と貧しい者を救い、彼らを悪しき者の手から助け出せ」。
ಕುಗ್ಗಿದವರನ್ನು, ಬಡವರನ್ನು ದುಷ್ಟರ ಕೈಯಿಂದ ಬಿಡಿಸಿ ರಕ್ಷಿಸಿರಿ.”
5 彼らは知ることなく、悟ることもなくて、暗き中をさまよう。地のもろもろの基はゆり動いた。
ಇವರು ಬುದ್ಧಿಹೀನರೂ, ವಿವೇಕಶೂನ್ಯರೂ ಆಗಿ ಅಂಧಕಾರದಲ್ಲಿ ಅಲೆಯುತ್ತಾರೆ. ಭೂಮಿಯ ಅಸ್ತಿವಾರಗಳೆಲ್ಲಾ ಕದಲುತ್ತವೆ.
6 わたしは言う、「あなたがたは神だ、あなたがたは皆いと高き者の子だ。
“ನೀವು ದೇವರುಗಳು, ಎಲ್ಲರೂ ಪರಾತ್ಪರನಾದ ದೇವರ ಮಕ್ಕಳು,
7 しかし、あなたがたは人のように死に、もろもろの君のひとりのように倒れるであろう」。
ಆದರೂ ನರರಂತೆ ಸತ್ತೇ ಹೋಗುವಿರಿ, ಪ್ರತಿಯೊಬ್ಬ ಪ್ರಭುವಿನಂತೆ ನೀವೆಲ್ಲರೂ ಬಿದ್ದು ಹೋಗುವಿರಿ” ಎಂದು ನಾನು ಹೇಳಿದೆನು.
8 神よ、起きて、地をさばいてください。すべての国民はあなたのものだからです。
ದೇವರೇ, ಏಳು; ಭೂಲೋಕದಲ್ಲಿ ನ್ಯಾಯವನ್ನು ಸ್ಥಾಪಿಸು. ನೀನು ಎಲ್ಲಾ ಜನಾಂಗಗಳ ಒಡೆಯನು ಅಲ್ಲವೋ?

< 詩篇 82 >