< 詩篇 90 >
1 神の人モーセの祈 主よ、あなたは世々われらのすみかでいらせられる。
೧ಪಾಪಾತ್ಮರಿಗೆ ದೇವರ ದಯವೇ ಆಶ್ರಯ ಕರ್ತನೇ, ತಲತಲಾಂತರಗಳಿಂದಲೂ ನಮ್ಮ ಆಶ್ರಯಸ್ಥಾನವು ನೀನೇ.
2 山がまだ生れず、あなたがまだ地と世界とを造られなかったとき、とこしえからとこしえまで、あなたは神でいらせられる。
೨ಬೆಟ್ಟಗಳು ಉಂಟಾಗುವುದಕ್ಕಿಂತ ಮೊದಲೇ, ಭೂಮಿಯೂ ಅದರ ದೇಶಗಳೂ ನಿರ್ಮಾಣವಾಗುವುದಕ್ಕಿಂತ ಮೊದಲೇ, ಯುಗಯುಗಾಂತರಗಳಲ್ಲಿಯೂ ನೀನೇ ದೇವರು.
3 あなたは人をちりに帰らせて言われます、「人の子よ、帰れ」と。
೩“ಮನುಷ್ಯರೇ, ಸಾಯಿರಿ” ಎಂದು ಆಜ್ಞಾಪಿಸಿ, ಅವರನ್ನು ಪುನಃ ಮಣ್ಣಿಗೆ ಸೇರಿಸುತ್ತೀ.
4 あなたの目の前には千年も過ぎ去ればきのうのごとく、夜の間のひと時のようです。
೪ಸಾವಿರ ವರ್ಷಗಳು ನಿನ್ನ ದೃಷ್ಟಿಯಲ್ಲಿ ಗತಿಸಿಹೋದ ನಿನ್ನೆಯ ದಿನದಂತೆಯೂ, ರಾತ್ರಿಯ ಜಾವದಂತೆಯೂ ಇವೆ.
5 あなたは人を大水のように流れ去らせられます。彼らはひと夜の夢のごとく、あしたにもえでる青草のようです。
೫ನೀನು ಮನುಷ್ಯರನ್ನು ಪ್ರವಾಹದಿಂದ ಬಡಿದುಕೊಂಡು ಹೋಗುತ್ತೀ; ಅವರು ನಿದ್ರೆಗೆ ಸಮಾನರೇ. ಅವರು ಹೊತ್ತಾರೆಯಲ್ಲಿ ಚಿಗುರುವ ಹುಲ್ಲಿನಂತಿದ್ದಾರೆ.
6 あしたにもえでて、栄えるが、夕べには、しおれて枯れるのです。
೬ಅದು ಮುಂಜಾನೆಯಲ್ಲಿ ಬೆಳೆದು ಹೂಬಿಡುತ್ತದೆ; ಸಂಜೆಯಲ್ಲಿ ಕೊಯ್ಯಲ್ಪಟ್ಟು ಒಣಗಿಹೋಗುತ್ತದೆ.
7 われらはあなたの怒りによって消えうせ、あなたの憤りによって滅び去るのです。
೭ನಿನ್ನ ಕೋಪದಿಂದ ನಾವು ಇಲ್ಲವಾದೆವು; ನಿನ್ನ ರೌದ್ರದಿಂದ ತಲ್ಲಣಗೊಂಡೆವು.
8 あなたはわれらの不義をみ前におき、われらの隠れた罪をみ顔の光のなかにおかれました。
೮ನಮ್ಮ ದ್ರೋಹಗಳನ್ನು ನಿನ್ನ ಮುಂದೆಯೂ, ನಮ್ಮ ಗುಪ್ತಪಾಪಗಳನ್ನು ನಿನ್ನ ತೇಜೋದೃಷ್ಟಿಯಲ್ಲಿಯೂ ಇಟ್ಟುಕೊಂಡಿದ್ದಿ.
9 われらのすべての日は、あなたの怒りによって過ぎ去り、われらの年の尽きるのは、ひと息のようです。
೯ನಿನ್ನ ರೋಷದಿಂದ ನಮ್ಮ ಕಾಲವೆಲ್ಲಾ ಕಳೆದು ಹೋಯಿತು; ನಮ್ಮ ವರ್ಷಗಳು ನಿಟ್ಟುಸಿರಿನಂತೆ ತೀರಿಹೋದವು.
10 われらのよわいは七十年にすぎません。あるいは健やかであっても八十年でしょう。しかしその一生はただ、ほねおりと悩みであって、その過ぎゆくことは速く、われらは飛び去るのです。
೧೦ನಮ್ಮ ಆಯುಷ್ಕಾಲವು ಎಪ್ಪತ್ತು ವರ್ಷ, ಬಲ ಹೆಚ್ಚಿದರೆ ಎಂಭತ್ತು; ಕಷ್ಟಸಂಕಟಗಳೇ ಅದರ ಆಡಂಬರ. ಅದು ಬೇಗನೆ ಗತಿಸಿಹೋಗುತ್ತದೆ; ನಾವು ಹಾರಿ ಹೋಗುತ್ತೇವೆ.
11 だれがあなたの怒りの力を知るでしょうか。だれがあなたをおそれる恐れにしたがってあなたの憤りを知るでしょうか。
೧೧ನಿನ್ನ ಕೋಪದ ಬಲವನ್ನೂ, ಭಯಭಕ್ತಿಗೆ ಕಾರಣವಾಗಿರತಕ್ಕ ನಿನ್ನ ರೌದ್ರವನ್ನೂ ಗ್ರಹಿಸುವವರಾರು?
12 われらにおのが日を数えることを教えて、知恵の心を得させてください。
೧೨ನಮ್ಮ ದಿನಗಳು ಕೊಂಚವೇ ಎಂದು ಎಣಿಸಿಕೊಳ್ಳುವ ಹಾಗೆ ನಮಗೆ ಕಲಿಸು; ಆಗ ಜ್ಞಾನದ ಹೃದಯವನ್ನು ಪಡೆದುಕೊಳ್ಳುವೆವು.
13 主よ、み心を変えてください。いつまでお怒りになるのですか。あなたのしもべをあわれんでください。
೧೩ಯೆಹೋವನೇ, ಮನಸ್ಸನ್ನು ಬೇರೆ ಮಾಡಿಕೋ; ಎಷ್ಟರವರೆಗೆ ಕೋಪ ಮಾಡುವಿ? ನಿನ್ನ ಸೇವಕರ ಮೇಲೆ ಕರುಣೆಯಿರಲಿ.
14 あしたに、あなたのいつくしみをもってわれらを飽き足らせ、世を終るまで喜び楽しませてください。
೧೪ಮುಂಜಾನೆಯಲ್ಲಿ ನಿನ್ನ ಕೃಪೆಯಿಂದ ನಮ್ಮನ್ನು ಸಂತೃಪ್ತಿಪಡಿಸು; ಆಗ ಜೀವಮಾನದಲ್ಲೆಲ್ಲಾ ಉಲ್ಲಾಸಿಸಿ ಹರ್ಷಿಸುವೆವು.
15 あなたがわれらを苦しめられた多くの日と、われらが災にあった多くの年とに比べて、われらを楽しませてください。
೧೫ನೀನು ನಮ್ಮನ್ನು ಕುಗ್ಗಿಸಿದ ದಿನಗಳಿಗೂ, ನಾವು ಕೇಡನ್ನು ಅನುಭವಿಸಿದ ವರ್ಷಗಳಿಗೂ ತಕ್ಕಂತೆ ನಮ್ಮನ್ನು ಸಂತೋಷಪಡಿಸು.
16 あなたのみわざを、あなたのしもべらに、あなたの栄光を、その子らにあらわしてください。
೧೬ನಿನ್ನ ಸೇವಕರಿಗೆ ನಿನ್ನ ರಕ್ಷಣಾ ಕಾರ್ಯವೂ, ಅವರ ಮಕ್ಕಳಿಗೋಸ್ಕರ ನಿನ್ನ ಮಹತ್ತೂ ಪ್ರಕಟವಾಗಲಿ.
17 われらの神、主の恵みを、われらの上にくだし、われらの手のわざを、われらの上に栄えさせてください。われらの手のわざを栄えさせてください。
೧೭ನಮ್ಮ ಯೆಹೋವ ದೇವರ ಪ್ರಸನ್ನತೆಯು ನಮ್ಮ ಮೇಲೆ ಇರಲಿ. ನಾವು ಕೈ ಹಾಕಿದ ಕೆಲಸವನ್ನು ನಮಗೆ ಸಫಲಪಡಿಸು; ನಾವು ಕೈಹಾಕಿದ ಕೆಲಸವನ್ನು ಸಫಲ ವಾಗುವಂತೆ ಮಾಡು.