< ルツ記 2 >

1 さてナオミには、夫エリメレクの一族で、非常に裕福なひとりの親戚があって、その名をボアズといった。
ನವೊಮಿಯ ಗಂಡನಾದ ಎಲೀಮೆಲೆಕನ ಗೋತ್ರದಲ್ಲಿ ಬೋವಜನೆಂಬ ಬಹು ಧನವಂತನಾದ ಒಬ್ಬ ಸಂಬಂಧಿಕನಿದ್ದನು.
2 モアブの女ルツはナオミに言った、「どうぞ、わたしを畑に行かせてください。だれか親切な人が見当るならば、わたしはその方のあとについて落ち穂を拾います」。ナオミが彼女に「娘よ、行きなさい」と言ったので、
ಮೋವಾಬ್ಯಳಾದ ರೂತಳು ನವೊಮಿಗೆ, “ನಾನು ಹೋಗಿ, ಹಕ್ಕಲ ತೆನೆಗಳನ್ನು ಆಯ್ದುಕೊಳ್ಳಲು ಅವಕಾಶ ಮಾಡಿಕೊಡುವವರ ಹೊಲದಿಂದ ತೆನೆಗಳನ್ನು ಸಂಗ್ರಹಿಸಿಕೊಂಡು ಬರುತ್ತೇನೆ” ಅಂದಳು. ಅದಕ್ಕೆ ನವೊಮಿ “ಹೋಗಿ ಬಾ ಮಗಳೆ” ಅಂದಳು.
3 ルツは行って、刈る人たちのあとに従い、畑で落ち穂を拾ったが、彼女ははからずもエリメレクの一族であるボアズの畑の部分にきた。
ಆಕೆಯು ದೈವಯೋಗದಿಂದ ಎಲೀಮೆಲೆಕನ ಗೋತ್ರದವನಾದ ಬೋವಜನ ಸ್ವತ್ತಾಗಿದ್ದ ಹೊಲಕ್ಕೆ ಹೋಗಿ ತೆನೆ ಕೊಯ್ಯುವವರ ಹಿಂದಿನಿಂದ ಹಕ್ಕಲಾಯುತ್ತಾ ಇದ್ದಳು.
4 その時ボアズは、ベツレヘムからきて、刈る者どもに言った、「主があなたがたと共におられますように」。彼らは答えた、「主があなたを祝福されますように」。
ಆಗ ಬೋವಜನು ಬೇತ್ಲೆಹೇಮಿನಿಂದ ಹೊಲಕ್ಕೆ ಬಂದು ಕೊಯ್ಯುವವರಿಗೆ, “ಯೆಹೋವನು ನಿಮ್ಮ ಸಂಗಡ ಇರಲಿ” ಅಂದನು. ಅವರು, “ಯೆಹೋವನು ನಿನ್ನನ್ನು ಆಶೀರ್ವದಿಸಲಿ” ಎಂದು ಹರಸಿದರು.
5 ボアズは刈る人たちを監督しているしもべに言った、「これはだれの娘ですか」。
ತೆನೆ ಕೊಯ್ಯುವವರ ಜೊತೆಯಲ್ಲಿ ರೂತಳನ್ನು ನೋಡಿ ಬೋವಜನು ತೆನೆ ಕೊಯ್ಯುವವರನ್ನು ನಿರ್ವಹಿಸಲು ನೇಮಿಸಿದ್ದ ತನ್ನ ಸೇವಕನನ್ನು, “ಈ ಹೆಂಗಸು ಯಾರು?” ಎಂದು ಕೇಳಿದ್ದಕ್ಕೆ
6 刈る人たちを監督しているしもべは答えた、「あれはモアブの女で、モアブの地からナオミと一緒に帰ってきたのですが、
ಅವನು “ಈಕೆಯು ಮೋವಾಬ್ ಸೀಮೆಯಿಂದ ನವೊಮಿಯ ಸಂಗಡ ಬಂದ ಮೋವಾಬ್ ಸ್ತ್ರೀ.” ಎಂದನು.
7 彼女は『どうぞ、わたしに、刈る人たちのあとについて、束のあいだで、落ち穂を拾い集めさせてください』と言いました。そして彼女は朝早くきて、今まで働いて、少しのあいだも休みませんでした」。
ಇವಳು ತೆನೆ “ಕೊಯ್ಯುವವರೊಂದಿಗೆ ಸಿವುಡುಗಳ ಮಧ್ಯದಲ್ಲಿ ಹಕ್ಕಲಾಯ್ದುಕೊಳ್ಳುವ ಹಾಗೆ ಅಪ್ಪಣೆ ನೀಡಬೇಕೆಂದು ಕೇಳಿಕೊಂಡಳು. ಬೆಳಿಗ್ಗೆ ಬಂದವಳು ಇನ್ನೂ ಇಲ್ಲಿಯೇ ಇದ್ದಾಳೆ. ಸದ್ಯಕ್ಕೆ ಮನೆಯಲ್ಲಿ ವಿಶ್ರಮಿಸಿಕೊಳ್ಳುತ್ತಿದ್ದಾಳೆ” ಅಂದನು.
8 ボアズはルツに言った、「娘よ、お聞きなさい。ほかの畑に穂を拾いに行ってはいけません。またここを去ってはなりません。わたしのところで働く女たちを離れないで、ここにいなさい。
ಆಗ ಬೋವಜನು ರೂತಳಿಗೆ, “ನನ್ನ ಮಗಳೇ, ಕೇಳು; ನನ್ನ ಹೊಲವನ್ನು ಬಿಟ್ಟು ಬೇರೆಯವರ ಹೊಲಕ್ಕೆ ಹೋಗಬೇಡ; ನನ್ನ ಹೆಣ್ಣಾಳುಗಳ ಜೊತೆಯಲ್ಲೇ ಇರು.
9 人々が刈りとっている畑に目をとめて、そのあとについて行きなさい。わたしは若者たちに命じて、あなたのじゃまをしないようにと、言っておいたではありませんか。あなたがかわく時には水がめのところへ行って、若者たちのくんだのを飲みなさい」。
ನನ್ನ ಆಳುಗಳು ತೆನೆ ಕೊಯ್ಯುವುದಕ್ಕೋಸ್ಕರ ಯಾವ ಹೊಲಕ್ಕೆ ಹೋಗುತ್ತಾರೋ ಆ ಹೊಲಕ್ಕೆ ನೀನೂ ಹೋಗು. ನಿನ್ನನ್ನು ಯಾರೂ ಮುಟ್ಟಬಾರದೆಂದು ನನ್ನ ಸೇವಕರಿಗೆ ಅಪ್ಪಣೆಕೊಟ್ಟಿದ್ದೇನೆ. ನಿನಗೆ ಬಾಯಾರಿಕೆಯಾದರೆ ಹೋಗಿ ನನ್ನ ಸೇವಕರೇ ತುಂಬಿಸಿದ ನೀರಿನ ಪಾತ್ರೆಗಳಿಂದ ನೀರು ಕುಡಿಯಬಹುದು” ಎಂದು ಹೇಳಿದನು.
10 彼女は地に伏して拝し、彼に言った、「どうしてあなたは、わたしのような外国人を顧みて、親切にしてくださるのですか」。
೧೦ರೂತಳು ಅವನಿಗೆ ಸಾಷ್ಟಾಂಗನಮಸ್ಕಾರ ಮಾಡಿ “ಪರದೇಶಿಯಾದ ನನ್ನ ಮೇಲೆ ಇಷ್ಟು ಕಟಾಕ್ಷವಿಟ್ಟು ದಯೆ ತೋರಿಸಲು ಕಾರಣವೇನು?” ಎಂದು ಕೇಳಿದಳು.
11 ボアズは答えて彼女に言った、「あなたの夫が死んでこのかた、あなたがしゅうとめにつくしたこと、また自分の父母と生れた国を離れて、かつて知らなかった民のところにきたことは皆わたしに聞えました。
೧೧ಅದಕ್ಕೆ ಬೋವಜನು, “ನಿನ್ನ ಗಂಡನು ಮರಣ ಹೊಂದಿದ ದಿನದಿಂದ ನಿನ್ನ ಅತ್ತೆಗಾಗಿ ನೀನು ಮಾಡಿದ್ದೆಲ್ಲವೂ, ನನಗೆ ತಿಳಿದಿದೆ. ಹಾಗೂ ನಿನ್ನ ತಂದೆತಾಯಿಗಳನ್ನೂ, ಸ್ವದೇಶವನ್ನೂ ಬಿಟ್ಟು, ನಿನಗೆ ಅರಿಯದ ಜನರ ಬಳಿಗೆ ಬಂದಿರುವಿಯೆಂಬುದು ನನಗೆ ಚೆನ್ನಾಗಿ ಗೊತ್ತಿದೆ.
12 どうぞ、主があなたのしたことに報いられるように。どうぞ、イスラエルの神、主、すなわちあなたがその翼の下に身を寄せようとしてきた主からじゅうぶんの報いを得られるように」。
೧೨ನೀನು ಮಾಡಿದ್ದ ಎಲ್ಲಾ ಒಳ್ಳೆಯಕಾರ್ಯದ ಪ್ರತಿಫಲವಾಗಿ ಯೆಹೋವನು ನಿನಗೆ ಒಳ್ಳೆಯ ಫಲವನ್ನು ಕೊಡಲಿ; ನೀನು ಯಾವ ದೇವರ ಕೃಪಾಶಿರ್ವಾದದ ಆಶ್ರಯ ಹೊಂದಲು ಬಂದಿರುವೆಯೋ ಆ ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಉತ್ತಮವಾದ ಆಶ್ರಯವನ್ನು ಪ್ರತಿಫಲವನ್ನು ಅನುಗ್ರಹಿಸಲಿ” ಎಂದು ಉತ್ತರ ಕೊಟ್ಟನು.
13 彼女は言った、「わが主よ、まことにありがとうございます。わたしはあなたのはしためのひとりにも及ばないのに、あなたはこんなにわたしを慰め、はしためにねんごろに語られました」。
೧೩ಆಗ ಆಕೆಯು, “ಸ್ವಾಮೀ, ತಾವು ದಾಸಿಯಾದ ನನ್ನನ್ನು ಕಟಾಕ್ಷಿಸಿದ್ದೀರಿ; ನಾನು ತಮ್ಮ ದಾಸಿಯೆನಿಸಿಕೊಳ್ಳುವುದಕ್ಕೆ ಯೋಗ್ಯಳಲ್ಲದಿದ್ದರೂ ನನ್ನನ್ನು ಕನಿಕರಿಸಿ ಪ್ರೀತಿಯಿಂದ ಮಾತನಾಡಿಸಿದಿರಿ” ಅಂದಳು.
14 食事の時、ボアズは彼女に言った、「ここへきて、パンを食べ、あなたの食べる物を酢に浸しなさい」。彼女が刈る人々のかたわらにすわったので、ボアズは焼麦を彼女に与えた。彼女は飽きるほど食べて残した。
೧೪ಊಟದ ವೇಳೆಯಲ್ಲಿ ಬೋವಜನು “ಇಲ್ಲಿ ಬಾ; ರೊಟ್ಟಿಯನ್ನು ತೆಗೆದುಕೊಂಡು ಮುರಿದು ಹುಳಿರಸದಲ್ಲಿ ಅದ್ದಿ ತಿನ್ನು” ಎಂದು ಕರೆಯಲು ಆಕೆಯು ಹೋಗಿ ತೆನೆ ಕೊಯ್ಯುವವರ ಬಳಿಯಲ್ಲಿ ಕುಳಿತುಕೊಂಡಳು. ಇದಲ್ಲದೆ ಅವನು ಆಕೆಗೆ ಸುಟ್ಟ ತೆನೆಗಳನ್ನು ಕೊಟ್ಟನು. ಆಕೆಯು ತಿಂದು ತೃಪ್ತಳಾಗಿ ಇನ್ನೂ ಉಳಿಸಿಕೊಂಡಳು.
15 そして彼女がまた穂を拾おうと立ちあがったとき、ボアズは若者たちに命じて言った、「彼女には束の間でも穂を拾わせなさい。とがめてはならない。
೧೫ತರುವಾಯ ತಿರುಗಿ ಹಕ್ಕಲಾಯುವುದಕ್ಕೆ ಏಳಲು ಬೋವಜನು ತನ್ನ ಸೇವಕರಿಗೆ, “ಈಕೆಯು ಸಿವುಡುಗಳ ಮಧ್ಯದಲ್ಲಿ ಹಕ್ಕಲಾಯ್ದುಕೊಳ್ಳಲಿ, ಅಡ್ಡಿ ಮಾಡಬೇಡಿರಿ;
16 また彼女のために束からわざと抜き落しておいて拾わせなさい。しかってはならない」。
೧೬ಸಿವುಡುಗಳಿಂದ ತೆನೆಗಳನ್ನು ಕಿತ್ತುಹಾಕಿರಿ; ಈಕೆಯು ಕೂಡಿಸಿಕೊಳ್ಳಲಿ, ಗದರಿಸಬೇಡಿರಿ” ಎಂದು ಆಜ್ಞಾಪಿಸಿದನು.
17 こうして彼女は夕暮まで畑で落ち穂を拾った。そして拾った穂を打つと、大麦は一エパほどあった。
೧೭ರೂತಳು ಸಾಯಂಕಾಲದ ವರೆಗೂ ಹಕ್ಕಲಾಯ್ದು ಕೂಡಿಸಿದ್ದನ್ನು ಬಡಿದಾಗ ಸುಮಾರು ಮೂವತ್ತು ಸೇರು ಜವೆಗೋದಿ ಸಿಕ್ಕಿತು.
18 彼女はそれを携えて町にはいり、しゅうとめにその拾ったものを見せ、かつ食べ飽きて、残して持ちかえったものを取り出して与えた。
೧೮ಆಕೆಯು ಅದನ್ನು ಹೊತ್ತುಕೊಂಡು ಊರಿಗೆ ಬಂದು, ಆಕೆ ಹಕ್ಕಲಾಯ್ದದು ಸಂಗ್ರಹಿಸಿದ್ದನ್ನು ತನ್ನ ಅತ್ತೆಗೆ ತೋರಿಸಿದಳು. ತಾನು ಉಳಿಸಿಟ್ಟಿದ್ದ ಸುಟ್ಟ ತೆನೆಯನ್ನು ರೂತಳು ತನ್ನ ಅತ್ತೆಗೆ ಕೊಟ್ಟಳು.
19 しゅうとめは彼女に言った、「あなたは、きょう、どこで穂を拾いましたか。どこで働きましたか。あなたをそのように顧みてくださったかたに、どうか祝福があるように」。そこで彼女は自分がだれの所で働いたかを、しゅうとめに告げて、「わたしが、きょう働いたのはボアズという名の人の所です」と言った。
೧೯ಅತ್ತೆಯು “ನೀನು ಈ ಹೊತ್ತು ಯಾರ ಹೊಲದಲ್ಲಿ ಹಕ್ಕಲಾಯ್ದಿ? ಎಲ್ಲಿ ಕೆಲಸಮಾಡಿದಿ? ನಿನ್ನನ್ನು ಕಟಾಕ್ಷಿಸಿದವನಿಗೆ ಶುಭವಾಗಲಿ” ಎನ್ನಲು ರೂತಳು ನಾನು ಹಕ್ಕಲಾಯ್ದ ಹೊಲದ ಯಜಮಾನನ ಹೆಸರು, ಬೋವಜನೆಂದು ತಿಳಿಸಿದಳು.
20 ナオミは嫁に言った、「生きている者をも、死んだ者をも、顧みて、いつくしみを賜わる主が、どうぞその人を祝福されますように」。ナオミはまた彼女に言った、「その人はわたしたちの縁者で、最も近い親戚のひとりです」。
೨೦ಆಗ ನವೊಮಿಯು “ಸತ್ತವರಿಗೂ, ಬದುಕುವವರಿಗೂ ಮಾಡಿದ ವಾಗ್ದಾನಗಳನ್ನು ನೆರವೇರಿಸುವ ಯೆಹೋವನು ಆತನನ್ನು ಆಶೀರ್ವದಿಸಲಿ” ಎಂದು ಹರಸಿ, “ಆ ಮನುಷ್ಯನು ನಮಗೆ ಹತ್ತಿರದ ನೆಂಟ, ಪೋಷಿಸಬೇಕಾದವನು” ಎಂದು ರೂತಳಿಗೆ ತಿಳಿಸಿದಳು.
21 モアブの女ルツは言った、「その人はまたわたしに『あなたはわたしのところの刈入れが全部終るまで、わたしのしもべたちのそばについていなさい』と言いました」。
೨೧ಆಗ ಮೋವಾಬ್ಯಳಾದ ರೂತಳು “ಇದಲ್ಲದೆ ಆ ಮನುಷ್ಯನು ನನಗೆ, ‘ಸುಗ್ಗಿ ಮುಗಿಯುವವರೆಗೂ ನನ್ನ ಆಳುಗಳ ಜೊತೆಯಲ್ಲೇ ಇರು ಎಂದು ಹೇಳಿದ್ದಾನೆ’” ಎಂದಳು.
22 ナオミは嫁ルツに言った、「娘よ、その人のところで働く女たちと一緒に出かけるのはけっこうです。そうすればほかの畑で人にいじめられるのを免れるでしょう」。
೨೨ನವೊಮಿಯು ತನ್ನ ಸೊಸೆಯಾದ ರೂತಳಿಗೆ “ನನ್ನ ಮಗಳೇ, ನೀನು ಅವನ ಹೆಣ್ಣಾಳುಗಳ ಸಂಗಡಲೇ ಹೊರಟುಹೋಗುವುದು ಒಳ್ಳೆಯದು; ಬೇರೆ ಹೊಲದಲ್ಲಿ ನಿನಗೆ ತೊಂದರೆಯಾದೀತು” ಎಂದು ಹೇಳಿದಳು.
23 それで彼女はボアズのところで働く女たちのそばについていて穂を拾い、大麦刈と小麦刈の終るまでそうした。こうして彼女はしゅうとめと一緒に暮した。
೨೩ಅದರಂತೆಯೇ ರೂತಳು ಅತ್ತೆಯ ಜೊತೆಯಲ್ಲಿದ್ದುಕೊಂಡು ಜವೆಗೋದಿಯ ಮತ್ತು ಗೋದಿಯ ಸುಗ್ಗಿ ಮುಗಿಯುವ ವರೆಗೆ ಬೋವಜನ ಹೆಣ್ಣಾಳುಗಳ ಸಂಗಡಲೇ ಹೋಗಿ ಹಕ್ಕಲಾಯುತ್ತಿದ್ದಳು.

< ルツ記 2 >