< 雅歌 3 >
1 わたしは夜、床の上で、わが魂の愛する者をたずねた。わたしは彼をたずねたが、見つからなかった。わたしは彼を呼んだが、答がなかった。
೧ರಾತ್ರಿಯಲ್ಲಿ ಹಾಸಿಗೆಯ ಮೇಲೆ ನನ್ನ ಪ್ರಾಣಪ್ರಿಯನನ್ನು ಹುಡುಕಿದೆನು, ಎಷ್ಟು ಹುಡುಕಿದರೂ ಸಿಕ್ಕಲಿಲ್ಲ.
2 「わたしは今起きて、町をまわり歩き、街路や広場で、わが魂の愛する者をたずねよう」と、彼をたずねたが、見つからなかった。
೨ನಾನು, “ಎದ್ದು ಊರಿನಲ್ಲಿ ತಿರುಗುವೆನು, ಬೀದಿಗಳಲ್ಲಿಯೂ, ಚೌಕಗಳಲ್ಲಿಯೂ ನನ್ನ ಪ್ರಾಣಪ್ರಿಯನನ್ನು ಹುಡುಕುವೆನು” ಅಂದುಕೊಂಡೆನು, ಎಷ್ಟು ಹುಡುಕಿದರೂ ಸಿಕ್ಕಲಿಲ್ಲ.
3 町をまわり歩く夜回りたちに出会ったので、「あなたがたは、わが魂の愛する者を見ましたか」と尋ねた。
೩ಊರಿನಲ್ಲಿ ತಿರುಗುವ ಕಾವಲುಗಾರರ ಕೈಗೆ ಸಿಕ್ಕಿದೆನು, “ನನ್ನ ಪ್ರಾಣಪ್ರಿಯನನ್ನು ಕಂಡಿರಾ?” ಎಂದು ಅವರನ್ನು ವಿಚಾರಿಸಿದೆನು.
4 わたしが彼らと別れて行くとすぐ、わが魂の愛する者に出会った。わたしは彼を引き留めて行かせず、ついにわが母の家につれて行き、わたしを産んだ者のへやにはいった。
೪ಅವರನ್ನು ಬಿಟ್ಟ ತುಸು ಹೊತ್ತಿನೊಳಗೆ ನನ್ನ ಪ್ರಾಣಪ್ರಿಯನನ್ನು ಕಂಡುಕೊಂಡು ತಾಯಿಯ ಮನೆಗೆ, ನನ್ನನ್ನು ಹೆತ್ತವಳ ಕೋಣೆಗೆ ಸೇರುವ ತನಕ, ಬಿಡದೆ ಹಿಡಿದುಕೊಂಡೇ ಹೋದೆನು.
5 エルサレムの娘たちよ、わたしは、かもしかと野の雌じかをさして、あなたがたに誓い、お願いする、愛のおのずから起るときまでは、ことさらに呼び起すことも、さますこともしないように。
೫ಯೆರೂಸಲೇಮಿನ ಮಹಿಳೆಯರೇ, ಆತನು ತಾನಾಗಿ ಎಚ್ಚರಗೊಳ್ಳುವವರೆಗೆ ಯಾರೂ ನನ್ನ ಪ್ರಿಯನನ್ನು ಎಚ್ಚರಿಸದಿರಿ, ಆತನ ವಿಶ್ರಾಂತಿಗೆ ಯಾರೂ ಭಂಗ ಮಾಡದಿರಿ ಎಂದು ವನದ ಜಿಂಕೆ ಹರಿಣಗಳ ಮೇಲೆ ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.
6 没薬、乳香など、商人のもろもろの香料をもって、かおりを放ち、煙の柱のように、荒野から上って来るものは何か。
೬ವರ್ತಕರು ಮಾರುವ ಸಕಲ ಸುಗಂಧತೈಲಗಳಿಂದ, ರಸಗಂಧ, ಸಾಂಬ್ರಾಣಿಧೂಪ ಮುಂತಾದ ದ್ರವ್ಯಗಳಿಂದ ಧೂಮಸ್ತಂಭಗಳೋಪಾದಿಯಲ್ಲಿ ಹೊರಹೊಮ್ಮುತ್ತಿರುವ, ಅರಣ್ಯಮಾರ್ಗವಾಗಿ ಬರುತ್ತಿರುವ ಈ ಮೆರವಣಿಗೆ ಯಾರದು?
7 見よ、あれはソロモンの乗物で、六十人の勇士がそのまわりにいる。イスラエルの勇士で、
೭ಅದೋ, ನೋಡು ಸೊಲೊಮೋನನ ಪಲ್ಲಕ್ಕಿ, ಇಸ್ರಾಯೇಲಿನ ಶೂರರಲ್ಲಿ ಅರುವತ್ತು ಜನರು ಅದರ ಸುತ್ತಲಿದ್ದಾರೆ.
8 皆、つるぎをとり、戦いをよくし、おのおの腰に剣を帯びて、夜の危険に備えている。
೮ಯುದ್ಧಪ್ರವೀಣರಾದ ಇವರೆಲ್ಲರೂ ಕೈಯಲ್ಲಿ ಕತ್ತಿಯನ್ನು ಹಿಡಿದಿದ್ದಾರೆ. ರಾತ್ರಿಯ ಅಪಾಯದ ನಿಮಿತ್ತ ಪ್ರತಿಯೊಬ್ಬನೂ ಸೊಂಟಕ್ಕೆ ಕತ್ತಿ ಕಟ್ಟಿಕೊಂಡಿದ್ದಾನೆ.
9 ソロモン王はレバノンの木をもって、自分のために輿をつくった。
೯ಆ ಪಲ್ಲಕ್ಕಿಯನ್ನು ರಾಜನಾದ ಸೊಲೊಮೋನನು ಲೆಬನೋನಿನ ಮರದಿಂದ ಮಾಡಿಸಿದ್ದಾನೆ.
10 その柱は銀、そのうしろは金、その座は紫の布でつくった。その内部にはエルサレムの娘たちが、愛情をこめてつくった物を張りつけた。
೧೦ಅದರ ಕಂಬಗಳನ್ನು ಬೆಳ್ಳಿಯಿಂದಲೂ, ಕುಳಿತು ಒರಗಿಕೊಳ್ಳುವ ಆಸನವನ್ನು ಬಂಗಾರದಿಂದಲೂ, ಆಸನವನ್ನು ಧೂಮ್ರವರ್ಣದ ವಸ್ತ್ರದಿಂದ ಮಾಡಿಸಿದನು. ಅದರ ಮಧ್ಯಭಾಗವನ್ನು ಯೆರೂಸಲೇಮಿನ ಪುತ್ರಿಯರು ತಮ್ಮ ಪ್ರೀತಿಗೆ ಗುರುತಾಗಿ ಕಸೂತಿಯಿಂದ ಅಲಂಕರಿಸಿದರು.
11 シオンの娘たちよ、出てきてソロモン王を見よ。彼は婚姻の日、心の喜びの日に、その母の彼にかぶらせた冠をいただいている。
೧೧ಚೀಯೋನಿನ ಮಹಿಳೆಯರೇ, ಹೊರಟು ಬನ್ನಿ ರಾಜನಾದ ಸೊಲೊಮೋನನನ್ನು ನೋಡ ಬನ್ನಿ. ಅವನು ವಿವಾಹ ದಿನದ ಉತ್ಸವದಂದು ಆತನ ತಾಯಿ ಆತನಿಗೆ ತೊಡಿಸಿದ ಕಿರೀಟವನ್ನು ಆತ ಧರಿಸಿರುವುದನ್ನು ನೋಡಬನ್ನಿ!