< 雅歌 4 >

1 わが愛する者よ、見よ、あなたは美しい、見よ、あなたは美しい。あなたの目は、顔おおいのうしろにあって、はとのようだ。あなたの髪はギレアデの山を下るやぎの群れのようだ。
ಆಹಾ, ನನ್ನ ಪ್ರಿಯಳೇ, ನೀನು ಎಷ್ಟು ಚೆಲುವೆ! ಆಹಾ, ನೀನು ಎಷ್ಟು ಸುಂದರಿ! ಮುಸುಕಿನೊಳಗಿನ ನಿನ್ನ ನೇತ್ರಗಳು ಪಾರಿವಾಳಗಳು, ನಿನ್ನ ಕೂದಲು ಗಿಲ್ಯಾದ್ ಬೆಟ್ಟದಿಂದ ಇಳಿದು ಹೋಗುವ ಆಡಿನ ಮಂದೆ.
2 あなたの歯は洗い場から上ってきた毛を切られた雌羊の群れのようだ。みな二子を産んで、一匹も子のないものはない。
ಉಣ್ಣೆ ಕತ್ತರಿಸಿ ಸ್ನಾನಮಾಡಿಸಿದ ಕುರಿಮಂದೆಯ ಬಿಳುಪಿನಂತಿವೆ ನಿನ್ನ ಹಲ್ಲುಗಳು, ಯಾವುದೂ ಒಂಟಿಯಾಗಿರದೆ ಎಲ್ಲವೂ ಒಟ್ಟಾಗಿ ಜೋಡಿಯಾಗಿವೆ.
3 あなたのくちびるは紅の糸のようで、その口は愛らしい。あなたのほおは顔おおいのうしろにあって、ざくろの片われのようだ。
ನಿನ್ನ ತುಟಿಗಳು ಕೆಂಪು ದಾರದಂತಿವೆ. ನಿನ್ನ ಬಾಯಿ ರಮ್ಯ. ಮುಸುಕಿನೊಳಗಿನ ನಿನ್ನ ಕೆನ್ನೆಯು ಹೋಳು ಮಾಡಿದ ದಾಳಿಂಬೆಯ ತಿರುಳಿನಂತಿದೆ.
4 あなたの首は武器倉のために建てたダビデのやぐらのようだ。その上には一千の盾を掛けつらね、みな勇士の大盾である。
ನಿನ್ನ ಕೊರಳು ದಾವೀದನು ಕಟ್ಟಿಸಿದ ನುಣುಪಾದ ಗೋಪುರದಂತಿದೆ, ನಿನ್ನ ಕತ್ತಿನ ಹಾರ ಸಾವಿರ ಶೂರರ ಗುರಾಣಿಗಳನ್ನು ನೇತುಹಾಕಿರುವ ದಾವೀದನ ಬುರುಜಿನ ಹಾಗಿದೆ.
5 あなたの両乳ぶさは、かもしかの二子である二匹の子じかが、ゆりの花の中に草を食べているようだ。
ನಿನ್ನ ಎರಡು ಸ್ತನಗಳು ನೆಲದಾವರೆಗಳ ಮಧ್ಯದಲ್ಲಿ ಮೇಯುತ್ತಿರುವ ಅವಳಿ ಜಿಂಕೆಮರಿಗಳಂತಿವೆ.
6 日の涼しくなるまで、影の消えるまで、わたしは没薬の山および乳香の丘へ急ぎ行こう。
ಕತ್ತಲು ಕಳೆಯುವ ತನಕ, ಹೊತ್ತು ಮೂಡುವವರೆಗೆ ರಕ್ತಬೋಳದ ಬೆಟ್ಟಕ್ಕೂ, ಧೂಪದ ಗುಡ್ಡಕ್ಕೂ ತೆರಳಿ ಸಂಚರಿಸುವೆ ನಾನು.
7 わが愛する者よ、あなたはことごとく美しく、少しのきずもない。
ನನ್ನ ಪ್ರಿಯಳೇ, ನೀನು ಸರ್ವಾಂಗಸುಂದರಿ, ನಿನ್ನಲ್ಲಿ ಯಾವ ಕೊರತೆಯೂ ಇಲ್ಲ.
8 わが花嫁よ、レバノンからわたしと一緒にきなさい、レバノンからわたしと一緒にきなさい。アマナの頂を去り、セニルおよびヘルモンの頂を去り、ししの穴、ひょうの山を去りなさい。
ಬಾ ವಧುವೇ, ಎನ್ನೊಂದಿಗೆ ಲೆಬನೋನಿನಿಂದ. ಬಾ ನನ್ನೊಂದಿಗೆ, ಲೆಬನೋನಿನಿಂದ, ಇಳಿದು ಬಾ ಅಮಾನದ ತುದಿಯಿಂದ, ಶೆನೀರ್ ಮತ್ತು ಹೆರ್ಮೋನ್ ಶಿಖರಗಳಿಂದ. ಹೊರಟು ಬಾ, ಸಿಂಹಗಳ ಗುಹೆಗಳಿಂದ ಚಿರತೆಗಳ ಗುಡ್ಡಗಳಿಂದ.
9 わが妹、わが花嫁よ、あなたはわたしの心を奪った。あなたはただひと目で、あなたの首飾のひと玉で、わたしの心を奪った。
ಪ್ರಿಯಳೇ, ವಧುವೇ, ನನ್ನ ಹೃದಯವನ್ನು ಅಪಹರಿಸಿರುವೆ ನಿನ್ನ ಒಂದು ಕುಡಿನೋಟದಿಂದ; ನನ್ನ ಹೃದಯವನ್ನು ವಶಮಾಡಿಕೊಂಡಿರುವೆ ನಿನ್ನ ಕಂಠಹಾರದ ಒಂದು ರತ್ನದಿಂದ.
10 わが妹、わが花嫁よ、あなたの愛は、なんと麗しいことであろう。あなたの愛はぶどう酒よりも、あなたの香油のかおりはすべての香料よりも、いかにすぐれていることであろう。
೧೦ಪ್ರಿಯಳೇ, ವಧುವೇ, ನಿನ್ನ ಪ್ರೀತಿ ಅದೆಷ್ಟೋ ರಮ್ಯ! ನಿನ್ನ ಪ್ರೇಮ ದ್ರಾಕ್ಷಾರಸಕ್ಕಿಂತ ಎಷ್ಟೋ ಉತ್ತಮ! ನಿನ್ನ ತೈಲದ ಪರಿಮಳ ಸಕಲಸುಗಂಧ ದ್ರವ್ಯಗಳಿಗಿಂತ ಎಷ್ಟೋ ಮನೋಹರ!
11 わが花嫁よ、あなたのくちびるは甘露をしたたらせ、あなたの舌の下には、蜜と乳とがある。あなたの衣のかおりはレバノンのかおりのようだ。
೧೧ವಧುವೇ, ನಿನ್ನ ತುಟಿಗಳು ಜೇನುಗರೆಯುತ್ತವೆ; ಜೇನೂ ಮತ್ತು ಹಾಲೂ ನಿನ್ನ ನಾಲಿಗೆಯ ಅಡಿಯಲ್ಲಿವೆ, ನಿನ್ನ ಉಡುಪುಗಳು ಲೆಬನೋನಿನ ಸುಗಂಧ ಸೂಸುತ್ತಿದೆ.
12 わが妹、わが花嫁は閉じた園、閉じた園、封じた泉のようだ。
೧೨ನನ್ನ ಪ್ರಿಯಳು, ನನ್ನ ಮದಲಗಿತ್ತಿಯು, ಸುಭದ್ರವಾದ ಉದ್ಯಾನ, ಬೇಲಿಯೊಳಗೆ ಮುಚ್ಚಿ ಮುದ್ರಿಸಿದ ಚಿಲುಮೆ.
13 あなたの産み出す物は、もろもろの良き実をもつざくろの園、ヘンナおよびナルド、
೧೩ನಿನ್ನ ಉದ್ಯಾನದಲ್ಲಿವೆ ದಾಳಿಂಬೆಯಂತಹ ಉತ್ತಮ ವೃಕ್ಷಗಳು, ಜಟಮಾಂಸಿ ಮತ್ತು ಗೋರಂಟೆಗಳು,
14 ナルド、さふらん、しょうぶ、肉桂、さまざまの乳香の木、没薬、ろかい、およびすべての尊い香料である。
೧೪ಜಟಮಾಂಸಿ, ಕುಂಕುಮ, ಬಜೆ, ಲವಂಗಚಕ್ಕೆ, ಸಮಸ್ತ ವಿಧವಾದ ಸಾಂಬ್ರಾಣಿ ಗಿಡಗಳು, ರಕ್ತಬೋಳ, ಅಗುರು, ಸಕಲ ಮುಖ್ಯ ಸುಗಂಧದ್ರವ್ಯ ಇವುಗಳೇ ಚಿಗುರುತ್ತವೆ.
15 あなたは園の泉、生ける水の井、またレバノンから流れ出る川である。
೧೫ಉದ್ಯಾನಗಳಿಗೆ ಹಾದು ಹೋಗುವ ಬುಗ್ಗೆ, ಉಕ್ಕುತ್ತಿರುವ ಬಾವಿ, ಲೆಬನೋನಿನಿಂದ ಹರಿಯುವ ಕಾಲುವೆ ನಿನ್ನಲ್ಲಿವೆ.
16 北風よ、起れ、南風よ、きたれ。わが園を吹いて、そのかおりを広く散らせ。わが愛する者がその園にはいってきて、その良い実を食べるように。
೧೬ಉತ್ತರದ ಗಾಳಿಯೇ ಏಳು, ದಕ್ಷಿಣದ ಗಾಳಿಯೇ ಬೀಸು! ನನ್ನ ತೋಟದ ಸುಗಂಧಗಳು ಹರಡುವ ಹಾಗೆ ಅದರ ಮೇಲೆ ಸುಳಿದಾಡು. ಎನ್ನಿನಿಯನು ತನ್ನ ತೋಟದೊಳಗೆ ಸೇರಿ ತನ್ನ ಉತ್ತಮ ಫಲಗಳನ್ನು ತಾನೇ ಭುಜಿಸಲಿ.

< 雅歌 4 >