< 雅歌 8 >

1 どうか、あなたは、わが母の乳ぶさを吸ったわが兄弟のようになってください。わたしがそとであなたに会うとき、あなたに口づけしても、だれもわたしをいやしめないでしょう。
ನೀನು ನನ್ನ ತಾಯಿಯ ಹಾಲನ್ನು ಕುಡಿದ ನನ್ನ ಅಣ್ಣನ ಹಾಗಿದ್ದರೆ ಎಷ್ಟೋ ಚೆನ್ನಾಗಿತ್ತು! ನಾನು ನಿನ್ನನ್ನು ಹೊರಗೆ ಕಂಡೊಡನೆ ಮುದ್ದಿಟ್ಟರೂ ಯಾರೂ ಹೀನೈಸುತ್ತಿರಲಿಲ್ಲ.
2 わたしはあなたを導いて、わが母の家に行き、わたしを産んだ者のへやにはいり、香料のはいったぶどう酒、ざくろの液を、あなたに飲ませましょう。
ನಿನ್ನನ್ನು ನನ್ನ ತಾಯಿಯ ಮನೆಗೆ ಕರೆದುಕೊಂಡು ಹೋಗುತ್ತಿದ್ದೆನು, ಅಲ್ಲಿ ಆಕೆಯು ನಿನಗೆ ಉಪದೇಶ ಮಾಡಬಹುದಾಗಿತ್ತು; ದ್ರಾಕ್ಷಿಯ ಮಿಶ್ರಪಾನವನ್ನು ಕೊಡುತ್ತಿದ್ದೆ, ನನ್ನ ದಾಳಿಂಬೆಯ ಸವಿರಸವನ್ನು ನಿನಗೆ ಕುಡಿಸುತ್ತಿದ್ದೆನು.
3 どうか、彼の左の手がわたしの頭の下にあり、右の手がわたしを抱いてくれるように。
ಆಗ ನಿನ್ನ ಎಡಗೈ ನನಗೆ ತಲೆದಿಂಬಾಗಿ ಬಲಗೈ ನನ್ನನ್ನು ತಬ್ಬುತ್ತಿತ್ತು.
4 エルサレムの娘たちよ、わたしはあなたがたに誓い、お願いする、愛のおのずから起るときまでは、ことさらに呼び起すことも、さますこともしないように。
ಯೆರೂಸಲೇಮಿನ ಮಹಿಳೆಯರೇ, ಆತನು ತಾನಾಗಿ ಎಚ್ಚರಗೊಳ್ಳುವವರೆಗೆ ಯಾರೂ ನನ್ನ ಪ್ರಿಯನನ್ನು ಎಚ್ಚರಿಸದಿರಿ, ಆತನ ವಿಶ್ರಾಂತಿಗೆ ಯಾರೂ ಭಂಗ ಮಾಡದಿರಿ ಎಂದು ವನದ ಜಿಂಕೆ ಹರಿಣಗಳ ಮೇಲೆ ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.
5 自分の愛する者によりかかって、荒野から上って来る者はだれですか。りんごの木の下で、わたしはあなたを呼びさました。あなたの母上は、かしこで、あなたのために産みの苦しみをなし、あなたの産んだ者が、かしこで産みの苦しみをした。
ನಲ್ಲನನ್ನು ಒರಗಿಕೊಂಡು ಅಡವಿಯಿಂದ ಬರುವ ಇವಳು ಯಾರು? ಎಬ್ಬಿಸಿದೆನಲ್ಲಾ ನಿನ್ನನ್ನು ಆ ಸೇಬಿನ ಮರದಡಿಯಲ್ಲಿ ಇಗೋ, ಅಲ್ಲಿ ನಿನ್ನ ತಾಯಿ ನಿನ್ನನ್ನು ಗರ್ಭಧರಿಸಿದ್ದು, ಅಲ್ಲೇ ನಿನ್ನನ್ನು ಪ್ರಸವವೇದನೆಯಿಂದ ಹೆತ್ತಳು.
6 わたしをあなたの心に置いて印のようにし、あなたの腕に置いて印のようにしてください。愛は死のように強く、ねたみは墓のように残酷だからです。そのきらめきは火のきらめき、最もはげしい炎です。 (Sheol h7585)
ನಿನ್ನ ಕೈಯಲ್ಲಿನ ಮುದ್ರೆಯ ಹಾಗೆ ನಿನ್ನ ಹೃದಯದ ಮೇಲೆ ನನ್ನನ್ನು ಧರಿಸಿಕೋ. ಪ್ರೀತಿ ಮೃತ್ಯುವಿನಷ್ಟು ಶಕ್ತಿಶಾಲಿ, ಪ್ರೀತಿದ್ರೋಹದಿಂದ ಹುಟ್ಟುವ ಮತ್ಸರವು ಪಾತಾಳದಷ್ಟು ಕ್ರೂರ, ಅದರ ಜ್ವಾಲೆಯು ಬೆಂಕಿಯ ಉರಿ, ಧಗಧಗಿಸುವ ಕೋಪಾಗ್ನಿ. (Sheol h7585)
7 愛は大水も消すことができない、洪水もおぼれさせることができない。もし人がその家の財産をことごとく与えて、愛に換えようとするならば、いたくいやしめられるでしょう。
ನಂದಿಸಲಾರವು ಪ್ರೀತಿಯನ್ನು ಜಲರಾಶಿಗಳು, ಮುಣುಗಿಸಲಾರವು ಅದನ್ನು ಪ್ರವಾಹಗಳು. ಪ್ರೀತಿಯನ್ನು ಗಳಿಸಲು ಮನೆಮಾರುಗಳನ್ನು ಮಾರಿದರೂ ಸಿಗುವುದು ಅವನಿಗೆ ತಿರಸ್ಕಾರ.
8 わたしたちに小さい妹がある、まだ乳ぶさがない。わたしたちの妹に縁談のある日には、彼女のために何をしてやろうか。
ಸ್ತನಬಾರದ ತಂಗಿಯು ನಮಗುಂಟು; ಅವಳನ್ನು ವರಿಸಲು ಯಾರಾದರು ಬಂದರೆ ಅವಳ ಹಿತಕ್ಕೆ ಏನು ಮಾಡೋಣ?
9 彼女が城壁であるなら、その上に銀の塔を建てよう。彼女が戸であるなら、香柏の板でそれを囲もう。
ಅವಳು ಕೋಟೆಯಾದರೆ ಅದರ ಮೇಲೆ ಬೆಳ್ಳಿಯ ಬುರುಜನ್ನು ಕಟ್ಟುವೆವು, ಬಾಗಿಲಾದರೆ ದೇವದಾರು ಹಲಗೆಗಳಿಂದ ಭದ್ರಪಡಿಸುವೆವು.
10 わたしは城壁、わたしの乳ぶさは、やぐらのようでありました。それでわたしは彼の目には、平和をもたらす者のようでありました。
೧೦ನಾನು ಕೋಟೆ; ನನ್ನ ಸ್ತನಗಳು ಅದರ ಬುರುಜುಗಳು, ಹೀಗಿದ್ದು ಅವನ ದೃಷ್ಟಿಯಲ್ಲಿ ನನಗೆ ದಯೆ ದೊರಕಿತ್ತು.
11 ソロモンはバアルハモンにぶどう園をもっていた。彼はぶどう園を、守る者どもにあずけて、おのおのその実のために銀一千を納めさせた。
೧೧ಸೊಲೊಮೋನನು ಬಾಲ್ಹಾಮೋನಿನಲ್ಲಿ ಇದ್ದ ತನ್ನ ದ್ರಾಕ್ಷಿ ತೋಟವನ್ನು ಗುತ್ತಿಗೆಗೆ ಕೊಟ್ಟನು, ಪ್ರತಿಯೊಬ್ಬ ಗುತ್ತಿಗೆದಾರ ತೆರಬೇಕಾಗಿತ್ತು ಸಾವಿರ ಬೆಳ್ಳಿ ನಾಣ್ಯಗಳನ್ನು.
12 わたしのものであるぶどう園は、わたしの前にある。ソロモンよ、あなたは一千を獲るでしょう、その実を守る者どもは二百を獲るでしょう。
೧೨ಸೊಲೊಮೋನನೇ, ಆ ಸಾವಿರ ಬೆಳ್ಳಿ ನಾಣ್ಯ ನಿನಗಿರಲಿ, ಅದರ ಮೇಲ್ವಿಚಾರಕರಿಗೆ ಇನ್ನೂರು ನಾಣ್ಯ ಸೇರಲಿ; ನನ್ನದೇ ಆಗಿರುವ ನನ್ನ ತೋಟವು ನನ್ನ ವಶದಲ್ಲಿಯೇ ಇದೆ.
13 園の中に住む者よ、わたしの友だちはあなたの声に耳を傾けます、どうぞ、それをわたしに聞かせてください。
೧೩ಉದ್ಯಾನದಲ್ಲಿ ವಾಸಿಸುವವಳೇ ಗೆಳೆಯರು ನಿನ್ನ ಧ್ವನಿ ಕೇಳಬೇಕೆಂದಿದ್ದಾರೆ, ನನಗೂ ಆ ಧ್ವನಿ ಕೇಳಿಸಲಿ.
14 わが愛する者よ、急いでください。かんばしい山々の上で、かもしかのように、また若い雄じかのようになってください。
೧೪ಸುಗಂಧಸಸ್ಯದ ಪರ್ವತಗಳಲ್ಲಿ ಜಿಂಕೆಯಂತೆಯೂ, ಪ್ರಾಯದ ಹರಿಣದಂತೆಯೂ ತ್ವರೆಮಾಡಿ ಬಾ ನನ್ನಿನಿಯನೇ.

< 雅歌 8 >