< ゼカリヤ書 10 >

1 あなたがたは春の雨の時に、雨を主に請い求めよ。主はいなずまを造り、大雨を人々に賜い、野の青草をおのおのに賜わる。
ಮಳೆಯಾಗುವಂತೆ ಹಿಂಗಾರಿನಲ್ಲಿ ಯೆಹೋವನನ್ನು ಬೇಡಿಕೊಳ್ಳಿರಿ; ಯೆಹೋವನೇ ಮಿಂಚುಗಳನ್ನು ಉಂಟುಮಾಡುತ್ತಾನೆ, ಮನುಷ್ಯರಿಗೆ ಸಮೃದ್ಧಿಯಾದ ಮಳೆಯನ್ನು ದಯಪಾಲಿಸುತ್ತಾನೆ, ಎಲ್ಲರಿಗೂ ಹೊಲದ ಪೈರನ್ನು ಅನುಗ್ರಹಿಸುತ್ತಾನೆ.
2 テラピムは、たわごとを言い、占い師は偽りを見、夢見る者は偽りの夢を語り、むなしい慰めを与える。このゆえに、民は羊のようにさまよい、牧者がないために悩む。
ವಿಗ್ರಹಗಳು ನುಡಿಯುವುದು ಸುಳ್ಳು; ಕಣಿಹೇಳುವವರು ದರ್ಶನವನ್ನು ಕಾಣುವುದು ಸುಳ್ಳು, ತಿಳಿಸುವ ಕನಸುಗಳು ಮೋಸವಾದವುಗಳು, ಹೇಳುವ ಸಮಾಧಾನವು ವ್ಯರ್ಥ. ಆದುದರಿಂದ ನನ್ನ ಜನರು ದಿಕ್ಕಾಪಾಲಾಗಿದ್ದಾರೆ; ಕುರುಬನು ಇಲ್ಲದ ಕಾರಣ ಬಾಧೆಗೆ ಒಳಗಾಗಿದ್ದಾರೆ.
3 「わが怒りは牧者にむかって燃え、わたしは雄やぎを罰する。万軍の主が、その群れの羊であるユダの家を顧み、これをみごとな軍馬のようにされるからである。
ನನ್ನ ಕೋಪವು ಕುರುಬರ ಮೇಲೆ ಧಗಧಗಿಸುತ್ತದೆ. ನಾನು ಹೋತಗಳನ್ನು ದಂಡಿಸುವೆನು; ಸೇನಾಧೀಶ್ವರ ಯೆಹೋವನು ತನ್ನ ಮಂದೆಯಾದ ಯೆಹೂದ ವಂಶವನ್ನು ಪರಾಂಬರಿಸಿ ಘನವಾದ ಯುದ್ಧಾಶ್ವವನ್ನಾಗಿ ಮಾಡಿಕೊಳ್ಳುವನು.
4 隅石は彼らから出、天幕の杭も彼らから出、いくさ弓も彼らから出、支配者も皆彼らの中から出る。
ಆ ವಂಶದಿಂದ ಮೂಲೆಗಲ್ಲು, ಆ ವಂಶದಿಂದ ಮೊಳೆ, ಆ ವಂಶದಿಂದ ಯುದ್ಧದ ಬಿಲ್ಲು, ಅಂತು ಆ ವಂಶದೊಳಗಿಂದ ಸಕಲ ಅಧಿಕಾರಿಗಳು ಉಂಟಾಗುವರು.
5 彼らが戦う時は勇士のようになって、道ばたの泥の中に敵を踏みにじる。主が彼らと共におられるゆえに彼らは戦い、馬に乗る者どもを困らせる。
ಇವರು ವೀರರಾಗಿ ರಣರಂಗದೊಳಗೆ ಶತ್ರುಗಳನ್ನು ಬೀದಿಗಳ ಕೆಸರಿನಲ್ಲಿ ತುಳಿದುಬಿಡುವರು; ಯೆಹೋವನು ನಮ್ಮ ಸಂಗಡ ಇದ್ದಾನೆಂದು ಯುದ್ಧಮಾಡುವರು; ಎದುರಿಸುವ ಸವಾರರು ಭಂಗಪಡುವರು.
6 わたしはユダの家を強くし、ヨセフの家を救う。わたしは彼らをあわれんで、彼らを連れ帰る。彼らはわたしに捨てられたことのないようになる。わたしは彼らの神、主であって、彼らに答えるからである。
ನಾನು ಯೆಹೂದ ವಂಶವನ್ನು ಬಲಗೊಳಿಸಿ ಯೋಸೇಫನ ವಂಶವನ್ನು ಉದ್ಧರಿಸುವೆನು; ನನ್ನ ಕನಿಕರವು ಅವರ ಮೇಲೆ ಇರುವುದರಿಂದ ಅವರನ್ನು ಹಿಂದಕ್ಕೆ ಬರಮಾಡುವೆನು; ಆಗ ನಾನು ಅವರನ್ನು ತಳ್ಳಿಬಿಟ್ಟಿದ್ದು ಇಲ್ಲದಂತಾಗುವುದು; ನಾನು ಅವರ ದೇವರಾದ ಯೆಹೋವನಾಗಿದ್ದೇನಲ್ಲಾ, ಅವರ ಮೊರೆಯನ್ನು ಲಾಲಿಸಿ ಸದುತ್ತರವನ್ನು ನೀಡುವೆನು.
7 エフライムびとは勇士のようになり、その心は酒を飲んだように喜ぶ。その子供らはこれを見て喜び、その心は主によって楽しむ。
ಎಫ್ರಾಯೀಮ್ಯರು ಶೂರರಂತಿರುವರು, ದ್ರಾಕ್ಷಾರಸ ಕುಡಿದಂತೆ ಅವರ ಮನಸ್ಸು ಉತ್ಸಾಹಗೊಳ್ಳುವುದು; ಅವರ ಸಂತಾನದವರು ಇದನ್ನು ನೋಡಿ ಸಂತೋಷಪಡುವರು, ಅವರ ಹೃದಯವು ಯೆಹೋವನಲ್ಲಿ ಆನಂದಿಸುವುದು.
8 わたしは彼らに向かい、口笛を吹いて彼らを集める、わたしが彼らをあがなったからである。彼らは昔のように数多くなる。
ನಾನು ಅವರನ್ನು ಸಿಳ್ಳುಹಾಕಿ ಕರೆದು ಕೂಡಿಸುವೆನು. ಅವರನ್ನು ವಿಮೋಚಿಸಿದೆನಲ್ಲಾ; ಅವರು ಹಿಂದೆ ವೃದ್ಧಿಯಾದಂತೆ ಮುಂದೆಯೂ ವೃದ್ಧಿಯಾಗುವರು.
9 わたしは彼らを国々の民の中に散らした。しかし彼らは遠い国々でわたしを覚え、その子供らと共に生きながらえて帰ってくる。
ನಾನು ಅವರನ್ನು ಜನಾಂಗಗಳೊಳಗೆ ಚೆಲ್ಲಿದರೂ ಅವರು ದೂರದೇಶಗಳಲ್ಲಿ ನನ್ನನ್ನು ಸ್ಮರಿಸಿಕೊಂಡು ಸಂತಾನಸಮೇತವಾಗಿ ಬದುಕಿ ಬಾಳಿ ಹಿಂದಿರುಗಿ ಬರುವರು.
10 わたしは彼らをエジプトの国から連れ帰り、アッスリヤから彼らを集める。わたしはギレアデの地およびレバノンに彼らを連れて行く。彼らはいる所もないほどに多くなる。
೧೦ನಾನು ಅವರನ್ನು ಐಗುಪ್ತ ದೇಶದೊಳಗಿಂದ ಹಿಂದಕ್ಕೆ ಕರೆದುತರುವೆನು; ಅಶ್ಶೂರದಿಂದ ಕೂಡಿಸುವೆನು; ಗಿಲ್ಯಾದ್, ಲೆಬನೋನುಗಳ ಪ್ರಾಂತ್ಯಕ್ಕೆ ಬರಮಾಡುವೆನು; ಅವರಿಗೆ ಸಾಕಾಗುವಷ್ಟು ಸ್ಥಳ ಸಿಕ್ಕದು.
11 彼らはエジプトの海を通る。海の波は撃たれ、ナイルの淵はことごとくかれた。アッスリヤの高ぶりは低くされ、エジプトのつえは移り去る。
೧೧ಅವರು ಕಷ್ಟವೆಂಬ ಕಡಲನ್ನು ದಾಟಿ ಬರುವರು, ಅಲ್ಲಕಲ್ಲೋಲವಾದ ಸಮುದ್ರವನ್ನು ಭೇದಿಸಿಬಿಡುವರು, ನೈಲ್ ನದಿಯೆಲ್ಲಾ ತಳದ ತನಕ ಒಣಗುವುದು. ಅಶ್ಶೂರದ ಗರ್ವವು ತಗ್ಗಿಸಲ್ಪಡುವುದು, ಐಗುಪ್ತದ ರಾಜದಂಡವು ತಪ್ಪಿಹೋಗುವುದು.
12 わたしは彼らを主によって強くする。彼らは主の名を誇る」と主は言われる。
೧೨ಅವರು ಯೆಹೋವನಲ್ಲಿ ಬಲಗೊಳ್ಳುವರು, ಆತನ ಹೆಸರಿನಲ್ಲಿ ನಡೆದುಕೊಳ್ಳುವರು; ಇದು ಯೆಹೋವನ ನುಡಿ.

< ゼカリヤ書 10 >