< ゼカリヤ書 14 >
1 見よ、主の日が来る。その時あなたの奪われた物は、あなたの中で分かたれる。
೧ಆಹಾ, ಚೀಯೋನೇ, ಯೆಹೋವನ ನ್ಯಾಯತೀರ್ಪಿನ ದಿನವು ಬರುತ್ತಿದೆ; ಸೂರೆಯಾದ ನಿನ್ನ ಆಸ್ತಿಯು ಆಗ ನಿನ್ನ ಮಧ್ಯದಲ್ಲಿ ಹಂಚಿಕೆಯಾಗುವುದು.
2 わたしは万国の民を集めて、エルサレムを攻め撃たせる。町は取られ、家はかすめられ、女は犯され、町の半ばは捕えられて行く。しかし残りの民は町から断たれることはない。
೨ನಾನು ಸಕಲ ಜನಾಂಗಗಳನ್ನು ಯೆರೂಸಲೇಮಿಗೆ ವಿರುದ್ಧವಾಗಿ ಕೂಡಿಸುವೆನು; ಅವು ಪಟ್ಟಣವನ್ನು ಆಕ್ರಮಿಸಿಕೊಂಡು ಮನೆಗಳನ್ನು ಸೂರೆಮಾಡಿ ಹೆಂಗಸರನ್ನು ಕೆಡಿಸುವವು; ಪಟ್ಟಣದ ಅರ್ಧ ಜನರು ಸೆರೆಗೆ ಹೋಗುವರು, ಉಳಿದ ಜನರೋ ಪಟ್ಟಣದಲ್ಲೇ ಉಳಿಯುವರು.
3 その時、主は出てきて、いくさの日にみずから戦われる時のように、それらの国びとと戦われる。
೩ಆಗ ಯೆಹೋವನು ಹೊರಟು, ಯುದ್ಧದ ದಿನದಲ್ಲಿ ಹೇಗೋ ಹಾಗೆಯೇ ಆ ಜನಾಂಗಗಳಿಗೆ ಪ್ರತಿಭಟಿಸುವನು.
4 その日には彼の足が、東の方エルサレムの前にあるオリブ山の上に立つ。そしてオリブ山は、非常に広い一つの谷によって、東から西に二つに裂け、その山の半ばは北に、半ばは南に移り、
೪ಯೆರೂಸಲೇಮಿನ ಪೂರ್ವದಿಕ್ಕಿಗೆ ಎದುರಾಗಿರುವ ಎಣ್ಣೆಯ ಮರಗಳ ಗುಡ್ಡದ ಮೇಲೆ ಆತನ ಪಾದಗಳು ನಿಂತಿರಲು, ಆ ಗುಡ್ಡವು ಪೂರ್ವದಿಂದ ಪಶ್ಚಿಮದ ಉದ್ದಕ್ಕೂ ಸೀಳಿಹೋಗಿ ಮಧ್ಯದಲ್ಲಿ ದೊಡ್ಡ ಡೊಂಗರವಾಗುವುದು. ಗುಡ್ಡದ ಅರ್ಧಭಾಗವು ಉತ್ತರಕ್ಕೂ, ಅರ್ಧಭಾಗವು ದಕ್ಷಿಣಕ್ಕೂ ಸರಿದುಕೊಳ್ಳುವುದು.
5 わが山の谷はふさがれる。裂けた山の谷が、そのかたわらに接触するからである。そして、あなたがたはユダの王ウジヤの世に、地震を避けて逃げたように逃げる。こうして、あなたがたの神、主はこられる、もろもろの聖者と共にこられる。
೫ನೀವು ಯೆಹೋವನ ಗುಡ್ಡಗಳ ನಡುವಣ ಆ ಕಣಿವೆಯೊಳಗೆ ಓಡಿಹೋಗುವಿರಿ; ಏಕೆಂದರೆ ಆ ಕಣಿವೆಯು ಆಚೆಲಿನವರೆಗೂ ಮುಟ್ಟಿರುವುದು; ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪದ ಕಡೆಯಿಂದ ನೀವು ಓಡಿಹೋದಂತೆಯೇ ಓಡಿಹೋಗುವಿರಿ; ಆಗ ಪರಿಶುದ್ಧ ದೇವರಾದ ಯೆಹೋವನು ಸಮಸ್ತ ದೇವದೂತರ ಸಮೇತ ಬರುವನು.
೬ಆ ದಿನದಲ್ಲಿ ಬೆಳಕಿರದು, ಜ್ಯೋತಿಗಳು ಅಡಗಿಹೋಗುವವು, ಇಂಥಾ ದಿನವು ಒಂದೇ,
7 そこには長い連続した日がある(主はこれを知られる)。これには昼もなく、夜もない。夕暮になっても、光があるからである。
೭ಅದು ಯೆಹೋವನಿಗೆ ತಿಳಿದಿರುವುದು, ಅದು ಹಗಲೂ ಅಲ್ಲ, ಇರುಳೂ ಅಲ್ಲ, ಆದರೆ ಸಂಜೆಯ ವೇಳೆಯಲ್ಲಿ ಬೆಳಕಾಗುವುದು.
8 その日には、生ける水がエルサレムから流れ出て、その半ばは東の海に、その半ばは西の海に流れ、夏も冬もやむことがない。
೮ಆ ದಿನದಲ್ಲಿ ಜೀವಕರವಾದ ಜಲಪ್ರವಾಹವು ಯೆರೂಸಲೇಮಿನೊಳಗಿಂದ ಹೊರಡುವುದು; ಅರ್ಧಭಾಗವು ಪೂರ್ವಸಮುದ್ರಕ್ಕೂ, ಅರ್ಧಭಾಗವು ಪಶ್ಚಿಮ ಸಮುದ್ರಕ್ಕೂ ಹರಿಯುವುದು; ಬೇಸಿಗೆಕಾಲದಲ್ಲಿಯೂ, ಮಳೆಗಾಲದಲ್ಲಿಯೂ ಹರಿಯುತ್ತಲೇ ಇರುವುದು.
9 主は全地の王となられる。その日には、主ひとり、その名一つのみとなる。
೯ಯೆಹೋವನು ಭೂಲೋಕಕ್ಕೆಲ್ಲಾ ರಾಜನಾಗಿರುವನು; ಆ ದಿನದಲ್ಲಿ ಯೆಹೋವನೊಬ್ಬನೇ ದೇವರೆಂದೂ ಆತನ ಹೆಸರೊಂದೇ ಸ್ತುತ್ಯವೆಂದೂ ಎಲ್ಲರಿಗೂ ತಿಳಿದಿರುವುದು.
10 全地はゲバからエルサレムの南リンモンまで、平地のように変る。しかしエルサレムは高くなって、そのもとの所にとどまり、ベニヤミンの門から、先にあった門の所に及び、隅の門に至り、ハナネルのやぐらから、王の酒ぶねにまで及ぶ。
೧೦ಆಗ ದೇಶವು ಗೆಬದಿಂದ ಯೆರೂಸಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನವರೆಗೆ ತಗ್ಗಾಗಿ ಮಾರ್ಪಡುವುದು; ಯೆರೂಸಲೇಮೋ ಬೆನ್ಯಾಮೀನಿನ ಬಾಗಿಲಿನಿಂದ ಪೂರ್ವಕಾಲದ ಬಾಗಿಲಿನ ಸ್ಥಳದವರೆಗೆ, ಮೂಲೆಯ ಬಾಗಿಲಿನ ತನಕ, ಹನನೇಲನ ಬುರುಜಿನಿಂದ ಅರಸನ ದ್ರಾಕ್ಷಿಯ ಆಲೆಗಳವರೆಗೂ ಎತ್ತರದಲ್ಲಿ ನಿಂತಿರುವುದು.
11 その中には人が住み、もはやのろいはなく、エルサレムは安らかに立つ。
೧೧ಅದರಲ್ಲಿ ಜನರು ಸುರಕ್ಷಿತವಾಗಿ ವಾಸಿಸುವರು. ಇನ್ನು ಶಾಪವಿರದು; ಯೆರೂಸಲೇಮ್ ನೆಮ್ಮದಿಯಾಗಿ ನೆಲೆಗೊಂಡಿರುವುದು.
12 エルサレムを攻撃したもろもろの民を、主は災をもって撃たれる。すなわち彼らはなお足で立っているうちに、その肉は腐れ、目はその穴の中で腐れ、舌はその口の中で腐れる。
೧೨ಯೆರೂಸಲೇಮಿನ ಮೇಲೆ ಯುದ್ಧ ಮಾಡಿದ ಸಕಲ ಜನಾಂಗಗಳಿಗೂ ಯೆಹೋವನು ಈ ವ್ಯಾಧಿಯು ಬರುವಂತೆ ಮಾಡುವನು, ಹೆಜ್ಜೆಯ ಮೇಲೆ ನಿಂತ ಹಾಗೆಯೇ ಅವರ ಮಾಂಸವು ಕೊಳೆತು ಹೋಗುವುದು, ಕಣ್ಣು ಕುಣಿಯಲ್ಲೇ ಇಂಗುವುದು, ನಾಲಿಗೆಯು ಬಾಯಲ್ಲೇ ಕ್ಷಯಿಸುವುದು.
13 その日には、主は彼らを大いにあわてさせられるので、彼らはおのおのその隣り人を捕え、手をあげてその隣り人を攻める。
೧೩ಆ ದಿನದಲ್ಲಿ ಯೆಹೋವನು ಉಂಟುಮಾಡುವ ದೊಡ್ಡ ಗಲಿಬಿಲಿಯು ಅವರಲ್ಲಿ ಹರಡುವುದು; ಒಬ್ಬರ ಕೈಯನೊಬ್ಬರು ತಡೆಹಿಡಿಯುವರು, ಒಬ್ಬರ ಮೇಲೊಬ್ಬರು ಕೈಯೆತ್ತುವರು.
14 ユダもまた、エルサレムに敵して戦う。その周囲のすべての国びとの財宝、すなわち金銀、衣服などが、はなはだ多く集められる。
೧೪ಯೆಹೂದವೂ ಯೆರೂಸಲೇಮಿನ ಪರವಾಗಿ ಯುದ್ಧಮಾಡುವುದು; ಸುತ್ತಣ ಸಕಲ ಜನಾಂಗಗಳ ಆಸ್ತಿಯು ಅಂದರೆ ಬೆಳ್ಳಿ, ಬಂಗಾರ ಮತ್ತು ಬಟ್ಟೆಗಳು ರಾಶಿರಾಶಿಯಾಗಿ ಕೂಡಿಸಲ್ಪಡುವವು.
15 また馬、騾、らくだ、ろば、およびその陣営にあるすべての家畜にも、この災のような災が臨む。
೧೫ಜನಾಂಗಗಳಿಗೆ ತಗಲುವಂಥ ವ್ಯಾಧಿಯೇ ಕುದುರೆ, ಹೇಸರಗತ್ತೆ, ಒಂಟೆ, ಕತ್ತೆ ಅಂತು ಆ ಪಾಳೆಯಗಳಲ್ಲಿನ ಸಮಸ್ತ ಪಶುಗಳಿಗೂ ತಗಲುವುದು.
16 エルサレムに攻めて来たもろもろの国びとの残った者は、皆年々上って来て、王なる万軍の主を拝み、仮庵の祭を守るようになる。
೧೬ಅನಂತರ ಯೆರೂಸಲೇಮಿನ ಮೇಲೆ ಬಿದ್ದ ಸಕಲ ಜನಾಂಗಗಳಲ್ಲಿ ಉಳಿದವರೆಲ್ಲರೂ ಸೇನಾಧೀಶ್ವರ ಯೆಹೋವನೆಂಬ ರಾಜಾಧಿರಾಜನನ್ನು ಆರಾಧಿಸುವುದಕ್ಕೂ, ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೂ ಪ್ರತಿವರ್ಷವೂ ಹೊರಟುಬರುವರು.
17 地の諸族のうち、王なる万軍の主を拝むために、エルサレムに上らない者の上には、雨が降らない。
೧೭ಲೋಕದ ಸಮಸ್ತ ಕುಲಗಳಲ್ಲಿ ಯಾವ ಕುಲದವರು ಸೇನಾಧೀಶ್ವರನಾದ ಯೆಹೋವನೆಂಬ ರಾಜಾಧಿರಾಜನನ್ನು ಆರಾಧಿಸುವುದಕ್ಕೆ ಯೆರೂಸಲೇಮಿಗೆ ಬರುವುದಿಲ್ಲವೋ ಅವರಿಗೆ ಮಳೆಬರುವುದಿಲ್ಲ.
18 エジプトの人々が、もし上ってこない時には、主が仮庵の祭を守るために、上ってこないすべての国びとを撃たれるその災が、彼らの上に臨む。
೧೮ಐಗುಪ್ತ ಕುಲದವರು ಹೊರಟು ಬರದಿದ್ದರೆ, ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೆ ಬರದಿದ್ದರೆ ಜನಾಂಗಗಳಿಗೆ ಯೆಹೋವನು ತಗಲಿಸುವ ಬಾಧೆಯು ಅವರಿಗೂ ತಗಲುವುದು.
19 これが、エジプトびとの受ける罰、およびすべて仮庵の祭を守るために上ってこない国びとの受ける罰である。
೧೯ಐಗುಪ್ತಕ್ಕೂ ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೆ ಬರದಿರುವ ಸಕಲ ಜನಾಂಗಗಳಿಗೂ ಸಂಭವಿಸುವ ದಂಡನೆಯು ಇದೇ.
20 その日には、馬の鈴の上に「主に聖なる者」と、しるすのである。また主の宮のなべは、祭壇の前の鉢のように、聖なる物となる。
೨೦ಆ ದಿನದಲ್ಲಿ, “ಯೆಹೋವನಿಗೆ ಮೀಸಲು” ಎಂಬ ಲಿಪಿಯು ಕುದುರೆಗಳ ಘಂಟೆಗಳ ಮೇಲೂ ಕೆತ್ತಿರುವುದು; ಯೆಹೋವನ ಆಲಯದ ಪಾತ್ರೆಗಳೆಲ್ಲವೂ ಯಜ್ಞವೇದಿಯ ಪಕ್ಕದ ಬೋಗುಣಿಗಳಂತೆ ಪರಿಶುದ್ಧವಾಗಿರುವವು.
21 エルサレムおよびユダのすべてのなべは、万軍の主に対して聖なる物となり、すべて犠牲をささげる者は来てこれを取り、その中で犠牲の肉を煮ることができる。その日には、万軍の主の宮に、もはや商人はいない。
೨೧ಅಲ್ಲದೆ ಯೆರೂಸಲೇಮಿನಲ್ಲಿಯೂ, ಯೆಹೂದದಲ್ಲಿಯೂ ಇರುವ ಸಕಲ ಪಾತ್ರೆಗಳು ಸೇನಾಧೀಶ್ವರ ಯೆಹೋವನಿಗೆ ಮೀಸಲಾಗಿರುವವು; ಯಜ್ಞಮಾಡುವವರೆಲ್ಲರು ಬಂದು ಅವುಗಳನ್ನು ತೆಗೆದುಕೊಂಡು ಆ ಪಾತ್ರೆಗಳಲ್ಲಿ ಬೇಯಿಸುವರು; ಆ ದಿನದಲ್ಲಿ ಸೇನಾಧೀಶ್ವರ ಯೆಹೋವನ ಆಲಯದೊಳಗೆ ಯಾವ ವ್ಯಾಪಾರಿಯೂ ಇರುವುದಿಲ್ಲ.