< ゼカリヤ書 3 >
1 時に主は大祭司ヨシュアが、主の使の前に立ち、サタンがその右に立って、これを訴えているのをわたしに示された。
೧ಅನಂತರ ಮಹಾಯಾಜಕನಾದ ಯೆಹೋಶುವನು ಯೆಹೋವನ ದೂತನ ಮುಂದೆ ನಿಂತಿರುವುದನ್ನು ಯೆಹೋವನು ನನಗೆ ತೋರಿಸಿದನು. ಸೈತಾನನು ಯೆಹೋಶುವನಿಗೆ ಪ್ರತಿವಾದಿಯಾಗಿ ಅವನ ಬಲಗಡೆಯಲ್ಲಿ ನಿಂತಿದ್ದನು.
2 主はサタンに言われた、「サタンよ、主はあなたを責めるのだ。すなわちエルサレムを選んだ主はあなたを責めるのだ。これは火の中から取り出した燃えさしではないか」。
೨ಆಗ ಯೆಹೋವನ ದೂತನು ಸೈತಾನನಿಗೆ, “ಯೆಹೋವನು ನಿನ್ನನ್ನು ಖಂಡಿಸಲಿ! ಹೌದು, ಯೆರೂಸಲೇಮನ್ನು ಆರಿಸಿಕೊಂಡಿರುವ ಯೆಹೋವನು ನಿನ್ನನ್ನು ಖಂಡಿಸಲಿ! ಅದು ಉರಿಯುವ ಬೆಂಕಿಯಿಂದ ಎಳೆದ ಕೊಳ್ಳಿಯಾಗಿದೆಯಲ್ಲಾ?” ಎಂದು ಹೇಳಿದನು.
3 ヨシュアは汚れた衣を着て、み使の前に立っていたが、
೩ಯೆಹೋಶುವನು ದೇವದೂತನ ಮುಂದೆ ಕೊಳೆಯಾದ ಬಟ್ಟೆಯನ್ನು ಧರಿಸಿ ನಿಂತಿರಲು,
4 み使は自分の前に立っている者どもに言った、「彼の汚れた衣を脱がせなさい」。またヨシュアに向かって言った、「見よ、わたしはあなたの罪を取り除いた。あなたに祭服を着せよう」。
೪ದೇವದೂತನು ತನ್ನ ಸೇವಕರಿಗೆ, “ಇವನ ಕೊಳೆಬಟ್ಟೆಗಳನ್ನು ತೆಗೆದುಬಿಡಿರಿ” ಎಂದು ಅಪ್ಪಣೆ ಕೊಟ್ಟು ಅವನಿಗೆ, “ಇಗೋ, ನಿನ್ನ ದೋಷವನ್ನು ನಿನ್ನಿಂದ ತೊಲಗಿಸಿದ್ದೇನೆ, ನಿನಗೆ ಶ್ರೇಷ್ಠವಸ್ತ್ರವನ್ನು ತೊಡಿಸುವೆನು” ಎಂದು ಹೇಳಿದನು.
5 わたしは言った、「清い帽子を頭にかぶらせなさい」。そこで清い帽子を頭にかぶらせ、衣を彼に着せた。主の使はかたわらに立っていた。
೫“ಇವನ ತಲೆಗೆ ಶುಭ್ರವಾದ ಮುಂಡಾಸವನ್ನು ಸುತ್ತಿರಿ” ಎಂದು ನಾನು ಅಪ್ಪಣೆಕೊಡಲು ಅವರು ಅವನ ತಲೆಗೆ ಶುಭ್ರವಾದ ಮುಂಡಾಸವನ್ನು ಸುತ್ತಿ ಅವನಿಗೆ ವಸ್ತ್ರಗಳನ್ನು ತೊಡಿಸಿದರು, ಆಗ ಯೆಹೋವನ ದೂತನು ಎದ್ದು ನಿಂತನು.
೬ಆಗ ಯೆಹೋವನ ದೂತನು ಯೆಹೋಶುವನಿಗೆ ಈ ಮಾತನ್ನು ಕೊಟ್ಟನು.
7 「万軍の主は、こう仰せられる、あなたがもし、わたしの道に歩み、わたしの務を守るならば、わたしの家をつかさどり、わたしの庭を守ることができる。わたしはまた、ここに立っている者どもの中に行き来することを得させる。
೭ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನೀನು ನನ್ನ ಮಾರ್ಗಗಳಲ್ಲಿ ನಡೆದು, ನಾನು ನಿನಗೆ ವಹಿಸಿದ ಪಾರುಪತ್ಯವನ್ನು ನೆರವೇರಿಸಿದರೆ ನನ್ನ ಆಲಯದ ಮುಖ್ಯಾಧಿಕಾರಿಯಾಗಿ ನನ್ನ ಪ್ರಾಕಾರಗಳನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ನೀಡುವೆ; ನನ್ನ ಸನ್ನಿಧಾನದೂತರ ನಡುವೆ ಪ್ರವೇಶಿಸುವ ಹಕ್ಕನ್ನು ನಿನಗೆ ಕೊಡುವೆನು.
8 大祭司ヨシュアよ、あなたも、あなたの前にすわっている同僚たちも聞きなさい。彼らはよいしるしとなるべき人々だからである。見よ、わたしはわたしのしもべなる枝を生じさせよう。
೮ಮಹಾಯಾಜಕನಾದ ಯೆಹೋಶುವನೇ, ನೀನೂ, ನಿನ್ನ ಮುಂದೆ ಕುಳಿತುಕೊಳ್ಳುವ ನಿನ್ನ ಸಂಗಡಿಗರೂ ಕೇಳಿರಿ. ಇಗೋ, ಮೊಳಕೆ ಎಂಬ ನನ್ನ ಸೇವಕನನ್ನು ಹೊರಡಿಸುತ್ತೆನೆಂಬುದಕ್ಕೆ ಇವರೇ ಮುಂಗುರುತು.
9 万軍の主は言われる、見よ、ヨシュアの前にわたしが置いた石の上に、すなわち七つの目をもっているこの一つの石の上に、わたしはみずから文字を彫刻する。そしてわたしはこの地の罪を、一日の内に取り除く。
೯ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡಿರಿ; ಆ ಒಂದೇ ಕಲ್ಲಿನಲ್ಲಿ ಏಳು ಕಣ್ಣುಳ್ಳಾತನ ದೃಷ್ಟಿಯು ಬಿದ್ದಿದೆ; ಇಗೋ ನಾನೇ ಅದರಲ್ಲಿ ಕೆತ್ತನೆ ಕೆತ್ತುವೆನು. ಇದು ಸೇನಾಧೀಶ್ವರನಾದ ಯೆಹೋವನ ನುಡಿ. ‘ಒಂದೇ ದಿನದೊಳಗೆ ಈ ದೇಶದ ಪಾಪವನ್ನು ಪರಿಹರಿಸುವೆನು.’
10 万軍の主は言われる、その日には、あなたがたはめいめいその隣り人を招いて、ぶどうの木の下、いちじくの木の下に座すのである」。
೧೦“ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಆ ದಿನದಲ್ಲಿ ನೀವೆಲ್ಲರೂ ನಿಮ್ಮ ನಿಮ್ಮ ನೆರೆಹೊರೆಯವರನ್ನು ದ್ರಾಕ್ಷಾಲತೆ, ಅಂಜೂರಗಿಡ ಇವುಗಳ ನೆರಳಿನಲ್ಲಿ ನೆಮ್ಮದಿಯಿಂದ ವಿಶ್ರಮಿಸಲು ಕರೆಯುವಿರಿ.’”