< イザヤ書 21 >
1 海の荒野についての託宣。つむじ風がネゲブを吹き過ぎるように、荒野から、恐るべき地から、来るものがある。
೧ಸಮುದ್ರ ಹಾಗೂ ಅಡವಿಯ ವಿಷಯವಾದ ದೈವೋಕ್ತಿ. ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿಯಂತೆ ಅರಣ್ಯದ ಕಡೆಯ ಭಯಂಕರ ದೇಶದಿಂದ (ದೊಡ್ಡ ಅಪಾಯ) ಬರುತ್ತದೆ ಎಂಬ
2 わたしは一つのきびしい幻を示された。かすめ奪う者はかすめ奪い、滅ぼす者は滅ぼす。エラムよ、のぼれ、メデアよ、囲め。わたしはすべての嘆きをやめさせる。
೨ಘೋರದರ್ಶನವು ನನಗೆ ತಿಳಿಯ ಬಂದಿದೆ; ಬಾಧಕನು ಬಾಧಿಸುತ್ತಿದ್ದಾನೆ, ಸೂರೆಗಾರನು ಸೂರೆಮಾಡುತ್ತಿದ್ದಾನೆ. ಏಲಾಮೇ, ಏಳು! ಮೇದ್ಯವೇ, ಮುತ್ತಿಗೆ ಹಾಕು! ನಿಮ್ಮ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.
3 それゆえ、わが腰は激しい痛みに満たされ、出産に臨む女の苦しみのような苦しみがわたしを捕えた。わたしは、かがんで聞くことができず、恐れおののいて見ることができない。
೩ಆದುದ್ದರಿಂದ ನನ್ನ ಸೊಂಟದಲ್ಲಿ ನೋವು ತುಂಬಿದೆ, ಪ್ರಸವವೇದನೆಯಂತಿರುವ ವೇದನೆಯು ನನ್ನನ್ನು ಹಿಡಿದಿದೆ, ಕಿವಿ ಕಿವುಡಾಗುವಷ್ಟು ಸಂಕಟಪಡುತ್ತೇನೆ, ಕಣ್ಣು ಕುರುಡಾಗುವಷ್ಟು ತತ್ತರಗೊಂಡಿದ್ದೇನೆ.
4 わが心はみだれ惑い、わななき恐れること、はなはだしく、わたしのあこがれたたそがれは変っておののきとなった。
೪ನನ್ನ ಹೃದಯವು ಬಡಿದುಕೊಳ್ಳುತ್ತಿದೆ, ನಡುಕವು ನನ್ನನ್ನು ಆವರಿಸಿಕೊಂಡಿದೆ, ನಾನು ಅಪೇಕ್ಷಿಸುತ್ತಿದ್ದ ರಾತ್ರಿಯು ನನಗೆ ಭಯವಾಗಿ ಪರಿಣಮಿಸಿದೆ.
5 彼らは食卓を設け、じゅうたんを敷いて食い飲みする。もろもろの君よ、立って、盾に油をぬれ。
೫ಔತಣಕ್ಕೆ ಸಿದ್ಧಪಡಿಸಿಕೊಂಡು, ಚಾಪೆಗಳನ್ನು ಹಾಸಿಕೊಂಡು ತಿಂದು, ಕುಡಿಯುತ್ತಾರೆ; ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಹಚ್ಚಿ ಸಿದ್ಧವಾಗಿ!
6 主はわたしにこう言われた、「行って、見張びとをおき、その見るところを告げさせよ。
೬ಕರ್ತನು ನನಗೆ ಹೇಳುವುದೇನೆಂದರೆ, “ಹೋಗು, ಕಾವಲುಗಾರನನ್ನು ನೇಮಿಸು; ಅವನು ಕಂಡದ್ದನ್ನು ತಿಳಿಸಲಿ.
7 馬に乗って二列に並んだ者と、ろばに乗った者と、らくだに乗った者とを彼が見るならば、耳を傾けてつまびらかに聞かせよ」。
೭ಅವನು ಜೋಡಿ ಜೋಡಿಯಾಗಿ ಬರುವ ಸವಾರರ ಸಾಲನ್ನೂ, ಕತ್ತೆಗಳ ಮತ್ತು ಒಂಟೆಗಳ ಸಾಲುಗಳನ್ನೂ ನೋಡಿದರೆ, ಬಹಳ ಗಮನದಿಂದ ಕಿವಿಗೊಟ್ಟು ಗಮನಿಸಲಿ” ಎಂಬುದೇ.
8 その時、見張びとは呼ばわって言った、「主よ、わたしがひねもすやぐらに立ち、夜もすがらわが見張所に立っていると、
೮ಬಳಿಕ ಅವನು ಸಿಂಹದಂತೆ ಕೂಗಿ, “ಕರ್ತನೇ, ಪ್ರತಿ ದಿನವು ನಾನು ಕಾವಲಿನ ಬುರುಜಿನ ಮೇಲೆ ನಿಂತಿದ್ದೇನೆ, ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ.
9 見よ、馬に乗って二列に並んだ者がここに来ます」。彼は答えて言った、「倒れた、バビロンは倒れた、その神々の像はことごとく打ち砕かれて地に伏した」。
೯ಇಗೋ, ಸವಾರರು ಜೋಡಿ ಜೋಡಿಯಾಗಿ ಬರುತ್ತಾರೆ.” ಅವನು ಕೂಗಿ, “ಬಾಬೆಲ್ ಬಿದ್ದು ಹೋಯಿತು, ಬಾಬೆಲ್ ಬಿದ್ದು ಹೋಯಿತು! ಅದರ ದೇವತೆಗಳ ವಿಗ್ರಹಗಳನ್ನು ಒಡೆದು ನೆಲಸಮ ಮಾಡಿಬಿಟ್ಟರು” ಎಂದು ಹೇಳುವನು.
10 ああ、踏みにじられたわが民、わが打ち場の子よ、イスラエルの神、万軍の主からわたしが聞いたところのものをあなたがたに告げる。
೧೦ನನ್ನ ಕಣದ ದವಸವೇ, ನನ್ನ ಬಡಿತಕ್ಕೆ ಈಡಾದವರೇ! ಇಸ್ರಾಯೇಲರ ದೇವರಾಗಿರುವ ಸೇನಾಧೀಶ್ವರನಾದ ಯೆಹೋವನಿಂದ, ನಾನು ಕೇಳಿದ್ದನ್ನೇ ನಿಮಗೆ ತಿಳಿಸಿದ್ದೇನೆ.
11 ドマについての託宣。セイルからわたしに呼ばわる者がある、「夜回りよ、今は夜のなんどきですか、夜回りよ、今は夜のなんどきですか」。
೧೧ದೂಮದ ಬಗ್ಗೆ ದೈವೋಕ್ತಿ. ಆತನು ಸೇಯೀರಿನಿಂದ ನನ್ನನ್ನು ಕರೆದು, “ಕಾವಲುಗಾರನೇ, ಈಗ ರಾತ್ರಿ ಎಷ್ಟು ಸಮಯವಾಯಿತು? ಕಾವಲುಗಾರನೇ, ರಾತ್ರಿ ಸಮಯ ಎಷ್ಟು ಕಳೆಯಿತು
12 夜回りは言う、「朝がきます、夜もまたきます。もしあなたがたが聞こうと思うならば聞きなさい、また来なさい」。
೧೨ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ; ವಿಚಾರಿಸಬೇಕಾದರೆ ಆಮೇಲೆ ಬಂದು ವಿಚಾರಿಸಿರಿ” ಎಂದು ಕಾವಲುಗಾರನು ಹೇಳಿದನು.
13 アラビヤについての託宣。デダンびとの隊商よ、あなたがたはアラビヤの林にやどる。
೧೩ಅರಬಿಯ ವಿಷಯವಾದ ದೈವೋಕ್ತಿ. ಓ ದೇದಾನ್ಯರೇ, ಅರಬಿಯದ ಮರುಭೂಮಿಯಲ್ಲಿ ಇಳಿದುಕೊಳ್ಳಿರಿ.
14 テマの地に住む民よ、水を携えて、かわいた者を迎え、パンをもって、逃げのがれた者を迎えよ。
೧೪ಬಾಯಾರಿದವರಿಗೆ ನೀರನ್ನು ತಂದುಕೊಡಿರಿ, ತೇಮಾ ದೇಶದ ನಿವಾಸಿಗಳೇ ಓಡಿ ಹೋದವರನ್ನು ರೊಟ್ಟಿಯೊಡನೆ ಎದುರುಗೊಳ್ಳಿರಿ.
15 彼らはつるぎを避け、抜いたつるぎを避け、張った弓を避け、また激しい戦いを避けて、逃げてきたからである。
೧೫ಏಕೆಂದರೆ ಹಿರಿದ ಕತ್ತಿ, ಬಾಗಿದ ಬಿಲ್ಲು, ಯುದ್ಧದ ಬಾಧೆ ಇವುಗಳಿಂದ ತಪ್ಪಿಸಿಕೊಂಡು ಓಡಿ ಹೋಗಿದ್ದಾರೆ.
16 主はわたしにこう言われた、「雇人の年期のように一年以内にケダルのすべての栄華はつきはてる。
೧೬ಕರ್ತನು ನನಗೆ ಹೇಳುವುದೇನೆಂದರೆ, “ಕೂಲಿಯವನ ವರ್ಷಗಳಂತೆ ಒಂದು ವರ್ಷದೊಳಗೆ ಕೇದಾರಿನ ಸಕಲ ವೈಭವವು ಇಲ್ಲವಾಗುವುದು.
17 ケダルの子らの勇士で、射手の残る者は少ない」。これはイスラエルの神、主が語られたのである。
೧೭ಕೇವಲ ಕೆಲವೇ ಬಿಲ್ಲುಗಾರರೂ ಹಾಗೂ ಕೇದಾರಿನ ಶೂರರೂ ಉಳಿಯುವರು” ಎಂಬುದಾಗಿ ಇಸ್ರಾಯೇಲರ ದೇವರಾದ ಯೆಹೋವನು ನುಡಿದಿದ್ದಾನೆ.