< ヨブ 記 26 >
೧ಆಗ ಯೋಬನು ಹೀಗೆ ಉತ್ತರಕೊಟ್ಟನು,
2 なんぢ能力なき者を如何に助けしや 氣力なきものを如何に救ひしや
೨“ನಿನ್ನಿಂದ ಅಶಕ್ತನಿಗೆ ಎಷ್ಟೋ ಸಹಾಯವಾಯಿತು! ಬಲಹೀನವಾದ ಕೈಗೆ ಮಹಾ ಸಹಾಯ ದೊರಕಿತು.
3 智慧なき者を如何に誨へしや 穎悟の道を如何に多く示ししや
೩ಬುದ್ಧಿಯಿಲ್ಲದವನಿಗೆ ನೀನು ಹೇಳಿದ ಬುದ್ಧಿಯನ್ನು ಎಷ್ಟೆಂದು ಹೇಳಲಿ! ಸುಜ್ಞಾನವನ್ನು ಧಾರಾಳವಾಗಿ ಉಪದೇಶಿಸಿದ್ದಿ!
4 なんぢ誰にむかひて言語を出ししや なんぢより出しは誰が靈なるや
೪ಯಾರಿಗೆ ಮಾತುಗಳನ್ನು ಕಲಿಸಿದ್ದಿ? ನಿನ್ನಿಂದ ಹೊರಟ ನುಡಿಗಳನ್ನು ಯಾವ ಆತ್ಮವು ಪ್ರೇರೇಪಿಸಿತು?”
೫ಅದಕ್ಕೆ ಬಿಲ್ದದನು, “ಜಲಚರಗಳಿಂದ ತುಂಬಿರುವ ಸಾಗರದ ಕೆಳಗಿನ ಲೋಕದಲ್ಲಿ, ಪ್ರೇತಗಳು ಆತನ ಭಯದಿಂದ ಯಾತನೆಪಡುವವು.
6 かれの御前には陰府も顯露なり 滅亡の坑も蔽ひ匿す所なし (Sheol )
೬ಪಾತಾಳವು ದೇವರ ದೃಷ್ಟಿಗೆ ತೆರೆದಿದೆ, ನಾಶಲೋಕವು ಮರೆಯಾಗಿಲ್ಲ. (Sheol )
7 彼は北の天を虚空に張り 地を物なき所に懸けたまふ
೭ಆತನು ಶೂನ್ಯದ ಮೇಲೆ ಆಕಾಶದ ಉತ್ತರ ದಿಕ್ಕನ್ನು ವಿಸ್ತರಿಸಿ, ಭೂಲೋಕವನ್ನು ಯಾವ ಆಧಾರವೂ ಇಲ್ಲದೆ ತೂಗು ಹಾಕಿದ್ದಾನೆ.
೮ತನ್ನ ಮೇಘಗಳೊಳಗೆ ನೀರನ್ನು ತುಂಬಿ ಕಟ್ಟುವನು, ಯಾವ ಮೋಡವೂ ಅದರ ಭಾರದಿಂದ ಒಡೆದು ಹೋಗದು.
೯ತನ್ನ ಸಿಂಹಾಸನಕ್ಕೆ ಮರೆಯಾಗಿ, ಮುಂಭಾಗದಲ್ಲಿ ಮೋಡವನ್ನು ಕವಿಸಿರುವನು.
೧೦ಬೆಳಕು ಕತ್ತಲುಗಳ ಸಂಧಿಸ್ಥಾನದಲ್ಲಿ ಸಮುದ್ರದ ಮೇಲೆ, ಸುತ್ತಲೂ ಮೇರೆಯನ್ನೂ ಹಾಕಿದ್ದಾನೆ.
೧೧ಆಕಾಶಮಂಡಲದ ಸ್ತಂಭಗಳು, ಆತನ ಗದರಿಕೆಯಿಂದ ಬೆರಗಾಗಿ ಕದಲುವವು.
12 その權能をもて海を靜めその智慧をもてラハブを撃碎き
೧೨ಆತನು ತನ್ನ ವಿವೇಕ ಶಕ್ತಿಯಿಂದ ಘಟಸರ್ಪವನ್ನು ಹೊಡೆದುಹಾಕಿದನು; ತನ್ನ ಪರಾಕ್ರಮದಿಂದ ಸಾಗರವನ್ನು ಶಾಂತಗೊಳಿಸಿದನು.
13 その氣嘘をもて天を輝かせ 其手をもて逃る蛇を衝とほしたまふ
೧೩ಆತನ ಶ್ವಾಸವು ಆಕಾಶಮಂಡಲವನ್ನು ಶುಭ್ರಮಾಡುವುದು, ಆತನ ಹಸ್ತವು ವೇಗವಾಗಿ ಓಡುವ ಸರ್ಪವನ್ನು ಇರಿಯುವುದು.
14 視よ是等はただその御工作の端なるのみ 我らが聞く所の者は如何にも微細なる耳語ならずや 然どその權能の雷轟に至りては誰かこれを曉らんや
೧೪ಆಹಾ, ಈ ಅದ್ಭುತಗಳು ಆತನ ಮಾರ್ಗಗಳ ಕಟ್ಟಕಡೆಯಾಗಿವೆ. ಆತನ ವಿಷಯವಾಗಿ ಸೂಕ್ಷ್ಮ ಶಬ್ದವನ್ನು ಮಾತ್ರ ಕೇಳಿದ್ದೇವೆ, ಆತನ ಪ್ರಾಬಲ್ಯದ ಘನಗರ್ಜನೆಯನ್ನು ಯಾರು ಗ್ರಹಿಸಬಲ್ಲರು?”