< 詩篇 126 >

1 京まうでの歌 ヱホバ、シオンの俘囚をかへしたまひし時 われらは夢みるもののごとくなりき
ಯಾತ್ರಾಗೀತೆ. ಸೆರೆಯಲ್ಲಿದ್ದ ನಮ್ಮನ್ನು ಯೆಹೋವನು ತಿರುಗಿ ಚೀಯೋನಿಗೆ ಬರಮಾಡಿದಾಗ, ನಾವು ಕನಸು ಕಂಡವರಂತೆ ಇದ್ದೆವು.
2 そのとき笑はわれらの口にみち歌はわれらの舌にみてり ヱホバかれらのために大なることを作たまへりといへる者もろもろの國のなかにありき
ಆಗ ನಮ್ಮ ಬಾಯಿ ಬಲು ನಗೆಯಿಂದಲೂ, ನಮ್ಮ ನಾಲಿಗೆ ಹರ್ಷಗೀತದಿಂದಲೂ ತುಂಬಿದವು. ಅನ್ಯಜನರು, “ಯೆಹೋವನು ಇವರಿಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದಾನೆ” ಎಂದು ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.
3 ヱホバわれらのために大なることをなしたまひたれば我儕はたのしめり
ಯೆಹೋವನು ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದು ನಿಜ; ಆದುದರಿಂದ ನಾವು ಸಂತೋಷವುಳ್ಳವರಾಗಿದ್ದೇವೆ.
4 ヱホバよ願くはわれらの俘囚をみなみの川のごとくに歸したまへ
ಯೆಹೋವನೇ, ನೀನು ದಕ್ಷಿಣದೇಶದ ಹಳ್ಳಗಳನ್ನೋ ಎಂಬಂತೆ, ಸೆರೆಯಲ್ಲಿ ಉಳಿದಿರುವ ನಮ್ಮವರನ್ನೂ ತಿರುಗಿ ಬರಮಾಡು.
5 涙とともに播くものは歡喜とともに穫らん
ಅಳುತ್ತಾ ಬಿತ್ತುವವರು, ಹಾಡುತ್ತಾ ಕೊಯ್ಯುವರು,
6 その人は種をたづさへ涙をながしていでゆけど禾束をたづさへ喜びてかへりきたらん
ದುಃಖಿಸುತ್ತಾ ಬೀಜವನ್ನು ತೆಗೆದುಕೊಂಡು ಹೋಗುವವನು, ಹರ್ಷಿಸುತ್ತಾ ಸಿವುಡುಗಳನ್ನು ಹೊತ್ತುಕೊಂಡು ಬರುವನು.

< 詩篇 126 >