< 詩篇 70 >
1 伶長にうたはしめたるダビデが記念のうた 神よねがはくは我をすくひたまヘ ヱホバよ速きたりて我をたすけたまへ
೧ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು, ದಾವೀದನ ಕೀರ್ತನೆ; ಜ್ಞಾಪಕಾರ್ಥ ನೈವೇದ್ಯಸಮರ್ಪಣೆಯಲ್ಲಿ ಹಾಡತಕ್ಕದ್ದು. ದೇವರೇ, ದಯವಿಟ್ಟು ನನ್ನನ್ನು ರಕ್ಷಿಸು. ಯೆಹೋವನೇ, ಬೇಗನೆ ಬಂದು ಸಹಾಯ ಮಾಡು.
2 わが霊魂をたづぬるものの恥あわてんことを わが害はるるをよろこぶものの後にしりぞきて恥をおはんことを
೨ನನ್ನ ಪ್ರಾಣಕ್ಕಾಗಿ ಸಮಯನೋಡುವವರು ಆಶಾಭಂಗಪಟ್ಟು ಅಪಮಾನಹೊಂದಲಿ; ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಕಳವಳದಿಂದ ಹಿಂದಿರುಗಿ ಓಡಲಿ.
3 ああ視よや視よやといふもののおのが恥によりて後にしりぞかんことを
೩ಆಹಾ, ಆಹಾ ಎಂದು ಪರಿಹಾಸ್ಯಮಾಡುವವರು ತಮಗಾಗುವ ಅಪಮಾನದಿಂದ ಬೆನ್ನು ಕೊಟ್ಟು ಓಡಿಹೋಗಲಿ.
4 すべて汝をたづねもとむる者のなんぢによりて樂みよろこばんことを なんぢの救をしたふもののつねに神は大なるかなととなへんことを
೪ನಿನ್ನ ದರ್ಶನವನ್ನು ಕೋರುವವರೆಲ್ಲರು ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ; ನಿನ್ನ ಜಯದಲ್ಲಿ ಆನಂದಿಸುವವರು, “ದೇವರು ಮಹೋನ್ನತನು” ಎಂದು ಯಾವಾಗಲೂ ಹೇಳಲಿ.
5 われは苦しみ且ともし神よいそぎて我にきたりたまへ 汝はわが助われを救ふものなり ヱホバよねがはくは猶豫たまふなかれ
೫ನಾನಾದರೋ ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ; ದೇವರೇ, ಬೇಗನೆ ಬಾ. ಯೆಹೋವನೇ, ನೀನೇ ನನಗೆ ಸಹಾಯಕನೂ, ರಕ್ಷಕನೂ ಆಗಿದ್ದೀ; ತಡಮಾಡಬೇಡ.