< 雅歌 7 >
1 君の女よ なんぢの足は鞋の中にありて如何に美はしきかな 汝の腿はまろらかにして玉のごとく 巧匠の手にて作りたるがごとし
೧ರಾಜಪುತ್ರಿಯೇ, ಪಾದರಕ್ಷೆಗಳಲ್ಲಿನ ನಿನ್ನ ಪಾದಗಳು ಎಷ್ಟೋ ಅಂದ! ದುಂಡಾದ ನಿನ್ನ ತೊಡೆಗಳು ಕುಶಲ ಶಿಲ್ಪಿಯು ಮಾಡಿದ ಆಭರಣಗಳಂತಿವೆ.
2 なんぢの臍は美酒の缺ることあらざる圓き杯盤のごとく なんぢの腹は積かさねたる麥のまはりを百合花もてかこめるが如し
೨ನಿನ್ನ ಹೊಕ್ಕಳು ಮಿಶ್ರಪಾನ ತುಂಬಿದ ಗುಂಡು ಬಟ್ಟಲು, ನಿನ್ನ ಹೊಟ್ಟೆ ನೆಲದಾವರೆಗಳಿಂದ ಅಲಂಕೃತವಾದ ಗೋದಿಯ ರಾಶಿ.
3 なんぢの兩乳房は牝鹿の雙子なる二の小鹿のごとし
೩ನಿನ್ನ ಸ್ತನಗಳೆರಡೂ ಜಿಂಕೆಯ ಅವಳಿಮರಿಗಳಂತಿವೆ.
4 なんぢの頸は象牙の戍樓の如く 汝の目はヘシボンにてバテラビムの門のほとりにある池のごとく なんぢの鼻はダマスコに對へるレバノンの戍樓のごとし
೪ನಿನ್ನ ಕೊರಳು ದಂತದ ಗೋಪುರ, ನಿನ್ನ ನೇತ್ರಗಳು ಹೆಷ್ಬೋನಿನಲ್ಲಿನ ಬತ್ ರಬ್ಬೀಮ್ ಬಾಗಿಲ ಬಳಿಯ ಕೊಳಗಳಂತಿವೆ. ನಿನ್ನ ಮೂಗು ದಮಸ್ಕದ ಕಡೆಗಿರುವ ಲೆಬನೋನಿನ ಬುರುಜಿನಂತಿದೆ.
5 なんぢの頭はカルメルのごとく なんぢの頭の髪は紫花のごとし 王その垂たる髪につながれたり
೫ಕರ್ಮೆಲ್ ಬೆಟ್ಟದಂತೆ ಗಂಭೀರವಾಗಿದೆ ನಿನ್ನ ಶಿರಸ್ಸು, ನಿನ್ನ ತಲೆಗೂದಲಿಗಿದೆ ಥಳಥಳಿಸುವ ನುಣುಪುಹೊಳಪಿನ ಬಣ್ಣ, ಅದರಲ್ಲಿದೆ ಅರಸನನ್ನೇ ಸೆರೆಹಿಡಿಯುವಂಥ ಆಕರ್ಷಣೆ.
6 ああ愛よ もろもろの快樂の中にありてなんぢは如何に美はしく如何に悦ばしき者なるかな
೬ಪ್ರೇಯಸಿಯೇ, ಸಕಲ ಸೌಂದರ್ಯ ಸೊಬಗಿನಿಂದ ನೀನೆಷ್ಟು ಸುಂದರ, ನೀನೆಷ್ಟು ಮನೋಹರ!
7 なんぢの身の長は棕櫚の樹に等しく なんぢの乳房は葡萄のふさのごとし
೭ನೀಳವಾದ ನಿನ್ನ ಆಕಾರವು ಖರ್ಜೂರದ ಮರ, ನಿನ್ನ ಸ್ತನಗಳೇ ಅದರ ಗೊಂಚಲುಗಳು.
8 われ謂ふこの棕櫚の樹にのぼり その枝に執つかんと なんぢの乳房は葡萄のふさのごとく なんぢの鼻の氣息は林檎のごとく匂はん
೮ನಾನು ಆ ಮರವನ್ನು ಹತ್ತಿ, ರೆಂಬೆಗಳನ್ನು ಹಿಡಿಯುವೆನು ಅಂದುಕೊಂಡೆನು. ನಿನ್ನ ಸ್ತನಗಳು ನನಗೆ ದ್ರಾಕ್ಷಿಯ ಗೊಂಚಲುಗಳಂತಿರಲಿ, ಸೇಬುಹಣ್ಣಿನ ಪರಿಮಳದಂತೆ ನಿನ್ನ ಉಸಿರು.
9 なんぢの口は美酒のごとし わが愛する者のために滑かに流れくだり 睡れる者の口をして動かしむ
೯ನಿನ್ನ ಚುಂಬನ ಉತ್ತಮ ದ್ರಾಕ್ಷಾರಸದ ಹಾಗಿರಲಿ, ನಿದ್ರಿಸುವವರ ತುಟಿಗಳಲ್ಲಿ ನಯವಾಗಿ ಹರಿಯುವ ಈ ರಸವು ನನ್ನ ನಲ್ಲೆಯಾದ ನಿನ್ನಲ್ಲಿಯೂ ಮೆಲ್ಲನೆ ಇಳಿದು ಬರುವುದು.
10 われはわが愛する者につき 彼はわれを戀したふ わが愛する者よ われら田舍にくだり 村里に宿らん
೧೦ನಾನು ನನ್ನ ನಲ್ಲನ ನಲ್ಲೆ, ಅವನ ಆಶೆಯು ನನ್ನ ಮೇಲೆ.
೧೧ಎನ್ನಿನಿಯನೇ, ವನಕ್ಕೆ ಹೋಗೋಣ ಬಾ, ಹಳ್ಳಿಗಳ ಮಧ್ಯದಲ್ಲಿ ವಾಸಮಾಡುವ!
12 われら夙におきて葡萄や芽しし莟やいでし石榴の花やさきしいざ葡萄園にゆきて見ん かしこにて我わが愛をなんぢにあたへん
೧೨ತೋಟಗಳಿಗೆ ಹೊತ್ತಾರೆ ಹೊರಟು ದ್ರಾಕ್ಷಿಯು ಚಿಗುರಿದೆಯೋ, ಅದರ ಹೂವು ಅರಳಿದೆಯೋ, ದಾಳಿಂಬೆ ಹೂ ಬಿಟ್ಟಿದೆಯೋ ನೋಡೋಣ ಬಾ, ಅಲ್ಲಿ ನನ್ನ ಪ್ರೀತಿಯನ್ನು ನಿನಗೆ ಸಲ್ಲಿಸುವೆನು.
13 戀茄かぐはしき香氣を發ち もろもろの佳き果物古き新らしき共にわが戸の上にあり わが愛する者よ我これをなんぢのためにたくはへたり
೧೩ಕಾಮಜನಕ ವೃಕ್ಷಗಳು ಪರಿಮಳ ಬೀರುತ್ತಿವೆ, ನನ್ನ ಕಾಂತನೇ, ನಾನು ನಿನಗಾಗಿ ಇಟ್ಟುಕೊಂಡ ಒಳ್ಳೊಳ್ಳೆಯ, ಬಗೆಬಗೆಯ ಹಳೆಯ ಮತ್ತು ಹೊಸ ಹಣ್ಣುಗಳು ನಮ್ಮ ಬಾಗಿಲುಗಳ ಬಳಿ ಸಿದ್ಧವಾಗಿವೆ.