< ヘブル人への手紙 1 >

1 第一款 キリストは大いに天使等に優り給ふ 神は昔預言者等を以て、幾度にも幾様にも先祖等に語り給ひしに、
ಗತಕಾಲದಲ್ಲಿ ನಮ್ಮ ಪಿತೃಗಳ ಸಂಗಡ ವಿವಿಧ ರೀತಿಯಲ್ಲಿಯೂ ಅನೇಕಬಾರಿ ಪ್ರವಾದಿಗಳ ಮುಖಾಂತರವೂ ಮಾತನಾಡಿದ ದೇವರು,
2 此末の日に至り、曾て萬物の世嗣に立て、又之によりて世を造り給ひたる御子を以て、我等に語り給へり。 (aiōn g165)
ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ಮುಖಾಂತರ ಮಾತನಾಡಿದ್ದಾರೆ. ಈ ಕ್ರಿಸ್ತ ಯೇಸುವನ್ನೇ ದೇವರು ಎಲ್ಲಕ್ಕೂ ಬಾಧ್ಯರನ್ನಾಗಿ ನೇಮಿಸಿದರು. ಇವರ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದರು. (aiōn g165)
3 彼は神の光榮の輝、其本體の印章に在して、己が権能の言を以て、萬物を保ち、罪の潔を為し給ひて、天に於て稜威の右に坐し給ふなり。
ಈ ಕ್ರಿಸ್ತ ಯೇಸುವೇ ದೇವರ ಮಹಿಮೆಯ ಪ್ರಕಾಶವೂ ಅವರ ವ್ಯಕ್ತಿತ್ವದ ಪ್ರತಿರೂಪವಾಗಿರುವ ದೇವಪುತ್ರ ಆಗಿದ್ದಾರೆ. ಈ ಕ್ರಿಸ್ತ ಯೇಸುವೇ ತಮ್ಮ ಶಕ್ತಿಯುತ ವಾಕ್ಯದಿಂದ ಸಮಸ್ತಕ್ಕೂ ಆಧಾರವಾಗಿದ್ದಾರೆ. ಕ್ರಿಸ್ತ ಯೇಸು ತಾವಾಗಿಯೇ ನಮ್ಮ ಪಾಪಗಳನ್ನು ಶುದ್ಧಿಮಾಡಿ ಉನ್ನತದೊಳಗೆ ಮಹೋನ್ನತ ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾರೆ.
4 彼が天使等に優る者と成り給へるは、猶其受け給ひし御名の彼等に優れるが如し。
ದೇವಪುತ್ರ ಆಗಿರುವ ಕ್ರಿಸ್ತ ಯೇಸುವು ದೇವದೂತರಿಗಿಂತಲೂ ಶ್ರೇಷ್ಠರಾಗಿದ್ದಾರೆ. ಅವರಿಗಿಂತ ಅತಿ ಶ್ರೇಷ್ಠ ಹೆಸರನ್ನು ಬಾಧ್ಯವಾಗಿ ಹೊಂದಿದವರೂ ಆಗಿದ್ದಾರೆ.
5 蓋神曾て天使等の敦れに斯は曰ひしぞ、[曰く]、「汝は我子なり、我今日汝を生めり」と、又「我彼に父たり彼我に子たらん」と。
ದೇವರು ತಮ್ಮ ದೂತರೊಳಗೆ ಯಾರಿಗಾದರೂ ಹೀಗೆ ಎಂದಾದರೂ ಹೇಳಿದ್ದುಂಟೋ, “ನೀನು ನನ್ನ ಪುತ್ರನು; ಇಂದು ನಾನು ನಿನ್ನ ತಂದೆಯಾಗಿದ್ದೇನೆ!” ಎಂದೂ, “ನಾನು ಆತನ ತಂದೆಯಾಗಿರುವೆನು; ಆತನು ನನಗೆ ಮಗನಾಗಿರುವನು!”
6 又冢子を更に世に入れ給ひし時に曰く、「神の天使皆之を禮拝すべし」、と。
ಇದಲ್ಲದೆ ಮೊದಲು ಹುಟ್ಟಿದವರನ್ನು ದೇವರು ಲೋಕದೊಳಗೆ ಬರಮಾಡುವಾಗ, “ದೇವದೂತರೆಲ್ಲರೂ ಆತನನ್ನು ಆರಾಧಿಸಲಿ!” ಎಂದು ಹೇಳಿದ್ದಾರೆ.
7 而して天使等に就きては、「彼風を其使者と為し、焔を其の役者となし給ふ」と言へるに、
ದೂತರ ವಿಷಯದಲ್ಲಿ ದೇವರು ಮಾತನಾಡುವಾಗ, “ಅವರು ತಮ್ಮ ದೂತರನ್ನು ಆತ್ಮಗಳಾಗಿಯೂ ತಮ್ಮ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾರೆ!” ಎಂದು ಹೇಳಿದ್ದಾರೆ.
8 御子に就きては、「神よ、汝の玉座は世々に在り、汝の王位の笏は義の笏なり、 (aiōn g165)
ತಂದೆ ದೇವರು ತಮ್ಮ ಪುತ್ರ ಆಗಿರುವವರ ವಿಷಯದಲ್ಲಿ ಹೀಗೆ ಹೇಳಿದ್ದಾರೆ: “ದೇವರೇ, ನಿಮ್ಮ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು. ನೀತಿದಂಡವೇ ನಿಮ್ಮ ರಾಜದಂಡವಾಗಿದೆ. (aiōn g165)
9 汝正義を愛し不義を憎めり、故に汝の神たる神は、喜の油を汝が同輩に優りて汝に注ぎ給へり、」と言ふ。
ನೀವು ನೀತಿಯನ್ನು ಪ್ರೀತಿಸಿದ್ದೀರಿ. ಅನೀತಿಯನ್ನು ದ್ವೇಷಿಸಿದ್ದೀರಿ; ಆದ್ದರಿಂದ ದೇವರೇ, ನಿಮ್ಮ ದೇವರು ನಿಮ್ಮನ್ನು ನಿಮ್ಮ ಜೊತೆಗಾರರಿಗಿಂತ ಮಿಗಿಲಾಗಿ ಆನಂದದ ತೈಲದಿಂದ ಅಭಿಷೇಕಿಸಿದ್ದಾರೆ!”
10 又曰く、「主よ、汝初に地を据置き給へり、而して諸の天も御手の業なり、
ಇದಲ್ಲದೆ ದೇವರು ಹೀಗೆಂದರು: “ಕರ್ತದೇವರೇ, ಆದಿಯಲ್ಲಿ ನೀವು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀರಿ, ಆಕಾಶಗಳು ನಿಮ್ಮ ಕೈಕೆಲಸಗಳಾಗಿವೆ.
11 是等は亡びん、然れど汝は永存し給ひ、是等は皆衣服の如く古びん。
ಅವು ನಾಶವಾಗುವವು. ಆದರೆ ನೀವು ಸದಾಕಾಲವೂ ಜೀವಿಸುತ್ತೀರಿ. ಅವೆಲ್ಲವೂ ವಸ್ತ್ರದಂತೆ ಹಳೆಯದಾಗುವವು.
12 汝之を上衣の如く畳み給はんに、是等は變るべしと雖も、汝は同じきものにして變る事なく、汝の齢終なかるべし」と。
ಅವುಗಳನ್ನು ಮೇಲಂಗಿಯಂತೆ ಮಡಿಸುತ್ತಿರಿ, ಅವು ವಸ್ತ್ರದಂತೆ ಮಾರ್ಪಡುತ್ತವೆ. ಆದರೆ ನೀವು ಏಕರೀತಿಯಾಗಿದ್ದೀರಿ. ನಿಮ್ಮ ವರ್ಷಗಳು ಮುಗಿದುಹೋಗುವುದಿಲ್ಲ!”
13 然るに曾て天使等の敦れに向ひてか、「我汝の敵を汝の足台と成らしむるまで我右に坐せよ」、と曰ひし事ある、
ಆದರೆ ದೇವದೂತರಲ್ಲಿ ಯಾರ ವಿಷಯದಲ್ಲಿಯಾದರೂ, “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಪೀಠವಾಗಿ ಮಾಡುವವರೆಗೂ ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು!” ಎಂಬುದಾಗಿ ದೇವರು ಎಂದಾದರೂ ಹೇಳಿದ್ದುಂಟೇ?
14 天使は悉く役者と成る霊にして、救霊の世嗣を受くべき人々の為に役者として遣はさるるに非ずや。
ಈ ದೇವದೂತರೆಲ್ಲರೂ ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲಾದ ಸೇವೆಯ ಆತ್ಮಗಳು ಅಲ್ಲವೇ?

< ヘブル人への手紙 1 >