< マルコの福音書 11 >
1 第一項 イエズスエルサレムにて歓迎せられ給ふ 一行橄欖山の下にて、エルザレムとペッファゼとベタニアとに近づける時、イエズス二人の弟子を遣はし給ふとて、
೧ಅವರು ಯೆರೂಸಲೇಮಿಗೆ ಸಮೀಪಿಸಿ ಬೆತ್ಫಗೆ ಹಾಗೂ ಬೇಥಾನ್ಯದ ಬಳಿಯಲ್ಲಿರುವ ಎಣ್ಣೆಮರಗಳ ಗುಡ್ಡಕ್ಕೆ ಬಂದಾಗ ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು,
2 之に曰ひけるは、向の邑に往け、然て其處に入らば、直に未人の乗らざる小驢馬の繋がれたるに遭はん、其を解きて牽來れ。
೨“ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ಅದರೊಳಗೆ ಸೇರುತ್ತಿರುವಾಗಲೇ ಅಲ್ಲಿ ಕಟ್ಟಿರುವ ಒಂದು ಕತ್ತೆಮರಿಯನ್ನು ಕಾಣುವಿರಿ; ಇದುವರೆಗೂ ಅದರ ಮೇಲೆ ಯಾರೂ ಸವಾರಿ ಮಾಡಿಲ್ಲ; ಅದನ್ನು ಬಿಚ್ಚಿ ಇಲ್ಲಿಗೆ ತನ್ನಿರಿ.
3 若人ありて、何を為すかと云はば、主之を要す、と云へ、然らば直に其を此處に遣はさん、と。
೩ಯಾರಾದರೂ ನಿಮ್ಮನ್ನು, ‘ಅದನ್ನೇಕೆ ಬಿಚ್ಚುತ್ತೀರಿ?’ ಎಂದು ಕೇಳಿದರೆ, ‘ಇದು ಕರ್ತನಿಗೆ ಅಗತ್ಯವಾಗಿದೆ’ ಅನ್ನಿರಿ, ಅವರು ಬೇಗನೆ ಅದನ್ನು ಕಳುಹಿಸಿಕೊಡುವರು” ಎಂದು ಹೇಳಿ ಕಳುಹಿಸಿದನು.
4 弟子等往きて、門前の辻に小驢馬の外に繋がれたるに遇ひて、之を解きけるに、
೪ಆ ಶಿಷ್ಯರು ಹೋಗಿ ಬೀದಿಯಲ್ಲಿ ಹೊರಗೆ ಬಾಗಿಲಿನ ಹತ್ತಿರ ಕತ್ತೆಮರಿಯನ್ನು ಕಟ್ಟಿರುವುದನ್ನು ಕಂಡು ಅದನ್ನು ಬಿಚ್ಚಿದರು.
5 其處に立てる人々の中に、汝等小驢馬を解きて何とかする、と云ふ者ありければ、
೫ಅಲ್ಲಿ ನಿಂತಿದ್ದವರಲ್ಲಿ ಕೆಲವರು, “ಈ ಕತ್ತೆಮರಿಯನ್ನು ಏಕೆ ಬಿಚ್ಚುತ್ತೀರಿ?” ಎಂದು ಅವರನ್ನು ಕೇಳಿದರು.
6 弟子等イエズスの命じ給ひし如く云ひしに、人々之を容せり。
೬ಅದಕ್ಕೆ ಯೇಸು ಹೇಳಿದಂತೆಯೇ ಅವರು ಹೇಳಿದರು ಆಗ ಜನರು ಅದನ್ನು ತೆಗೆದುಕೊಂಡು ಹೋಗಲು ಬಿಟ್ಟುಕೊಟ್ಟರು.
7 斯て小驢馬をイエズスの許に牽來り、己が衣服を其上に被けしかば、イエズス之に乗り給へり。
೭ಶಿಷ್ಯರು ಆ ಕತ್ತೆಮರಿಯನ್ನು ಯೇಸುವಿನ ಬಳಿಗೆ ತಂದು ತಮ್ಮ ಮೇಲಂಗಿಗಳನ್ನು ಅದರ ಮೇಲೆ ಹಾಕಲು ಆತನು ಅದನ್ನು ಹತ್ತಿ ಕುಳಿತುಕೊಂಡನು.
8 多くの人己が衣服を道に鋪き、或人々は樹より枝を伐落して道に鋪きたりしが、
೮ಆಗ ಅನೇಕರು ತಮ್ಮ ಮೇಲಂಗಿಗಳನ್ನು ದಾರಿಯಲ್ಲಿ ಹಾಸಿದರು. ಬೇರೆ ಕೆಲವರು ತೋಟಗಳಿಂದ ಎಳೆಯ ರೆಂಬೆಗಳನ್ನು ಕಡಿದು, ತಂದು ಹಾಸಿದರು.
೯ಯೇಸುವಿನ ಹಿಂದೆ ಹಾಗೂ ಮುಂದೆ ಹೋಗುತ್ತಿದ್ದವರು: “ಹೊಸನ್ನ, ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ;
10 主の名によりて來れる者は祝せられ給へ、我等の父ダヴィドの來る國は祝せられよ、最高き處にホザンナ、と云ひ居たり。
೧೦ನಮ್ಮ ಪಿತೃವಾದ ದಾವೀದನ ರಾಜ್ಯವು ಬರುತ್ತದೆ, ಅದಕ್ಕೆ ಆಶೀರ್ವಾದವುಂಟಾಗಲಿ; ಮೇಲಣ ಲೋಕಗಳಲ್ಲಿ ಹೊಸನ್ನ” ಎಂದು ಆರ್ಭಟಿಸಿದರು.
11 第二項 イエズス審判権を示し給ふ イエズスエルザレムに入り、[神]殿に至りて徧く見廻し給ひしに、時既に夕暮なりしかば、十二人と共にベタニアに出で給へり。
೧೧ತರುವಾಯ ಯೇಸು ಯೆರೂಸಲೇಮನ್ನು ಸೇರಿ ದೇವಾಲಯದೊಳಗೆ ಹೋಗಿ ಸುತ್ತಲೂ ನೋಡಿದನು, ಅಷ್ಟರಲ್ಲಿ ಸಂಜೆಯಾದದ್ದರಿಂದ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಬೇಥಾನ್ಯಕ್ಕೆ ಹೊರಟು ಹೋದನು.
12 翌日一同ベタニアを出づる時、イエズス飢ゑ給ひしが、
೧೨ಮರುದಿನ ಅವರು ಬೇಥಾನ್ಯವನ್ನು ಬಿಟ್ಟು ಬರುತ್ತಿರುವಾಗ ಆತನಿಗೆ ಹಸಿವಾಯಿತು.
13 遥に葉ある無花果樹を見て、是に何をか見出だす事もやと、其處に至り給ひしに、葉の外に何をも見出だし給はざりき。其は無花果の期にあらざればなり。
೧೩ಎಲೆಗಳಿದ್ದ ಅಂಜೂರದ ಮರವನ್ನು ದೂರದಿಂದ ಕಂಡು ಅದರಲ್ಲಿ ತನಗೇನಾದರೂ ಹಣ್ಣು ಸಿಕ್ಕೀತೆಂದು ಅಲ್ಲಿಗೆ ಹೋದನು. ಅದರ ಹತ್ತಿರಕ್ಕೆ ಬಂದಾಗ ಅದರಲ್ಲಿ ಬರೀ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ; ಏಕೆಂದರೆ ಅದು ಅಂಜೂರದ ಹಣ್ಣಿನ ಕಾಲವಾಗಿರಲಿಲ್ಲ.
14 イエズス是に言ひて、今より後何時までも汝の實を食ふ人あらざれ、と曰ひしを弟子等聞きたりき。 (aiōn )
೧೪ಆಗ ಯೇಸು ಆ ಮರಕ್ಕೆ, “ಇನ್ನೆಂದಿಗೂ ಒಬ್ಬರೂ ನಿನ್ನಲ್ಲಿ ಹಣ್ಣನ್ನು ತಿನ್ನದಿರಲಿ” ಎಂದು ಹೇಳಿದನು. ಆತನ ಶಿಷ್ಯರು ಅದನ್ನು ಕೇಳಿಸಿಕೊಂಡರು. (aiōn )
15 一同エルザレムに至り、イエズス神[殿]に入り給ひて、殿内に売買する人々を逐出し始め、兩替屋の案と鴿売る人々の榻とを倒し給ひ、
೧೫ಅವರು ಯೆರೂಸಲೇಮಿಗೆ ಬಂದಾಗ ಯೇಸು ದೇವಾಲಯಕ್ಕೆ ಹೋಗಿ ಅದರಲ್ಲಿ ಮಾರುತ್ತಿದ್ದವರನ್ನೂ, ಕೊಳ್ಳುತ್ತಿದ್ದವರನ್ನೂ ಹೊರಡಿಸಿಬಿಡುವುದಕ್ಕೆ ತೊಡಗಿದನು; ನಾಣ್ಯಗಳನ್ನು ವಿನಿಮಯಮಾಡುತ್ತಿದ್ದ ವ್ಯಾಪಾರಿಗಳ ಮೇಜುಗಳನ್ನು ಕೆಡವಿಹಾಕಿದನು; ಪಾರಿವಾಳಗಳನ್ನು ಮಾರುವವರ ಮಣೆಗಳನ್ನು ಉರುಳಿಸಿದನು;
16 器を携へて[神]殿を通る事を何人にも許し給はず、
೧೬ಒಬ್ಬನನ್ನಾದರೂ ಸಾಮಾನುಗಳನ್ನು ಹೊತ್ತುಕೊಂಡು ದೇವಾಲಯದೊಳಕ್ಕೆ ಹಾದು ಹೋಗಗೊಡಿಸಲಿಲ್ಲ.
17 彼等に教へて曰ひけるは、録して「我家は萬民に祈の家と稱へられん」とあるにあらずや、然るに汝等之を強盗の巣窟と為せり、と。
೧೭ಮತ್ತು ಆತನು ಉಪದೇಶಮಾಡಿ, “‘ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯವೆನಿಸಿಕೊಳ್ಳುವುದು’ ಎಂದು ಬರೆದಿದೆಯಲ್ಲಾ? ಆದರೆ‘ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ’” ಎಂದು ಹೇಳಿದನು.
18 司祭長律法學士等之を聞き、如何にしてかイエズスを亡ぼさんと相謀り居たり、其は群衆挙りて其教を感嘆するによりて、彼を怖れたればなり。
೧೮ಅದನ್ನು ಮುಖ್ಯಯಾಜಕರೂ, ಶಾಸ್ತ್ರಿಗಳೂ ಕೇಳಿ ಅವನನ್ನು ಯಾವ ಉಪಾಯದಿಂದ ಕೊಲ್ಲೋಣ ಎಂದು ಕಾದು ನೋಡುತ್ತಿದ್ದರು; ಏಕೆಂದರೆ ಜನರೆಲ್ಲರೂ ಆತನ ಉಪದೇಶವನ್ನು ಕೇಳಿ ಅತ್ಯಾಶ್ಚರ್ಯಪಟ್ಟಿದ್ದರಿಂದ ಅವರು ಆತನಿಗೆ ಹೆದರುತ್ತಿದ್ದರು.
೧೯ಸಂಜೆಯಾದಾಗ ಯೇಸುವೂ, ಆತನ ಶಿಷ್ಯರೂ ಪಟ್ಟಣವನ್ನು ಬಿಟ್ಟು ಹೊರಗೆ ಹೋಗುತ್ತಿದ್ದರು.
20 朝弟子等通りかかりて、彼無花果樹の根より枯れたるを見しかば、
೨೦ಬೆಳಗ್ಗೆ ಅವರು ಬರುತ್ತಿರುವಾಗ ಆ ಅಂಜೂರದ ಮರವು ಬೇರುಸಹಿತ ಒಣಗಿಹೋಗಿರುವುದನ್ನು ಕಂಡರು.
21 ペトロ思出して、ラビ看給へ、詛ひ給ひし無花果樹枯れたり、と云ひしに、
೨೧ಆಗ ಪೇತ್ರನು ಹಿಂದಿನ ದಿನದ ಸಂಗತಿಯನ್ನು ನೆನಪಿಸಿಕೊಂಡು ಆತನಿಗೆ, “ಗುರುವೇ, ಇಗೋ, ನೀನು ಶಾಪ ಕೊಟ್ಟ ಅಂಜೂರದ ಮರವು ಒಣಗಿಹೋಗಿದೆ” ಎಂದು ಹೇಳಿದ್ದಕ್ಕೆ
೨೨ಯೇಸು ಹೇಳಿದ್ದೇನಂದರೆ, “ನಿಮಗೆ ದೇವರಲ್ಲಿ ನಂಬಿಕೆಯಿರಲಿ.
23 我誠に汝等に告ぐ、誰にてもあれ此山に向ひ、汝抜けて海に投ぜよと云ひて、其心に逡巡がず、我が云ふ所は何にても成るべしと信ぜば、其事必成らん。
೨೩ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರಾದರೂ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!’ ಎಂದು ಹೇಳಿ ತನ್ನ ಮನಸ್ಸಿನಲ್ಲಿ ಸಂಶಯಪಡದೆ ತಾನು ಹೇಳಿದ್ದು ಆಗುವುದೆಂದು ನಂಬಿದರೆ ಅವನು ಹೇಳಿದಂತೆಯೇ ಆಗುವುದು.
24 故に我汝等に告ぐ、汝等何事をも祈りて求むれば悉く得べしと信ぜよ、然らば其事必汝等に成らん。
೨೪ಆದಕಾರಣ ನೀವು ಪ್ರಾರ್ಥನೆಮಾಡಿ ಏನೇನು ಬೇಡಿಕೊಳ್ಳುತ್ತೀರೋ ಅದನ್ನೆಲ್ಲಾ ಹೊಂದಿದ್ದೇವೆಂದು ನಂಬಿರಿ; ಅದು ನಿಮಗೆ ಸಿಕ್ಕುವುದೆಂದು ನಿಮಗೆ ಹೇಳುತ್ತೇನೆ.
25 又祈らんとて立つ時、人に對して恨あらば之を宥せ、是天に在す汝等の父も汝等の罪を赦し給はん為なり。
೨೫ಇದಲ್ಲದೆ ನೀವು ನಿಂತುಕೊಂಡು ಪ್ರಾರ್ಥಿಸುವಾಗ ಯಾರ ಮೇಲೆ ಏನಾದರೂ ವಿರೋಧವಿದ್ದರೆ ಅದನ್ನು ಕ್ಷಮಿಸಿರಿ; ಆಗ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವನು” ಅಂದನು.
26 汝等若宥さずば、天に在す汝等の父も汝等の罪を赦し給はじ、と。
೨೬ಆದರೆ ನೀವು ಕ್ಷಮಿಸದಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ.
27 一同再エルザレムに至りしが、イエズス[神]殿の内を歩み給ふ時、司祭長、律法學士、長老等近づきて、
೨೭ಅವರು ಪುನಃ ಯೆರೂಸಲೇಮಿಗೆ ಬಂದಾಗ ಯೇಸು ದೇವಾಲಯದ ಆವರಣದಲ್ಲಿ ನಡೆದಾಡುತ್ತಿರಲಾಗಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಹಿರಿಯರೂ ಆತನ ಬಳಿಗೆ ಬಂದು,
28 云ひけるは、汝何の権を以て是等の事を為すぞ、又是等の事を為すべく、誰か、此権を汝に授けしぞ。
೨೮“ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಇದನ್ನು ಮಾಡುವುದಕ್ಕೆ ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಆತನನ್ನು ಕೇಳಿದರು.
29 イエズス答へて曰ひけるは、我も一言汝等に問はん、我に答へよ、然らば、我何の権を以て是等の事を為すかを告げん。
೨೯ಯೇಸು ಅವರಿಗೆ, “ನಾನೂ ನಿಮಗೆ ಒಂದು ಪ್ರಶ್ನೆಯನ್ನು ಕೇಳುತ್ತೇನೆ, ನನಗೆ ಉತ್ತರ ಹೇಳಿದರೆ ನಾನೂ ಸಹ ಯಾವ ಅಧಿಕಾರದಿಂದ ಇದನ್ನು ಮಾಡುತ್ತೇನೆಂಬುದನ್ನು ನಿಮಗೆ ಹೇಳುತ್ತೇನೆ.
30 ヨハネの洗禮は天よりせしか、人よりせしか、我に答へよ、と。
೩೦ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಪರಲೋಕದಿಂದ ಬಂದಿತೋ ಅಥವಾ ಮನುಷ್ಯರಿಂದ ಬಂದಿತೋ?” ಉತ್ತರಕೊಡಿರಿ ಅಂದನು.
31 彼等心に慮りけるは、天よりと云はんか、然らば何ぞ彼を信ぜざりしと云はれん、
೩೧ಆಗ ಅವರು, “‘ಪರಲೋಕದಿಂದ ಬಂದಿತೆಂದು’ ನಾವು ಹೇಳಿದರೆ, ‘ಹಾಗಾದರೆ ನೀವೇಕೆ ಅವನನ್ನು ನಂಬಲಿಲ್ಲ’ ಅಂದಾನು;
32 人よりと云はんか、人民に憚る所ありと。其は皆ヨハネを眞に預言者と認めたればなり。
೩೨‘ಮನುಷ್ಯರಿಂದ ಬಂದಿತು’” ಎಂದು ಹೇಳಿದರೆ ಏನಾಗುವುದೋ ಎಂಬುದಾಗಿ ಎಂದು ತಮ್ಮತಮ್ಮೊಳಗೆ ಚರ್ಚಿಸಿಕೊಳ್ಳುತ್ತಿದ್ದರು. ಯೋಹಾನನು ನಿಜವಾದ ಪ್ರವಾದಿಯೆಂದು ಜನರೆಲ್ಲರೂ ಅನುಮಾನವಿಲ್ಲದೆ ತಿಳಿದುಕೊಂಡಿದ್ದರಿಂದ ಇವರಿಗೆ ಜನರ ಭಯವಿತ್ತು.
33 斯てイエズスに答へて、我等之を知らず、と云ひしかば、イエズス答へて、我も何の権を以て此事等を為すかを汝等に告げず、と曰へり。
೩೩ಹೀಗಿರಲಾಗಿ ಅವರು, “ನಮಗೆ ಗೊತ್ತಿಲ್ಲ” ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಯೇಸು ಅವರಿಗೆ, “ನಾನೂ ಕೂಡ ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ” ಅಂದನು.