< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 13 >

1 ದಾವೀದನು ಸಹಸ್ರಾಧಿಪತಿ, ಶತಾಧಿಪತಿ ಮೊದಲಾದ ಸರ್ವಪ್ರಭುಗಳೊಡನೆ ಸಮಾಲೋಚನೆ ಮಾಡಿದ ನಂತರ ಇಸ್ರಾಯೇಲ್ಯರ ಸಮಸ್ತ ಸಮೂಹದವರಿಗೆ,
और दाऊद उन सरदारों से जो हज़ार हज़ार और सौ सौ पर थे या'नी हर एक लश्कर के शख़्स से सलाह ली।
2 “ನಿಮ್ಮ ಸಮ್ಮತಿಯೂ ಮತ್ತು ನಮ್ಮ ದೇವರಾದ ಯೆಹೋವನ ಚಿತ್ತವೂ ಇರುವುದಾದರೆ, ನಾವು ಎಲ್ಲಾ ಇಸ್ರಾಯೇಲ್ ಪ್ರಾಂತ್ಯಗಳಲ್ಲಿರುವ ನಮ್ಮ ಸಹೋದರರನ್ನೂ ಗೋಮಾಳಸಹಿತವಾದ ತಮ್ಮ ಪಟ್ಟಣಗಳಲ್ಲಿರುವ ಯಾಜಕ ಲೇವಿಯರನ್ನೂ ಬೇಗನೆ ಕರೆಕಳುಹಿಸೋಣ.
और दाऊद ने इस्राईल की सारी जमा'अत से कहा कि अगर आप को पसंद हो और ख़ुदावन्द की मर्ज़ी हो तो आओ हम हर जगह इस्राईल के सारे मुल्क में अपने बाक़ी भाइयों को जिनके साथ काहिन और लावी भी अपने नवाहीदार शहरों में रहते हैं, कहला भेजें ताकि वह हमारे पास जमा' हों,
3 ಅವರು ನಮ್ಮ ಬಳಿಗೆ ಕೂಡಿ ಬಂದ ಮೇಲೆ ನಾವು ಸೌಲನ ಕಾಲದಲ್ಲಿ ಅಲಕ್ಷ್ಯಮಾಡಿದ್ದ ನಮ್ಮ ದೇವರ ಮಂಜೂಷವನ್ನು ತೆಗೆದುಕೊಂಡು ಬರೋಣ” ಎಂದು ಹೇಳಿದನು.
और हम अपने ख़ुदा के सन्दूक़ फिर अपने पास ले आयें क्यूँकि हम साऊल के दिनों में उसके तालिब न हुए।
4 ಅವರೆಲ್ಲರೂ ಆ ಮಾತಿಗೆ ಒಪ್ಪಿ ಅದರಂತೆ ಮಾಡಬೇಕೆಂದು ಹೇಳಿದರು.
तब सारी जमा'अत बोल उठे कि हम ऐसा ही करेंगे क्यूँकि यह बात सब लोगों की निगाह में ठीक थी।
5 ಆಗ ದಾವೀದನು ದೇವರ ಮಂಜೂಷವನ್ನು ಕಿರ್ಯತ್ಯಾರೀಮಿನಿಂದ ತರುವುದಕ್ಕೋಸ್ಕರ ಐಗುಪ್ತದ ಶೀಹೋರ್ ಹಳ್ಳದಿಂದ ಹಮಾತಿನ ದಾರಿಯ ವರೆಗೂ ವಾಸಿಸುತ್ತಿದ್ದ
तब दाऊद ने मिस्र की नदी सीहूर से हमात के मदख़ल तक के सारे इस्राईल को जमा' किया, ताकि ख़ुदा का सन्दूक़ को क़रयत या'रीम से ले आयें।
6 ಎಲ್ಲಾ ಇಸ್ರಾಯೇಲ್ಯರನ್ನು ಒಟ್ಟಿಗೆ ಸೇರಿಸಿ ಅವರೆಲ್ಲರೊಡನೆ, ಯೆಹೂದ ದೇಶದ ಬಾಳಾ ಎನ್ನಿಸಿಕೊಳ್ಳುತ್ತಿದ್ದ ಕಿರ್ಯತ್ಯಾರೀಮಿಗೆ ಹೋದನು. ಆ ಮಂಜೂಷವು ಕೆರೂಬಿಯರ ನಡುವೆ ಆಸೀನನಾಗಿರುವ ಯೆಹೋವ ದೇವರ ನಾಮದಿಂದ ಪ್ರಸಿದ್ಧವಾಗಿತ್ತು.
और दाऊद और सारा इस्राईल बा'ला को या'नी क़रयतया'रीम को जो यहूदाह में है गए, ताकि ख़ुदा के सन्दूक़ को वहाँ ले आयें, जो क़रूबियों पर बैठने वाला ख़ुदावन्द है और इस नाम से पुकारा जाता है।
7 ಅವರು ದೇವರ ಮಂಜೂಷವನ್ನು ಅಬೀನಾದಾಬನ ಮನೆಯಿಂದ ಹೊರಗೆ ತಂದು, ಒಂದು ಹೊಸ ಬಂಡಿಯ ಮೇಲೆ ಇಟ್ಟರು. ಉಜ್ಜನೂ ಮತ್ತು ಅಹಿಯೋವನೂ ಬಂಡಿಯನ್ನು ಓಡಿಸಿದರು.
और वह ख़ुदा के सन्दूक़ को एक नयी पर गाड़ी रख कर अबीनदाब के घर से बाहर निकाल लाये, और 'उज़्ज़ा और अख़ियो गाड़ी को हाँक रहे थे।
8 ದಾವೀದನೂ ಎಲ್ಲಾ ಇಸ್ರಾಯೇಲರೂ ಕಿನ್ನರಿ, ಸ್ವರಮಂಡಲ, ದಮ್ಮಡಿ, ತಾಳ, ತುತ್ತೂರಿ ಇವುಗಳನ್ನು ಬಾರಿಸುತ್ತಾ ಪೂರ್ಣಾಸಕ್ತಿಯಿಂದ ಗೀತೆಗಳನ್ನು ಹಾಡುತ್ತಾ, ದೇವರ ಮುಂದೆ ನರ್ತನ ಮಾಡುತ್ತಾ ಹೋದರು.
और दाऊद और सारा इस्राईल, ख़ुदा के आगे बड़े ज़ोर सेहम्द करते और बरबत और सितार और दफ़ और झांझ और तुरही बजाते चले आते थे।
9 ಅವರು ಕೀದೋನನ ಕಣಕ್ಕೆ ಬಂದಾಗ ಎತ್ತುಗಳು ಎಡವಿದ್ದರಿಂದ ಉಜ್ಜನು ಕೈ ಚಾಚಿ ದೇವರ ಮಂಜೂಷವನ್ನು ಹಿಡಿದನು.
और जब वह कीदून के खलिहान पर पहुँचे, तो 'उज़्ज़ा ने सन्दूक़ के थामने को अपना बढ़ाया, क्यूँकि बैलों ने ठोकर खायी थी।
10 ೧೦ ಉಜ್ಜನು ಮಂಜೂಷದ ಮೇಲೆ ಕೈಹಾಕಿದ್ದರಿಂದ ಯೆಹೋವನು ಅವನ ಮೇಲೆ ಕೋಪಗೊಂಡು ಅವನನ್ನು ಹತಮಾಡಿದನು. ಅವನು ಅಲ್ಲೇ ದೇವರ ಸನ್ನಿಧಿಯಲ್ಲಿ ಸತ್ತನು.
तब ख़ुदावन्द का क़हर 'उज़्ज़ा पर भड़का और उसने उसको मार डाला इसलिए कि उसने अपना हाथ सन्दूक़ पर बढ़ाया था और वह वहीँ ख़ुदा के सामने मर गया।
11 ೧೧ ಯೆಹೋವನಿಂದ ಉಜ್ಜನು ಮರಣ ಹೊಂದಿದ್ದರಿಂದ ದಾವೀದನು ಕೋಪಗೊಂಡು ಆ ಸ್ಥಳಕ್ಕೆ ಪೆರೆಚ್ ಉಜ್ಜ ಎಂದು ಹೆಸರಿಟ್ಟನು. ಅದಕ್ಕೆ ಇಂದಿನ ವರೆಗೂ ಇದೇ ಹೆಸರಿರುತ್ತದೆ.
तब दाऊद उदास हुआ, इसलिए कि ख़ुदा 'उज़्ज़ा पर टूट पड़ा और उसने उस मुक़ाम का नाम परज़ 'उज़्ज़ा रख्खा जो आज तक है।
12 ೧೨ ಆ ದಿನ ದಾವೀದನು ದೇವರಿಗೆ ಭಯಪಟ್ಟು, “ದೇವರ ಮಂಜೂಷವನ್ನು ನಾನಿರುವಲ್ಲಿಗೆ ತೆಗೆದುಕೊಂಡು ಹೋಗುವುದು ಹೇಗೆ” ಎಂದುಕೊಂಡು
और दाऊद उस दिन ख़ुदा से डर गया और कहने लगा कि मैं ख़ुदा के सन्दूक़ को अपने यहाँ क्यूँ कर लाऊँ?
13 ೧೩ ಮಂಜೂಷವನ್ನು ದಾವೀದ ನಗರಕ್ಕೆ ತಾರದೇ, ಗತ್ ಊರಿನ ಓಬೇದೆದೋಮನ ಮನೆಗೆ ಕಳುಹಿಸಿದನು.
इसलिए दाऊद सन्दूक़ को अपने यहाँ दाऊद के शहर में न लाया बल्कि उसे बाहर ही जाती 'ओबेदअदोम के घर में ले गया
14 ೧೪ ದೇವರ ಮಂಜೂಷವು ಓಬೇದೆದೋಮನ ಮನೆಯಲ್ಲಿ ಮೂರು ತಿಂಗಳು ಇತ್ತು. ಆ ಕಾಲದಲ್ಲಿ ಯೆಹೋವನು ಓಬೇದೆದೋಮನ ಮನೆಯನ್ನೂ ಮತ್ತು ಅವನಿಗಿದ್ದ ಸರ್ವಸ್ವವನ್ನೂ ಆಶೀರ್ವದಿಸಿದನು.
तब ख़ुदा का सन्दूक़ 'ओबेदअदोम के घराने के साथ उसके घर में तीन महीने तक रहा, और ख़ुदावन्द ने 'ओबेदअदोम और उसकी सब चीज़ों को बरकत दी।

< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 13 >