< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 14 >
1 ೧ ತೂರಿನ ಅರಸನಾದ ಹೀರಾಮನು ದಾವೀದನಿಗೆ ಅರಮನೆಯನ್ನು ಕಟ್ಟುವುದಕ್ಕೋಸ್ಕರ ದೂತರನ್ನೂ, ದೇವದಾರುಮರಗಳನ್ನೂ, ಶಿಲ್ಪಿಗಳನ್ನೂ ಮತ್ತು ಬಡಗಿಗಳನ್ನು ಅವನ ಬಳಿಗೆ ಕಳುಹಿಸಿದನು.
और सूर के बादशाह हीराम ने दाऊद के क़ासिद और उसके लिए महल बनाने के लिए देवदार के लट्ठे और राजगीर और बढ़ई भेजे।
2 ೨ ಇದರಿಂದ ದಾವೀದನು ದೇವರ ಪ್ರಜೆಗಳಾದ ಇಸ್ರಾಯೇಲರ ನಿಮಿತ್ತವಾಗಿ ತನ್ನ ರಾಜ್ಯವು ಉನ್ನತ ಸ್ಥಾನಕ್ಕೆ ಮುಟ್ಟಿದ್ದನ್ನು ನೋಡಿ ಯೆಹೋವನು ತನ್ನನ್ನು ಇಸ್ರಾಯೇಲರಿಗೆ ರಾಜನನ್ನಾಗಿ ಸ್ಥಿರಪಡಿಸಿದನೆಂದು ತಿಳಿದುಕೊಂಡನು.
और दाऊद जान गया कि ख़ुदावन्द ने उसे बनी — इस्राईल का बादशाह बना कर क़ाईम कर दिया है, क्यूँकि उसकी हुकूमत उसके इस्राईली लोगों की ख़ातिर मुम्ताज़ की गई थी।
3 ೩ ದಾವೀದನು ಯೆರೂಸಲೇಮಿನಲ್ಲಿಯೂ ಸಹ ಕೆಲವು ಸ್ತ್ರೀಯರನ್ನು ಮದುವೆಮಾಡಿಕೊಂಡು ಇನ್ನೂ ಕೆಲವು ಗಂಡು ಹೆಣ್ಣು ಮಕ್ಕಳನ್ನು ಪಡೆದನು.
और दाऊद ने येरूशलेम में और 'औरतें ब्याह लीं, और उससे और बेटे बेटियाँ पैदा हुए।
4 ೪ ಅಲ್ಲಿ ಅವನಿಗೆ ಹುಟ್ಟಿದ ಗಂಡು ಮಕ್ಕಳ ಹೆಸರುಗಳು: ಶಮ್ಮೂವ, ಶೋಬಾಬ್, ನಾತಾನ್, ಸೊಲೊಮೋನ್,
और उसके उन बच्चों के नाम जो येरूशलेम में पैदा हुए यह हैं: सम्मू'अ और सोबाब और नातन और सुलेमान,
5 ೫ ಇಬ್ಹಾರ್, ಎಲೀಷೂವ, ಎಲ್ಪೆಲೆಟ್,
और इब्हार और इलिसू'अ और इलफ़ालत,
और नौजा और नफ़ज और यफ़ी'आ,
7 ೭ ಎಲೀಷಾಮ್, ಬೇಲ್ಯಾದ ಮತ್ತು ಎಲೀಫೆಲೆಟ್.
और इलिसमा' और और बा'लयद'अ और इलिफ़ालत।
8 ೮ ಇಸ್ರಾಯೇಲ್ಯರೆಲ್ಲರೂ ದಾವೀದನನ್ನು ಅಭಿಷೇಕಿಸಿ ಅವನನ್ನು ತಮ್ಮ ಅರಸನನ್ನಾಗಿ ಮಾಡಿಕೊಂಡರೆಂಬ ವರ್ತಮಾನವು ಫಿಲಿಷ್ಟಿಯರಿಗೆ ಮುಟ್ಟಿದಾಗ ಅವರು ಅವನನ್ನು ಹಿಡಿಯುವುದಕ್ಕೆ ಹೊರಟರು. ದಾವೀದನು ಇದನ್ನು ಕೇಳಿ ತಾನೂ ಅವರನ್ನೆದುರಿಸಲು ಹೋದನು.
और जब फ़िलिस्तियों ने सुना कि दाऊद मम्सूह होकर सारे इस्राईल का बादशाह बना है तो सब फ़िलिस्ती दाऊद की तलाश में चढ़ आये और दाऊद यह सुनकर उनके मुक़ाबिले को निकला।
9 ೯ ಫಿಲಿಷ್ಟಿಯರು ದೇಶದೊಳಗೆ ನುಗ್ಗಿ, ರೆಫಾಯೀಮ್ ತಗ್ಗಿನಲ್ಲಿ ಸುಲಿಗೆಮಾಡುತ್ತಿದ್ದರು.
और फ़िलिस्तियों ने आकर रिफ़ाईम की वादी में धावा मारा।
10 ೧೦ ದಾವೀದನು ದೇವರಾದ ಯೆಹೋವನನ್ನು, “ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗಬಹುದೋ? ಅವರನ್ನು ನನ್ನ ಕೈಗೆ ಒಪ್ಪಿಸಿಕೊಡುವಿಯೋ” ಎಂದು ಕೇಳಿದನು. ಅದಕ್ಕೆ ಯೆಹೋವನು, “ಹೋಗು ನಾನು ಅವರನ್ನು ನಿನ್ನ ಕೈಗೆ ಒಪ್ಪಿಸುವೆನು” ಎಂದು ಉತ್ತರ ಕೊಟ್ಟನು.
तब दाऊद ने ख़ुदा से सवाल किया, “क्या मैं फ़िलिस्तियों पर चढ़ जाऊँ? क्या तू उनको मेरे हाथ में कर देगा?” ख़ुदावन्द ने उसे फ़रमाया, “चढ़ जा क्यूँकि मैं उनको तेरे हाथ में कर दूँगा।”
11 ೧೧ ಅಷ್ಟರಲ್ಲಿ ಬಾಳ್ ಪೆರಾಚೀಮಿಗೆ ಬಂದ ಅವರನ್ನು ದಾವೀದನು ಸೋಲಿಸಿ, “ಯೆಹೋವನು ಕಟ್ಟೆಯೊಡೆದ ಪ್ರವಾಹದಂತೆ ನನ್ನ ಶತ್ರುಗಳ ಮೇಲೆ ಬಿದ್ದು ಅವರನ್ನು ನನ್ನ ಮುಖಾಂತರವಾಗಿ ನಾಶಮಾಡಿದ್ದಾನೆ” ಎಂದು ಹೇಳಿದ್ದರಿಂದ ಆ ಯುದ್ಧ ಸ್ಥಳಕ್ಕೆ ಬಾಳ್ ಪೆರಾಚೀಮ್ ಎಂದು ಹೆಸರಾಯಿತು.
तब वह बा'ल पराज़ीम में आये और दाऊद ने वहीं उनको मारा और दाऊद ने कहा, “ख़ुदा ने मेरे हाथ से दुश्मनों को ऐसा चीरा, जैसे पानी चाक हो जाता है।” इस वजह से उन्होंने उस मक़ाम का नाम बा'ल पराज़ीम रख्खा।
12 ೧೨ ಫಿಲಿಷ್ಟಿಯರು ಅಲ್ಲಿ ಬಿಟ್ಟುಹೋಗಿದ್ದ ದೇವರುಗಳನ್ನು ಸುಟ್ಟುಬಿಡುವಂತೆ ದಾವೀದನು ಅಪ್ಪಣೆ ಕೊಟ್ಟನು.
और वह अपने बुतों को वहाँ छोड़ गए, और वह दाऊद के हुक्म से आग में जला दिए गए।
13 ೧೩ ಫಿಲಿಷ್ಟಿಯರು ಮತ್ತೊಮ್ಮೆ ಬಂದು ಅದೇ ತಗ್ಗಿನಲ್ಲಿ ಸುಲಿಗೆಮಾಡುತ್ತಿದ್ದರು.
और फ़िलिस्तियों ने फिर उस वादी में धावा मारा।
14 ೧೪ ದಾವೀದನು ಪುನಃ ದೇವರ ಸನ್ನಿಧಿಯಲ್ಲಿ ವಿಚಾರಿಸಿದಾಗ ಯೆಹೋವನು ಅವನಿಗೆ, “ನೀನು ಅವರನ್ನು ಬೆನ್ನಟ್ಟಬೇಡ, ಅವರ ಎದುರುಗಡೆಯಿಂದ ದಾಳಿಮಾಡದೆ ಹಿಂತಿರುಗಿ ಹೋಗಿ ಬಾಕಾಮರಗಳಿರುವ ಕಡೆಯಿಂದ ಅವರ ಮೇಲೆ ದಾಳಿಮಾಡು.
और दाऊद ने फिर ख़ुदा से सवाल किया, और ख़ुदा ने उससे कहा, “तू उनका पीछा न कर, बल्कि उनके पास से कतरा कर निकल जा, और तूत के पेड़ों के सामने से उन पर हमला कर।
15 ೧೫ ಬಾಕಾಮರಗಳ ತುದಿಯಲ್ಲಿ ಹೆಜ್ಜೆಗಳ ಶಬ್ದವು ಕೇಳಿಸುವಾಗಲೇ ದೇವರು ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವುದಕ್ಕೋಸ್ಕರ ನಿನ್ನನ್ನು ಮುನ್ನಡೆಸುತ್ತಿದ್ದಾನೆ ಎಂದು ತಿಳಿದುಕೊಂಡು ಯುದ್ಧಕ್ಕೆ ಹೊರಡು” ಎಂದನು.
और जब तू तूत के दरख़्तों की फुन्गियों पर चलने की जैसी आवाज़ सुने, तब लड़ाई को निकलना क्यूँकि ख़ुदा तेरे आगे आगे फ़िलिस्तियों के लश्कर को मारने के लिए निकला है।”
16 ೧೬ ದಾವೀದನು ದೇವರ ಆಜ್ಞಾನುಸಾರವಾಗಿ ಮಾಡಿದನು. ಇಸ್ರಾಯೇಲರು ಫಿಲಿಷ್ಟಿಯರ ಸೈನ್ಯವನ್ನು ಗಿಬ್ಯೋನಿನಿಂದ ಗೆಜೆರಿನ ವರೆಗೂ ಸಂಹರಿಸುತ್ತಾ ಹೋದರು.
और दाऊद ने जैसा ख़ुदा ने उसे फ़रमाया था किया और उन्होंने फ़िलिस्तियों की फ़ौज को जिबा'ऊन से जज़र तक क़त्ल किया।
17 ೧೭ ದಾವೀದನ ಕೀರ್ತಿಯು ಎಲ್ಲಾ ದೇಶಗಳಲ್ಲಿ ಹಬ್ಬಿತು. ಯೆಹೋವನು ಅವನಿಗೆ ಎಲ್ಲಾ ಜನಾಂಗಗಳೂ ಹೆದರಿ ನಡೆಯುವಂತೆ ಮಾಡಿದನು.
और दाऊद की शोहरत सब मुल्कों में फ़ैल गई, और ख़ुदावन्द ने सब क़ौमों पर उसका ख़ौफ़ बिठा दिया।