< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 15 >
1 ೧ ದಾವೀದನು ತನ್ನ ನಗರದಲ್ಲಿ ತನಗೋಸ್ಕರ ಮನೆಗಳನ್ನು ಕಟ್ಟಿಸಿದ್ದಲ್ಲದೆ ದೇವರ ಮಂಜೂಷಕ್ಕಾಗಿಯೂ ಸ್ಥಳವನ್ನು ಸಿದ್ಧಮಾಡಿ ಗುಡಾರವನ್ನು ಹಾಕಿಸಿದನು.
Und David machte sich in der Davidsstadt Häuser; dann bereitete er eine Stätte für die Gotteslade und schlug für sie ein Zelt auf.
2 ೨ ಆ ಕಾಲದಲ್ಲಿ ದಾವೀದನು, “ಲೇವಿಯರ ಹೊರತಾಗಿ ಯಾರೂ ಮಂಜೂಷವನ್ನು ಹೊರಬಾರದು, ಅದನ್ನು ಹೊರುವುದಕ್ಕೂ, ಸದಾಕಾಲ ತನ್ನ ಸೇವೆಮಾಡುವುದಕ್ಕೂ ಯೆಹೋವನು ಅವರನ್ನೇ ಆರಿಸಿಕೊಂಡಿದ್ದಾನೆ” ಎಂದು ಹೇಳಿದನು.
Damals bestimmte David, daß niemand außer den Leviten die Gotteslade trage. Denn diese hatte der Herr erwählt, die Gotteslade zu tragen und ihm stets zu dienen.
3 ೩ ಅನಂತರ ದಾವೀದನು ಯೆಹೋವನ ಮಂಜೂಷವನ್ನು ತಾನು ಸಿದ್ಧಮಾಡಿದ ಸ್ಥಳಕ್ಕೆ ತರುವುದಕ್ಕೋಸ್ಕರ ಎಲ್ಲಾ ಇಸ್ರಾಯೇಲರನ್ನು ಯೆರೂಸಲೇಮಿಗೆ ಕರೆಯಿಸಿದನು.
So berief David ganz Israel nach Jerusalem, des Herrn Lade an ihren Platz zu bringen, den er ihr bereitet hatte.
4 ೪ ದಾವೀದನು ಕರೆಯಿಸಿದ ಆರೋನನ ವಂಶದವರು, ಲೇವಿಯರು,
Und David versammelte die Aaronssöhne und die Leviten,
5 ೫ ಕೆಹಾತ್ಯರಲ್ಲಿ ಊರೀಯೇಲನೆಂಬ ಪ್ರಧಾನನೂ ಮತ್ತು ಅವನ ಕುಟುಂಬದ ನೂರಿಪ್ಪತ್ತು ಜನರು,
von den Söhnen Kehats den Obersten Uriel und seine 120 Brüder,
6 ೬ ಮೆರಾರೀಯರಲ್ಲಿ ಅಸಾಯನೆಂಬ ಪ್ರಧಾನನೂ ಮತ್ತು ಅವನ ಕುಟುಂಬದ ಇನ್ನೂರಿಪ್ಪತ್ತು ಜನರು,
von den Merarisöhnen den Obersten Asaja und seine 220 Brüder,
7 ೭ ಗೇರ್ಷೋಮ್ಯರಲ್ಲಿ ಯೋವೇಲನೆಂಬ ಪ್ರಧಾನನೂ ಮತ್ತು ಅವನ ಕುಟುಂಬದ ನೂರಮೂವತ್ತು ಜನರು,
von den Gersomsöhnen den Obersten Joel und seine 130 Brüder,
8 ೮ ಎಲೀಚಾಫಾನ್ಯರಲ್ಲಿ ಶೆಮಾಯನೆಂಬ ಪ್ರಧಾನನೂ ಮತ್ತು ಅವನ ಕುಟುಂಬದ ಇನ್ನೂರು ಜನರು,
von den Elisaphansöhnen den Obersten Semaja und seine 200 Brüder,
9 ೯ ಹೆಬ್ರೋನ್ಯರಲ್ಲಿ ಎಲೀಯೇಲನೆಂಬ ಪ್ರಧಾನನೂ ಮತ್ತು ಅವನ ಕುಟುಂಬದ ಎಂಭತ್ತು ಜನರು
von den Chebronsöhnen den Obersten Eliel und seine 80 Brüder,
10 ೧೦ ಉಜ್ಜೀಯೇಲ್ಯರಲ್ಲಿ ಅಮ್ಮೀನಾದಾಬನೆಂಬ ಪ್ರಧಾನನೂ ಮತ್ತು ಅವನ ಕುಟುಂಬದ ನೂರ ಹನ್ನೆರಡು ಜನರೊಂದಿಗೆ ಬಂದನು.
von den Uzzielsöhnen den Obersten Amminadab und seine 112 Brüder.
11 ೧೧ ಆ ಮೇಲೆ ದಾವೀದನು ಚಾದೋಕ್, ಎಬ್ಯಾತಾರ್ ಎಂಬ ಯಾಜಕರನ್ನೂ, ಊರೀಯೇಲ್, ಅಸಾಯ, ಯೋವೇಲ್, ಶೆಮಾಯ, ಎಲೀಯೇಲ್ ಮತ್ತು ಅಮ್ಮೀನಾದಾಬ್ ಎಂಬ ಲೇವಿಯರನ್ನು ಕರೆದು ಅವರಿಗೆ, “ಲೇವಿಯರಲ್ಲಿ ಗೋತ್ರಪ್ರಧಾನರಾದ ನೀವು,
Dann berief David die Priester Sadok und Ebjatar sowie die Leviten Uriel, Asaja, Joel, Semaja, Eliel und Amminadab.
12 ೧೨ ನಿಮ್ಮ ಸಹೋದರರೂ ನಿಮ್ಮನ್ನು ಶುದ್ಧಿಪಡಿಸಿಕೊಂಡು, ಇಸ್ರಾಯೇಲರ ದೇವರಾದ ಯೆಹೋವನ ಮಂಜೂಷವನ್ನು ನಾನು ಸಿದ್ಧಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬನ್ನಿರಿ.
Er sprach zu ihnen: "Ihr seid die Familienhäupter der Leviten. Heiligt euch und eure Brüder und bringt die Lade des Herrn, des Gottes Israels, an den Ort, den ich für sie bereitet habe!
13 ೧೩ ನೀವು ಮೊದಲನೆಯ ಸಾರಿ ಇರಲಿಲ್ಲವಾದುದರಿಂದ ನಮ್ಮ ದೇವರಾದ ಯೆಹೋವನು ತನ್ನ ಸನ್ನಿಧಿಗೆ ಧರ್ಮವಿಧಿ ವಿರೋಧವಾಗಿ ನಮ್ಮಲ್ಲಿಗೆ ಬಂದ ಒಬ್ಬನನ್ನು ಸಂಹರಿಸಿದನು” ಎಂದು ಹೇಳಿದನು.
Weil ihr das erstemal nicht zugegen gewesen seid, so hat der Herr, unser Gott, unter uns dreingeschlagen. Denn wir kümmerten uns nicht um ihn nach Gebühr."
14 ೧೪ ಆಗ ಯಾಜಕರೂ ಮತ್ತು ಲೇವಿಯರೂ ಇಸ್ರಾಯೇಲರ ದೇವರಾದ ಯೆಹೋವನ ಮಂಜೂಷವನ್ನು ತರುವುದಕ್ಕೋಸ್ಕರ ತಮ್ಮನ್ನು ಶುದ್ಧಪಡಿಸಿಕೊಂಡರು.
Da heiligten sich die Priester und die Leviten, um die Lade des Herrn, des Gottes Israels, hinaufzuführen.
15 ೧೫ ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ಯೆಹೋವನ ಆಜ್ಞಾನುಸಾರವಾಗಿ ಲೇವಿಯರು ದೇವರ ಮಂಜೂಷವನ್ನು ಹೆಗಲ ಮೇಲೆ ಹೊತ್ತುಕೊಂಡು ನಡೆದರು.
Und die Levisöhne trugen die Gotteslade mit den Tragstangen auf ihren Schultern, wie Moses nach des Herrn Wort befohlen hatte.
16 ೧೬ ಆಗ ದಾವೀದನು ಲೇವಿಯರ ಪ್ರಧಾನರಿಗೆ, “ಗಾಯಕರಾದ ನಿಮ್ಮ ಸಹೋದರರನ್ನು ಸ್ವರಮಂಡಲ, ಕಿನ್ನರಿ, ತಾಳ ಮೊದಲಾದ ವಾದ್ಯಗಳಿಂದ ಉತ್ಸಾಹಧ್ವನಿ ಮಾಡುವುದಕ್ಕಾಗಿ ನೇಮಿಸಿರಿ” ಎಂದು ಆಜ್ಞಾಪಿಸಿದನು.
Hierauf befahl David den Obersten der Leviten, ihre Brüder, die Sänger, zu bestellen mit Musikinstrumenten, Harfen, Zithern und Zimbeln; sie sollten lauten Jubelschall ertönen lassen.
17 ೧೭ ಆಗ ಅವರು ಯೋವೇಲನ ಮಗನಾದ ಹೇಮಾನ್, ಅವನ ಗೋತ್ರಬಂಧುವೂ ಬೆರೆಕ್ಯನ ಮಗನೂ ಆದ ಆಸಾಫ್, ತಮ್ಮ ಸಹೋದರರಾದ ಮೆರಾರೀಯರ ಕುಟುಂಬಕ್ಕೆ ಸೇರಿದ ಕೂಷಾಯನ ಮಗನಾದ ಏತಾನ್ ಎಂಬುವರನ್ನಲ್ಲದೆ,
Da bestellten die Leviten Joels Sohn Heman und von seinen Brüdern Berekjas Sohn Asaph und von den Merarisöhnen, ihren Brüdern, den Etan, Kusajas Sohn,
18 ೧೮ ತಮ್ಮ ಸಹೋದರರೊಳಗೆ ಎರಡನೆಯ ದರ್ಜೆಯವರಾದ ಜೆಕರ್ಯ, ಬೇನ್, ಯಾಜೀಯೇಲ್ ಶೆಮೀರಾಮೋತ್, ಯೆಹೀಯೇಲ್, ಉನ್ನೀ, ಎಲೀಯಾಬ್, ಬೆನಾಯ, ಮಾಸೇಯ, ಮತ್ತಿತ್ಯ ಎಲೀಫೆಲೇಹು, ಮಿಕ್ನೇಯ ದ್ವಾರಪಾಲಕರಾದ ಓಬೇದೆದೋಮ ಮತ್ತು ಯೆಗೀಯೇಲ್ ಇವರನ್ನು ನೇಮಿಸಿದನು.
und mit ihnen ihre Brüder, die zweiten Ranges waren, Zakarja, Jaaziel, Semiramot, Jechiel, Unni, Eliab, Benaja, Maaseja, Mattitja, Eliphelehu, Miknejahu, Obededom und Jeiel, die Torhüter.
19 ೧೯ ಗಾಯಕರಾದ ಹೇಮಾನ್, ಆಸಾಫ್ ಮತ್ತು ಏತಾನರು ಗಟ್ಟಿಯಾಗಿ ಕಂಚಿನ ತಾಳಗಳನ್ನು ಬಾರಿಸಿವವರು.
Und die Sänger Heman, Asaph und Etan hatten mit ehernen Zimbeln laut zu spielen.
20 ೨೦ ಜೆಕರ್ಯ, ಅಜೀಯೇಲ್, ಶೆಮೀರಾಮೋತ್, ಯೆಹೀಯೇಲ್, ಉನ್ನೀ, ಎಲೀಯಾಬ್, ಮಾಸೇಯ ಮತ್ತು ಬೆನಾಯ ಎಂಬುವವರು ತಾರಕಸ್ಥಾಯಿಯ ಸ್ವರಮಂಡಲಗಳನ್ನು ಬಾರಿಸುವವರು.
Zakarja aber, Aziel, Semiramot, Jechiel, Unni, Eliab, Maaseja und Benaja hatten mit Harfen die Führung,
21 ೨೧ ಮತ್ತಿತ್ಯ, ಎಲೀಫೆಲೇಹು, ಮಿಕ್ನೇಯ, ದ್ವಾರಪಾಲಕರಾದ ಓಬೇದೆದೋಮ ಯೆಗೀಯೇಲರು ಅಹಜ್ಯ ಎಂಬವರು ಗಾಯಕ ನಾಯಕರಾಗಿದ್ದು ಮಂದರಸ್ಥಾಯಿಯ ಕಿನ್ನರಿಗಳನ್ನು ನುಡಿಸುವವರನ್ನು ನೆಮಿಸಿಕೊಂಡನು.
und Mattitja, Eliphelehu, Miknejahu, Obededom, Jeiel und Azazja hatten mit Zithern Lieder zu singen.
22 ೨೨ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವ ಲೇವಿಯರಲ್ಲಿ ನಾಯಕನೂ ಆಗಿದ್ದ ಕೆನನ್ಯನು ಮಂಜೂಷ ಹೊತ್ತವರಿಗೆ ಮೇಲ್ವಿಚಾರಕನಾಗಿದ್ದನು.
Kenanja aber war der Oberste der Leviten im Tonangeben. Er sang auch beim Tonangeben. Denn er war kunstfertig.
23 ೨೩ ಬೆರೆಕ್ಯ ಮತ್ತು ಎಲ್ಕಾನ ಇವರು ಮಂಜೂಷದ ದ್ವಾರಪಾಲಕರಾಗಿದ್ದರು.
Berikja und Elkana waren die Hüter der Lade.
24 ೨೪ ಶೆಬನ್ಯ, ಯೋಷಾಫಾಟ್, ನೆತನೇಲ್, ಅಮಾಸೈ, ಜೆಕರ್ಯ, ಬೆನಾಯ ಮತ್ತು ಎಲೀಯೆಜೆರ್ ಎಂಬ ಯಾಜಕರು ತುತ್ತೂರಿಗಳನ್ನು ಊದುತ್ತಾ ದೇವ ಮಂಜೂಷದ ಮುಂದೆ ಹೋಗುವವರು. ಓಬೇದೆದೋಮ್ ಮತ್ತು ಯೆಹೀಯ ಎಂಬುವವರು ಮಂಜೂಷದ ದ್ವಾರಪಾಲಕರಾಗಿದ್ದರು.
Die Priester Sebanjahu, Josaphat, Netanel, Amasai, Zakarja, Benjahu und Eliezer bliesen vor der Gotteslade Trompeten. Hüter der Lade waren Obededom und Jechia.
25 ೨೫ ದಾವೀದನೂ ಇಸ್ರಾಯೇಲ್ಯರ ಹಿರಿಯರೂ ಮತ್ತು ಸಹಸ್ರಾಧಿಪತಿಗಳೂ ಓಬೇದೆದೋಮನ ಮನೆಯಲ್ಲಿದ್ದ ಯೆಹೋವನ ಒಡಂಬಡಿಕೆ ಮಂಜೂಷವನ್ನು ಉತ್ಸಾಹದಿಂದ ತರುತ್ತಿರುವಾಗ,
David aber und die Ältesten Israels und die Obersten der Tausendschaften zogen hin, aus dem Hause Obededoms die Bundeslade des Herrn voller Freude hinaufzubringen.
26 ೨೬ ಯೆಹೋವನ ಒಡಂಬಡಿಕೆ ಮಂಜೂಷವನ್ನು ಹೊತ್ತ ಲೇವಿಯರಿಗೆ ದೇವರ ಸಹಾಯ ದೊರೆತದ್ದರಿಂದ ಏಳು ಹೋರಿಗಳನ್ನೂ ಮತ್ತು ಏಳು ಟಗರುಗಳನ್ನೂ ಯಜ್ಞಮಾಡಿದರು.
Und Gott stand den Leviten bei, den Trägern der Bundeslade des Herrn. Sie opferten sieben Farren und sieben Widder.
27 ೨೭ ದಾವೀದನೂ ಮಂಜೂಷವನ್ನು ಹೊತ್ತ ಮತ್ತು ವಾದ್ಯನುಡಿಸುವ ಎಲ್ಲಾ ಲೇವಿಯರೂ, ಹೊರುವವರ ಮುಖ್ಯಸ್ಥನಾದ ಕೆನನ್ಯನೂ ನೂಲಿನ ನಿಲುವಂಗಿಗಳನ್ನು ಧರಿಸಿಕೊಂಡಿದ್ದನು. ದಾವೀದನು ಇದರ ಹೊರತಾಗಿ ನಾರಿನ ಏಫೋದನ್ನೂ ಧರಿಸಿಕೊಂಡಿದ್ದನು.
David war mit einem Byssusmantel bekleidet, ebenso alle Leviten, die die Lade trugen, desgleichen die Sänger und Kenanja, der Oberste der Sänger im Tonangeben. David trug noch ein linnenes Ephod.
28 ೨೮ ಹೀಗೆ ಎಲ್ಲಾ ಇಸ್ರಾಯೇಲರು ಆನಂದ ಘೋಷಣೆಗಳಿಂದಲೂ, ಕೊಂಬು ಮತ್ತು ತುತ್ತೂರಿಗಳನ್ನು, ತಾಳ, ತಂತಿ ವಾದ್ಯಗಳ ಸಂಗೀತದಿಂದ ತಾಳಹಾಕುತ್ತಾ ಕಿನ್ನರಿ ಸ್ವರಮಂಡಲಗಳನ್ನು ನುಡಿಸುತ್ತಾ, ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತಂದರು.
So brachte ganz Israel die Bundeslade des Herrn hinauf unter Jubel und lautem Posaunenschall, mit Trompeten und Zimbeln. Sie ließen Harfen und Zithern ertönen.
29 ೨೯ ಯೆಹೋವನ ಒಡಂಬಡಿಕೆ ಮಂಜೂಷವು ದಾವೀದನ ನಗರಕ್ಕೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಇಣಿಕಿನೋಡಿ ದಾವೀದನು ಜಿಗಿಯುತ್ತಾ, ಕುಣಿಯುತ್ತಾ, ನೃತ್ಯಮಾಡುತ್ತಾ ಇರುವುದನ್ನು ಕಂಡು ಮನಸ್ಸಿನಲ್ಲಿ ಅವನನ್ನು ತಿರಸ್ಕರಿಸಿದಳು.
So kam des Herrn Bundeslade in die Davidsstadt. Sauls Tochter Mikal aber beugte sich durch das Fenster. Da sah sie den König hüpfen und tanzen. Und sie verachtete ihn in ihrem Herzen.