< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 16 >
1 ೧ ಅವರು ದೇವರ ಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಮಾಡಿಸಿದ್ದ ಗುಡಾರದಲ್ಲಿಟ್ಟು ದೇವರಿಗೋಸ್ಕರ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.
Ale wotsɔ Mawu ƒe nubablaɖaka la yi Agbadɔ si David tu nɛ la me. Israel kplɔlawo sa numevɔ kple akpedavɔ le Mawu ŋkume.
2 ೨ ಆ ಯಜ್ಞಗಳು, ಹೋಮಗಳು ಸಮರ್ಪಣೆಯಾದ ನಂತರ ದಾವೀದನು ಇಸ್ರಾಯೇಲರನ್ನು ಯೆಹೋವನ ಹೆಸರಿನಿಂದ ಆಶೀರ್ವದಿಸಿದನು.
Esi David sa numevɔ kple akpedavɔ vɔ la, eyra ameawo le Yehowa ƒe ŋkɔ me
3 ೩ ಹಾಗೂ ಅವರಲ್ಲಿ ಪ್ರತಿಯೊಬ್ಬ ಪುರುಷ ಹಾಗು ಸ್ತ್ರೀಗೂ ಒಂದು ರೊಟ್ಟಿಯನ್ನೂ, ಒಂದು ತುಂಡು ಬೇಯಿಸಿದ ಮಾಂಸವನ್ನೂ ಮತ್ತು ದ್ರಾಕ್ಷಿಹಣ್ಣಿನ ಒಂದು ಗೊಂಚಲನ್ನೂ ಕೊಡಿಸಿದನು.
eye wòtsɔ abolo, lãkɔ kple waintsetsebolo na Israelvi ɖe sia ɖe, ŋutsuwo kple nyɔnuwo siaa.
4 ೪ ಯೆಹೋವನ ಮಂಜೂಷದ ಮುಂದೆ ದೇವರಾಧನೆ ನಡಿಸುವುದಕ್ಕೋಸ್ಕರ ದಾವೀದನು ಕೆಲವು ಲೇವಿಯರನ್ನು ನೇಮಿಸಿದನು. ಇಸ್ರಾಯೇಲಿನ ದೇವರಾದ ಯೆಹೋವನನ್ನು ಸ್ತುತಿಸುವುದೂ, ಹಾಡಿ ಹರಸುವುದೂ ಅವರ ಕರ್ತವ್ಯವಾಗಿತ್ತು.
Etia Levitɔ aɖewo be woanɔ nublaɖaka la ŋgɔ anɔ Yehowa, Israel ƒe Mawu la kafum, anɔ akpe dam nɛ eye woanɔ eƒe yayra biam ɖe amewo dzi madzudzɔmadzudzɔe. Ame siwo wode dɔ sia asi na la woe nye:
5 ೫ ಅವರಲ್ಲಿ ಆಸಾಫನು ಪ್ರಧಾನನು. ಜೆಕರ್ಯನು ಎರಡನೆಯವನು. ಯೆಗೀಯೇಲ್, ಶೆಮೀರಾಮೋತ್, ಯೆಹೀಯೇಲ್, ಮತ್ತಿತ್ಯ, ಎಲೀಯಾಬ್, ಬೆನಾಯ, ಓಬೇದೆದೋಮ್, ಯೆಗೀಯೇಲ್ ಇವರು ಸ್ವರಮಂಡಲ, ಕಿನ್ನರಿ ಮೊದಲಾದ ವಾದ್ಯಗಳನ್ನು ನುಡಿಸುವವರು, ಆಸಾಫನು ಕೈತಾಳ ಹಾಕುವುದಕ್ಕೆ ನೇಮಿಸಲಾಯಿತು.
Asaf, ameawo ƒe kplɔla, eyae ƒoa gakogoe. Eƒe hadɔwɔlawoe nye: Zekaria, Yeiel, Semiramɔt, Yehiel, Matitia, Eliab, Benaya, Obed Edom kple Yeiel. Woawoe ƒoa saŋkuwo kple kasaŋkuwo.
6 ೬ ಬೆನಾಯ, ಯೆಹಜೀಯೇಲ್ ಎಂಬ ಯಾಜಕರು ದೇವರ ಒಡಂಬಡಿಕೆ ಮಂಜೂಷದ ಮುಂದೆ ನಿತ್ಯವೂ ತುತ್ತೂರಿಗಳನ್ನು ಊದುವುದಕ್ಕೆ ನೇಮಕವಾದರು.
Nunɔla Benaya kple Nunɔla Yahaziel kua kpẽ le nubablaɖaka la ŋgɔ gbe sia gbe.
7 ೭ ದಾವೀದನು ಆಸಾಫನನ್ನೂ, ಅವನ ಸಹೋದರರನ್ನೂ ಯೆಹೋವನನ್ನು ಕೊಂಡಾಡಿ ಕೀರ್ತಿಸುವುದಕ್ಕಾಗಿ ಸ್ತೋತ್ರಗೀತೆಗಳನ್ನು ಹಾಡುವುದಕ್ಕಾಗಿ ಆ ದಿನದಲ್ಲೇ ಮೊದಲು ನೇಮಿಸಿದನು. ಅವರು ಹಾಡಿದ್ದೇನಂದರೆ;
Ɣe ma ɣie David dze hadzilawo ŋu dɔ wɔwɔ gɔme le Agbadɔ la me be woadzi akpedaha na Yehowa. Ame si nɔ hadzilawo nue nye Asaf.
8 ೮ “ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನ ನಾಮದ ಮಹತ್ವವನ್ನು ವರ್ಣಿಸಿರಿ. ಜನಾಂಗಗಳಲ್ಲಿ ಆತನ ಸತ್ಕಾರ್ಯಗಳನ್ನು ಪ್ರಸಿದ್ಧಪಡಿಸಿರಿ.
Wodzi ha be: Mida akpe na Yehowa Miyɔ eƒe ŋkɔ eye miɖe gbeƒã nu siwo wòwɔ la le dukɔwo dome.
9 ೯ ಆತನನ್ನು ಕೀರ್ತಿಸಿರಿ, ಭಜಿಸಿರಿ; ಆತನ ಅದ್ಭುತಕೃತ್ಯಗಳನ್ನೆಲ್ಲಾ ಧ್ಯಾನಿಸಿರಿ.
Midzi ha nɛ, midzi kafukafuha nɛ, Miɖe gbeƒã eƒe nukunuwɔwɔwo;
10 ೧೦ ಆತನ ಪರಿಶುದ್ಧನಾಮದಲ್ಲಿ ಸಂತೋಷಪಡಿರಿ; ಯೆಹೋವನ ದರ್ಶನವನ್ನು ಕೋರುವವರ ಹೃದಯವು ನಿತ್ಯವೂ ಅಪೇಕ್ಷಿಸಿ ಹರ್ಷಿಸಲಿ.
Miƒo adegbe le eƒe ŋkɔ kɔkɔe la ŋu, mina ame siwo dia Yehowa la ƒe dzi natso aseye.
11 ೧೧ ಯೆಹೋವನನ್ನೂ ಮತ್ತು ಆತನ ಬಲವನ್ನೂ ಆಶ್ರಯಿಸಿರಿ; ನಿತ್ಯವೂ ಆತನ ದರ್ಶನವನ್ನು ಅಪೇಕ್ಷಿಸಿರಿ.
Midi Yehowa, mibia eƒe ŋusẽ, Midi eƒe ŋkume ɖaa.
12 ೧೨ ಆತನ ಸೇವಕನಾದ ಇಸ್ರಾಯೇಲಿನ ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ವಂಶದವರೇ, ಆತನ ಅದ್ಭುತ ಕಾರ್ಯಗಳನ್ನು,
Miɖo ŋku nukunu siwo wòwɔ, eƒe dzesiwo kple eƒe ʋɔnudɔdrɔ̃wo dzi.
13 ೧೩ ಮಹತ್ಕಾರ್ಯಗಳನ್ನು, ನ್ಯಾಯ ನಿರ್ಣಯಗಳನ್ನು ಸ್ಮರಿಸಿರಿ.
O Israel, eƒe dɔla ƒe dzidzimeviwo, O Yakob ƒe viwo, ame siwo wòtia.
14 ೧೪ ಯೆಹೋವನೆಂಬಾತನು ನಮ್ಮ ದೇವರು, ಆತನ ನ್ಯಾಯವಿಧಿಗಳು ಭೂಲೋಕದಲ್ಲೆಲ್ಲಾ ಇವೆ.
Eyae nye Yehowa, míaƒe Mawu! Eƒe ʋɔnudɔdrɔ̃ xɔ anyigba la katã dzi.
15 ೧೫ ಆತನು ಸಾವಿರಾರು ತಲೆಮಾರಿನವರೆಗೂ ಇರುವಂತೆ ಮಾಡಿದ ವಾಗ್ದಾನ ಮತ್ತು ಆತನ ಒಡಂಬಡಿಕೆ ಇವುಗಳನ್ನು ನಿತ್ಯವೂ ನೆನಪಿನಲ್ಲಿಟ್ಟುಕೊಳ್ಳಿರಿ.
Eɖoa ŋku eƒe nubabla kple se siwo wòde na dzidzime akpewo la dzi ɖaa,
16 ೧೬ ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು ಮತ್ತು ಇಸಾಕನಿಗಾಗಿ ವಾಗ್ದಾನ ಮಾಡಿ ಭರವಸೆ ನೀಡಿದನು.
Eƒe nu si wòbla kple Abraham, kple atam si wòka na Isak la dzi.
17 ೧೭ ಅದು ರಾಜಶಾಸನದಂತಿರುವುದು ಎಂದು ಯಾಕೋಬನಿಗೂ ಶಾಶ್ವತವಾದ ಒಡಂಬಡಿಕೆಯಾಗಿರುವುದೆಂದು ಇಸ್ರಾಯೇಲರಿಗೂ ಮಾತುಕೊಟ್ಟನು.
Eɖo kpe edzi na Yakob Abe sedede ene eye na Israel abe nubabla mavɔ ene be:
18 ೧೮ ನೀವು ಇನ್ನೂ ಬಹು ಜನರು ಕಾನಾನ್ ದೇಶದಲ್ಲಿ ಪ್ರವಾಸಿಗಳು ಆಗಿರುವಾಗಲೇ
“Wòe matsɔ Kanaanyigba la na, abe wò domenyinu ene!”
19 ೧೯ ಆತನು, ‘ನಿಮಗೆ ಈ ದೇಶವನ್ನು ಕೊಡುವೆನು ಅದು ನಿಮ್ಮ ಸಂತತಿಯವರಿಗೆ ಸ್ವತ್ತಾಗಿರುವುದು’ ಎಂದು ವಾಗ್ದಾನ ಮಾಡಿದನು.
Esi wonye ame ʋɛ aɖewo ko, Womesɔ gbɔ o eye wonye amedzrowo le anyigba dzi la,
20 ೨೦ ಅವರು ದೇಶದಿಂದ ದೇಶಕ್ಕೂ ರಾಜ್ಯದಿಂದ ರಾಜ್ಯಕ್ಕೂ ಹೋಗುತ್ತಿರುವಲ್ಲಿ
Esime wotsa tso dukɔ me yi dukɔ me Tso fiaɖuƒe ɖeka me yi bubu me la,
21 ೨೧ ಅವರಿಗೆ ಯಾರಿಂದಲೂ ಅನ್ಯಾಯವಾಗಲಿ, ಅಪಾಯವಾಗಲಿ ಆಗಲು ಬಿಡಲಿಲ್ಲ. ಆತನು ಅವರ ವಿಷಯದಲ್ಲಿ ಅರಸನನ್ನು ಗದರಿಸಿ,
Yehowa meɖe mɔ be ame aɖeke nate wo ɖe anyi o Eka mo na fiawo le wo ta
22 ೨೨ ‘ನಾನು ಅಭಿಷೇಕಿಸಿದವರನ್ನು ಮುಟ್ಟಬಾರದು. ನನ್ನ ಪ್ರವಾದಿಗಳಿಗೆ ಯಾವ ಕೇಡನ್ನು ಮಾಡಬಾರದು’ ಎಂದು ಹೇಳಿದನು.
Mawu gblɔ na fia mawo be, “Migaka asi nye amesiaminawo o eye migawɔ nuvevi nye nyagblɔɖilawo o.”
23 ೨೩ ಎಲ್ಲಾ ಭೂನಿವಾಸಿಗಳೇ ಯೆಹೋವನಿಗೆ ಕೀರ್ತನೆಯನ್ನು ಹಾಡಿರಿ. ಆತನ ರಕ್ಷಣೆಯನ್ನು ಪ್ರತಿನಿತ್ಯವೂ ಸಾರಿಹೇಳಿರಿ.
Oo, anyigba, midzi ha na Yehowa, Miɖe gbeƒã eƒe xɔxɔ le dukɔwo dome gbe sia gbe,
24 ೨೪ ಜನಾಂಗಗಳಲ್ಲಿ ಆತನ ಘನತೆಯನ್ನು ಎಲ್ಲಾ ಜನರಲ್ಲಿ ಆತನ ಅದ್ಭುತಕೃತ್ಯಗಳನ್ನೂ ಪ್ರಸಿದ್ಧಿಪಡಿಸಿರಿ.
Miɖe eƒe Ŋutikɔkɔefia le dukɔwo dome kple eƒe nukudɔwo fia le anyigbadzitɔwo katã dome.
25 ೨೫ ಯೆಹೋವನು ದೊಡ್ಡವನು, ಬಹಳವಾಗಿ ಸ್ತುತಿಗೆ ಪಾತ್ರನು ಆಗಿದ್ದಾನೆ. ಎಲ್ಲಾ ದೇವತೆಗಳಲ್ಲಿ ಆತನೇ ಅದ್ಭುತನಾದವನು.
Elabena Yehowa lolo eye wòdze kafukafu ŋutɔ; ele be woavɔ̃e wu mawuwo katã.
26 ೨೬ ಜನಾಂಗಗಳ ದೇವತೆಗಳೆಲ್ಲಾ ಬರೀ ಬೊಂಬೆಗಳೇ. ಯೆಹೋವನಾದರೋ ಗಗನಮಂಡಲವನ್ನು ನಿರ್ಮಿಸಿದವನು.
Dukɔwo ƒe mawuwo nye legbawo. Ke Yehowae wɔ dziƒowo.
27 ೨೭ ಆತನ ಸಾನ್ನಿಧ್ಯದಲ್ಲಿ ಮಾನ ಮಹಿಮೆಗಳು ಆತನ ಪವಿತ್ರಾಲಯದಲ್ಲಿ ಮಹಿಮೆ, ಸ್ತುತಿಸ್ತೋತ್ರಗಳು, ಸಂತೋಷಗಳೂ ಇರುತ್ತವೆ.
Atsyɔ̃ kple gãnyenye le eŋgɔ eye ŋusẽ kple ŋutikɔkɔe le eƒe kɔkɔeƒe la me.
28 ೨೮ ಭೂಜನಾಂಗಗಳೇ, ಬಲಪ್ರಭಾವಗಳು ಯೆಹೋವನವೇ ಯೆಹೋವನವೇ ಎಂದು ಹೇಳಿ ಆತನನ್ನು ಘನಪಡಿಸಿರಿ.
O mi dukɔwo ƒe ƒomewo, mitsɔ bubu kple ŋusẽ na Yehowa.
29 ೨೯ ಯೆಹೋವನ ನಾಮಕ್ಕೆ ಯೋಗ್ಯವಾದ ಘನವನ್ನು ಸಲ್ಲಿಸಿರಿ. ಕಾಣಿಕೆ ಸಹಿತ ಆತನ ಸನ್ನಿಧಿಗೆ ಬನ್ನಿರಿ. ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ನಮಸ್ಕರಿಸಿರಿ.
Ɛ̃, mitsɔ ŋutikɔkɔe si dze eƒe ŋkɔ la nɛ. Mido ɖe eŋkume kple nunana. Misubɔ Yehowa le eƒe kɔkɔenyenye ƒe atyɔ̃ me.
30 ೩೦ ಎಲ್ಲಾ ಭೂನಿವಾಸಿಗಳೇ, ಆತನ ಮುಂದೆ ಸಾಷ್ಟಾಂಗವೆರಗಿ ನಮಸ್ಕರಿಸಿರಿ. ಭೂಮಿಯು ಸ್ಥಿರವಾಗಿರುವುದು, ಕದಲುವುದಿಲ್ಲ,
Mi anyigbawo katã, midzo nyanyanya le eŋkume. Eɖo xexea gɔme anyi goŋgoŋgoŋ, mate ŋu aʋã o.
31 ೩೧ ಗಗನಮಂಡಲವು ಹರ್ಷಿಸಲಿ; ಭೂಲೋಕವು ಸಂತೋಷಿಸಲಿ; ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ.
Dziƒowo, mitso aseye, anyigba nedzɔ dzi. Wonegblɔ le dukɔwo dome be, “Yehowae le fia ɖum.”
32 ೩೨ ಭೂನಿವಾಸಿಗಳಿಗೆ ನ್ಯಾಯತೀರಿಸುವುದಕ್ಕೆ ಬರುವನೆಂದು ಯೆಹೋವನ ಮುಂದೆ ಸಮುದ್ರವೂ ಅದರಲ್ಲಿರುವುದೆಲ್ಲವೂ ಘೋಷಿಸಲಿ.
Atsiaƒu kple emenuwo katã neɖe gbe eye gbegbe kple emenuwo katã netso aseye!
33 ೩೩ ಹೊಲಗಳೂ, ಅವುಗಳ ಪೈರುಗಳೂ ಉಲ್ಲಾಸಿಸಲಿ; ಮತ್ತು ವನದ ಮರಗಳು ಉತ್ಸಾಹ ಧ್ವನಿ ಮಾಡಲಿ.
Ekema avemetiwo katã adzi ha Woadzi ha kple dzidzɔ le Yehowa ŋkume, Elabena egbɔna be yeadrɔ̃ ʋɔnu anyigba.
34 ೩೪ ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನು ಒಳ್ಳೆಯವನು; ಆತನ ಕೃಪೆಯು ಶಾಶ್ವತವಾಗಿರುವುದು.
Mida akpe na Yehowa elabena eƒe dɔme nyo Eye eƒe lɔlɔ̃ li ɖaa.
35 ೩೫ ನಮ್ಮ ಸಹಾಯಕನಾಗಿರುವ ದೇವರೇ, ನಮ್ಮನ್ನು ರಕ್ಷಿಸು; ಅನ್ಯಜನಗಳಲ್ಲಿ ಚದುರಿಹೋಗಿರುವ ನಮ್ಮನ್ನು ಬಿಡಿಸಿ ಒಟ್ಟುಗೂಡಿಸು; ಆಗ ನಿನ್ನ ಪರಿಶುದ್ಧ ನಾಮವನ್ನು ಕೊಂಡಾಡುವೆವು; ನಿನ್ನ ಸ್ತೋತ್ರದಲ್ಲಿ ಹೆಚ್ಚಳಪಡುವೆವು ಅನ್ನಿರಿ.
Mido ɣli be, “Oo Mawu, mia Ɖela, ɖe mí, Ƒo mía nu ƒu eye nàɖe mí tso dukɔwo ƒe asi me. Be míada akpe na wò ŋkɔ kɔkɔe la, Be míadzɔ dzi le wò kafukafu me.”
36 ೩೬ ಇಸ್ರಾಯೇಲ್ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ” ಎಂದು ಹಾಡಿದರು. ಅವರು ಹೀಗೆ ಹಾಡಿದಾಗ ಸರ್ವಜನರೂ ಆಮೆನ್ ಎಂದು ಯೆಹೋವನನ್ನು ಸ್ತುತಿಸಿದರು.
Woakafu Yehowa, Israel ƒe Mawu la Tso mavɔ me yi mavɔ me. Tete ameawo katã xɔ ɖe edzi be, “Amen, mikafu Yehowa.”
37 ೩೭ ದಾವೀದನು ಯೆಹೋವನ ಒಡಂಬಡಿಕೆ ಮಂಜೂಷದ ಮುಂದೆ ಪ್ರತಿದಿನವೂ ಆರಾಧನೆ ನಡಿಸುವುದಕ್ಕೆ ಆಸಾಫನನ್ನೂ, ಅವನ ಸಹೋದರರನ್ನೂ ಬಾಗಿಲನ್ನು ಕಾಯುವುದಕ್ಕಾಗಿ,
David tia Asaf kple nɔvia Levitɔwo be woawɔ subɔsubɔdɔ ɣe sia ɣi le Yehowa ƒe nubablaɖaka la ŋgɔ eye woawɔ nu sia nu si hiã na wɔwɔ la gbe sia gbe.
38 ೩೮ ಯೆದುತೂನನ ಮಗನಾದ ಓಬೇದೆದೋಮ್ ಮತ್ತು ಹೋಸ ಇವರನ್ನು, ಅವರ ಆರುವತ್ತೆಂಟು ಸಹೋದರರನ್ನೂ ಅಲ್ಲೇ ಇರಿಸಿದನು.
Ame siwo wode dɔ sia asi na la, woe nye: Obed Edom, Yedutun ƒe vi, Hosa kple wo nɔvi blaade-vɔ-enyi, ame siwo nye agbonudzɔlawo.
39 ೩೯ ಯಾಜಕನಾದ ಚಾದೋಕನನ್ನೂ, ಅವನ ಸಹೋದರರನ್ನೂ ಗಿಬ್ಯೋನಿನ ಪೂಜಾಸ್ಥಳಗಳಲ್ಲಿದ್ದ ಯೆಹೋವನ ಗುಡಾರದ ಬಳಿಯಲ್ಲಿ ಇರಿಸಿದನು.
Wogawɔa Yehowa ƒe Agbadɔ xoxo si nɔ Gibeon to la dzi la ŋu dɔ. David gble Nunɔla Zadok kple Nunɔla bubuawo ɖi be woasubɔ Yehowa le afi ma.
40 ೪೦ ಅವರು ಪ್ರತಿದಿನವೂ ಪ್ರಾತಃಕಾಲ ಮತ್ತು ಸಾಯಂಕಾಲಗಳಲ್ಲಿ ಯೆಹೋವನಿಗೋಸ್ಕರ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಮಾಡಿ ಯೆಹೋವನ ಧರ್ಮಶಾಸ್ತ್ರದಲ್ಲಿ ಇಸ್ರಾಯೇಲರಿಗೆ ವಿಧಿತವಾದದ್ದೆಲ್ಲವನ್ನೂ ನೆರವೇರಿಸಬೇಕಾಯಿತು.
Wosa numevɔ na Yehowa ŋdi sia ŋdi, fiẽ sia fiẽ le numevɔsamlekpui la dzi abe ale si Yehowa ɖo na Israel ene.
41 ೪೧ ಅವರ ಬಳಿಯಲ್ಲಿ ಯೆಹೋವನನ್ನು, ಆತನ ಶಾಶ್ವತವಾದ ಕೃಪೆಗೋಸ್ಕರ ಸ್ತುತಿಸುವುದಕ್ಕೆ ಹೇಮಾನ್, ಯೆದುತೂನ ಮತ್ತು ಹೆಸರು ಹೆಸರಾಗಿ ನೇಮಿಸಲ್ಪಟ್ಟ ಬೇರೆ ಜನರೂ ಇದ್ದರು.
David gatia Heman kple Yedutun kple ame bubu aɖewo, ame siwo ŋkɔwo wode dzesi la be woada akpe na Yehowa le eƒe lɔlɔ̃ kple amenuveve si li ɖaa la ta.
42 ೪೨ ಹೇಮಾನ್ ಮತ್ತು ಯೆದುತೂನರ ಹತ್ತಿರ ವಾದ್ಯಗಾರರಿಗಾಗಿ ತುತ್ತೂರಿ, ತಾಳ ಮೊದಲಾದ ವಾದ್ಯಗಳೂ ಮತ್ತು ದೇವಕೀರ್ತನಾ ಸಾಹಿತ್ಯಗಳಿದ್ದವು. ಯೆದುತೂನನ ಮಕ್ಕಳು ದ್ವಾರಪಾಲಕರಾಗಿ ನೇಮಿಸಲ್ಪಟ್ಟರು.
Heman kple Yedutun kua woƒe kpẽwo eye woƒoa woƒe gakogoewo kpena ɖe hadzidzi ŋu eye kafukafu dea dzi na Yehowa bobobo. Wotia Yedutun ƒe viwo wozu agbonudzɔlawo.
43 ೪೩ ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು. ದಾವೀದನು ತನ್ನ ಕುಟುಂಬದವರನ್ನು ಆಶೀರ್ವದಿಸುವುದಕ್ಕಾಗಿ ಹೋದನು.
Esi aseyetsotso la wu enu eye ame sia ame trɔ yi eƒe aƒe me la, David hã trɔ yi eƒe aƒe me eye wòyra eƒe aƒemetɔwo.