< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 16 >

1 ಅವರು ದೇವರ ಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಮಾಡಿಸಿದ್ದ ಗುಡಾರದಲ್ಲಿಟ್ಟು ದೇವರಿಗೋಸ್ಕರ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.
하나님의 궤를 메고 들어가서 다윗이 위하여 친 장막 가운데 두고 번제와 화목제를 하나님 앞에 드리니라
2 ಆ ಯಜ್ಞಗಳು, ಹೋಮಗಳು ಸಮರ್ಪಣೆಯಾದ ನಂತರ ದಾವೀದನು ಇಸ್ರಾಯೇಲರನ್ನು ಯೆಹೋವನ ಹೆಸರಿನಿಂದ ಆಶೀರ್ವದಿಸಿದನು.
다윗이 번제와 화목제 드리기를 마치고 여호와의 이름으로 백성에게 축복하고
3 ಹಾಗೂ ಅವರಲ್ಲಿ ಪ್ರತಿಯೊಬ್ಬ ಪುರುಷ ಹಾಗು ಸ್ತ್ರೀಗೂ ಒಂದು ರೊಟ್ಟಿಯನ್ನೂ, ಒಂದು ತುಂಡು ಬೇಯಿಸಿದ ಮಾಂಸವನ್ನೂ ಮತ್ತು ದ್ರಾಕ್ಷಿಹಣ್ಣಿನ ಒಂದು ಗೊಂಚಲನ್ನೂ ಕೊಡಿಸಿದನು.
또 이스라엘 무리의 무론 남녀하고 매 명에 떡 한 덩이와 고기 한 조각과 건포도병 하나씩 나누어 주었더라
4 ಯೆಹೋವನ ಮಂಜೂಷದ ಮುಂದೆ ದೇವರಾಧನೆ ನಡಿಸುವುದಕ್ಕೋಸ್ಕರ ದಾವೀದನು ಕೆಲವು ಲೇವಿಯರನ್ನು ನೇಮಿಸಿದನು. ಇಸ್ರಾಯೇಲಿನ ದೇವರಾದ ಯೆಹೋವನನ್ನು ಸ್ತುತಿಸುವುದೂ, ಹಾಡಿ ಹರಸುವುದೂ ಅವರ ಕರ್ತವ್ಯವಾಗಿತ್ತು.
또 레위 사람을 세워 여호와의 궤 앞에서 섬기며 이스라엘 하나님 여호와를 칭송하며 감사하며 찬양하게 하였으니
5 ಅವರಲ್ಲಿ ಆಸಾಫನು ಪ್ರಧಾನನು. ಜೆಕರ್ಯನು ಎರಡನೆಯವನು. ಯೆಗೀಯೇಲ್, ಶೆಮೀರಾಮೋತ್, ಯೆಹೀಯೇಲ್, ಮತ್ತಿತ್ಯ, ಎಲೀಯಾಬ್, ಬೆನಾಯ, ಓಬೇದೆದೋಮ್, ಯೆಗೀಯೇಲ್ ಇವರು ಸ್ವರಮಂಡಲ, ಕಿನ್ನರಿ ಮೊದಲಾದ ವಾದ್ಯಗಳನ್ನು ನುಡಿಸುವವರು, ಆಸಾಫನು ಕೈತಾಳ ಹಾಕುವುದಕ್ಕೆ ನೇಮಿಸಲಾಯಿತು.
그 두목은 아삽이요 다음은 스가랴와 여이엘과 스미라못과 여히엘과 맛디디아와 엘리압과 브나야와 오벧에돔과 여이엘이라 비파와 수금을 타고 아삽은 제금을 힘있게 치고
6 ಬೆನಾಯ, ಯೆಹಜೀಯೇಲ್ ಎಂಬ ಯಾಜಕರು ದೇವರ ಒಡಂಬಡಿಕೆ ಮಂಜೂಷದ ಮುಂದೆ ನಿತ್ಯವೂ ತುತ್ತೂರಿಗಳನ್ನು ಊದುವುದಕ್ಕೆ ನೇಮಕವಾದರು.
제사장 브나야와 야하시엘은 항상 하나님의 언약궤 앞에서 나팔을 부니라
7 ದಾವೀದನು ಆಸಾಫನನ್ನೂ, ಅವನ ಸಹೋದರರನ್ನೂ ಯೆಹೋವನನ್ನು ಕೊಂಡಾಡಿ ಕೀರ್ತಿಸುವುದಕ್ಕಾಗಿ ಸ್ತೋತ್ರಗೀತೆಗಳನ್ನು ಹಾಡುವುದಕ್ಕಾಗಿ ಆ ದಿನದಲ್ಲೇ ಮೊದಲು ನೇಮಿಸಿದನು. ಅವರು ಹಾಡಿದ್ದೇನಂದರೆ;
그 날에 다윗이 아삽과 그 형제를 세워 위선 여호와께 감사하게 하여 이르기를
8 “ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನ ನಾಮದ ಮಹತ್ವವನ್ನು ವರ್ಣಿಸಿರಿ. ಜನಾಂಗಗಳಲ್ಲಿ ಆತನ ಸತ್ಕಾರ್ಯಗಳನ್ನು ಪ್ರಸಿದ್ಧಪಡಿಸಿರಿ.
너희는 여호와께 감사하며 그 이름을 불러 아뢰며 그 행사를 만민 중에 알게 할지어다
9 ಆತನನ್ನು ಕೀರ್ತಿಸಿರಿ, ಭಜಿಸಿರಿ; ಆತನ ಅದ್ಭುತಕೃತ್ಯಗಳನ್ನೆಲ್ಲಾ ಧ್ಯಾನಿಸಿರಿ.
그에게 노래하며 그를 찬양하며 그 모든 기사를 말할지어다
10 ೧೦ ಆತನ ಪರಿಶುದ್ಧನಾಮದಲ್ಲಿ ಸಂತೋಷಪಡಿರಿ; ಯೆಹೋವನ ದರ್ಶನವನ್ನು ಕೋರುವವರ ಹೃದಯವು ನಿತ್ಯವೂ ಅಪೇಕ್ಷಿಸಿ ಹರ್ಷಿಸಲಿ.
그 성호를 자랑하라 무릇 여호와를 구하는 자는 마음이 즐거울지로다
11 ೧೧ ಯೆಹೋವನನ್ನೂ ಮತ್ತು ಆತನ ಬಲವನ್ನೂ ಆಶ್ರಯಿಸಿರಿ; ನಿತ್ಯವೂ ಆತನ ದರ್ಶನವನ್ನು ಅಪೇಕ್ಷಿಸಿರಿ.
여호와와 그 능력을 구할지어다 그 얼굴을 항상 구할지어다
12 ೧೨ ಆತನ ಸೇವಕನಾದ ಇಸ್ರಾಯೇಲಿನ ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ವಂಶದವರೇ, ಆತನ ಅದ್ಭುತ ಕಾರ್ಯಗಳನ್ನು,
그 종 이스라엘의 후손 곧 택하신 야곱의 자손 너희는 그 행하신 기사와 그 이적과 그 입의 판단을 기억할지어다
13 ೧೩ ಮಹತ್ಕಾರ್ಯಗಳನ್ನು, ನ್ಯಾಯ ನಿರ್ಣಯಗಳನ್ನು ಸ್ಮರಿಸಿರಿ.
상동
14 ೧೪ ಯೆಹೋವನೆಂಬಾತನು ನಮ್ಮ ದೇವರು, ಆತನ ನ್ಯಾಯವಿಧಿಗಳು ಭೂಲೋಕದಲ್ಲೆಲ್ಲಾ ಇವೆ.
그는 여호와 우리 하나님이시라 그의 판단이 온 땅에 있도다
15 ೧೫ ಆತನು ಸಾವಿರಾರು ತಲೆಮಾರಿನವರೆಗೂ ಇರುವಂತೆ ಮಾಡಿದ ವಾಗ್ದಾನ ಮತ್ತು ಆತನ ಒಡಂಬಡಿಕೆ ಇವುಗಳನ್ನು ನಿತ್ಯವೂ ನೆನಪಿನಲ್ಲಿಟ್ಟುಕೊಳ್ಳಿರಿ.
너희는 그 언약 곧 천대에 명하신 말씀을 영원히 기억할지어다
16 ೧೬ ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು ಮತ್ತು ಇಸಾಕನಿಗಾಗಿ ವಾಗ್ದಾನ ಮಾಡಿ ಭರವಸೆ ನೀಡಿದನು.
이것은 아브라함에게 하신 언약이며 이삭에게 하신 맹세며
17 ೧೭ ಅದು ರಾಜಶಾಸನದಂತಿರುವುದು ಎಂದು ಯಾಕೋಬನಿಗೂ ಶಾಶ್ವತವಾದ ಒಡಂಬಡಿಕೆಯಾಗಿರುವುದೆಂದು ಇಸ್ರಾಯೇಲರಿಗೂ ಮಾತುಕೊಟ್ಟನು.
이는 야곱에게 세우신 율례 곧 이스라엘에게 하신 영원한 언약이라
18 ೧೮ ನೀವು ಇನ್ನೂ ಬಹು ಜನರು ಕಾನಾನ್ ದೇಶದಲ್ಲಿ ಪ್ರವಾಸಿಗಳು ಆಗಿರುವಾಗಲೇ
이르시기를 내가 가나안 땅을 네게 주어 너희 기업의 지경이 되게 하리라 하셨도다
19 ೧೯ ಆತನು, ‘ನಿಮಗೆ ಈ ದೇಶವನ್ನು ಕೊಡುವೆನು ಅದು ನಿಮ್ಮ ಸಂತತಿಯವರಿಗೆ ಸ್ವತ್ತಾಗಿರುವುದು’ ಎಂದು ವಾಗ್ದಾನ ಮಾಡಿದನು.
때에 너희 인수가 적어서 매우 영성하며 그 땅에 객이 되어
20 ೨೦ ಅವರು ದೇಶದಿಂದ ದೇಶಕ್ಕೂ ರಾಜ್ಯದಿಂದ ರಾಜ್ಯಕ್ಕೂ ಹೋಗುತ್ತಿರುವಲ್ಲಿ
이 족속에게서 저 족속에게로, 이 나라에서 다른 민족에게로 유리하였도다
21 ೨೧ ಅವರಿಗೆ ಯಾರಿಂದಲೂ ಅನ್ಯಾಯವಾಗಲಿ, ಅಪಾಯವಾಗಲಿ ಆಗಲು ಬಿಡಲಿಲ್ಲ. ಆತನು ಅವರ ವಿಷಯದಲ್ಲಿ ಅರಸನನ್ನು ಗದರಿಸಿ,
사람이 그들을 해하기를 용납지 아니하시고 그들의 연고로 열왕을 꾸짖어
22 ೨೨ ‘ನಾನು ಅಭಿಷೇಕಿಸಿದವರನ್ನು ಮುಟ್ಟಬಾರದು. ನನ್ನ ಪ್ರವಾದಿಗಳಿಗೆ ಯಾವ ಕೇಡನ್ನು ಮಾಡಬಾರದು’ ಎಂದು ಹೇಳಿದನು.
이르기를 나의 기름 부은 자를 만지지 말며 나의 선지자를 상하지 말라 하셨도다
23 ೨೩ ಎಲ್ಲಾ ಭೂನಿವಾಸಿಗಳೇ ಯೆಹೋವನಿಗೆ ಕೀರ್ತನೆಯನ್ನು ಹಾಡಿರಿ. ಆತನ ರಕ್ಷಣೆಯನ್ನು ಪ್ರತಿನಿತ್ಯವೂ ಸಾರಿಹೇಳಿರಿ.
온 땅이여 여호와께 노래하며 구원을 날마다 선포할지어다
24 ೨೪ ಜನಾಂಗಗಳಲ್ಲಿ ಆತನ ಘನತೆಯನ್ನು ಎಲ್ಲಾ ಜನರಲ್ಲಿ ಆತನ ಅದ್ಭುತಕೃತ್ಯಗಳನ್ನೂ ಪ್ರಸಿದ್ಧಿಪಡಿಸಿರಿ.
그 영광을 열방 중에, 그 기이한 행적을 만민 중에 선포할지어다
25 ೨೫ ಯೆಹೋವನು ದೊಡ್ಡವನು, ಬಹಳವಾಗಿ ಸ್ತುತಿಗೆ ಪಾತ್ರನು ಆಗಿದ್ದಾನೆ. ಎಲ್ಲಾ ದೇವತೆಗಳಲ್ಲಿ ಆತನೇ ಅದ್ಭುತನಾದವನು.
여호와는 광대하시니 극진히 찬양할 것이요 모든 신보다 경외할 것임이여
26 ೨೬ ಜನಾಂಗಗಳ ದೇವತೆಗಳೆಲ್ಲಾ ಬರೀ ಬೊಂಬೆಗಳೇ. ಯೆಹೋವನಾದರೋ ಗಗನಮಂಡಲವನ್ನು ನಿರ್ಮಿಸಿದವನು.
만방의 모든 신은 헛것이요 여호와께서는 하늘을 지으셨음이로다
27 ೨೭ ಆತನ ಸಾನ್ನಿಧ್ಯದಲ್ಲಿ ಮಾನ ಮಹಿಮೆಗಳು ಆತನ ಪವಿತ್ರಾಲಯದಲ್ಲಿ ಮಹಿಮೆ, ಸ್ತುತಿಸ್ತೋತ್ರಗಳು, ಸಂತೋಷಗಳೂ ಇರುತ್ತವೆ.
존귀와 위엄이 그 앞에 있으며 능력과 즐거움이 그 처소에 있도다
28 ೨೮ ಭೂಜನಾಂಗಗಳೇ, ಬಲಪ್ರಭಾವಗಳು ಯೆಹೋವನವೇ ಯೆಹೋವನವೇ ಎಂದು ಹೇಳಿ ಆತನನ್ನು ಘನಪಡಿಸಿರಿ.
만방의 족속들아 영광과 권능을 여호와께 돌릴지어다 여호와께 돌릴지어다
29 ೨೯ ಯೆಹೋವನ ನಾಮಕ್ಕೆ ಯೋಗ್ಯವಾದ ಘನವನ್ನು ಸಲ್ಲಿಸಿರಿ. ಕಾಣಿಕೆ ಸಹಿತ ಆತನ ಸನ್ನಿಧಿಗೆ ಬನ್ನಿರಿ. ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ನಮಸ್ಕರಿಸಿರಿ.
여호와의 이름에 합당한 영광을 그에게 돌릴지어다 예물을 가지고 그 앞에 들어갈지어다 아름답고 거룩한 것으로 여호와께 경배할지어다
30 ೩೦ ಎಲ್ಲಾ ಭೂನಿವಾಸಿಗಳೇ, ಆತನ ಮುಂದೆ ಸಾಷ್ಟಾಂಗವೆರಗಿ ನಮಸ್ಕರಿಸಿರಿ. ಭೂಮಿಯು ಸ್ಥಿರವಾಗಿರುವುದು, ಕದಲುವುದಿಲ್ಲ,
온 땅이여 그 앞에서 떨지어다 세계가 굳게 서고 흔들리지 못하는도다
31 ೩೧ ಗಗನಮಂಡಲವು ಹರ್ಷಿಸಲಿ; ಭೂಲೋಕವು ಸಂತೋಷಿಸಲಿ; ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ.
하늘은 기뻐하고 땅은 즐거워하며 열방 중에서는 이르기를 여호와께서 통치하신다 할지로다
32 ೩೨ ಭೂನಿವಾಸಿಗಳಿಗೆ ನ್ಯಾಯತೀರಿಸುವುದಕ್ಕೆ ಬರುವನೆಂದು ಯೆಹೋವನ ಮುಂದೆ ಸಮುದ್ರವೂ ಅದರಲ್ಲಿರುವುದೆಲ್ಲವೂ ಘೋಷಿಸಲಿ.
바다와 거기 충만한 것이 외치며 밭과 그 가운데 모든 것은 즐거워할지로다
33 ೩೩ ಹೊಲಗಳೂ, ಅವುಗಳ ಪೈರುಗಳೂ ಉಲ್ಲಾಸಿಸಲಿ; ಮತ್ತು ವನದ ಮರಗಳು ಉತ್ಸಾಹ ಧ್ವನಿ ಮಾಡಲಿ.
그리 할 때에 삼림의 나무들이 여호와 앞에서 즐거이 노래하리니 주께서 땅을 심판하러 오실 것임이로다
34 ೩೪ ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನು ಒಳ್ಳೆಯವನು; ಆತನ ಕೃಪೆಯು ಶಾಶ್ವತವಾಗಿರುವುದು.
여호와께 감사하라 그는 선하시며 그 인자하심이 영원함이로다
35 ೩೫ ನಮ್ಮ ಸಹಾಯಕನಾಗಿರುವ ದೇವರೇ, ನಮ್ಮನ್ನು ರಕ್ಷಿಸು; ಅನ್ಯಜನಗಳಲ್ಲಿ ಚದುರಿಹೋಗಿರುವ ನಮ್ಮನ್ನು ಬಿಡಿಸಿ ಒಟ್ಟುಗೂಡಿಸು; ಆಗ ನಿನ್ನ ಪರಿಶುದ್ಧ ನಾಮವನ್ನು ಕೊಂಡಾಡುವೆವು; ನಿನ್ನ ಸ್ತೋತ್ರದಲ್ಲಿ ಹೆಚ್ಚಳಪಡುವೆವು ಅನ್ನಿರಿ.
너희는 이르기를 우리의 구원의 하나님이여 우리를 구원하여 만국 가운데서 건져 내시고 모으시사 우리로 주의 성호를 감사하며 주의 영예를 찬양하게 하소서 할지어다
36 ೩೬ ಇಸ್ರಾಯೇಲ್ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ” ಎಂದು ಹಾಡಿದರು. ಅವರು ಹೀಗೆ ಹಾಡಿದಾಗ ಸರ್ವಜನರೂ ಆಮೆನ್ ಎಂದು ಯೆಹೋವನನ್ನು ಸ್ತುತಿಸಿದರು.
여호와 이스라엘의 하나님을 영원부터 영원까지 송축할지로다 하매 모든 백성이 아멘하고 여호와를 찬양하였더라
37 ೩೭ ದಾವೀದನು ಯೆಹೋವನ ಒಡಂಬಡಿಕೆ ಮಂಜೂಷದ ಮುಂದೆ ಪ್ರತಿದಿನವೂ ಆರಾಧನೆ ನಡಿಸುವುದಕ್ಕೆ ಆಸಾಫನನ್ನೂ, ಅವನ ಸಹೋದರರನ್ನೂ ಬಾಗಿಲನ್ನು ಕಾಯುವುದಕ್ಕಾಗಿ,
다윗이 아삽과 그 형제를 여호와의 언약궤 앞에 머물러 항상 그 궤 앞에서 섬기게 하되 날마다 그 일대로 하게 하였고
38 ೩೮ ಯೆದುತೂನನ ಮಗನಾದ ಓಬೇದೆದೋಮ್ ಮತ್ತು ಹೋಸ ಇವರನ್ನು, ಅವರ ಆರುವತ್ತೆಂಟು ಸಹೋದರರನ್ನೂ ಅಲ್ಲೇ ಇರಿಸಿದನು.
오벧에돔과 그 형제 육십팔 인과 여두둔의 아들 오벧에돔과 호사로 문지기를 삼았고
39 ೩೯ ಯಾಜಕನಾದ ಚಾದೋಕನನ್ನೂ, ಅವನ ಸಹೋದರರನ್ನೂ ಗಿಬ್ಯೋನಿನ ಪೂಜಾಸ್ಥಳಗಳಲ್ಲಿದ್ದ ಯೆಹೋವನ ಗುಡಾರದ ಬಳಿಯಲ್ಲಿ ಇರಿಸಿದನು.
제사장 사독과 그 형제 제사장들로 기브온 산당에서 여호와의 성막 앞에 모시게 하여
40 ೪೦ ಅವರು ಪ್ರತಿದಿನವೂ ಪ್ರಾತಃಕಾಲ ಮತ್ತು ಸಾಯಂಕಾಲಗಳಲ್ಲಿ ಯೆಹೋವನಿಗೋಸ್ಕರ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಮಾಡಿ ಯೆಹೋವನ ಧರ್ಮಶಾಸ್ತ್ರದಲ್ಲಿ ಇಸ್ರಾಯೇಲರಿಗೆ ವಿಧಿತವಾದದ್ದೆಲ್ಲವನ್ನೂ ನೆರವೇರಿಸಬೇಕಾಯಿತು.
항상 조석으로 번제단 위에 여호와께 번제를 드리되 여호와의 율법에 기록하여 이스라엘에게 명하신 대로 다 준행하게 하였고
41 ೪೧ ಅವರ ಬಳಿಯಲ್ಲಿ ಯೆಹೋವನನ್ನು, ಆತನ ಶಾಶ್ವತವಾದ ಕೃಪೆಗೋಸ್ಕರ ಸ್ತುತಿಸುವುದಕ್ಕೆ ಹೇಮಾನ್, ಯೆದುತೂನ ಮತ್ತು ಹೆಸರು ಹೆಸರಾಗಿ ನೇಮಿಸಲ್ಪಟ್ಟ ಬೇರೆ ಜನರೂ ಇದ್ದರು.
또 저희와 함께 헤만과 여두둔과 그 남아 택함을 받고 녹명된 자를 세워 여호와의 자비하심이 영원함을 인하여 감사하게 하였고
42 ೪೨ ಹೇಮಾನ್ ಮತ್ತು ಯೆದುತೂನರ ಹತ್ತಿರ ವಾದ್ಯಗಾರರಿಗಾಗಿ ತುತ್ತೂರಿ, ತಾಳ ಮೊದಲಾದ ವಾದ್ಯಗಳೂ ಮತ್ತು ದೇವಕೀರ್ತನಾ ಸಾಹಿತ್ಯಗಳಿದ್ದವು. ಯೆದುತೂನನ ಮಕ್ಕಳು ದ್ವಾರಪಾಲಕರಾಗಿ ನೇಮಿಸಲ್ಪಟ್ಟರು.
또 저희와 함께 헤만과 여두둔을 세워 나팔과 제금들과 하나님을 찬송하는 악기로 소리를 크게 내게 하였고 또 여두둔의 아들로 문을 지키게 하였더라
43 ೪೩ ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು. ದಾವೀದನು ತನ್ನ ಕುಟುಂಬದವರನ್ನು ಆಶೀರ್ವದಿಸುವುದಕ್ಕಾಗಿ ಹೋದನು.
이에 뭇 백성은 각각 그 집으로 돌아가고 다윗도 자기 집을 위하여 축복하려고 돌아갔더라

< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 16 >