< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 18 >

1 ದಾವೀದನು ಫಿಲಿಷ್ಟಿಯರನ್ನು ಮುತ್ತಿಗೆಹಾಕಿ, ಅವರನ್ನು ಸೋಲಿಸಿ, ಅವರಿಂದ ಗತ್ ಪಟ್ಟಣವನ್ನೂ ಮತ್ತು ಅದರ ಗ್ರಾಮಗಳನ್ನೂ ತೆಗೆದುಕೊಂಡನು.
После сего Давид поразил Филистимлян и смирил их, и взял Геф и зависящие от него города из руки Филистимлян.
2 ಇದಲ್ಲದೆ ಅವನು ಮೋವಾಬ್ಯರನ್ನು ಸೋಲಿಸಿದನು. ಅವರು ದಾವೀದನಿಗೆ ದಾಸರಾಗಿ ಕಪ್ಪಕೊಡಬೇಕಾಯಿತು.
Он поразил также Моавитян, - и сделались Моавитяне рабами Давида, принося ему дань.
3 ದಾವೀದನು ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ಚೋಬದ ಅರಸನಾದ ಹದರೆಜರನನ್ನು ಹಮಾತಿನ ಬಳಿಯಲ್ಲಿ ಸೋಲಿಸಿದನು.
И поразил Давид Адраазара, царя Сувского, в Емафе, когда тот шел утвердить власть свою при реке Евфрате.
4 ದಾವೀದನು ಅವನ ಸಾವಿರ ರಥಗಳನ್ನೂ, ಏಳುಸಾವಿರ ರಾಹುತರನ್ನೂ, ಇಪ್ಪತ್ತು ಸಾವಿರ ಕಾಲಾಳುಗಳನ್ನೂ ಸೆರೆಹಿಡಿದು, ನೂರು ಕುದುರೆಗಳನ್ನಿಟ್ಟುಕೊಂಡು, ಉಳಿದ ಕುದುರೆಗಳ ಹಿಂಗಾಲಿನ ನರಗಳನ್ನು ಕತ್ತರಿಸಿ ಬಿಟ್ಟನು.
И взял Давид у него тысячу колесниц, семь тысяч всадников и двадцать тысяч пеших, и разрушил Давид все колесницы, оставив из них только сто.
5 ದಮಸ್ಕದ ಅರಾಮ್ಯರು ಚೋಬದ ಅರಸನಾದ ಹದದೆಜರನನ್ನು ರಕ್ಷಿಸಲು ಬಂದಾಗ ದಾವೀದನು ಅವರನ್ನೂ ಸೋಲಿಸಿ, ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದನು.
Сирияне Дамасские пришли было на помощь к Адраазару, царю Сувскому, но Давид поразил двадцать две тысячи Сириян.
6 ಇದಲ್ಲದೆ ಅವನು ದಮಸ್ಕದ ಅರಾಮ್ಯ ದೇಶದಲ್ಲಿ ಕಾವಲುದಂಡನ್ನು ಇರಿಸಿದನು. ಹೀಗೆ ಅರಾಮ್ಯರು ಅವನ ಸೇವಕರಾಗಿ ಅವನಿಗೆ ಕಪ್ಪ ಕೊಡುವವರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ವಿಜಯ ದೊರಕಿತು.
И поставил Давид охранное войско в Сирии Дамасской, и сделались Сирияне рабами Давида, принося ему дань. И помогал Господь Давиду везде, куда он ни ходил.
7 ದಾವೀದನು ಹದರೆಜರನ ಸೇವಕರಿಗಿದ್ದ ಬಂಗಾರದ ಗುರಾಣಿಗಳನ್ನು ಕಿತ್ತುಕೊಂಡು ಯೆರೂಸಲೇಮಿಗೆ ತೆಗೆದುಕೊಂಡು ಹೋದನು.
И взял Давид золотые щиты, которые были у рабов Адраазара, и принес их в Иерусалим.
8 ಇದಲ್ಲದೆ ದಾವೀದನು ಹದರೆಜರನ ಟಿಭತ್ ಮತ್ತು ಕೂನ್ ಎಂಬ ಪಟ್ಟಣಗಳಿಂದ ಬಹಳ ತಾಮ್ರವನ್ನು ತೆಗೆದುಕೊಂಡು ಹೋದನು. ಸೊಲೊಮೋನನು ಆ ತಾಮ್ರದಿಂದ ಕಂಚಿನ ಕಡಲೆಂಬ ಪಾತ್ರೆಯನ್ನೂ, ಕಂಬಗಳನ್ನೂ ಮತ್ತು ಬೇರೆ ಸಾಮಾನುಗಳನ್ನು ಇದೇ ತಾಮ್ರದಿಂದ ಮಾಡಿಸಿದನು.
А из Тивхавы и Куна, городов Адраазаровых, взял Давид весьма много меди. Из нее Соломон сделал медное море и столбы и медные сосуды.
9 ದಾವೀದನು ಚೋಬದ ಅರಸನಾದ ಹದದೆಜರನ ಸೈನ್ಯವನ್ನೆಲ್ಲಾ ಸೋಲಿಸಿದನೆಂಬ ವರ್ತಮಾನವು ಹಮಾತಿನ ಅರಸನಾದ ತೋವಿಗೆ ಮುಟ್ಟಿತು.
И услышал Фой, царь Имафа, что Давид поразил все войско Адраазара, царя Сувского.
10 ೧೦ ತೋವಿಗೂ ಹದರೆಜನಿಗೂ ವಿರೋಧವಿತ್ತು. ದಾವೀದನು ಹದದೆಜರನ ವಿರುದ್ಧ ಹೋರಾಡಿ ಅವನನ್ನು ಸೋಲಿಸಿದ್ದರಿಂದ, ತೋವು ದಾವೀದನನ್ನು ವಂದಿಸುವುದಕ್ಕೂ, ಹಾರೈಸುವುದಕ್ಕೂ ತನ್ನ ಮಗನಾದ ಹದೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೋಸ್ಕರ ವಿಧವಿಧವಾದ ತಾಮ್ರ, ಬೆಳ್ಳಿ, ಬಂಗಾರಗಳ ಪಾತ್ರೆಗಳನ್ನು ತಂದನು.
И послал Иорама, сына своего, к царю Давиду, приветствовать его и благодарить за то, что он воевал с Адраазаром и поразил его, ибо Фой был в войне с Адраазаром, - и с ним всякие сосуды золотые, серебряные и медные.
11 ೧೧ ಅರಸನಾದ ದಾವೀದನು ಇವುಗಳನ್ನೂ ಎದೋಮ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಮತ್ತು ಅಮಾಲೇಕ್ಯರು ಎಂಬೀ ಸುತ್ತಲಿನ ಜನಾಂಗಗಳಿಂದ ವಶಪಡಿಸಿಕೊಂಡ ಬೆಳ್ಳಿ ಬಂಗಾರವನ್ನು ಯೆಹೋವನಿಗೋಸ್ಕರ ಪ್ರತಿಷ್ಠಿಸಿದನು.
И посвятил их царь Давид Господу вместе с серебром и золотом, которое он взял от всех народов: от Идумеян, Моавитян, Аммонитян, Филистимлян и от Амаликитян.
12 ೧೨ ಇದಲ್ಲದೆ ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹದಿನೆಂಟು ಸಾವಿರ ಸೈನಿಕರನ್ನು ಸೋಲಿಸಿದನು.
И Авесса, сын Саруи, поразил Идумеян на долине Соляной восемнадцать тысяч;
13 ೧೩ ದಾವೀದನು ಎದೋಮಿನಲ್ಲಿ ಕಾವಲುದಂಡುಗಳನ್ನಿರಿಸಿದನು. ಎದೋಮ್ಯರೆಲ್ಲರೂ ದಾವೀದನ ದಾಸರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯದೊರಕಿತು.
и поставил в Идумее охранное войско, и сделались все Идумеяне рабами Давиду. Господь помогал Давиду везде, куда он ни ходил.
14 ೧೪ ದಾವೀದನು ಇಸ್ರಾಯೇಲರೆಲ್ಲರ ಅರಸನಾಗಿ ಎಲ್ಲಾ ಪ್ರಜೆಗಳಿಗೂ ಧರ್ಮತಪ್ಪದೆ ನೀತಿ ಮತ್ತು ನ್ಯಾಯದಿಂದ ಕಾರ್ಯ ನಿರ್ವಹಿಸುತ್ತಿದ್ದನು.
И царствовал Давид над всем Израилем, и творил суд и правду всему народу своему.
15 ೧೫ ಚೆರೂಯಳ ಮಗನಾದ ಯೋವಾಬನು ಅವನ ಸೇನಾಧಿಪತಿಯೂ, ಅಹೀಲೂದನ ಮಗನಾದ ಯೆಹೋಷಾಫಾಟನು ಮಂತ್ರಿಯೂ ಆಗಿದ್ದರು.
Иоав, сын Саруи, был начальником войска, Иосафат, сын Ахилуда, дееписателем,
16 ೧೬ ಅಹೀಟೂಬನ ಮಗನಾದ ಚಾದೋಕನೂ ಮತ್ತು ಅಬೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರಾಗಿದ್ದರು. ಶವ್ಷನು ಲೇಖಕನು.
Садок, сын Ахитува, и Авимелех, сын Авиафара, священниками, а Суса писцом,
17 ೧೭ ಯೆಹೋಯಾದನ ಮಗನಾದ ಬೆನಾಯನು, ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳ ಮುಖ್ಯಸ್ಥನಾದನು. ದಾವೀದನ ಮಕ್ಕಳು ಅರಸನ ಒಡ್ಡೋಲಗದಲ್ಲಿ ಪ್ರಧಾನರಾಗಿದ್ದರು.
Ванея, сын Иодая, над Хелефеями и Фелефеями, а сыновья Давидовы - первыми при царе.

< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 18 >