< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 20 >
1 ೧ ಮರುವರ್ಷ ವಸಂತ ಕಾಲದಲ್ಲಿ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ ಯೋವಾಬನು ಬಲವಾದ ಸೈನ್ಯವನ್ನು ಯುದ್ಧಕ್ಕೆ ಮುನ್ನಡೆಸಿ, ಅಮ್ಮೋನಿಯರ ಪ್ರಾಂತ್ಯಗಳನ್ನು ವಶಪಡಿಸಿಕೊಂಡು ರಬ್ಬಕ್ಕೆ ಹೋಗಿ ಮುತ್ತಿಗೆ ಹಾಕಿದನು. ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು. ಯೋವಾಬನು ರಬ್ಬ ಪಟ್ಟಣವನ್ನು ಸ್ವಾಧೀನಮಾಡಿಕೊಂಡನು.
I stalo se po roce, když králové vyjíždívají na vojnu, že vedl Joáb lid válečný, a hubil zemi synů Ammon. A když přitáhl, oblehl Rabbu; (ale David zůstal v Jeruzalémě). I dobyl Joáb Rabby, a rozbořil ji.
2 ೨ ದಾವೀದನು ಮಲ್ಕಾಮ್ ಮೂರ್ತಿಯ ತಲೆಯ ಮೇಲಿದ್ದ ಬಂಗಾರದ ಕಿರೀಟವನ್ನು ತೆಗೆದುಕೊಂಡನು. ಅದು ನಾಲ್ಕು ಸಾವಿರ ತೊಲಾ ತೂಕದ್ದು. ಅದರಲ್ಲಿದ್ದ ಅಮೂಲ್ಯವಾದ ರತ್ನಗಳನ್ನು ದಾವೀದನು ತನ್ನ ಶಿರಸ್ಸಿನಲ್ಲಿ ಧರಿಸಿಕೊಂಡನು. ಅವನು ಆ ಪಟ್ಟಣದಿಂದ ದೊಡ್ಡ ಕೊಳ್ಳೆಯನ್ನು ತೆಗೆದುಕೊಂಡು ಹೋದನು.
Tedy sňal David korunu krále jejich s hlavy jeho, a našel, že vážila hřivnu zlata. A bylo v ní kamení drahé, i vstavena byla na hlavu Davidovu. Vyvezl též kořisti města velmi veliké.
3 ೩ ಊರಿನ ನಿವಾಸಿಗಳನ್ನು ಹಿಡಿದು ಗರಗಸ, ಗುದ್ದಲಿ, ಕೊಡಲಿಗಳಿಂದ ಮಾಡುವ ಕೆಲಸಕ್ಕೆ ನೇಮಿಸಿದನು. ಅಮ್ಮೋನಿಯರ ಎಲ್ಲಾ ಪಟ್ಟಣದವರಿಗೂ ಇದೇ ಗತಿಯಾಯಿತು. ಅನಂತರ ದಾವೀದನು ಸರ್ವಸೈನಿಕರೊಡನೆ ಯೆರೂಸಲೇಮಿಗೆ ಬಂದನು.
Lid pak, kterýž v něm byl, vyvedl, a dal je pod pily a brány železné i sekery. A tak učinil David všechněm městům Ammonitským. I navrátil se David se vším lidem do Jeruzaléma.
4 ೪ ಅನಂತರ ಫಿಲಿಷ್ಟಿಯರ ಸಂಗಡ ಗೆಜೆರಿನಲ್ಲಿ ಯುದ್ಧ ನಡೆಯಿತು. ಆಗ ಹುಷ ಊರಿನವನಾದ ಸಿಬ್ಬೆಕೈ ಎಂಬುವವನು ರೆಫಾಯನಾದ ಸಿಪ್ಪೈ ಎಂಬುವವನನ್ನು ಕೊಲ್ಲಲು ಫಿಲಿಷ್ಟಿಯರು ಕುಗ್ಗಿಹೋದರು.
Potom pak když trvala válka v Gázer s Filistinskými, tehdy zabil Sibbechai Chusatský Sippaje, kterýž byl zplozený z obrů, i sníženi jsou.
5 ೫ ಫಿಲಿಷ್ಟಿಯರೊಡನೆ ಇನ್ನೊಮ್ಮೆ ಯುದ್ಧ ನಡೆದಾಗ ಯಾಯೀರನ ಮಗನಾದ ಎಲ್ಹಾನಾನನು ಗಿತ್ತೀಯನಾದ ಗೊಲ್ಯಾತನ ತಮ್ಮನಾದ ಲಹ್ಮೀಯನನ್ನು ಕೊಂದನು. ಲಹ್ಮೀಯನ ಬರ್ಜಿಯ ಹಿಡಿಕೆಯು ನೇಕಾರರ ಕುಂಟೆಯಷ್ಟು ಗಾತ್ರವಿತ್ತು.
Byla ještě i jiná válka s Filistinskými, kdežto zabil Elchanan, syn Jairův, Lachmi bratra Goliáše Gittejského, u jehož kopí bylo dřevo jako vratidlo tkadlcovské.
6 ೬ ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧನಡೆಯಿತು. ಅಲ್ಲಿ ಒಬ್ಬ ಎತ್ತರವಾದ ಪುರುಷನಿದ್ದನು ಅವನ ಕೈಕಾಲುಗಳಿಗೆ ಆರಾರು ಬೆರಳುಗಳಿದ್ದವು. ಅವನೂ ರೆಫಾಯನು.
Opět byla jiná válka v Gát, a byl tam muž veliké postavy, kterýž měl po šesti prstech, všech čtyřmecítma, a byl i on zplozený z téhož obra.
7 ೭ ಅವನು ಇಸ್ರಾಯೇಲರನ್ನು ನಿಂದಿಸಿದಾಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾತಾನನು ಅವನನ್ನು ಕೊಂದುಹಾಕಿದನು.
Ten když haněl Izraele, zabil ho Jonata syn Semmaa, bratra Davidova.
8 ೮ ಗತ್ ಊರಿನವರಾದ ಈ ರೆಫಾಯರು ದಾವೀದನಿಂದಲೂ ಅವನ ಸೇವಕರಿಂದಲೂ ಹತರಾದರು.
Ti byli synové jednoho obra v Gát, kteříž padli od ruky Davidovy a od ruky služebníků jeho.