< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 23 >
1 ೧ ದಾವೀದನು ವಯೋವೃದ್ಧನಾಗಿ ತನ್ನ ಜೀವಮಾನದ ಕೊನೆಯ ದಿನಗಳಲ್ಲಿ ತನ್ನ ಮಗನಾದ ಸೊಲೊಮೋನನನ್ನು ಇಸ್ರಾಯೇಲರ ಅರಸನನ್ನಾಗಿ ನೇಮಿಸಿದನು.
Och när David blev gammal och levnadsmätt, gjorde han sin son Salomo till konung över Israel.
2 ೨ ಅವನು ಇಸ್ರಾಯೇಲರ ಎಲ್ಲಾ ಅಧಿಪತಿಗಳನ್ನೂ, ಯಾಜಕರನ್ನೂ ಮತ್ತು ಲೇವಿಯರನ್ನೂ ತನ್ನ ಬಳಿಯಲ್ಲಿ ಒಟ್ಟುಗೂಡಿಸಿದನು.
Och han församlade alla Israels furstar, så ock prästerna och leviterna.
3 ೩ ಮೂವತ್ತು ವರ್ಷಕ್ಕಿಂತ ಹೆಚ್ಚಾದ ವಯಸ್ಸುಳ್ಳ ಲೇವಿಯರನ್ನು ಲೆಕ್ಕಿಸಿದಾಗ ಗಂಡಸರ ಸಂಖ್ಯೆಯು ಮೂವತ್ತೆಂಟು ಸಾವಿರವಾಗಿತ್ತು.
Och leviterna blevo räknade, de nämligen som voro trettio år gamla eller därutöver; och deras antal, antalet av alla personer av mankön, utgjorde trettioåtta tusen.
4 ೪ ದಾವೀದನು ಯೆಹೋವನ ಆಲಯವನ್ನು ಕಟ್ಟುವವರ ಮೇಲ್ವಿಚಾರಣೆಗಾಗಿ ಇಪ್ಪತ್ತ ನಾಲ್ಕು ಸಾವಿರ ಜನರನ್ನು ನ್ಯಾಯಾಧಿಪತಿಗಳನ್ನಾಗಿ ಮತ್ತು ಅಧಿಕಾರಿಗಳನ್ನಾಗಿ ಆರು ಸಾವಿರ ಜನರನ್ನು,
»Av dessa», sade han, »skola tjugufyra tusen förestå sysslorna vid HERRENS hus, och sex tusen vara tillsyningsmän och domare;
5 ೫ ದ್ವಾರಪಾಲಕರನ್ನಾಗಿ, ನಾಲ್ಕು ಸಾವಿರ ಜನರನ್ನು ಮತ್ತು ತಾನು ಸಿದ್ಧಪಡಿಸಿದ ವಾದ್ಯಗಳಿಂದ ಯೆಹೋವನನ್ನು ಭಜಿಸುವುದಕ್ಕಾಗಿ ನಾಲ್ಕು ಸಾವಿರ ಜನರನ್ನೂ ನೇಮಿಸಿದನು.
fyra tusen skola vara dörrvaktare och fyra tusen skola lovsjunga HERREN till de instrumenter som jag har låtit göra för lovsången.»
6 ೬ ಇದಲ್ಲದೆ ದಾವೀದನು ಲೇವಿಯ ಸಂತಾನದವರಾದ ಗೇರ್ಷೋನ್ಯರು, ಕೆಹಾತ್ಯರು ಮತ್ತು ಮೆರಾರೀಯರು ಇವರನ್ನು ವಿವಿಧ ವರ್ಗಗಳನ್ನಾಗಿ ವಿಭಾಗಿಸಿದನು.
Och David delade dem i avdelningar efter Levis söner, Gerson Kehat och Merari.
7 ೭ ಗೇರ್ಷೋನ್ಯರ ಮೂಲಪುರುಷರು ಲದ್ದಾನ್ ಮತ್ತು ಶಿಮ್ಮೀ ಎಂಬುವರು.
Till gersoniterna hörde Laedan och Simei.
8 ೮ ಲದ್ದಾನನಿಗೆ ಪ್ರಧಾನನಾದ ಯೆಹೀಯೇಲ್, ಜೇತಾಮ್ ಮತ್ತು ಯೋವೇಲ್ ಎಂಬ ಮೂರು ಮಕ್ಕಳಿದ್ದರು.
Laedans söner voro Jehiel, huvudmannen, Setam och Joel, tillsammans tre.
9 ೯ ಶಿಮ್ಮೀಗೆ ಶೆಲೋಮೋತ್, ಹಜೀಯೇಲ್, ಹಾರಾನ್ ಎಂಬ ಮೂರು ಮಕ್ಕಳಿದ್ದರು. ಇವರು ಲದ್ದಾನ್ಯರ ಗೋತ್ರ ಪ್ರಧಾನರು.
Simeis söner voro Selomot, Hasiel och Haran, tillsammans tre. Dessa voro huvudmän för Laedans familjer.
10 ೧೦ ಶಿಮ್ಮೀಗೆ ಯಹತ್, ಜೀನ, ಯೆಯೂಷ್ ಮತ್ತು ಬೆರೀಯ ಎಂಬ ನಾಲ್ಕು ಮಕ್ಕಳಿದ್ದರು.
Och Simeis söner voro Jahat, Sina, Jeus och Beria. Dessa voro Simeis söner, tillsammans fyra.
11 ೧೧ ಯಹತನು ಪ್ರಧಾನನು, ಜೀಜನು ಎರಡನೆಯವನಾಗಿದ್ದನು, ಯೆಯೂಷ್, ಬೆರೀಯರಿಗೆ ಹೆಚ್ಚು ಮಕ್ಕಳಿರಲಿಲ್ಲವಾದುದರಿಂದ ಅವರಿಬ್ಬರೂ ಒಂದೇ ಕುಟುಂಬವಾಗಿ ವರ್ಗವಾಗಿಯೂ ಎಣಿಸಲ್ಪಟ್ಟಿದ್ದರು.
Jahat var huvudmannen, och Sisa var den andre. Men Jeus och Beria hade icke många barn; därför fingo de utgöra allenast en familj, en ordning.
12 ೧೨ ಕೆಹಾತನಿಗೆ ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್ ಎಂಬ ನಾಲ್ಕು ಮಕ್ಕಳಿದ್ದರು.
Kehats söner voro Amram, Jishar, Hebron och Ussiel, tillsammans fyra.
13 ೧೩ ಅಮ್ರಾಮನ ಮಕ್ಕಳು ಆರೋನ್ ಮತ್ತು ಮೋಶೆ ಎಂಬುವವರು. ಆರೋನನು ಅವನ ಸಂತಾನದವರು ಮಹಾ ಪರಿಶುದ್ಧವಾದ ವಸ್ತುಗಳನ್ನು ಪ್ರತಿಷ್ಠಿಸುವುದಕ್ಕೆ ಪ್ರತ್ಯೇಕಿಸಲ್ಪಟ್ಟರು. ಇವರು ಯೆಹೋವನ ಸನ್ನಿಧಿಯಲ್ಲಿ ಸದಾಕಾಲ ಧೂಪಹಾಕುವವರೂ, ಆತನ ಸೇವೆ ಮಾಡುವವರೂ, ಆತನ ಹೆಸರಿನಿಂದ ಜನರನ್ನು ಆಶೀರ್ವದಿಸುವವರೂ ಆಗಿದ್ದರು.
Amrams söner voro Aron och Mose. Och Aron blev jämte sina söner för evärdlig tid avskild till att helgas såsom höghelig, till att för evärdlig tid antända rökelse inför HERREN och göra tjänst inför honom och välsigna i hans namn.
14 ೧೪ ದೇವರ ಮನುಷ್ಯನಾದ ಮೋಶೆಯ ಸಂತಾನದವರು ಸಾಧಾರಣ ಲೇವಿಯರೊಳಗೆ ಎಣಿಸಲ್ಪಟ್ಟರು.
Men gudsmannen Moses söner räknades till Levi stam.
15 ೧೫ ಮೋಶೆಯ ಮಕ್ಕಳು ಗೇರ್ಷೋಮ್ ಮತ್ತು ಎಲೀಯೆಜೆರ್ ಎಂಬುವವರು.
Moses söner voro Gersom och Elieser.
16 ೧೬ ಪ್ರಧಾನನಾದ ಶೆಬೂವೇಲನು ಗೇರ್ಷೋಮನ ಮಗನು.
Gersoms söner voro Sebuel, huvudmannen.
17 ೧೭ ಪ್ರಧಾನನಾದ ರೆಹಬ್ಯ ಎಲೀಯೆಜೆರನ ಮಗನು. ಎಲೀಯೆಜೆರನಿಗೆ ಬೇರೆ ಮಕ್ಕಳಿರಲಿಲ್ಲ. ಆದರೆ ರೆಹಬ್ಯನಿಗೆ ಅನೇಕ ಮಕ್ಕಳಿದ್ದರು.
Och Eliesers söner voro Rehabja, huvudmannen. Elieser hade inga andra söner; men Rehabjas söner voro övermåttan talrika.
18 ೧೮ ಪ್ರಧಾನನಾದ ಶೆಲೋಮೋತನು ಇಚ್ಹಾರನ ಮಗ.
Jishars söner voro Selomit, huvudmannen.
19 ೧೯ ಹೆಬ್ರೋನನ ಮಕ್ಕಳಲ್ಲಿ ಯೆರೀಯನು ಪ್ರಧಾನನು, ಅಮರ್ಯನು ಎರಡನೆಯವನು, ಯಹಜೀಯೇಲನು ಮೂರನೆಯವನು, ಯೆಕಮ್ಮಾಮ್ ನಾಲ್ಕನೆಯವನು.
Hebrons söner voro Jeria, huvudmannen, Amarja, den andre, Jahasiel, den tredje, och Jekameam, den fjärde.
20 ೨೦ ಉಜ್ಜೀಯೇಲನ ಮಕ್ಕಳಲ್ಲಿ ಮೀಕನು ಪ್ರಧಾನನು, ಇಷ್ಷೀಯನು ಎರಡನೆಯವನು.
Ussiels söner voro Mika, huvudmannen, och Jissia, den andre.
21 ೨೧ ಮೆರಾರೀಯ ಮಕ್ಕಳು ಮಹ್ಲೀ ಮತ್ತು ಮೂಷೀ ಎಂಬುವವರು. ಮಹ್ಲೀಯ ಮಕ್ಕಳು ಎಲ್ಲಾಜಾರ್ ಮತ್ತು ಕೀಷ್.
Meraris söner voro Maheli och Musi. Mahelis söner voro Eleasar och Kis.
22 ೨೨ ಎಲ್ಲಾಜಾರನು ಗಂಡು ಮಕ್ಕಳಿಲ್ಲದೆ ಸತ್ತನು. ಅವನಿಗೆ ಹೆಣ್ಣು ಮಕ್ಕಳು ಮಾತ್ರ ಇದ್ದರು. ಇವರು ತಮ್ಮ ಬಂಧುಗಳಾದ ಕೀಷನ ಮಕ್ಕಳನ್ನು ಮದುವೆಯಾದರು.
När Eleasar dog, lämnade han inga söner efter sig, utan allenast döttrar; men Kis' söner, deras fränder, togo dessa till hustrur.
23 ೨೩ ಮೂಷೀಗೆ ಮಹ್ಲೀ, ಏದೆರ್ ಮತ್ತು ಯೆರೇಮೋತ್ ಎಂಬ ಮೂವರು ಮಕ್ಕಳಿದ್ದರು.
Musis söner voro Maheli, Eder och Jeremot, tillsammans tre.
24 ೨೪ ಲೇವಿಯರ ಪಟ್ಟಿಯಲ್ಲಿ ಬರೆಯಲ್ಪಟ್ಟ ಹೆಸರುಗಳ ಪ್ರಕಾರ ಇವರೇ ಆಯಾ ಲೇವಿ ವರ್ಗಗಳ ಕುಟುಂಬದ ಪ್ರಧಾನರು. ಇವರಲ್ಲಿ ಇಪ್ಪತ್ತು ವರ್ಷಕ್ಕಿಂತ ಹೆಚ್ಚಿನ ವಯಸ್ಸುಳ್ಳವರು ಯೆಹೋವನ ಆಲಯದಲ್ಲಿ ಸೇವೆಮಾಡತಕ್ಕವರಾಗಿದ್ದರು.
Dessa voro Levi barn, efter deras familjer, huvudmännen för familjerna, så många av dem som inmönstrades, vart namn räknat särskilt, var person för sig, de som kunde förrätta sysslor vid tjänstgöringen i HERRENS hus, nämligen de som voro tjugu år gamla eller därutöver.
25 ೨೫ ಇಸ್ರಾಯೇಲಿನ ದೇವರಾದ ಯೆಹೋವನು, ತನ್ನ ಪ್ರಜೆಗಳಿಗೆ ವಿಶ್ರಾಂತಿಯನ್ನು ಅನುಗ್ರಹಿಸಿ, ಆತನು ಸದಾಕಾಲವೂ ಯೆರೂಸಲೇಮಿನಲ್ಲಿ ವಾಸಿಸುವವನಾದುದರಿಂದ,
Ty David sade: »HERREN, Israels Gud, har låtit sitt folk komma till ro, och han har nu sin boning i Jerusalem till evig tid;
26 ೨೬ ಲೇವಿಯರು ಇನ್ನು ಮುಂದೆ ಆತನ ಗುಡಾರವನ್ನೂ, ಆರಾಧನಾ ಸಾಮಗ್ರಿಗಳನ್ನೂ ಹೊರುವುದು ಅವಶ್ಯವಿಲ್ಲ ಎಂದು ದಾವೀದನು ಈ ಪ್ರಕಾರ ಆಜ್ಞೆ ವಿಧಿಸಿದನು.
därför behöva icke heller leviterna mer bära tabernaklet och alla redskap till tjänstgöringen därvid.»
27 ೨೭ ದಾವೀದನ ಈ ಕಡೇ ಆಜ್ಞೆಯ ಮೇರೆಗೆ ಲೇವಿಯರಲ್ಲಿ ಇಪ್ಪತ್ತು ವರ್ಷಕ್ಕಿಂತ ಹೆಚ್ಚಿನ ವಯಸ್ಸುಳ್ಳವರೆಲ್ಲರೂ ಪರಿಗಣಿಸಲ್ಪಟ್ಟರು.
(Enligt berättelsen om Davids sista tid räknades nämligen av Levi barn de som voro tjugu år gamla eller därutöver.)
28 ೨೮ ಅವರು ಆರೋನ್ಯರ ಕೈಕೆಳಗಿದ್ದುಕೊಂಡು ಯೆಹೋವನ ಆಲಯದ ಪರಿಚಾರಿಕೆಯನ್ನು ನಡೆಸುತ್ತಿದ್ದರು. ಅವರ ಕೆಲಸಗಳು ಯಾವುದೆಂದರೆ, ಅಂಗಳಗಳ ಕೋಣೆಗಳನ್ನು ಸ್ವಚ್ಛಮಾಡಿ ನೋಡಿಕೊಳ್ಳುವುದೂ, ದೇವಾಲಯಕ್ಕೆ ಸಂಬಂಧಪಟ್ಟವುಗಳನ್ನೆಲ್ಲಾ ಶುದ್ಧಮಾಡುವುದೂ,
De fingo i stället sin plats vid Arons söners sida för tjänstgöringen i HERRENS hus, i vad som rörde förgårdarna och kamrarna och reningen av allt heligt och sysslorna vid tjänstgöringen i Guds hus,
29 ೨೯ ದೇವಾಲಯದಲ್ಲಿ ಸೇವೆಮಾಡುವುದೂ, ನೈವೇದ್ಯದ ಮೀಸಲು ರೊಟ್ಟಿ, ನೈವೇದ್ಯಕ್ಕೆ ಬೇಕಾದ ಗೋದಿಹಿಟ್ಟು, ಹುಳಿಯಿಲ್ಲದ ರೊಟ್ಟಿ, ಕಬ್ಬಿಣದ ಹಂಚಿನಲ್ಲಿ ಸುಟ್ಟ ರೊಟ್ಟಿ, ಎಣ್ಣೆಯಿಂದ ನೆನೆದ ಭಕ್ಷ್ಯಗಳು ಇವುಗಳನ್ನು ಒದಗಿಸುವುದೂ, ಸೇರು, ಅಳತೆಗೋಲುಗಳನ್ನು ಪರೀಕ್ಷಿಸುವುದೂ,
vare sig det gällde skådebröden eller det fina mjölet till spisoffret eller de osyrade tunnkakorna eller plåtarna eller det hopknådade mjölet, eller något mått och mål,
30 ೩೦ ಪ್ರತಿದಿನ ಪ್ರಾತಃಕಾಲ ಸಾಯಂಕಾಲಗಳಲ್ಲಿ ನಿಯಮಿತ ಸಂಖ್ಯೆಗೆ ಸರಿಯಾಗಿ
eller att var morgon göra tjänst genom att tacka och lova HERREN, och likaledes var afton,
31 ೩೧ ಸಬ್ಬತ್ ದಿನ, ಅಮಾವಾಸ್ಯೆ, ಜಾತ್ರೆ ಇವುಗಳಲ್ಲಿ ಯೆಹೋವನ ಮುಂದೆ ತಪ್ಪದೆ ನಡೆಯುವ ಸರ್ವಾಂಗಹೋಮ, ಸಮರ್ಪಣೆಯ ಹೊತ್ತಿನಲ್ಲಿ ಯೆಹೋವನಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸುವುದೂ ಇವೇ.
eller att offra alla brännoffer åt HERREN på sabbaterna, vid nymånaderna och vid högtiderna, till bestämt antal och såsom det var föreskrivet för dem, beständigt, inför HERRENS ansikte.
32 ೩೨ ಹೀಗೆ ಅವರು ತಮ್ಮ ಸಹೋದರನಾದ ಆರೋನನ ಸಹಾಯಕರಾಗಿದ್ದು ದೇವದರ್ಶನದ ಗುಡಾರವನ್ನೂ, ಪರಿಶುದ್ಧವಾದ ಎಲ್ಲಾ ವಸ್ತುಗಳನ್ನು ನೋಡಿಕೊಳ್ಳುವುದೇ ಯೆಹೋವನ ಆಲಯದಲ್ಲಿ ಮಾಡತಕ್ಕ ಕರ್ತವ್ಯಗಳು.
De skulle iakttaga vad som var att iakttaga vid uppenbarelsetältet och vid det heliga, vad Arons söner, deras bröder, hade att iakttaga vid tjänstgöringen i HERRENS hus.