< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 24 >
1 ೧ ಆರೋನನ ಸಂತಾನದವರೂ ವರ್ಗಗಳಾಗಿ ವಿಭಾಗಿಸಲ್ಪಟ್ಟರು. ಆರೋನನ ಮಕ್ಕಳು ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವರು.
[司祭班次]亞郎的子孫也有他們的班次。亞郎的兒子:納達布、阿彼胡、厄肋阿匝爾和依塔瑪爾。
2 ೨ ನಾದಾಬ್ ಮತ್ತು ಅಬೀಹೂ ಎಂಬುವರು ಮಕ್ಕಳಿಲ್ಲದೆ ತಮ್ಮ ತಂದೆಗಿಂತ ಮೊದಲೇ ಸತ್ತು ಹೋದುದರಿಂದ ಎಲ್ಲಾಜಾರನೂ, ಈತಾಮಾರನೂ ಯಾಜಕ ಉದ್ಯೋಗವನ್ನು ನಡೆಸುತ್ತಿದ್ದರು.
納達布和阿彼胡在他們父親以前死了,又沒有兒子,所以厄肋阿匝爾和依塔瑪爾作了司祭。
3 ೩ ದಾವೀದನು ಎಲ್ಲಾಜಾರನ ಸಂತಾನದವನಾದ ಚಾದೋಕನೂ, ಈತಾಮಾರನ ಸಂತಾನದವನಾದ ಅಹೀಮೆಲೆಕನು ಯಾಜಕರನ್ನು ಸರದಿಯ ಮೇಲೆ ಸೇವೆಮಾಡತಕ್ಕ ವರ್ಗಗಳನ್ನಾಗಿ ವಿಭಾಗಿಸಿದರು.
達味和厄肋阿匝爾的後裔匝多克,並依塔瑪爾的後裔阿希默肋客,將他們的同族兄弟分開班次,按班次服役。
4 ೪ ಎಲ್ಲಾಜಾರನ ಸಂತಾನದ ಕುಟುಂಬ ಪ್ರಧಾನರು ಈತಾಮಾರ್ಯರಿಗಿಂತ ಹೆಚ್ಚೆಂದು ಕಂಡು ಬಂದುದರಿಂದ ಎಲ್ಲಾಜಾರರ ಕುಟುಂಬಗಳನ್ನು ಪ್ರಧಾನರ ಲೆಕ್ಕದ ಪ್ರಕಾರ ಹದಿನಾರು ವರ್ಗಗಳನ್ನಾಗಿಯೂ, ಈತಾಮಾರ್ಯರ ಕುಟುಂಬಗಳನ್ನು ಎಂಟು ವರ್ಗಗಳನ್ನಾಗಿಯೂ ಮಾಡಿ,
以後發現厄肋阿匝爾的子孫中為首領的人,多於依塔瑪爾的子孫,遂將他們如此劃分:厄肋阿匝爾的後裔中族長十六人,依塔瑪爾的後裔中族長八人,
5 ೫ ಈ ವರ್ಗಗಳ ವಿಷಯವಾಗಿ ಚೀಟು ಹಾಕಿದರು. ಎಲ್ಲಾಜಾರನ ಸಂತಾನದವರಲ್ಲಿ ಹೇಗೋ ಹಾಗೆಯೇ ಈತಾಮಾರನ ಸಂತಾನದವರಲ್ಲಿಯೂ ಪವಿತ್ರಾಲಯದ ಅಧಿಪತಿಗಳು, ದೈವಿಕ ಕಾರ್ಯಗಳ ಅಧ್ಯಕ್ಷರೂ ಇರುವುದರಿಂದ ಉಭಯ ಸಂತಾನದವರು ಸಮಾನ ಸ್ಥಾನದವರಾಗಿದ್ದರು.
以抽籤方式將他們分開,彼此同列,因為在厄肋阿匝爾子孫中和依塔瑪爾子孫中,都有在聖所作首領和天主面前作首領的。
6 ೬ ನೆತನೇಲನ ಮಗನಾದ ಶೆಮಾಯನೆಂಬ ಲೇವಿಯ ಲೇಖಕನು ಅರಸನ ಮುಂದೆಯೂ, ಅಧಿಪತಿಗಳು, ಯಾಜಕನಾದ ಚಾದೋಕ್, ಎಬ್ಯಾತಾರನ ಮಗನಾದ ಅಹೀಮೆಲೆಕ್, ಯಾಜಕರ ಮತ್ತು ಲೇವಿಯರ ಕುಟುಂಬ ಪ್ರಧಾನರು ಇವರ ಮುಂದೆಯೂ ಆ ವರ್ಗಗಳ ಪಟ್ಟಿಯನ್ನು ಬರೆದನು. ಎಲ್ಲಾಜಾರನ ಒಂದು ವರ್ಗದವರಾದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವಿಸಬೇಕೆಂದು ನೇಮಿಸಿ ಎಲ್ಲಾ ವರ್ಗಗಳ ಸರದಿಯನ್ನು ಚೀಟಿನಿಂದಲೇ ಗೊತ್ತುಮಾಡಿದರು.
肋未人乃塔乃耳的兒子舍瑪雅書記在君王、首領、司祭匝多克、厄彼雅塔爾的兒子阿希默肋客和眾司悸及肋未族長前登記:一籤為厄肋阿匝爾家族,一籤為依塔瑪爾家族。
7 ೭ ಮೊದಲನೆಯ ಚೀಟು ಯೆಹೋಯಾರೀಬನಿಗೆ, ಎರಡನೆಯದು ಯೆದಾಯನಿಗೆ,
中籤的:首為約雅黎布,次為耶達雅,
8 ೮ ಮೂರನೆಯದು ಹಾರೀಮನಿಗೆ, ನಾಲ್ಕನೆಯದು ಸೆಯೋರೀಮನಿಗೆ,
三為哈陵,四為色敖陵,
9 ೯ ಐದನೆಯದು ಮಲ್ಕೀಯನಿಗೆ, ಆರನೆಯದು ಮಿಯ್ಯಾಮೀನನಿಗೆ,
五為瑪耳基雅,六為米雅明,
10 ೧೦ ಏಳನೆಯದು ಹಕ್ಕೋಚನಿಗೆ, ಎಂಟನೆಯದು ಅಬೀಯನಿಗೆ,
七為哈科茲,八為阿彼雅,
11 ೧೧ ಒಂಬತ್ತನೆಯದು ಯೆಷೂವನಿಗೆ, ಹತ್ತನೆಯದು ಶೆಕನ್ಯನಿಗೆ,
九為耶叔亞,十為舍加尼雅,
12 ೧೨ ಹನ್ನೊಂದನೆಯದು ಎಲ್ಯಾಷೀಬನಿಗೆ, ಹನ್ನೆರಡನೆಯದು ಯಾಕೀಮನಿಗೆ,
十一為厄肋雅史布,十二為雅肯,
13 ೧೩ ಹದಿಮೂರನೆಯದು ಹುಪ್ಪನಿಗೆ, ಹದಿನಾಲ್ಕನೆಯದು ಎಷೆಬಾಬನಿಗೆ,
十三為胡帕,十四為耶舍貝阿布,
14 ೧೪ ಹದಿನೈದನೆಯದು ಬಿಲ್ಗನಿಗೆ, ಹದಿನಾರನೆಯದು ಇಮ್ಮೇರನಿಗೆ,
十五為彼耳加,十六為依默爾,
15 ೧೫ ಹದಿನೇಳನೆಯದು ಹೇಜೀರನಿಗೆ, ಹದಿನೆಂಟನೆಯದು ಹಪ್ಪಿಚ್ಚೇಚನಿಗೆ,
十七為赫齊爾,十八為哈丕責茲,
16 ೧೬ ಹತ್ತೊಂಬತ್ತನೆಯದು ಪೆತಹ್ಯನಿಗೆ, ಇಪ್ಪತ್ತನೆಯದು ಯೆಹೆಜ್ಕೇಲನಿಗೆ,
十九為培塔希雅,二十為耶赫次刻耳,
17 ೧೭ ಇಪ್ಪತ್ತೊಂದನೆಯದು ಯಾಕೀನನಿಗೆ, ಇಪ್ಪತ್ತೆರಡನೆಯದು ಗಾಮೂಲನಿಗೆ,
二十一為雅津,二十二為加慕耳,
18 ೧೮ ಇಪ್ಪತ್ತ ಮೂರನೆಯದು ದೆಲಾಯನಿಗೆ, ಇಪ್ಪತ್ತ ನಾಲ್ಕನೆಯದು ಮಾಜ್ಯನಿಗೆ ಬಿದ್ದಿತು.
二十三為德拉雅,二十四為瑪阿齊雅。
19 ೧೯ ಆರೋನ್ಯರು ಈ ವರ್ಗ ಕ್ರಮದಿಂದ ಯೆಹೋವನ ಆಲಯಕ್ಕೆ ಬಂದು ಇಸ್ರಾಯೇಲಿನ ದೇವರಾದ ಯೆಹೋವನಿಗೆ ಲೇವಿಯರ ಮೂಲಪುರುಷನಾದ ಆರೋನನ ಮುಖಾಂತರವಾಗಿ ನೇಮಿಸಿದ ಸೇವೆಯನ್ನು ನಡೆಸತಕ್ಕದ್ದು.
這就是他們進入上主殿內,按照上主以色列的天主吩咐他們祖先亞郎所制定的規律,供職的班次。[肋未班次補遺]
20 ೨೦ ಉಳಿದ ಲೇವಿಯರ ಪಟ್ಟಿ. ಅಮ್ರಾಮನ ಸಂತಾನದವರಾದ ಶೂಬಾಯೇಲನ ಕುಟುಂಬದವರಲ್ಲಿ ಯೆಹ್ದೆಯಾಹನು.
肋未的其餘後裔中,有阿默蘭的子孫叔巴耳;叔巴耳的子孫中,有耶赫狄雅。
21 ೨೧ ರೆಹಬ್ಯನ ಸಂತಾನದವರಲ್ಲಿ ಇಷ್ಷೀಯನೂ,
至於勒哈彼雅:勒哈彼雅子孫中,為首的是依史雅。
22 ೨೨ ಇಚ್ಹಾರನ ಸಂತಾನದ ಶೆಲೋಮೋತನ ಕುಟುಂಬದವರಲ್ಲಿ ಯಹತನೂ ಪ್ರಧಾನರು.
依茲哈爾的子孫中,有舍羅摩特;舍羅摩特子孫中,有雅哈特。
23 ೨೩ ಹೆಬ್ರೋನನ ಸಂತಾನದವರಲ್ಲಿ ಯೆರೀಯನು ಪ್ರಧಾನನು, ಅಮರ್ಯನು ಎರಡನೆಯವನು, ಯಹಜೀಯೇಲನು, ಮೂರನೆಯವನು ಮತ್ತು ಯೆಕಮ್ಮಾಮನು ನಾಲ್ಕನೆಯವನು,
赫貝龍的子孫中,為首的是耶黎雅,次為阿瑪黎雅,三為烏齊耳,四為耶卡默罕。
24 ೨೪ ಉಜ್ಜೀಯೇಲನ ಮಗನಾದ ಮೀಕನ ಸಂತಾನದವರಲ್ಲಿ ಶಾಮೀರನೂ,
烏齊耳的子孫中,有米加,米加的子孫中,有沙米爾。
25 ೨೫ ಮೀಕನ ತಮ್ಮನಾದ ಇಷ್ಷೀಯನ ಸಂತಾನದವರಲ್ಲಿ ಜೆಕರ್ಯನು ಪ್ರಧಾನರು.
米加的弟兄:依史雅;依史雅的子孫中,有則加黎雅。
26 ೨೬ ಮೆರಾರೀಯ ಮಕ್ಕಳು ಮಹ್ಲೀ ಮತ್ತು ಮೂಷೀ ಎಂಬುವವರು. ಅವನ ಮತ್ತೊಬ್ಬ ಮಗನಾದ ಯಾಜ್ಯನ ವಂಶದವನು ಬೆನೋ.
默辣黎的子孫中,有雅哈齊雅的兒子巴尼。
27 ೨೭ ಮೆರಾರೀಯ ಸಂತಾನದವರಲ್ಲಿ ಯಾಜ್ಯ, ಬೆನೋ, ಶೋಹಮ್, ಜಕ್ಕೂರ್ ಮತ್ತು ಇಬ್ರೀ ಇವರೇ.
默辣黎的子孫中,有雅哈齊雅的兒子巴尼、芍罕、匝雇爾和依貝黎瑪。
28 ೨೮ ಮಹ್ಲೀಯನ ಮಗನಾದ ಎಲ್ಲಾಜಾರನೂ ಮಕ್ಕಳಿಲ್ಲದೆ ಸತ್ತನು.
瑪赫里的兒子:厄肋阿匝爾和克士;厄肋阿匝爾沒有兒子。
29 ೨೯ ಕೀಷನಿಂದ ಯೆರಹ್ಮೇಲನು ಹುಟ್ಟಿದನು.
至於克士:克士的兒子是耶辣默耳。
30 ೩೦ ಮೂಷೀಯನ ಮಕ್ಕಳು ಮಹ್ಲೀ, ಏದೆರ್ ಮತ್ತು ಯೆರೀಮೋತ್ ಎಂಬುವವರು.
慕史的兒子:瑪赫里、厄德爾和耶黎摩特。這些人按照他們的家族,都是肋末的後裔。
31 ೩೧ ಇವರೆಲ್ಲಾ ಲೇವಿ ಸಂತಾನದವರು. ಇವರ ಕುಟುಂಬಗಳಲ್ಲಿ ಎಲ್ಲಾ ಹಿರಿಯರೂ, ಕಿರಿಯರೂ ತಮ್ಮ ಕುಲ ಬಂಧುಗಳಾದ ಆರೋನ್ಯರಂತೆ ಅರಸನಾದ ದಾವೀದ ಚಾದೋಕ್ ಅಹೀಮೆಲೆಕ್ ಇವರ ಮುಂದೆಯೂ, ಯಾಜಕರ ಮತ್ತು ಲೇವಿಯರ ಕುಟುಂಬ ಪ್ರಧಾನರ ಮುಂದೆಯೂ, ಚೀಟಿನಿಂದ ತಮ್ಮಲ್ಲಿ ಸರದಿಗಳನ್ನು ನೇಮಿಸಿಕೊಂಡರು.
他們在達味君王與匝多克、阿希默肋客,並司祭及肋末人的族長面前,像他們的弟兄亞郎的子孫,族長與年幼的兄弟,都一樣抽了籤。