< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 25 >
1 ೧ ಆಮೇಲೆ ದಾವೀದನು ಮತ್ತು ಗುಡಾರದ ಸೇವೆ ಸಲ್ಲಿಸುತ್ತಿದ್ದ ಪ್ರಧಾನರು ಆಸಾಫ್ಯ, ಹೇಮಾನ್ಯ ಮತ್ತು ಯೆದುತೂನ್ಯರ ಮಕ್ಕಳನ್ನು ಸೇವೆ ಮಾಡುವುದಕ್ಕೋಸ್ಕರ ಆಯ್ಕೆಮಾಡಿದರು. ಇವರು ಕಿನ್ನರಿ, ಸ್ವರಮಂಡಲ, ತಾಳ, ಇವುಗಳನ್ನು ನುಡಿಸುತ್ತಾ, ಪ್ರವಾದಿಸುತ್ತ, ಗಾಯನಮಾಡುತ್ತಿದ್ದರು. ಆ ಸೇವೆಯನ್ನು ಮಾಡತಕ್ಕ ಪುರುಷರ ಪಟ್ಟಿ,
다윗이 군대 장관들로 더불어 아삽과 헤만과 여두둔의 자손 중에서 구별하여 섬기게 하되 수금과 비파와 제금을 잡아 신령한 노래를 하게 하였으니 그 직무대로 일하는 자의 수효가 이러하니라
2 ೨ ಆಸಾಫ್ಯರಲ್ಲಿ ಜಕ್ಕೂರ್, ಯೋಸೇಫ್, ನೆತನ್ಯ, ಅಶರೇಲ ಎಂಬವರು. ಇವರು ಅರಮನೆಯ ಗಾಯಕನಾದ ಆಸಾಫನ ಸಹಾಯಕರು.
아삽의 아들 중 삭굴과 요셉과 느다냐와 아사렐라니 이 아삽의 아들들이 아삽의 수하에 속하여 왕의 명령을 좇아 신령한 노래를 하며
3 ೩ ಯೆದುತೂನ್ಯರಲ್ಲಿ ಗೆದಲ್ಯ, ಚೆರೀ, ಯೆಶಾಯ, ಶಿಮ್ಮೀ, ಹಷಬ್ಯ, ಮತ್ತಿತ್ಯ ಇವರೇ. ಕಿನ್ನರಿಯನ್ನು ನುಡಿಸುತ್ತಾ ಪರವಶರಾಗಿ ಯೆಹೋವನ ಕೀರ್ತನೆ ಮಾಡುವ ತಮ್ಮ ತಂದೆಯಾದ ಯೆದುತೂನ್ಯನಿಗೆ ಈ ಆರು ಜನರೂ ಸಹಾಯಕರಾಗಿದ್ದರು.
여두둔에게 이르러는 그 아들 그달리야와 스리와 여사야와 하사뱌와 맛디디야 여섯 사람이니 그 아비 여두둔의 수하에 속하여 수금을 잡아 신령한 노래를 하며 여호와께 감사하며 찬양하며
4 ೪ ಹೇಮಾನ್ಯರಲ್ಲಿ ಬುಕ್ಕೀಯ, ಮತ್ತನ್ಯ, ಉಜ್ಜೀಯೇಲ್, ಶೆಬೂವೇಲ್, ಯೆರೀಮೋತ್, ಹನನ್ಯ, ಹನಾನೀ, ಎಲೀಯಾತ, ಗಿದ್ದಲ್ತಿ, ರೋಮಮ್ತಿಯೆಜೆರ್, ಯೊಷ್ಬೆಕಾಷ, ಮಲ್ಲೋತಿ, ಹೋತೀರ್ ಮತ್ತು ಮಹಜೀಯೋತ್.
헤만에게 이르러는 그 아들 북기야와 맛다냐와 웃시엘과 스브엘과 여리못과 하나냐와 하나니와 엘리아다와 깃달디와 로암디에셀과 요스브가사와 말로디와 호딜과 마하시옷이라
5 ೫ ಇವರೆಲ್ಲರು ಅರಸನ ದರ್ಶಿಯಾದ ಹೇಮಾನನ ಮಕ್ಕಳು. ದೇವರು ಹೇಮಾನನಿಗೆ, “ನೀನು ಅಭಿವೃದ್ಧಿ ಹೊಂದುವಹಾಗೆ ಮಾಡುವೆನು” ಎಂಬುದಾಗಿ ವಾಗ್ದಾನ ಮಾಡಿದ್ದನು. ಅದರಂತೆಯೇ ಆತನು ಅವನಿಗೆ ಹದಿನಾಲ್ಕು ಗಂಡುಮಕ್ಕಳನ್ನೂ, ಮೂರು ಹೆಣ್ಣುಮಕ್ಕಳನ್ನೂ ದಯಪಾಲಿಸಿದನು.
이는 다 헤만의 아들들이니 나팔을 부는 자며 헤만은 하나님의 말씀을 받드는 왕의 선견자라 하나님이 헤만에게 열 네 아들과 세 딸을 주셨더라
6 ೬ ದೇವರಾದ ಯೆಹೋವನ ಆಲಯದಲ್ಲಿ ಆರಾಧನೆ ನಡೆಯುತ್ತಿರುವಾಗ ಇವರೆಲ್ಲರೂ ತಮ್ಮ ತಂದೆಯ ಕೈಕೆಳಗಿದ್ದುಕೊಂಡು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಗಾಯನ ಮಾಡುತ್ತಿದ್ದರು. ಆಸಾಫ ಯೆದುತೂನ್ ಹೇಮಾನರು ಅರಸನ ಸೇವೆಯಲ್ಲಿದ್ದರು.
이들이 다 그 아비의 수하에 속하여 제금과 비파와 수금을 잡아 여호와 하나님의 전에서 노래하여 섬겼으며 아삽과 여두둔과 헤만은 왕의 수하에 속하였으니
7 ೭ ಇವರು ಯೆಹೋವನ ಕೀರ್ತನೆಗಳನ್ನು ಕಲಿತ ಇವರ ಸಹೋದರರು ಒಟ್ಟು ಇನ್ನೂರ ಎಂಭತ್ತೆಂಟು ಜನರು. ಇವರೆಲ್ಲರೂ ಗಾಯಕ ಪ್ರವೀಣರಾಗಿದ್ದರು.
저희와 모든 형제 곧 여호와 찬송하기를 배워 익숙한 자의 수효가 이백 팔십 팔인이라
8 ೮ ಇವರಲ್ಲಿ ಹಿರಿಯರು, ಕಿರಿಯರು, ಗುರುಶಿಷ್ಯರೂ ಕೂಡಿಕೊಂಡು ಚೀಟಿನಿಂದ ತಮ್ಮ ಸೇವಾ ಕ್ರಮವನ್ನು ಗೊತ್ತುಮಾಡಿಕೊಂಡರು.
이 무리의 큰 자나 작은 자나 스승이나 제자를 무론하고 일례로 제비뽑아 직임을 얻었으니
9 ೯ ಚೀಟಿನ ಪ್ರಕಾರವಾಗಿ, ಮೊದಲನೆಯದಾಗಿ ಆಸಾಫ್ಯನಾದ ಯೋಸೇಫನು. ಎರಡನೆಯವನು ಗೆದಲ್ಯ. ಇವನೂ ಇವನ ಸಹೋದರರೂ, ಮಕ್ಕಳು ಒಟ್ಟು ಹನ್ನೆರಡು ಜನರು.
첫째로 제비 뽑힌 자는 아삽의 아들 중 요셉이요 둘째는 그달리야니 저와 그 형제와 아들 십이인이요
10 ೧೦ ಮೂರನೆಯವನು ಜಕ್ಕೂರ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
세째는 삭굴이니 그 아들과 형제와 십 이인이요
11 ೧೧ ನಾಲ್ಕನೆಯವನು ಇಚ್ರೀ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
네째는 이스리니 그 아들과 형제와 십 이인이요
12 ೧೨ ಐದನೆಯವನು ನೆತನ್ಯ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
다섯째는 느다냐니 그 아들과 형제와 십 이인이요
13 ೧೩ ಆರನೆಯವನು ಬುಕ್ಕೀಯ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
여섯째는 북기야니 그 아들과 형제와 십 이인이요
14 ೧೪ ಏಳನೇಯವನು ಯೆಸರೇಲ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
일곱째는 여사렐라니 그 아들과 형제와 십 이인이요
15 ೧೫ ಎಂಟನೆಯವನು ಯೆಶಾಯ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
여덟째는 여사야니 그 아들과 형제와 십이인이요
16 ೧೬ ಒಂಬತ್ತನೆಯದು ಮತ್ತನ್ಯ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
아홉째는 맛다냐니 그 아들과 형제와 십 이인이요
17 ೧೭ ಹತ್ತನೆಯವನು ಶಿಮ್ಮೀ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
열째는 시므이니 그 아들과 형제와 십이인이요
18 ೧೮ ಹನ್ನೊಂದನೆಯವನು ಅಜರೇಲ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
열 한째는 아사렐이니 그 아들과 형제와 십 이인이요
19 ೧೯ ಹನ್ನೆರಡನೆಯವನು ಹಷಬ್ಯ. ಇವನೂ ಇವನ ಸಹೋದರರೂ ಮಕ್ಕಳು ಒಟ್ಟು ಹನ್ನೆರಡು ಜನರು.
열 둘째는 하사뱌니 그 아들과 형제와 십 이인이요
20 ೨೦ ಹದಿಮೂರನೆಯದು ಶೂಬಾಯೇಲ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
열 세째는 수바엘이니 그 아들과 형제와 십 이인이요
21 ೨೧ ಹದಿನಾಲ್ಕನೆಯವನು ಮತ್ತಿತ್ಯ. ಇವನೂ, ಇವನ ಸಹೋದರರೂ ಮತ್ತು ಮಕ್ಕಳೂ ಒಟ್ಟು ಹನ್ನೆರಡು ಜನರು.
열 네째는 맛디디야니 그 아들과 형제와 십 이인이요
22 ೨೨ ಹದಿನೈದನೆಯವನು ಯೆರೆಮೋತ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
열 다섯째는 여레못이니 그 아들과 형제와 십 이인이요
23 ೨೩ ಹದಿನಾರನೆಯವನು ಹನನ್ಯ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
열 여섯째는 하나냐니 그 아들과 형제와 십 이인이요
24 ೨೪ ಹದಿನೇಳನೆಯವನು ಯೊಷ್ಬೆಕಾಷ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
열 일곱째는 요스브가사니 그 아들과 형제와 십 이인이요
25 ೨೫ ಹದಿನೆಂಟನೆಯವನು ಹನಾನೀ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
열 여덟째는 하나니니 그 아들과 형제와 십 이인이요
26 ೨೬ ಹತ್ತೊಂಬತ್ತನೆಯವನು ಮಲ್ಲೋತಿ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
열 아홉째는 말로디니 그 아들과 형제와 십 이인이요
27 ೨೭ ಇಪ್ಪತ್ತನೆಯವನು ಎಲೀಯಾತ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
스무째는 엘리아다니 그 아들과 형제와 십 이인이요
28 ೨೮ ಇಪ್ಪತ್ತೊಂದನೆಯವನು ಹೋತೀರ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
스물 한째는 호딜이니 그 아들과 형제와 십 이인이요
29 ೨೯ ಇಪ್ಪತ್ತೆರಡನೆಯವನು ಗಿದ್ದಲ್ತಿ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
스물 둘째는 깃달디니 그 아들과 형제와 십 이인이요
30 ೩೦ ಇಪ್ಪತ್ತಮೂರನೆಯವನು ಮಹಜೀಯೋತ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
스물 세째는 마하시옷이니 그 아들과 형제와 십 이인이요
31 ೩೧ ಇಪ್ಪತ್ತನಾಲ್ಕನೆಯವನು ರೋಮಮ್ತಿಯೆಜೆರ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
스물 네째는 로암디에셀이니 그 아들과 형제와 십 이인이었더라