< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 26 >

1 ದೇವಾಲಯದ ದ್ವಾರಪಾಲಕ ವರ್ಗಗಳ ವಿಷಯ: ಕೋರಹೀಯನಾದ ಮೆಷೆಲೆಮ್ಯ ಎಂಬವನು, ಕೊರೇಯನ ಮಗ ಹಾಗೂ ಆಸಾಫನ ಮೊಮ್ಮಗ.
दरबानों के फ़रीक़ यह थे: क़ुरहियों में मसलमियाह बिन कूरे, जो बनी आसफ़ में से था;
2 ಮೆಷೆಲೆಮ್ಯನ ಮಕ್ಕಳಲ್ಲಿ ಜೆಕೆರ್ಯನು ಚೊಚ್ಚಲ ಮಗ, ಎದೀಯಯೇಲನು ಎರಡನೆಯವನು, ಜೆಬೆದ್ಯನು ಮೂರನೆಯವನು, ಯೆತ್ನಿಯೇಲನು ನಾಲ್ಕನೆಯವನು.
और मसलमियाह के यहाँ बेटे थे: ज़करियाह पहलौठा, यदी'एल दूसरा, जबदियाह तीसरा, यतनीएल चौथा,
3 ಏಲಾಮನು ಐದನೆಯವನು, ಯೆಹೋಹಾನಾನನು ಆರನೆಯವನು, ಎಲ್ಯೆಹೋಯೇನೈ ಏಳನೆಯವನು.
ऐलाम पाँचवाँ, यहूहानान छटा, इलीहू'ऐनी सातवाँ था।
4 ಓಬೇದೆದೋಮನ ಮಕ್ಕಳಲ್ಲಿ ಶೆಮಾಯನು ಚೊಚ್ಚಲನು, ಯೆಹೋಜಾಬಾದನು ಎರಡನೆಯವನು. ಯೋವಾಹನು ಮೂರನೆಯವನು, ಸಾಕಾರನು ನಾಲ್ಕನೆಯವನು, ನೆತನೇಲನು ಐದನೆಯವನು,
और 'ओबेदअदोम के यहाँ बेटे थे: समायाह पहलौठा, यहूज़बा'द दूसरा, यूआख़ तीसरा, और सकार चौथा, और नतनीएल पाँचवाँ,
5 ಅಮ್ಮೀಯೇಲನು ಆರನೆಯವನು, ಇಸ್ಸಾಕಾರನು ಏಳನೆಯವನು, ಪೆಯುಲ್ಲೆತೈಯು ಎಂಟನೆಯವನು. ಓಬೇದೆದೋಮನು ದೇವರ ಆಶೀರ್ವಾದಕ್ಕೆ ಪಾತ್ರನಾಗಿದ್ದನಷ್ಟೆ.
'अम्मीएल छटा, इश्कार सातवाँ, फ़'उलती आठवाँ; क्यूँकि ख़ुदा ने उसे बरकत बख़्शी थी।
6 ಅವನ ಮಗನಾದ ಶೆಮಾಯನ ಮಕ್ಕಳು ಗೋತ್ರಪ್ರಧಾನರೂ ಮಹಾಸಮರ್ಥರೂ ಆಗಿದ್ದರು.
उसके बेटे समायाह के यहाँ भी बेटे पैदा हुए, जो अपने आबाई खानदान पर सरदारी करते थे क्यूँकि वह ताक़तवर सूर्मा थे।
7 ಅವರು ಯಾರೆಂದರೆ: ಒತ್ನೀ, ರೆಫಾಯೇಲ್, ಓಬೇದ್ ಮತ್ತು ಎಲ್ಜಾಬಾದ್. ಇವರೂ ಬಹುಸಮರ್ಥರಾದ ಎಲೀಹು, ಸೆಮಕ್ಯ ಎಂಬುವವರು ಇವರ ಸಹೋದರರು.
समायाह के बेटे: उतनी और रफ़ाएल और 'ओबेद और इलज़बा'द, जिनके भाई इलीहू और समाकियाह सूर्मा थे।
8 ಇವರೆಲ್ಲರೂ ಓಬೇದೆದೋಮನ ಸಂತಾನದವರು. ಇವರು, ಇವರ ಮಕ್ಕಳು ಸಮರ್ಥರೂ, ಸೇವೆಯಲ್ಲಿ ಗಟ್ಟಿಗರೂ ಆಗಿದ್ದವರೂ. ಇವರೂ ಇವರ ಸಹೋದರರೂ ಕೂಡಿ ಅರವತ್ತೆರಡು ಜನರು.
यह सब 'ओबेदअदोम की औलाद में से थे। वह और उनके बेटे और उनके भाई ख़िदमत के लिए ताक़त के 'ऐतबार से क़ाबिल आदमी थे, यूँ 'ओबेदअदोमी बासठ थे।
9 ಮೆಷೆಲೆಮ್ಯನ ಮಕ್ಕಳೂ ಮತ್ತು ಸಹೋದರರೂ ಹದಿನೆಂಟು ಜನರು. ಇವರೂ ಸಮರ್ಥರಾಗಿದ್ದರು.
मसलमियाह के बेटे और भाई अठारह सूर्मा थे।
10 ೧೦ ಮೆರಾರೀಯನಾದ ಹೋಸನಿಗೂ ಮಕ್ಕಳಿದ್ದರು; ಅವರಲ್ಲಿ ಶಿಮ್ರಿ ಎಂಬುವವನು ಪ್ರಧಾನನಾಗಿದ್ದನು. ಇವನು ಚೊಚ್ಚಲ ಮಗನಲ್ಲದಿದ್ದರೂ ಅವನ ತಂದೆಯು ಅವನನ್ನೇ ಪ್ರಧಾನನನ್ನಾಗಿ ನೇಮಿಸಿದನು.
और बनी मिरारी में से हूसा के हाँ बेटे थे: सिमरी सरदार था वह पहलौठा तो न था, लेकिन उसके बाप ने उसे सरदार बना दिया था,
11 ೧೧ ಹಿಲ್ಕೀಯನು ಎರಡನೆಯವನು, ಟೆಬಲ್ಯನು ಮೂರನೆಯವನು, ಜೆಕರ್ಯನು ನಾಲ್ಕನೆಯವನು. ಹೋಸನ ಮಕ್ಕಳು ಸಹೋದರರೂ ಒಟ್ಟಿಗೆ ಹದಿಮೂರು ಜನರು.
दूसरा खिलक़ियाह, तीसरा तबलयाह, चौथा ज़करियाह; हूसा के सब बेटे और भाई तेरह थे।
12 ೧೨ ಈ ದ್ವಾರಪಾಲಕರ ವರ್ಗಗಳು ಪ್ರಧಾನಪುರುಷರು ತಮ್ಮ ಕುಲಬಂಧುಗಳಂತೆ ಯೆಹೋವನ ಆಲಯದಲ್ಲಿ ಸೇವೆಮಾಡುವವರಾಗಿದ್ದರು.
इन्ही में से या'नी सरदारों में से दरबानों के फ़रीक़ थे, जिनका ज़िम्मा अपने भाइयों की तरह ख़ुदावन्द के घर में ख़िदमत करने का था।
13 ೧೩ ಅವರು ಕನಿಷ್ಠ ಕುಟುಂಬವೆಂದೂ, ಶ್ರೇಷ್ಠ ಕುಟುಂಬವೆಂದೂ ವ್ಯತ್ಯಾಸ ಮಾಡದೆ ತಮ್ಮಲ್ಲಿ ಪ್ರತಿಯೊಬ್ಬನು ಕಾಯತಕ್ಕ ಹೆಬ್ಬಾಗಿಲುಗಳನ್ನು ಚೀಟಿನಿಂದಲೇ ಗೊತ್ತುಮಾಡಿಕೊಂಡರು.
और उन्होंने क्या छोटे क्या बड़े, अपने अपने आबाई ख़ान्दान के मुताबिक़ हर एक फाटक के लिए पर्ची डाला।
14 ೧೪ ಪೂರ್ವ ದಿಕ್ಕಿನ ಕಾವಲಿಗೆ ಚೀಟು ಶೆಲೆಮ್ಯನ ಹೆಸರಿಗೆ ಬಿದ್ದಿತು. ಬಹು ವಿವೇಕವುಳ್ಳ ಸಲಹೆಗಾರನಾಗಿರುವ ಅವನ ಮಗನಾದ ಜೆಕೆರ್ಯನ ಹೆಸರಿಗೆ ಉತ್ತರ ದಿಕ್ಕಿನ ಚೀಟು ಬಿದ್ದಿತು.
पूरब की तरफ़ का पर्ची सलमियाह के नाम निकला। फिर उसके बेटे ज़करियाह के लिए भी, जो 'अक़्लमन्द सलाहकार था, पर्चा डाला गया और उसका पर्चा शिमाल की तरफ़ का निकला।
15 ೧೫ ಓಬೇದೆದೋಮನಿಗೆ ದಕ್ಷಿಣದ ಬಾಗಿಲು, ಅವನ ಮಕ್ಕಳಿಗೆ ಉಗ್ರಾಣ ಮಂದಿರವೂ,
'ओबेदअदोम के लिए जुनूब की तरफ़ का था, और उसके बेटों के लिए ग़ल्लाखाना का।
16 ೧೬ ಶುಪ್ಪೀಮ್ ಮತ್ತು ಹೋಸ ಎಂಬುವರಿಗೆ ಪಶ್ಚಿಮದ ಬಾಗಿಲೂ ಅದರ ಸಮೀಪದಲ್ಲಿರುವ ಶಲ್ಲೆಕೆತ್ ಎಂಬ ಬಾಗಿಲು ಚೀಟಿನಿಂದ ನೇಮಕವಾದವು. ಶೆಲ್ಲೆಕೆತ್ ಬಾಗಿಲು ಪಟ್ಟಣದಿಂದ ದೇವಾಲಯಕ್ಕೆ ಏರಿಹೋಗುವ ದಾರಿಯಲ್ಲಿದೆ.
सुफ़्फ़ीम और हूसा के लिए पश्चिम की तरफ़ सलकत के फाटक के नज़दीक का, जहाँ से ऊँची सड़क ऊपर जाती है ऐसा कि आमने सामने होकर पहरा दें।
17 ೧೭ ಲೇವಿಯರಲ್ಲಿ ಪ್ರತಿದಿನವೂ ಪೂರ್ವದಿಕ್ಕಿನ ಬಾಗಿಲನ್ನು ಆರು ಜನರು, ದಕ್ಷಿಣ ಬಾಗಿಲನ್ನು ನಾಲ್ಕು ಜನರು, ಉಗ್ರಾಣ ಮಂದಿರದ ಎರಡು ಬಾಗಿಲನ್ನು ಇಬ್ಬಿಬ್ಬರು,
पूरब की तरफ़ छ: लावी थे, उत्तर की तरफ़ हर रोज़ चार, दक्खिन की तरफ़ हर रोज़ चार, और तोशाख़ाने के पास दो दो।
18 ೧೮ ಪರ್ಬರೆಂಬ ಕಟ್ಟಡವಿರುವ ಪಶ್ಚಿಮ ದಿಕ್ಕಿನ ದಾರಿ ಬಾಗಿಲನ್ನು ನಾಲ್ಕು ಜನರು, ಪರ್ಬರನ್ನು ಇಬ್ಬರು ಕಾಯುತ್ತಿದ್ದರು.
पश्चिम की तरफ़ परबार के लिए चार तो ऊँची सड़क पर और दो परबार के लिए।
19 ೧೯ ಕೋರಹೀಯರ ಮತ್ತು ಮೆರಾರೀಯರ ದ್ವಾರಪಾಲಕರ ವರ್ಗಗಳು ಇವೇ.
बनी कोरही और बनी मिरारी में से दरबानों के फ़रीक़ यही थे।
20 ೨೦ ಲೇವಿಯನಾದ ಅಹೀಯನು ಮೇಲೆ ಹೇಳಿರುವವರ ಕುಲಬಂಧುಗಳೂ, ದೇವಾಲಯದ ಭಂಡಾರ, ಪರಿಶುದ್ಧ ವಸ್ತುಗಳ ಭಂಡಾರ ಇವುಗಳನ್ನು ಕಾಯುತ್ತಿದ್ದರು.
लावियों में से अख़ियाह ख़ुदा के घर के ख़ज़ानों और नज़्र की चीज़ों के ख़ज़ानों पर मुक़र्रर था।
21 ೨೧ ಗೇರ್ಷೋಮನಿಗೆ ಹುಟ್ಟಿದ ಲದ್ದಾನ ಸಂತಾನದವರಾದ ಲದ್ದಾನ್ಯ ಕುಟುಂಬಗಳ ಪ್ರಧಾನರಲ್ಲಿ ಯೆಹೀಯೇಲೀ ಮತ್ತು ಅವನ ಮಕ್ಕಳು,
बनी ला'दान: इसलिए ला'दान के ख़ान्दान के जैरसोनियों के बेटे, जो उन आबाई ख़ान्दानों के सरदार थे, जो जैरसोनी ला'दान से त'अल्लुक रखते थे यह थे: यहीएली।
22 ೨೨ ಯೆಹೀಯೇಲ್ಯರಾದ ಜೇತಾಮನೂ ಮತ್ತು ಅವನ ತಮ್ಮನಾದ ಯೋವೇಲನು ಯೆಹೋವನ ಆಲಯದ ಭಂಡಾರಗಳನ್ನು ಕಾಯುವವರಾಗಿದ್ದರು.
और यहीएली के बेटे: जैताम और उसका भाई यूएल, ख़ुदावन्द के घर के खज़ानों पर थे।
23 ೨೩ ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್,
अमरामियों, इज़हारियों, हबरूनियों और उज़्ज़ीएलियों में से:
24 ೨೪ ಇವರ ಸಂತಾನದವರಲ್ಲಿ ಗೇರ್ಷೋಮನ ಮಗನೂ ಮೋಶೆಯ ಮೊಮ್ಮಗನೂ ಆಗಿರುವ ಶೆಬೂವೇಲನು ಭಂಡಾರಗಳನ್ನು ಕಾಯುವವರ ಮುಖ್ಯಸ್ಥನಾಗಿದ್ದನು.
सबुएल बिन जैरसोम बिन मूसा, बैत — उल — माल पर मुख़्तार था।
25 ೨೫ ಎಲೀಯೆಜೆರನ ಮಗ ರೆಹಬ್ಯ, ರೆಹಬ್ಯನ ಮಗ ಯೆಶಾಯ ಯೆಶಾಯನ ಮಗ ಯೋರಾಮ ಯೋರಾಮನ ಮಗ ಜಿಕ್ರೀ ಜಿಕ್ರೀಯನ ಮಗ ಶೆಲೋಮೋತನು.
और उसके भाई इली'एलियाज़र की तरफ़ से: उसका बेटा रहबियाह, रहबिया का बेटा यसा'याह, यसा'याह का बेटा यूराम, यूराम का बेटा ज़िकरी, ज़िकरी का बेटा सल्लूमीत।
26 ೨೬ ಶೆಲೋಮೋತನು ಅವನ ಸಹೋದರರೂ ಪ್ರತಿಷ್ಠಿತ ವಸ್ತುಗಳ ಭಂಡಾರವನ್ನು ಕಾಯುವವರು. ಇವರು ಶೆಬೂವೇಲನ ಗೋತ್ರಬಂಧುಗಳು. ಈ ವಸ್ತುಗಳನ್ನು ಅರಸನಾದ ದಾವೀದನೂ, ಗೋತ್ರ ಪ್ರಧಾನರೂ ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ, ಸೇನಾಧಿಪತಿಗಳೂ ಪ್ರತಿಷ್ಠಿಸಿದ್ದರು.
यह सल्लूमीत और उसके भाई नज़्र की हुई चीज़ों के सब ख़ज़ानों पर मुक़र्रर थे, जिनको दाऊद बादशाह और आबाई ख़ान्दानों के सरदारों और हज़ारों और सैकड़ों के सरदारों और लश्कर के सरदारों ने नज़्र किया था।
27 ೨೭ ಇವರು ಯೆಹೋವನ ಆಲಯದ ವೃದ್ಧಿಗೋಸ್ಕರ ತಮಗೆ ಯುದ್ಧದಲ್ಲಿ ಸಿಕ್ಕಿದ ಕೊಳ್ಳೆಯ ಒಂದು ಭಾಗವನ್ನು ಯೆಹೋವನಿಗೆಂದು ಮುಡುಪಾಗಿ ಇಟ್ಟರು.
लड़ाइयों की लूट में से उन्होंने ख़ुदावन्द के घर की मरम्मत के लिए कुछ नज़्र किया था।
28 ೨೮ ಇದಲ್ಲದೆ ದೇವ ದರ್ಶಿಯಾದ ಸಮುವೇಲನೂ, ಕೀಷನ ಮಗನಾದ ಸೌಲನೂ, ನೇರನ ಮಗನಾದ ಅಬ್ನೇರನೂ, ಚೆರೂಯಳ ಮಗನಾದ ಯೋವಾಬನೂ ಹಾಗೆಯೇ ಮಾಡಿದರು. ಈ ಪ್ರಕಾರ ಪ್ರತಿಷ್ಠಿತವಾದದ್ದೆಲ್ಲವೂ ಶೆಲೋಮೋತನ ಮತ್ತು ಅವನ ಸಹೋದರರ ವಶದಲ್ಲಿತ್ತು.
समुएल गै़बबीन और साऊल बिन क़ीस और अबनेर बिन नेर और योआब बिन ज़रोयाह की सारी नज़्र, ग़रज़ जो कुछ किसी ने नज़्र किया था वह सब सल्लूमीत और उसके भाइयों के हाथ में सुपुर्द था।
29 ೨೯ ಇಚ್ಹಾರ್ಯರಲ್ಲಿ ಕೆನನ್ಯನೂ ಅವನ ಮಕ್ಕಳು ಲೌಕೀಕೋದ್ಯೋಗದಲ್ಲಿದ್ದರು. ಅವರು ಇಸ್ರಾಯೇಲರ ಅಧಿಕಾರಿಗಳೂ ಮತ್ತು ನ್ಯಾಯಾಧಿಪತಿಗಳೂ ಆಗಿದ್ದರು.
इज़हारियों में से कनानियाह और उसके बेटे, इस्राईलियों पर बाहर के काम के लिए हाकिम और क़ाज़ी थे।
30 ೩೦ ಹೆಬ್ರೋನ್ಯರಲ್ಲಿ ಹಷಬ್ಯನೂ ಅವನ ಸಹೋದರರೂ ಯೊರ್ದನ್ ಹೊಳೆಯ ಪಶ್ಚಿಮ ಪ್ರಾಂತ್ಯಗಳಲ್ಲಿದ್ದ ಇಸ್ರಾಯೇಲ್ಯರೊಳಗೆ ಯೆಹೋವನ ಸೇವೆಯ ಎಲ್ಲಾ ಕಾರ್ಯಗಳನ್ನೂ ಮತ್ತು ರಾಜಕೀಯ ಕಾರ್ಯಗಳನ್ನೂ ನಡೆಸುತ್ತಿದ್ದರು. ಸಮರ್ಥರಾದ ಅವರು ಸಾವಿರದ ಏಳುನೂರು ಜನರು.
हबरूनियों में से हसबियाह और उसके भाई, एक हज़ार सात सौ सूर्मा, मग़रिब की तरफ़ यरदन पार के इस्राईलियों की निगरानी की ख़ातिर ख़ुदावन्द के सब काम और बादशाह की ख़िदमत के लिए तैनात थे।
31 ೩೧ ದಾವೀದನ ಆಳ್ವಿಕೆಯ ನಲವತ್ತನೆಯ ವರ್ಷದಲ್ಲಿ ಹೆಬ್ರೋನ್ಯರಿಗೆ ಸೇರಿದವರು ಯಾರಾರೆಂದು ವಿಚಾರಣೆ ನಡೆಸಿದಾಗ ಗಿಲ್ಯಾದಿನ ಯಾಜೇರಿನ ಶ್ರೀಮಂತರಿಗೆ ಅನೇಕರು ಅವರ ಗೋತ್ರದವರಾಗಿರುತ್ತಾರೆಂದು ಗೊತ್ತಾಯಿತು. ಈ ಹೆಬ್ರೋನ್ಯರಲ್ಲಿ ಯೆರೀಯನು ಪ್ರಧಾನನು.
हबरूनियों में यरयाह, हबरूनियों का उनके आबाई ख़ान्दानों के नस्बों के मुताबिक़ सरदार था। दाऊद की हुकूमत के चालीसवें बरस में वह ढूँड निकाले गए, और जिल'आद के या'ज़ेर में उनके बीच ताक़तवर सूर्मा मिले।
32 ೩೨ ಶ್ರೀಮಂತರೂ ಕುಟುಂಬ ಪ್ರಧಾನರೂ ಆದ ಅವನ ಗೋತ್ರಬಂಧುಗಳು ಎರಡು ಸಾವಿರದ ಏಳುನೂರು ಜನರು. ಅರಸನಾದ ದಾವೀದನು ರೂಬೇನ್, ಗಾದ್ ಅರ್ಧಮನಸ್ಸೆ ಕುಲಗಳವರ ಮೇಲೆ ಇವರನ್ನೇ ದೈವಿಕ ಕಾರ್ಯಗಳಲ್ಲಿಯೂ, ರಾಜಕೀಯ ಕಾರ್ಯಗಳಲ್ಲಿಯೂ ಅಧಿಕಾರಿಗಳನ್ನಾಗಿ ನೇಮಿಸಿದನು.
उसके भाई, दो हज़ार सात सौ सूर्मा और आबाई ख़ान्दानों के सरदार थे, जिनकी दाऊद बादशाह ने रूबीनियों और जहियों और मनस्सी के आधे क़बीले पर ख़ुदा के हर एक काम और शाही मु'आमिलात के लिए सरदार बनाया।

< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 26 >