< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 5 >
1 ೧ ಇಸ್ರಾಯೇಲನ ಚೊಚ್ಚಲ ಮಗನಾದ ರೂಬೇನನ ವಂಶಾವಳಿ. ರೂಬೇನನು ಚೊಚ್ಚಲ ಮಗನಾಗಿದ್ದರೂ ಅವನು ತನ್ನ ತಂದೆಯ ಉಪಪತ್ನಿಯೊಂದಿಗೆ ಸಂಗಮಿಸಿ ಹಾಸಿಗೆಯನ್ನು ಹೊಲೆ ಮಾಡಿದ್ದರಿಂದ ಅವನ ಹಕ್ಕು ಇಸ್ರಾಯೇಲನ ಮಗನಾದ ಯೋಸೇಫನ ಕುಲಕ್ಕೆ ಕೊಡಲ್ಪಟ್ಟಿತು.
’Ya’yan Ruben maza ɗan farin Isra’ila (shi ne ɗan fari, amma sa’ad da ya ƙazantar da gadon auren mahaifinsa, sai aka ba wa’yancin ɗan farinsa wa’ya’yan Yusuf maza ɗan Isra’ila; don kada a lissafta shi a tarihin zuriya bisa ga matsayin haihuwarsa,
2 ೨ ಆದರೆ ಯೆಹೂದನು ಎಲ್ಲಾ ಸಹೋದರರಲ್ಲಿ ಬಲಿಷ್ಠನಾದುದರಿಂದಲೂ, ರಾಜಾಧಿಕಾರವು ಇವನ ಕುಲಕ್ಕೆ ಬಂದುದರಿಂದಲೂ ಯೋಸೇಫನು ವಂಶಾವಳಿಯ ಪಟ್ಟಿಗಳಲ್ಲಿ ಚೊಚ್ಚಲ ಮಗನೆಂದು ಲಿಖಿತವಾಗಲಿಲ್ಲ. ಆದರೂ ಚೊಚ್ಚಲ ಮಗನಿಗೆ ಸಿಕ್ಕತಕ್ಕ ಪಾಲು ಅವನಿಗೆ ಸಿಕ್ಕಿತು.
ko da yake Yahuda shi ne mafi ƙarfi cikin’yan’uwansa kuma mai mulki ya fito daga gare shi,’yancin zaman ɗan fari na Yusuf ne),
3 ೩ ಇಸ್ರಾಯೇಲನ ಚೊಚ್ಚಲ ಮಗನಾದ ರೂಬೇನನ ಮಕ್ಕಳು: ಹನೋಕ್, ಫಲ್ಲೂ, ಹೆಚ್ರೋನ್ ಮತ್ತು ಕರ್ಮೀ.
’ya’yan Ruben ɗan farin Isra’ila maza su ne, Hanok, Fallu, Hezron da Karmi.
4 ೪ ಯೋವೇಲನ ವಂಶಾವಳಿ: ಇವನ ಮಗ ಶೆಮಾಯ; ಶೆಮಾಯನ ಮಗ ಗೋಗ್.
Zuriyar Yowel su ne, Shemahiya, Gog, Shimeyi,
5 ೫ ಗೋಗನ ಮಗ ಶಿಮ್ಮೀ; ಇವನ ಮಗ ಮೀಕ. ಮೀಕನ ಮಗ ರೆವಾಯ, ಇವನ ಮಗ ಬಾಳ್.
Mika, Reyahiya, Ba’al,
6 ೬ ಬಾಳನ ಮಗ ಬೇರ. ರೂಬೇನ್ಯರ ಪ್ರಭುಗಳಲ್ಲೊಬ್ಬನಾಗಿದ್ದ ಇವನನ್ನು ಅಶ್ಶೂರದ ಅರಸನಾದ ತಿಗ್ಲತ್ ಫಿಲ್ನೇಸರನು ಸೆರೆಯೊಯ್ದನು.
da Beyera, wanda Tiglat-Fileser sarkin Assuriya ya ɗauka zuwa zaman bauta. Beyera shi ne shugaban mutanen Ruben.
7 ೭ ವಂಶಾವಳಿಯ ಪಟ್ಟಿಯಲ್ಲಿ ಇವನ ಗೋತ್ರ ಸಂಬಂಧಿಗಳಾಗಿ ಲಿಖಿತರಾದವರು ನಾಯಕನಾದ ಯೆಗೀಯೇಲ್, ಜೆಕರ್ಯ, ಬೆಳ ಇವರೇ. ಬೆಳನು ಅಜಾಜನ ಮಗ.
Danginsu bisa ga iyalansu da aka jera bisa ga tarihin zuriyarsu su ne, Yehiyel shi ne sarki, akwai Zakariya,
8 ೮ ಬೆಳನು ಅಜಾಜನ ಮಗ. ಅಜಾಜನು ಶೆಮಯನ ಮಗ. ಶೆಮಯನು ಯೋವೇಲನ ಮಗ. ಯೋವೇಲ್ಯರು ಅರೋಯೇರಿನಿಂದ ನೆಬೋ ಮತ್ತು ಬಾಳ್ಮೆಯೋನ್ ಎಂಬ ಸ್ಥಳಗಳವರೆಗೂ ವಾಸಿಸುತ್ತಿದ್ದರು.
da Bela ɗan Azaz. Azaz ɗan Shema daga dangin Yowel. Yowel ya yi zama a yankin Arower har zuwa Nebo da Ba’al-Meyon.
9 ೯ ಪೂರ್ವ ದಿಕ್ಕಿನಲ್ಲಿ ಯೂಫ್ರೆಟಿಸ್ ನದಿಯ ಈಚೆಯಲ್ಲಿರುವ ಅರಣ್ಯವು ಇವರ ಮೇರೆ. ಇವರಿಗೆ ಗಿಲ್ಯಾದ್ ದೇಶದಲ್ಲಿ ಅನೇಕ ದನ ಕುರಿಹಿಂಡುಗಳಿದ್ದವು.
Ta waje gabas sun zauna a ƙasar har zuwa bakin hamadan da ya nausa zuwa Kogin Yuferites, domin dabbobinsu sun ƙaru a Gileyad.
10 ೧೦ ಇವರು ಸೌಲನ ಕಾಲದಲ್ಲಿ ಹಗ್ರೀಯರೊಡನೆ ಯುದ್ಧಮಾಡಿ, ಅವರನ್ನು ಸಂಹರಿಸಿ, ಗಿಲ್ಯಾದಿನ ಪೂರ್ವದಿಕ್ಕಿನ ಪ್ರಾಂತ್ಯಗಳಲ್ಲಿದ್ದ ಅವರ ಡೇರೆಗಳಲ್ಲಿ ವಾಸಮಾಡ ತೊಡಗಿದನು.
A zamanin Shawulu zuriyar Ruben sun yi yaƙi da Hagirawa, suka ci su da yaƙi, suka zauna a wuraren zaman Hagirawan ko’ina a dukan yankin gabashin Gileyad.
11 ೧೧ ರೂಬೇನ್ಯರ ಎದುರಿನಲ್ಲಿ ಬಾಷಾನ್ ಸೀಮೆಯ ಸಲ್ಕದವರೆಗೂ ವಾಸಿಸುತ್ತಿದ್ದವರು ಗಾದ್ ಕುಲದವರು:
Mutanen Gad sun zauna kusa da mutanen Ruben a Bashan, har zuwa Saleka.
12 ೧೨ ಪ್ರಧಾನನಾದ ಯೋವೇಲ್, ಎರಡನೆಯವನಾದ ಶಾಫಾಮ್, ಯನ್ನೈ, ಬಾಷಾನಿನಲ್ಲಿರುವ ಶಾಫಾಟ್ ಇವರೂ ನಾಯಕರಾಗಿದ್ದರು.
Yowel shi ne babba, sai Shafan na biyu, sa’an nan Yanai da Shafat, su ne tushen Bashan.
13 ೧೩ ಮೀಕಾಯೇಲ್, ಮೆಷುಲ್ಲಾಮ್, ಶೆಬ, ಯೋರೈ, ಯಕ್ಕಾನ್, ಜೀಯ ಮತ್ತು ಏಬೆರ್ ಎಂಬ ಏಳು ಕುಟುಂಬಗಳೂ ಇವರ ಕುಲಸಂಬಂಧಿಗಳು.
Danginsu, bisa ga iyalai su ne, Mika’ilu, Meshullam, Sheba, Yorai, Yakan, Ziya da Eber, su bakwai ne duka.
14 ೧೪ ಇವರು ಅಬೀಹೈಲನ ಮಕ್ಕಳು: ಅಬೀಹೈಲನು ಹೂರೀಯ ಮಗ, ಇವನು ಯಾರೋಹನ ಮಗ. ಯಾರೋಹನು ಗಿಲ್ಯಾದನ ಮಗ, ಇವನು ಮೀಕಾಯೇಲನ ಮಗ. ಮೀಕಾಯೇಲನು ಯೆಷೀಷೈಯನ ಮಗ, ಇವನು ಯಹ್ದೋವಿನ ಮಗ, ಇವನು ಅಹೀಬೂಜನ ಮಗ.
Waɗannan su ne’ya’yan Abihayil ɗan Huri, ɗan Yarowa, ɗan Gileyad, ɗan Mika’ilu, ɗan Yeshishai, ɗan Yado, ɗan Buz.
15 ೧೫ ಅಹೀಬೂಜನು ಅಬ್ದೀಯೇಲನ ಮಗ. ಅಬ್ದೀಯೇಲನು ಗೂನೀಯನ ಮಗ. ಇವನು ಇವರ ಗೋತ್ರದ ಮೂಲಪುರುಷನು.
Ahi ɗan Abiyel, ɗan Guni, shi ne kan iyalinsu.
16 ೧೬ ಗಾದ್ಯರು ಗಿಲ್ಯಾದಿನಲ್ಲಿಯೂ ಬಾಷಾನಿನಲ್ಲಿಯೂ, ಅದರ ಗ್ರಾಮಗಳಲ್ಲಿಯೂ, ಶಾರೋನಿನ ಎಲ್ಲಾ ಹುಲ್ಲುಗಾವಲುಗಳಲ್ಲಿಯೂ ಅವುಗಳ ಮೇರೆಗಳಲ್ಲಿಯೂ ವಾಸಿಸುತ್ತಿದ್ದರು.
Mutanen Gad sun zauna a Bashan da ƙauyukan da suke kurkusa da shi, da kuma a dukan makiyayan Sharon har zuwa iyaka inda suka kai.
17 ೧೭ ಅವರೆಲ್ಲರೂ ಯೆಹೂದ್ಯರ ಅರಸನಾದ ಯೋತಾಮನ ಕಾಲದಲ್ಲಿಯೂ, ಇಸ್ರಾಯೇಲರ ಅರಸನಾದ ಯಾರೊಬ್ಬಾಮನ ಕಾಲದಲ್ಲಿಯೂ ವಂಶಾವಳಿಯ ಪಟ್ಟಿಯಲ್ಲಿ ದಾಖಲಿಸಲ್ಪಟ್ಟರು.
Dukan waɗannan sun shiga tarihin zuriya a lokacin mulkin Yotam sarkin Yahuda da Yerobowam sarkin Isra’ila.
18 ೧೮ ರೂಬೇನ್ಯರು, ಗಾದ್ಯರು, ಮನಸ್ಸೆ ಕುಲದ ಅರ್ಧ ಜನರು ಇವರಲ್ಲಿ ರಣವೀರರೂ ಗುರಾಣಿ ಖಡ್ಗಗಳನ್ನು ಹಿಡಿಯುವವರೂ, ಬಿಲ್ಲನ್ನು ಬೊಗ್ಗಿಸುವವರೂ, ಯುದ್ಧ ನಿಪುಣರೂ ಆಗಿರುವ ನಲ್ವತ್ತನಾಲ್ಕು ಸಾವಿರದ ಏಳು ನೂರ ಅರವತ್ತು ಸೈನಿಕರಿದ್ದರು.
Mutanen Ruben, mutanen Gad da rabin kabilar Manasse sun kasance da mutane 44,760 shiryayyu don aikin soja, jarumawan da za su iya riƙe garkuwa da takobi, waɗanda suke iya yin amfani da baka, waɗanda kuma aka horar don yaƙi.
19 ೧೯ ಅವರು ಹೋಗಿ ಹಗ್ರೀಯ, ಯೆಟೂರ್, ನಾಫೀಷ್ ಮತ್ತು ನೋದಾಬ್ ಇವರೊಡನೆಯೂ ಯುದ್ಧಮಾಡಿದರು.
Suka yi yaƙi da Hagirawa, Yetur, Nafish da Nodab.
20 ೨೦ ಅವರು ದೇವರ ಮೇಲೆ ಭರವಸೆ ಇಟ್ಟಿದ್ದರಿಂದ ಮೊರೆಯಿಟ್ಟ ಅವರ ಪ್ರಾರ್ಥನೆಗೆ ಕಿವಿಗೊಟ್ಟು ಯುದ್ಧದಲ್ಲಿ ಜಯವನ್ನು ಅನುಗ್ರಹಿಸಿದನು. ಹಗ್ರೀಯರೂ ಇವರ ಜೊತೆಯಲ್ಲಿದ್ದವರೂ ಅವರ ಕೈಯಲ್ಲಿ ಕೊಡಲ್ಪಟ್ಟರು.
Aka taimake su a yaƙin, Allah kuma ya ba da Hagirawa da dukan abokansu gare su, domin sun yi kuka gare shi a lokacin yaƙin. Ya amsa addu’o’insu, domin sun dogara gare shi.
21 ೨೧ ಈ ಯುದ್ಧದಲ್ಲಿ ಅವರ ಹಿಂಡುಗಳನ್ನು ಅಂದರೆ, ಐವತ್ತು ಸಾವಿರ ಒಂಟೆಗಳು, ಎರಡು ಲಕ್ಷದ ಐವತ್ತು ಸಾವಿರ ಕುರಿಗಳೂ, ಎರಡು ಸಾವಿರ ಕತ್ತೆಗಳು ಮತ್ತು ಒಂದು ಲಕ್ಷ ಜನರನ್ನೂ ಕೊಳ್ಳೆಹಿಡಿದರು.
Suka ƙwace dabbobin Hagirawa, raƙuma dubu hamsin, tumaki dubu ɗari biyu da hamsin da kuma jakuna dubu biyu. Suka kuma kame mutane dubu ɗari ɗaya,
22 ೨೨ ಏಕೆಂದರೆ ದೇವರು ಅವರ ಪರವಾಗಿ ಯುದ್ಧಮಾಡಿದ್ದರಿಂದ ಅವರು ವೈರಿಗಳಲ್ಲಿ ಅನೇಕರನ್ನು ತಿವಿದು ಕೊಂದದ್ದಲ್ಲದೆ, ತಾವು ಸೆರೆಯಾಗಿ ಹೋಗುವವರೆಗೂ ಅವರ ಊರುಗಳಲ್ಲಿ ವಾಸಿಸಿದರು.
waɗansu suka mutu, domin yaƙin na Allah ne. Suka zauna a ƙasar har lokacin da aka kai su zaman bauta.
23 ೨೩ ಮನಸ್ಸೆ ಕುಲದ ಅರ್ಧಜನರು ಬಾಷಾನಿನಿಂದ ಬಾಳ್ ಹೆರ್ಮೋನ್, ಸೆನೀರ್, ಹೆರ್ಮೋನ್ ಗಿರಿ ಇವುಗಳ ವರೆಗೂ ವಿಸ್ತರಿಸಿಕೊಂಡಿರುವ ಪ್ರಾಂತ್ಯಗಳಲ್ಲಿ ವಾಸಿಸಿದರು.
Mutanen rabin kabilar Manasse sun yi yawa; suka zauna a ƙasar daga Bashan har zuwa Ba’al-Hermon, wato, zuwa Senir (Dutsen Hermon).
24 ೨೪ ಇವರ ಗೋತ್ರಗಳ ಪ್ರಧಾನ ಪುರುಷರು ಏಫೆರ್, ಇಷ್ಷೀ, ಎಲೀಯೇಲ್, ಅಜ್ರೀಯೇಲ್, ಯೆರೆಮೀಯ, ಹೋದವ್ಯ ಮತ್ತು ಯೆಹ್ತೀಯೇಲ್. ಇವರು ರಣವೀರರೂ ಪ್ರಖ್ಯಾತಿ ಹೊಂದಿದವರು ಗೋತ್ರಪ್ರಧಾನರೂ ಆಗಿದ್ದರು.
Waɗannan su ne kawunan iyalansu. Efer, Ishi, Eliyel, Azriyel, Irmiya, Hodawiya da Yadiyel. Su jarumawa ne, sanannu, su ne kuma kawunan iyalansu.
25 ೨೫ ಅವರು ತಮ್ಮ ಪೂರ್ವಿಕರ ದೇವರಿಗೆ ದ್ರೋಹಿಗಳಾಗಿದರು. ಯೆಹೋವನು ತಮ್ಮ ಮುಂದೆಯೇ ಸಂಹರಿಸಿದ ಆ ದೇಶದ ನಿವಾಸಿಗಳ ದೇವರುಗಳನ್ನು ಆರಾಧಿಸತೊಡಗಿದರು.
Amma ba su yi aminci da Allahn kakanninsu ba, suka kuma yi karuwanci ga waɗansu allolin mutanen ƙasar, waɗanda Allah ya hallaka a gabansu.
26 ೨೬ ಆದುದರಿಂದ ಅಶ್ಶೂರದ ಅರಸನಾದ ಪೂಲ್, ತಿಗ್ಲತ್ಪಿಲೆಸರ್ ಎಂಬವರು ಇಸ್ರಾಯೇಲ್ ದೇವರ ಪ್ರೇರಣೆಯಿಂದ ಬಂದು ರೂಬೇನ್ಯರು, ಗಾದ್ಯರು, ಮನಸ್ಸೆ ಕುಲದ ಅರ್ಧ ಜನರು ಇವರನ್ನು ಹಲಹ, ಹಾಬೋರ್, ಹಾರ ಎಂಬ ಪ್ರಾಂತ್ಯಗಳಿಗೂ, ಗೋಜಾನ್ ನದಿಯ ಪ್ರದೇಶಗಳಿಗೂ ಸೆರೆ ಹಿಡಿದು ಕರೆದೊಯ್ದರು. ಅವರು ಇಂದಿನವರೆಗೂ ಅಲ್ಲಿಯೇ ನೆಲೆಸುವಂತೆ ದೇವರು ಮಾಡಿದ್ದಾನೆ.
Saboda haka Allah na Isra’ila ya zuga ruhun Ful sarkin Assuriya (wato, Tiglat-Fileser sarkin Assuriya), wanda ya kwashe mutanen Ruben, mutanen Gad da rabin kabilar Manasse zuwa zaman bauta. Ya kwashe su zuwa Hala, Habor, Hara da kuma kogin Gozan, inda suke har wa yau.