< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 7 >
1 ೧ ಇಸ್ಸಾಕಾರನ ಮಕ್ಕಳು: ತೋಲ, ಪೂವ, ಯಾಶೂಬ್, ಶಿಮ್ರೋನ್ ಎಂಬ ನಾಲ್ಕು ಜನರು.
2 ೨ ತೋಲನ ಮಕ್ಕಳಾದ, ಉಜ್ಜೀ, ರೆಫಾಯ, ಯೆರೀಯೇಲ್, ಯಹ್ಮೈ, ಇಬ್ಸಾಮ್ ಮತ್ತು ಸಮುವೇಲ್. ಇವರು ತೋಲನ ವಂಶದ ಕುಟುಂಬಗಳಲ್ಲಿ ಪ್ರಧಾನ ಪುರುಷರೂ, ರಣವೀರರೂ ಆಗಿದ್ದರು. ತೋಲ ವಂಶದವರ ಸಂಖ್ಯೆಯು ದಾವೀದನ ಕಾಲದಲ್ಲಿ ಇಪ್ಪತ್ತೆರಡು ಸಾವಿರದ ಆರುನೂರು.
3 ೩ ಉಜ್ಜೀಯನ ಮಗ ಇಜ್ಯಹ್ಯಾಹ. ಇಜ್ಯಹ್ಯಾಹನ ಮಕ್ಕಳು ಮಿಕಾಯೇಲ್, ಓಬದ್ಯ, ಯೋವೇಲ್, ಇಷ್ಷೀಯ. ಇವರು ಈ ಕುಟುಂಬದ ಗೋತ್ರಪ್ರಧಾನರು.
4 ೪ ಇವರ ಹೆಂಡತಿ ಮಕ್ಕಳೂ, ಇವರ ಗೋತ್ರ ಕುಟುಂಬಗಳಿಗೆ ಸೇರುವ ಯುದ್ಧಭಟರು ಮತ್ತು ಹೆಂಡತಿ, ಮಕ್ಕಳು ಒಟ್ಟು ಮೂವತ್ತಾರು ಸಾವಿರ.
5 ೫ ಇವರ ಗೋತ್ರ ಸಂಬಂಧಿಗಳಾದ ಇಸ್ಸಾಕಾರ್ಯರೆಲ್ಲರೂ ರಣವೀರರು. ಈ ಕುಟುಂಬದ ಬಹುಪಾಲು ಪುರುಷರು ಸೈನ್ಯದಲ್ಲಿ ಸೇವೆಮಾಡಲು ಯೋಗ್ಯರಾಗಿದ್ದರೆಂದು ತಮ್ಮನ್ನು ಅರ್ಪಿಸಿಕೊಂಡರು, ಪಟ್ಟಿಯಲ್ಲಿ ಲೆಕ್ಕಿಸಲ್ಪಟ್ಟವರು ಒಟ್ಟು ಎಂಭತ್ತೇಳು ಸಾವಿರ ಮಂದಿ.
6 ೬ ಬೆನ್ಯಾಮೀನನಿಗೆ ಬೆಳ, ಬೆಕೆರ್, ಯೆದೀಯಯೇಲ್ ಎಂಬ ಮೂರು ಮಕ್ಕಳಿದ್ದರು.
7 ೭ ಬೆಳನ ಮಕ್ಕಳು ಎಚ್ಬೋನ್, ಉಜ್ಜೀ, ಉಜ್ಜೀಯೇಲ್, ಯೆರೀಮೋತ್ ಮತ್ತು ಈರೀ ಎಂಬವರು. ಈ ಐದು ಜನರು ಗೋತ್ರ ಪ್ರಧಾನರು ರಣವೀರರೂ ಆಗಿದ್ದರು. ಅವರ ವಂಶಾವಳಿಯ ಪಟ್ಟಿಯಲ್ಲಿ ಇಪ್ಪತ್ತೆರಡು ಸಾವಿರದ ಮೂವತ್ತನಾಲ್ಕು ಜನರೆಂದು ಲೆಕ್ಕಿಸಲ್ಪಟ್ಟವರು.
8 ೮ ಬೆಕೆರನ ಮಕ್ಕಳು ಜೆಮೀರ್, ಯೋವಾಷ್, ಎಲೀಯೆಜೆರ್, ಎಲ್ಯೋವೇನೈ, ಒಮ್ರಿ, ಯೆರೀಮೋತ್, ಅಬೀಯ, ಅನಾತೋತ್ ಮತ್ತು ಆಲೆಮೆತ್ ಎಂಬವರು.
9 ೯ ರಣವೀರರಾದ ಈ ಗೋತ್ರಪ್ರಧಾನರ ವಂಶಾವಳಿಯ ಪಟ್ಟಿಯಲ್ಲಿ ಲೆಕ್ಕಿಸಲ್ಪಟ್ಟ ಇಪ್ಪತ್ತು ಸಾವಿರದ ಇನ್ನೂರು ಯುದ್ಧ ಪರಾಕ್ರಮಶಾಲಿಗಳು.
10 ೧೦ ಯೆದೀಯಯೇಲನ ಮಗ ಬಿಲ್ಹಾನ್. ಬಿಲ್ಹಾನನ ಮಕ್ಕಳು: ಯೆಯೂಷ್, ಬೆನ್ಯಾಮೀನ್, ಏಹೂದ್, ಕೆನಾನ, ಜೇತಾನ್, ತಾರ್ಷೀಷ್, ಅಹೀಷೆಹರ್ ಎಂಬವರು.
11 ೧೧ ಈ ಗೋತ್ರ ಪ್ರಧಾನರಿಗೆ ಸೇರಿದವರೆಲ್ಲರೂ ಯೆದೀಯಯೇಲನ ಸಂತಾನದವರು. ಇವರಲ್ಲಿ ಹದಿನೇಳು ಸಾವಿರದ ಇನ್ನೂರು ಯುದ್ಧದಲ್ಲಿ ಹೋರಾಡತಕ್ಕ ಪರಾಕ್ರಮ ಶಾಲಿಗಳು.
12 ೧೨ ಶುಪ್ಪೀಮ್ ಮತ್ತು ಹುಪ್ಪೀಮರು ಈರನ ಮಕ್ಕಳು. ಹುಶೀಮನು ಅಹೇರನ ಮಗ.
13 ೧೩ ನಫ್ತಾಲಿಯ ಮಕ್ಕಳು ಯಹಚಿಯೇಲ್, ಗೂನೀ, ಯೇಚೆರ್, ಶಲ್ಲೂಮ್ ಇವರು ಬಿಲ್ಹಳ ಸಂತಾನದವರು.
14 ೧೪ ಮನಸ್ಸೆಯ ಸಂತಾನದವರು: ಅರಾಮ್ಯಳಾದ ಮನಸ್ಸೆಯ ಉಪಪತ್ನಿಯಿಂದ ಅಷ್ರೀಯೇಲ ಮತ್ತು ಮಾಕೀರನನ್ನು ಮನಸ್ಸೆ ಪಡೆದನು. ಮಾಕೀರನು ಗಿಲ್ಯಾದನ ತಂದೆ.
15 ೧೫ ಮಾಕೀರನು ಹುಪ್ಪೀಮ್ ಮತ್ತು ಶುಪ್ಪೀಮ್ಯರಿಂದ ಹೆಣ್ಣನ್ನು ತೆಗೆದುಕೊಂಡನು. ಅವನ ತಂಗಿಯ ಹೆಸರು ಮಾಕ. ಅವನ ತಮ್ಮನ ಹೆಸರು ಚೆಲೋಫಾದ್. ಚೆಲೋಫಾದನಿಗೆ ಹೆಣ್ಣು ಮಕ್ಕಳು ಮಾತ್ರ ಇದ್ದರು.
16 ೧೬ ಮಾಕೀರನ ಹೆಂಡತಿಯಾದ ಮಾಕಳು ಮಗನನ್ನು ಹೆತ್ತು, ಅವನಿಗೆ ಪೆರೇಷ್ ಎಂದು ಹೆಸರಿಟ್ಟಳು. ಇವನ ತಮ್ಮನ ಹೆಸರು ಶೆರೆಷ್. ಶೆರೆಷನ ಮಕ್ಕಳು ಊಲಾಮ್ ಮತ್ತು ರೆಕೆಮ್.
17 ೧೭ ಉಲಾಮನ ಮಗನು ಬೆದಾನ್. ಇವರು ಮನಸ್ಸೆಯ ಮೊಮ್ಮಗ ಹಾಗೂ ಮಾಕೀರನ ಮಗ. ಇವರು ಗಿಲ್ಯಾದನ ಸಂತಾನದವರು.
18 ೧೮ ಗಿಲ್ಯಾದನ ತಂಗಿಯಾದ ಹಮ್ಮೋಲೆಕೆತಳು ಈಷ್ಹೋದ್, ಅಬೀಯೆಜೆರ್, ಮಹ್ಲ ಎಂಬವರನ್ನು ಹೆತ್ತಳು.
19 ೧೯ ಶೆಮೀದನ ಮಕ್ಕಳು ಅಹ್ಯಾನ್, ಶೆಕೆಮ್, ಲಿಕ್ಹೀ, ಅನೀಯಾಮ್.
20 ೨೦ ಎಫ್ರಾಯೀಮನ ಸಂತಾನದವರು: ಎಫ್ರಾಯೀಮನ ಮಗ ಶೂತೆಲಹ, ಇವನ ಮಗ ಬೆರೆದ್. ಬೆರೆದನ ಮಗ ತಹತ್; ಇವನ ಮಗ ಎಲ್ಲಾದ್. ಎಲ್ಲಾದನ ಮಗ ತಹತ್;
21 ೨೧ ತಹತನ ಮಗ ಜಾಬಾದ್, ಜಾಬಾದನ ಮಕ್ಕಳು ಶೂತೆಲಹ, ಏಜೆರ್ ಮತ್ತು ಎಲ್ಲಾದ್. ಇವರು ಗತ್ ಊರಿನವರ ದನಕುರಿಗಳನ್ನು ಸುಲಿಗೆ ಮಾಡುವುದಕ್ಕೋಸ್ಕರ ಗಟ್ಟಾ ಇಳಿದು ಅವರ ದೇಶಕ್ಕೆ ಹೋದುದರಿಂದ ಆ ದೇಶದ ಮೂಲ ನಿವಾಸಿಗಳು ಇವರನ್ನು ಕೊಂದುಹಾಕಿದರು.
22 ೨೨ ಆದುದರಿಂದ ಇವರ ತಂದೆಯಾದ ಎಫ್ರಾಯೀಮನು ಬಹುದಿನಗಳವರೆಗೂ ದುಃಖಪಡುತ್ತಿದ್ದನು. ಅವನ ಸಹೋದರರು ಅವನನ್ನು ಸಂತೈಸುವುದಕ್ಕೋಸ್ಕರ ಬಂದರು.
23 ೨೩ ಅವನು ತನ್ನ ಹೆಂಡತಿಯನ್ನು ಸಂಗಮಿಸಲು, ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತಳು. ಇದು ಅವನ ಕುಟುಂಬಕ್ಕೆ ಒದಗಿದ ಆಪತ್ತಿನಲ್ಲಿ ಸಂಭವಿಸಿದ್ದರಿಂದ ಆ ಮಗನಿಗೆ ಬೆರೀಯ ಎಂದು ಹೆಸರಿಟ್ಟನು.
24 ೨೪ ಶೇರ ಎಂಬವಳು ಅವನ ಮಗಳು. ಈಕೆಯು ಮೇಲಣ ಮತ್ತು ಕೆಳಗಣ ಬೇತ್ ಹೊರೋನ್ ಎಂಬ ಪಟ್ಟಣಗಳನ್ನು ಮತ್ತು ಉಜ್ಜೀನ್ ಶೇರ ಎಂಬ ಪಟ್ಟಣಗಳನ್ನೂ ಕಟ್ಟಿಸಿದಳು.
25 ೨೫ ಬೆರೀಯ ಮಗ ರೆಫಹ. ಇವನ ಮಗ ರೆಷೆಫ್, ಇವನ ಮಗ ತೆಲಹ, ಇವನ ಮಗ ತಹಾನ್.
26 ೨೬ ತಹಾನನ ಮಗ ಲದ್ದಾನ್, ಇವನ ಮಗ ಅಮ್ಮೀಹೂದ್, ಇವನ ಮಗ ಎಲೀಷಾಮ.
27 ೨೭ ಎಲೀಷಾಮ ಮಗ ನೋನ್, ಇವನ ಮಗ ಯೆಹೋಷುವ.
28 ೨೮ ಅವರು ವಾಸಿಸುವ ಸ್ವತ್ತಿನ ಮೇರೆಗಳು ದಕ್ಷಿಣ ದಿಕ್ಕಿನಲ್ಲಿ ಬೇತೇಲ್ ಪಟ್ಟಣ, ಅದರ ಗ್ರಾಮಗಳೂ ಪೂರ್ವ ದಿಕ್ಕಿನಲ್ಲಿ ನಾರಾನ್, ಪಶ್ಚಿಮ ದಿಕ್ಕಿನಲ್ಲಿ ಗೆಜೆರ್ ಪಟ್ಟಣವೂ ಅದರ ಗ್ರಾಮಗಳೂ; ಉತ್ತರ ದಿಕ್ಕಿನಲ್ಲಿ ಶೆಕೆಮ್ ಮತ್ತು ಆಯಾ ಪಟ್ಟಣಗಳೂ ಅವುಗಳ ಗ್ರಾಮಗಳು.
29 ೨೯ ಬೇತ್ಷಾನ್, ತಾನಾಕ್, ಮೆಗಿದ್ದೋ, ದೋರ್ ಎಂಬ ಪಟ್ಟಣಗಳೂ, ಅವುಗಳ ಗ್ರಾಮಗಳೂ ಮನಸ್ಸೆ ಕುಲದವರ ವಶದಲ್ಲಿದ್ದವು. ಈ ಊರುಗಳಲ್ಲಿ ಇಸ್ರಾಯೇಲನ ಮಗನಾದ ಯೋಸೇಫನ ಸಂತಾನದವರು ವಾಸಿಸುತ್ತಿದ್ದರು.
30 ೩೦ ಅಶೇರನ ಸಂತಾನದವರು: ಇಮ್ನ, ಇಷ್ವ, ಇಷ್ವೀ, ಬೆರೀಯ ಎಂಬವರೂ ಸೆರಹಳೆಂಬ ಇವರ ತಂಗಿ.
31 ೩೧ ಬೆರೀಯನ ಮಕ್ಕಳು ಹೆಬೆರ್, ಬಿರ್ಜೈತ್ ಊರಿನವರ ಮೂಲಪುರುಷನಾದ ಮಲ್ಕೀಯೇಲ್.
32 ೩೨ ಹೆಬೆರನು ಯಫ್ಲೇಟ್, ಶೋಮೇರ್, ಹೋತಾಮ್ ಇವರನ್ನೂ ಇವರ ತಂಗಿಯಾದ ಶೂವಳನ್ನೂ ಪಡೆದನು.
33 ೩೩ ಪಾಸಕ್, ಬಿಮ್ಹಾಲ್, ಅಶ್ವಾತ್ ಇವರು ಯಫ್ಲೇಟನ ಮಕ್ಕಳು.
34 ೩೪ ಅಹೀ, ರೋಹ್ಗ, ಹುಬ್ಬ, ಅರಾಮ್ ಎಂಬುವವರು ಶಮೆರನ ಮಕ್ಕಳು.
35 ೩೫ ಇವನ ತಮ್ಮನಾದ ಹೆಲೆಮನ ಮಕ್ಕಳು, ಚೋಫಹ, ಇಮ್ನ, ಶೇಲೆಷ್, ಆಮಾಲ್ ಇವರೇ.
36 ೩೬ ಚೋಫಹನ ಮಕ್ಕಳು ಸೂಹ, ಹರ್ನೇಫೆರ್, ಶೂಗಾಲ್, ಬೇರೀ, ಇಮ್ರ,
37 ೩೭ ಬೆಚೆರ್, ಹೋದ್, ಶಮ್ಮ, ಶಿಲ್ಷನು, ಇತ್ರಾನ್, ಬೇರ.
38 ೩೮ ಯೆಫುನ್ನೆ, ಪಿಸ್ಪ, ಅರಾ ಎಂಬುವವರು ಯೆತೆರನ ಮಕ್ಕಳು.
39 ೩೯ ಆರಹ, ಹನ್ನಿಯೇಲ, ರಿಚ್ಯ ಇವರು ಉಲ್ಲನ ಮಕ್ಕಳು.
40 ೪೦ ಇವರೆಲ್ಲರು ಆಶೇರ್ಯರಲ್ಲಿ ಗೋತ್ರಪ್ರಧಾನರೂ, ಯುದ್ಧಪ್ರವೀಣರಾದ ರಣವೀರರೂ ಮತ್ತು ಶ್ರೇಷ್ಠ ನಾಯಕರೂ ಆಗಿದ್ದರು. ಇವರ ವಂಶಾವಳಿಯ ಪಟ್ಟಿಯ ಪ್ರಕಾರ ಯುದ್ಧ ಪ್ರವೀಣರಾದ ಭಟರ ಸಂಖ್ಯೆ ಇಪ್ಪತ್ತಾರು ಸಾವಿರ.