< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 8 >

1 ಬೆನ್ಯಾಮೀನನ ಮಕ್ಕಳು: ಬೆಳನು ಚೊಚ್ಚಲ ಮಗ. ಅಷ್ಬೇಲ್ ಎರಡನೆಯವನು, ಅಹ್ರಹ ಮೂರನೆಯವನು,
Benjamim gerou a Belá seu primogênito, Asbel o segundo, Aará o terceiro,
2 ನೋಹ ನಾಲ್ಕನೆಯವನು, ರಾಫ ಐದನೆಯವನು.
Noá o quarto, e Rafa o quinto.
3 ಬೆಳನ ಮಕ್ಕಳು: ಅದ್ದಾರ್, ಗೇರ, ಅಬೀಹೂದ್,
E os filhos de Belá foram: Adar, Gera, Abiúde,
4 ಅಬೀಷೂವ, ನಾಮಾನ್, ಅಹೋಹ,
Abisua, Naamã, Aoá,
5 ಗೇರ, ಶೆಪೂಫಾನ್ ಮತ್ತು ಹೂರಾಮ್ ಎಂಬವರು.
Gera, Sefufá, e Hurão.
6 ಏಹೂದನ ಸಂತಾನದವರು ಗೆಬ ಊರಿನ ಎಲ್ಲಾ ಕುಟುಂಬಗಳಲ್ಲಿ ಪ್ರಮುಖರು.
E estes foram os filhos de Eúde, os quais foram os cabeças das famílias dos moradores em Geba, que foram levados cativos a Manaate:
7 ನಾಮಾನ್, ಅಹೀಯ ಮತ್ತು ಗೇರ ಇವರು ಮಾನಹತಿಗೆ ಒಯ್ಯಲ್ಪಟ್ಟರು. ಏಹೂದನು ಉಚ್ಚ ಮತ್ತು ಅಹೀಹುದ್ ಇವರನ್ನು ಪಡೆದನು.
Naamã, Aías, e Gera; este os levou cativos, e gerou a Uzá e a Aiúde.
8 ಶಹರಯಿಮನು ತನ್ನ ಹೆಂಡತಿಯರಾದ ಹೂಷೀಮ್ ಮತ್ತು ಬಾರ ಎಂಬವರನ್ನು ತ್ಯಜಿಸಿ,
E Saaraim gerou filhos na terra de Moabe, depois que deixou a suas mulheres Husim e Baara.
9 ಮತ್ತೊಬ್ಬ ಹೆಂಡತಿಯಾದ ಹೋದೆಷಳಿಂದ ಮೋವಾಬ್ ದೇಶದಲ್ಲಿ ಯೋವಾಬ್, ಚಿಬ್ಯ, ಮೇಷ, ಮಲ್ಕಾಮ್, ಯೆಯೂಚ್, ಸಾಕ್ಯ ಮತ್ತು ಮಿರ್ಮ ಇವರನ್ನು ಪಡೆದನು.
De sua mulher Hodes ele gerou a Jobabe, Zíbia, Messa, Malcã,
10 ೧೦ ಶಹರಯಿಮನ ಮಕ್ಕಳಾದ ಇವರು ಗೋತ್ರ ಪ್ರಧಾನರಾಗಿದ್ದರು.
Jeús, Saquias, e Mirma. Estes foram seus filhos, cabeças de famílias.
11 ೧೧ ಇದಲ್ಲದೆ ಅವನು ಹುಷೀಮಳಿಂದ ಅಬೀಟೂಬ್, ಎಲ್ಪಾಲ ಇವರನ್ನು ಪಡೆದನು.
E de Husim ele gerou a Abitube, e a Elpaal.
12 ೧೨ ಎಲ್ಪಾಲನ ಮಕ್ಕಳು ಏಬರ್, ಮಿಷ್ಷಾಮ್ ಮತ್ತು ಶೆಮೆದ್. ಇವರೂ ಓನೋ, ಲೋದ್ ಎಂಬ ಪಟ್ಟಣಗಳನ್ನೂ, ಅವುಗಳಿಗೆ ಸೇರಿದ ಗ್ರಾಮಗಳನ್ನೂ ಕಟ್ಟಿಸಿದರು.
E os filhos de Elpaal foram: Héber, Misã, Semede (o qual edificou a Ono e a Lode com suas aldeias),
13 ೧೩ ಅಯ್ಯಾಲೋನ್ ಊರಿನ ಕುಟುಂಬಗಳಲ್ಲಿ ಪ್ರಮುಖರೂ, ಗತ್ ಊರಿನವರನ್ನು ಓಡಿಸಿ ಬಿಟ್ಟವರು ಬೆರೀಯ ಮತ್ತು ಶಮ.
Assim como Berias, e Sema, que foram cabeças das famílias dos moradores de Aijalom, os quais afugentaram aos moradores de Gate.
14 ೧೪ ಅಹಿಯೋ, ಶಾಷಕ್, ಯೆರೇಮೋತ್,
E Aiô, Sasaque, Jeremote,
15 ೧೫ ಜೆಬದ್ಯ, ಅರಾದ್, ಎದೆರ್,
Zebadias, Arade, Eder;
16 ೧೬ ಮಿಕಾಯೇಲ್, ಇಷ್ಪ ಮತ್ತು ಯೋಹ ಬೆರೀಯನ ಮಕ್ಕಳು.
Micael, Ispa, e Joá, foram filhos de Berias.
17 ೧೭ ಎಲ್ಪಾಲನ ಮಕ್ಕಳು ಜೆಬದ್ಯ, ಮೆಷುಲ್ಲಾಮ್, ಹೆಬೆರ್, ಹಿಜ್ಕೀ,
E Zebadias, Mesulão, Hizqui, Héber,
18 ೧೮ ಇಷ್ಮೆರೈ, ಇಜ್ಲೀಯ ಮತ್ತು ಯೋಬಾಬ್.
Ismerai, Izlias, e Jobabe, foram filhos de Elpaal.
19 ೧೯ ಯಾಕೀಮ್, ಜಿಕ್ರೀ, ಜಬ್ದೀ,
E Jaquim, Zicri, Zabdi,
20 ೨೦ ಎಲೀಗೇನೈ, ಚಿಲ್ಲೆತೈ, ಎಲೀಯೇಲ್,
Elioenai, Ziletai, Eliel,
21 ೨೧ ಆದಾಯ, ಬೆರಾಯ ಮತ್ತು ಶಿಮ್ರಾತ್ ಇವರು ಶಮ್ಮೀಯ ಮಕ್ಕಳು.
Adaías, Beraías, e Sinrate, foram filhos de Simei.
22 ೨೨ ಇಷ್ಪಾನ್, ಏಬೆರ್, ಎಲೀಯೇಲ್,
E Ispã, Héber, Eliel,
23 ೨೩ ಅಬ್ದೋನ್, ಜಿಕ್ರೀ, ಹಾನಾನ್, ಹನನ್ಯ, ಏಲಾಮ್, ಅನೆತೋತೀಯ,
Abdom, Zicri, Hanã,
24 ೨೪
Hananias, Elão, Antotias,
25 ೨೫ ಇಫ್ದೆಯಾಹ ಮತ್ತು ಪೆನೂವೇಲನು ಇವರು ಶಾಷಕನ ಮಕ್ಕಳು.
Ifdeias, e Penuel, foram filhos de Sasaque.
26 ೨೬ ಶಂಷೆರೈ, ಶೆಹರ್ಯ, ಅತಲ್ಯ,
E Sanserai, Searias, Atalias;
27 ೨೭ ಯಾರೆಷ್ಯ, ಏಲೀಯ ಮತ್ತು ಜಿಕ್ರೀ ಇವರು ಯೆರೋಹಾಮನ ಮಕ್ಕಳು.
Jaaresias, Elias, e Zicri, foram filhos de Jeroão.
28 ೨೮ ಇವರು ವಂಶಾವಳಿಯ ಪ್ರಕಾರ ಗೋತ್ರಪ್ರಧಾನರೂ, ಯೆರೂಸಲೇಮಿನಲ್ಲಿ ವಾಸಿಸುವವರೂ ಆಗಿದ್ದರು.
Estes foram cabeças de famílias, chefes segundo suas gerações; estes habitaram em Jerusalém.
29 ೨೯ ಗಿಬ್ಯೋನಿನಲ್ಲಿ ಗಿಬ್ಯೋನ್ಯರ ಮೂಲಪುರುಷನಾದ ಯೆಗೂವೇಲ್ ವಾಸಿಸುತ್ತಿದ್ದನು. ಅವನ ಹೆಂಡತಿಯ ಹೆಸರು ಮಾಕ.
E em Gibeão habitou o pai de Gibeão; e o nome de sua mulher era Maaca;
30 ೩೦ ಚೊಚ್ಚಲ ಮಗನು ಅಬ್ದೋನನು, ತರುವಾಯ ಹುಟ್ಟಿದವರು, ಚೂರ್, ಕೀಷ್, ಬಾಳ್, ನಾದಾಬ್,
E seu filho primogênito foi Abdom; depois Zur, Quis, Baal, Nadabe,
31 ೩೧ ಗೆದೋರ್, ಅಹ್ಯೋ ಮತ್ತು ಜೆಕೆರ್ ಇವರು.
Gedor, Aiô, Zequer,
32 ೩೨ ಮಿಕ್ಲೋತನು ಶಿಮಾಹನನ್ನು ಪಡೆದನು. ಇವರು ತಮ್ಮ ಗೋತ್ರದ ಕುಟುಂಬದವರೊಂದಿಗೆ ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದರು.
E Miclote, que gerou a Simeia. Estes também habitaram perto de irmãos em Jerusalém, vizinhos a eles.
33 ೩೩ ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನು ಯೋನಾತಾನ್, ಮಲ್ಕೀಷೂವ, ಅಬೀನಾದಾಬ್ ಮತ್ತು ಎಷ್ಬಾಳ ಇವರನ್ನು ಪಡೆದನು.
E Ner gerou a Quis; Quis gerou a Saul, e Saul gerou a Jônatas, Malquisua, Abinadabe, e a Esbaal.
34 ೩೪ ಯೋನಾತಾನನು ಮೆರೀಬ್ಬಾಳನನ್ನು ಪಡೆದನು; ಮೆರೀಬ್ಬಾಳನು ಮೀಕನನ್ನು ಪಡೆದನು.
O filho de Jônatas foi Meribe-Baal, e Meribe-Baal gerou a Mica.
35 ೩೫ ಮೀಕನ ಮಕ್ಕಳು: ಪೀತೋನ್, ಮೆಲೆಕ್, ತರೇಯ, ಆಹಾಜ್ ಇವರೇ.
Os filhos de Mica foram: Pitom, Meleque, Tareia e Acaz.
36 ೩೬ ಆಹಾಜನು ಯೆಹೋವದ್ದಾಹನನ್ನು ಪಡೆದನು. ಯೆಹೋವದ್ದಾಹನು ಆಲೆಮೆತ್, ಅಜ್ಮಾವೆತ್, ಜಿಮ್ರೀ ಇವರನ್ನು ಪಡೆದನು.
E Acaz gerou a Jeoada; e Jeoada gerou a Alemete, a Azmavete, e a Zinri; e Zinri gerou a Moza.
37 ೩೭ ಜಿಮ್ರೀಯು ಮೋಚನನ್ನು ಪಡೆದನು. ಮೋಚನು ಬಿನ್ನನನ್ನು ಪಡೆದನು. ಇವನ ಮಗ ರಾಫ. ಇವನ ಮಗನು ಎಲ್ಲಾಸ. ಇವನ ಮಗನು ಅಚೇಲ.
E Moza gerou a Bineá, cujo filho foi Rafa, cujo filho foi Eleasá, cujo filho foi Azel.
38 ೩೮ ಅಚೇಲನಿಗೆ ಆರು ಮಂದಿ ಮಕ್ಕಳಿದ್ದರು. ಅವರ ಹೆಸರುಗಳು ಅಜ್ರೀಕಾಮ್, ಬೋಕೆರೂ, ಇಷ್ಮಾಯೇಲ್, ಶೆಯರ್ಯ, ಓಬದ್ಯ ಮತ್ತು ಹಾನಾನ್.
Azel teve seis filhos, cujos nomes foram: Azricão, Bocru, Ismael, Searias, Obadias, e Hanã; todos estes foram filhos de Azel.
39 ೩೯ ಆಚೇಲನ ತಮ್ಮನಾದ ಏಷಕನ ಮಕ್ಕಳು: ಚೊಚ್ಚಲು ಮಗ ಊಲಾಮ್, ಎರಡನೆಯವನು ಯೆಯೂಷ್, ಮೂರನೆಯವನಾದ ಎಲೀಫೆಲೆಟ್.
E os filhos de Eseque, seu irmão, foram: Ulão seu primogênito, Jeús o segundo, e Elifelete o terceiro.
40 ೪೦ ಊಲಾಮನ ಮಕ್ಕಳು ಬಿಲ್ಲನ್ನು ಉಪಯೋಗಿಸುವುದರಲ್ಲಿ ಗಟ್ಟಿಗರಾದ ರಣವೀರರು. ಅವರು ಅನೇಕ ಮಂದಿ ಮಕ್ಕಳನ್ನೂ, ಮೊಮ್ಮಕ್ಕಳನ್ನೂ ಪಡೆದರು. ಒಟ್ಟು ನೂರ ಐವತ್ತು ಜನರು ಅವರ ಕುಟುಂಬದಲ್ಲಿದ್ದರು. ಎಲ್ಲರೂ ಬೆನ್ಯಾಮೀನ್ಯರು.
E os filhos de Ulão foram guerreiros valentes, hábeis flecheiros; e tiveram muitos filhos e netos, cento e cinquenta. Todos estes foram dos filhos de Benjamim.

< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 8 >