< ಕೊರಿಂಥದವರಿಗೆ ಬರೆದ ಮೊದಲನೆಯ ಪತ್ರಿಕೆ 10 >

1 ಸಹೋದರರೇ, ನಾನು ನಿಮಗೆ ತಿಳಿಸಲು ಅಪೇಕ್ಷಿಸುವ ಸಂಗತಿ ಏನೆಂದರೆ, ನಮ್ಮ ಪೂರ್ವಿಕರೆಲ್ಲರೂ ಮೇಘದ ಅಡಿಯಲ್ಲಿದ್ದು ಸಮುದ್ರವನ್ನು ದಾಟಿಹೋದರು.
Manuca rhoek aw, a pa rhoek tah khomai hmuiah boeih om uh tih tuili dongah boeih a kat uh te na mangvawt uh ham ka ngaih moenih.
2 ಅವರೆಲ್ಲರೂ ಮೋಶೆಯನ್ನು ಹಿಂಬಾಲಿಸುವುದಕ್ಕಾಗಿ ಮೇಘದಲ್ಲಿಯೂ ಸಮುದ್ರದಲ್ಲಿಯೂ ದೀಕ್ಷಾಸ್ನಾನವನ್ನು ಹೊಂದಿದರು.
Te vaengah Moses taengla khomai neh tuili dongah boeih nuem uh.
3 ಅವರೆಲ್ಲರೂ ಆತ್ಮೀಕವಾದ ಒಂದೇ ಆಹಾರವನ್ನು ತಿಂದರು.
Hlang boeih loh mueihla buh te amah la a caak uh.
4 ಅವರೆಲ್ಲರೂ ದೈವಿಕವಾದ ಒಂದೇ ನೀರನ್ನು ಕುಡಿದರು. ಹೇಗೆಂದರೆ ಅವರನ್ನು ಹಿಂಬಾಲಿಸುತ್ತಿದ್ದ ದೈವಿಕವಾದ ಬಂಡೆಯೊಳಗಿಂದ ಬಂದ ನೀರನ್ನು ಕುಡಿಯುತ್ತಿದ್ದರು. ಆ ಬಂಡೆ ಕ್ರಿಸ್ತನೇ.
A cungkuem loh mueihla tui te amah la a ok uh. Amih aka hmaithawn mueihla lungpang lamkah te a ok uh. Te dongah Khrih tah lungpang la om.
5 ಆದರೂ ಅವರಲ್ಲಿ ಬಹು ಮಂದಿಯನ್ನು ದೇವರು ಮೆಚ್ಚಲಿಲ್ಲ. ಆದ್ದರಿಂದ ಅವರು ಸಂಹರಿಸಲ್ಪಟ್ಟರು ಮತ್ತು ಅವರ ಶವಗಳು ಅಡವಿಯಲ್ಲೆಲ್ಲ ಬಿದ್ದವು.
Tedae Pathen tah a yet ngai taengah a lungtlun pawt tih khosoek ah mitmoeng uh.
6 ಅವರು ಕೆಟ್ಟ ವಿಷಯಗಳನ್ನು ಮೋಹಿಸದಂತೆ ನಾವು ಮೋಹಿಸುವವರಾಗಬಾರದೆಂಬುದಕ್ಕಾಗಿ ಈ ಸಂಗತಿಗಳು ನಮಗೆ ನಿದರ್ಶನಗಳಾಗಿವೆ.
Te rhoek te mamih ham mueimae la ana thoeng coeng. Te daengah ni amih loh a nai bangla mamih taengah boethae huengaihnah te a om pawt eh.
7 ಅವರಲ್ಲಿ ಕೆಲವರು ವಿಗ್ರಹಾರಾಧಕರಾಗಿದ್ದರು, “ಜನರು ತಿನ್ನುವುದಕ್ಕೂ, ಕುಡಿಯುವುದಕ್ಕೂ ಕುಳಿತುಕೊಂಡರು. ಕಾಮಾಭಿಲಾಷೆಯಿಂದ ಕುಣಿದಾಡುವುದಕ್ಕೆ ಎದ್ದರು” ಎಂದು ಬರೆದಿದೆಯಲ್ಲಾ. ನೀವು ಅವರ ಹಾಗೆ ವಿಗ್ರಹಾರಾಧಕರಾಗಬೇಡಿರಿ.
Amih taengkah hlangvang, mueibawk rhoek bangla om uh boeh. A daek vanbangla pilnam tah caak ham neh ok hamla ngol tih malawk hamla pai.
8 ಅವರಲ್ಲಿ ಕೆಲವರು ಜಾರತ್ವ ಮಾಡಿ ಒಂದೇ ದಿನದಲ್ಲಿ ಇಪ್ಪತ್ತು ಮೂರು ಸಾವಿರ ಜನರು ಸಾವನ್ನಪ್ಪಿದರು. ಅವರ ಹಾಗೆ ನಾವು ಜಾರತ್ವ ಮಾಡದೆ ಇರೋಣ.
Amih khuikah hlangvang loh a cukhalh uh bangla cukhalh uh boel sih. Te dongah ni hlang thawngkul thawng thum loh khohnin pakhat ah ana cungku uh.
9 ಅವರಲ್ಲಿ ಕೆಲವರು ಕರ್ತನನ್ನು ಪರೀಕ್ಷಿಸಿ ಸರ್ಪಗಳಿಂದ ನಾಶವಾದರು. ನಾವು ಪರೀಕ್ಷಿಸದೆ ಇರೋಣ.
Amih khuikah a ngen loh a noemcai uh bangla Khrih te noemcai uh boel sih. Te dongah ni rhul loh a poci sakuh.
10 ೧೦ ಇದಲ್ಲದೆ ಅವರಲ್ಲಿ ಕೆಲವರು ಗೊಣಗುಟ್ಟಿ ಸಂಹಾರಕ ದೂತನ ಕೈಯಿಂದ ನಾಶವಾದರು. ನೀವು ಗುಣಗುಟ್ಟಬೇಡಿರಿ.
Amih khuikah hlangvang loh a kohuet uh bangla kohuet uh boeh. Te dongah ni aka phaekung lamloh a poci uh.
11 ೧೧ ಅವರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನರೂಪವಾಗಿವೆ. ಮತ್ತು ಯುಗಾಂತ್ಯಕ್ಕೆ ಬಂದಿರುವವರಾದ ನಮಗೆ ಇದು ಎಚ್ಚರಿಕೆಯ ಮಾತುಗಳಾಗಿ ಬರೆದಿವೆ. (aiōn g165)
Te tah amih taengah mueimae la ana thoeng coeng. Tedae kumhal kah a bawtnah loh amih taengla a pha te mamih rhalrhingnah ham a daek coeng. (aiōn g165)
12 ೧೨ ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳದಂತೆ ಎಚ್ಚರಿಕೆಯಾಗಿರಲಿ.
Te dongah a pai hamla aka poek long tah a bung pawt ham ngaithuen saeh.
13 ೧೩ ಮನುಷ್ಯರಿಗೆ ಸಾಧಾರಣವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲವಲ್ಲ. ದೇವರು ನಂಬಿಗಸ್ತನು. ನಿಮ್ಮ ಶಕ್ತಿಗೆ ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವುದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.
Nangmih te hlanghing pawt koinih cuekhalhnah loh n'kae mahpawh. Tedae uepom Pathen amah loh na noeng uh kah a voelah noemcai ham n'hlah mahpawh. Tedae noemcainah te ueh thai ham caehlong khaw a saii bitni.
14 ೧೪ ಆದ್ದರಿಂದ ಪ್ರಿಯರೇ, ವಿಗ್ರಹಾರಾಧನೆಯನ್ನು ಬಿಟ್ಟು ದೂರವಾಗಿರಿ.
Te dongah ka thintlo rhoek mueibawknah lamloh rhaelrham uh laeh.
15 ೧೫ ನೀವು ವಿವೇಕಿಗಳೆಂದು ಇದನ್ನು ಹೇಳುತ್ತೇನೆ. ನಾನು ಹೇಳುವುದನ್ನು ನೀವೇ ಯೋಚಿಸಿರಿ.
Hlang cueih rhoek bangla ka thui. Nangmih loh oltloek ham te ka thui.
16 ೧೬ ನಾವು ದೇವರ ಸ್ತೋತ್ರಮಾಡಿ ಪಾನಪಾತ್ರೆಯಲ್ಲಿ ಪಾನ ಮಾಡುವುದು ಕ್ರಿಸ್ತನ ರಕ್ತದಲ್ಲಿ ಪಾಲುಗಾರರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ? ನಾವು ರೊಟ್ಟಿಯನ್ನು ಮುರಿದು ತಿನ್ನುವುದು ಕ್ರಿಸ್ತನ ದೇಹದಲ್ಲಿ ಪಾಲುಗಾರರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ?
yoethennah boengloeng te tah n'uem uh coeng. Te te Khrih thii bulbonah la a om moenih a? Vaidam n'aeh uh te Khrih pum te bulbonah la a om moenih a?
17 ೧೭ ರೊಟ್ಟಿ ಒಂದೇ ಆಗಿರುವ ಹಾಗೆ ಅನೇಕರಾಗಿರುವ ನಾವೆಲ್ಲರು ಒಂದೇ ದೇಹದಂತಿದ್ದೇವೆ. ಯಾಕೆಂದರೆ ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಪಾಲು ತೆಗೆದುಕೊಂಡು ತಿನ್ನುತ್ತೇವೆ.
Vaidam tah pakhat, pum pakhat la tun n'om uh. Hlang boeih loh vaidam pakhat te ni n'cabol uh.
18 ೧೮ ಇಸ್ರಾಯೇಲ್ಯ ಜನರ ಕುರಿತು ಯೋಚಿಸಿರಿ. ಯಜ್ಞಮಾಡಿದ್ದನ್ನು ತಿನ್ನುವವರು ಯಜ್ಞವೇದಿಯೊಡನೆ ಪಾಲುಗಾರರಾಗಿದ್ದಾರಲ್ಲವೇ.
Pumsa ah Israel te dan uh lah. Te rhoek tah hmueih aka ca neh hmueihtuk kah a pueipo la a om uh moenih a?
19 ೧೯ ಹಾಗಾದರೆ ನಾನು ಏನು ಹೇಳಿದ ಹಾಗಾಯಿತು? ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥವು ವಾಸ್ತವವೆಂದೋ ಅಥವಾ ವಿಗ್ರಹವು ವಾಸ್ತವವೆಂದು ನನ್ನ ಅಭಿಪ್ರಾಯವೋ? ಅಲ್ಲ,
Te dongah ka thui coeng te ta. Khat khat tah mueirhol buh la om tih khat khat tah mueirhol la om ta.
20 ೨೦ ಆದರೆ ಅನ್ಯಜನರು ತಾವು ಅರ್ಪಿಸುವ ಬಲಿಗಳನ್ನು ದೇವರಿಗಲ್ಲ, ದೆವ್ವಗಳಿಗೆ ಅರ್ಪಿಸುತ್ತಾರೆಂಬುದು ನನ್ನ ಅಭಿಪ್ರಾಯವು. ನೀವು ದೆವ್ವಗಳೊಡನೆ ಪಾಲುಗಾರರಾಗಿರಬೇಕೆಂಬುದು ನನ್ನ ಇಷ್ಟವಲ್ಲ.
Tedae te te rhaithae ham a ngawn tih Pathen taengah a nawn uh moenih. Te dongah rhaithae kah pueipo la na om uh ka ngaih moenih.
21 ೨೧ ನೀವು ಕರ್ತನ ಪಾನಪಾತ್ರೆಯಲ್ಲಿಯೂ ಹಾಗೂ ದೆವ್ವಗಳ ಪಾನಪಾತ್ರೆಯಲ್ಲಿಯೂ ಕುಡಿಯಲಾರಿರಿ. ಕರ್ತನ ಪಂಕ್ತಿಯಲ್ಲಿಯೂ ಮತ್ತು ದೆವ್ವಗಳ ಪಂಕ್ತಿಯಲ್ಲಿಯೂ ಊಟಮಾಡಲಾರಿರಿ.
Boeipa kah boengloeng neh rhaithae kah boengloeng hmaih na ok uh thai moenih. Boeipa kah caboei neh rhaithae kah caboei te na cabol thai moenih.
22 ೨೨ ಕರ್ತನಿಗೆ ಕೋಪವನ್ನುಂಟುಮಾಡಿ ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೋ?
Boeipa n'thatlai sak te khaw amah lakah thaom la n'om pawt nim?
23 ೨೩ “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಅಧಿಕಾರವುಂಟು.” ಆದರೆ ಎಲ್ಲವೂ ಪ್ರಯೋಜನಕರವಾಗಿರುವುದಿಲ್ಲ. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಅಧಿಕಾರವುಂಟು” ಆದರೆ ಎಲ್ಲವೂ ಜನರನ್ನು ಭಕ್ತಿಯಲ್ಲಿ ಬೆಳೆಸುವುದಿಲ್ಲ.
A cungkuem loh thuem cakhaw a cungkuem khaw a rhoei moenih. A cungkuem loh thuem cakhaw a cungkuem loh a hlinsai moenih.
24 ೨೪ ಪ್ರತಿಯೊಬ್ಬನು ತನ್ನ ಹಿತವನ್ನು ಚಿಂತಿಸದೇ ಪರಹಿತವನ್ನು ಚಿಂತಿಸಲಿ.
Amah kah te pawt tih hlang tloe kah te tlap saeh.
25 ೨೫ ಮಾಂಸದ ಅಂಗಡಿಯಲ್ಲಿ ಮಾರುವಂಥದ್ದು ಏನಿದ್ದರೂ ಅದನ್ನು ಮನಸ್ಸಾಕ್ಷಿಯಲ್ಲಿ ಸಂಶಯ ಹುಟ್ಟಿಸುವಂತೆ ವಿಚಾರ ಮಾಡದೇ ತಿನ್ನಿರಿ.
Maehkung kah a yoih boeih te mingcimnah lamloh boelh mueh la ca uh.
26 ೨೬ “ಭೂಮಿಯು ಅದರಲ್ಲಿರುವ ಸಮಸ್ತವೂ ಕರ್ತನದಲ್ಲವೇ.”
Diklai neh a khuiah aka baetawt he Boeipa kah ni.
27 ೨೭ ಕ್ರಿಸ್ತನನ್ನು ನಂಬದವರಲ್ಲಿ ಒಬ್ಬನು ನಿಮ್ಮನ್ನು ಊಟಕ್ಕೆ ಕರೆಯುವಾಗ ಹೋಗುವುದಕ್ಕೆ ನಿಮಗಿಷ್ಟವಿದ್ದರೆ ನಿಮಗೇನು ಬಡಿಸಿದರೂ ಮನಸ್ಸಾಕ್ಷಿಯನ್ನು ಪ್ರಶ್ನಿಸದೇ ಅದನ್ನು ತಿನ್ನಿರಿ.
Aka tangnahmueh khuikah khat khat loh nangmih te n'khue tih caeh na ngaih atah mingcimnah lamloh boelh kolla nangmih ham han tawn carhui tah ca uh.
28 ೨೮ ಆದರೆ ಒಬ್ಬನು ನಿಮಗೆ “ಇದು ವಿಗ್ರಹಾಲಯದಲ್ಲಿ ಬಲಿಕೊಟ್ಟದ್ದು” ಎಂದು ಹೇಳಿದರೆ ಈ ಸಂಗತಿಯನ್ನು ತಿಳಿಸಿದವನ ನಿಮಿತ್ತವಾಗಿಯೂ ಮನಸ್ಸಾಕ್ಷಿಯ ನಿಮಿತ್ತವಾಗಿಯೂ ಅದನ್ನು ತಿನ್ನಬೇಡಿರಿ.
Tedae khat khat loh nangmih taengah, “He he mueirhol buh ni,” a ti atah anih, aka puen neh mingcimnah kongah ca uh boeh.
29 ೨೯ ಅದು ನಿನ್ನ ಸ್ವಂತ ಮನಸ್ಸಾಕ್ಷಿಗಾಗಿ ಅಲ್ಲ; ಮತ್ತೊಬ್ಬನ ಮನಸ್ಸಾಕ್ಷಿಗಾಗಿಯೇ ಹೇಳಲಾಗಿದೆ. ಮತ್ತೊಬ್ಬನ ಮನಸ್ಸಾಕ್ಷಿಯ ನಿಮಿತ್ತ ನನ್ನ ಸ್ವಾತಂತ್ರ್ಯಕ್ಕೆ ಯಾಕೆ ತೀರ್ಪಾಗಬೇಕು?
Tedae anih bueng pawt tih hlang tloe kah mingcimnah te ka thui. Balae tih kai kah poenghalnah tah hlang tloe kah mingcimnah neh lai a tloek thil.
30 ೩೦ ನಾನು ಕೃತಜ್ಞತೆಯೊಡನೆ ಊಟಮಾಡಿ ದೇವರನ್ನು ಸ್ತುತಿಸಿದ ಮೇಲೆ ಆ ಪದಾರ್ಥಗಳ ನಿಮಿತ್ತ ನನಗೆ ಯಾಕೆ ದೂಷಣೆಯಾಗಬೇಕು?
Kai loh lungvatnah neh ka cabol atah balae tih kai loh ka uem te n'soehsal?
31 ೩೧ ಹೀಗಿರಲಾಗಿ ನೀವು ತಿಂದರೂ, ಕುಡಿದರೂ, ಇನ್ನೇನು ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.
Te dongah mebang na caak uh akhaw, na ok uh akhaw, mebang na saii uh akhaw, a cungluem te Pathen kah thangpomnah ham saii uh.
32 ೩೨ ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ವಿಘ್ನವಾಗಬೇಡಿರಿ.
Judah rhoek taeng neh Greek rhoek taengah khaw, Pathen kah hlangboel taengah khaw a cuemhmuet la om uh.
33 ೩೩ ನಾನಂತೂ ಸ್ವಪ್ರಯೋಜನಕ್ಕಾಗಿ ಚಿಂತಿಸದೇ ಮನುಷ್ಯರೆಲ್ಲರು ರಕ್ಷಣೆ ಹೊಂದಬೇಕೆಂದು ಅವರ ಪ್ರಯೋಜನಕ್ಕಾಗಿ ಚಿಂತಿಸಿ, ಎಲ್ಲರನ್ನು ಎಲ್ಲಾ ವಿಷಯಗಳಲ್ಲಿ ಮೆಚ್ಚಿಸುವವನಾಗಿದ್ದೇನೆ.
Kai tah hlang boeih taengah boeih ka kolo. Kamah ka rhoeirhoep ham pawt tih a yet kah te ni ka toem. Te daengah ni a daem uh eh.

< ಕೊರಿಂಥದವರಿಗೆ ಬರೆದ ಮೊದಲನೆಯ ಪತ್ರಿಕೆ 10 >