< ಕೊರಿಂಥದವರಿಗೆ ಬರೆದ ಮೊದಲನೆಯ ಪತ್ರಿಕೆ 10 >
1 ೧ ಸಹೋದರರೇ, ನಾನು ನಿಮಗೆ ತಿಳಿಸಲು ಅಪೇಕ್ಷಿಸುವ ಸಂಗತಿ ಏನೆಂದರೆ, ನಮ್ಮ ಪೂರ್ವಿಕರೆಲ್ಲರೂ ಮೇಘದ ಅಡಿಯಲ್ಲಿದ್ದು ಸಮುದ್ರವನ್ನು ದಾಟಿಹೋದರು.
N kpiiba mii bua ke yaala n den tieni ti yaajanba n ya boani yi: Ku tawaligu den yiini bikuli po, bikuli den duodi mi ñincianma.
2 ೨ ಅವರೆಲ್ಲರೂ ಮೋಶೆಯನ್ನು ಹಿಂಬಾಲಿಸುವುದಕ್ಕಾಗಿ ಮೇಘದಲ್ಲಿಯೂ ಸಮುದ್ರದಲ್ಲಿಯೂ ದೀಕ್ಷಾಸ್ನಾನವನ್ನು ಹೊಂದಿದರು.
Bikuli den baa mi batisima Musa niinini ku tawaligu nni leni mi ñincianma nni.
3 ೩ ಅವರೆಲ್ಲರೂ ಆತ್ಮೀಕವಾದ ಒಂದೇ ಆಹಾರವನ್ನು ತಿಂದರು.
Bikuli den di jeyenma yaama n ña U Tienu kani,
4 ೪ ಅವರೆಲ್ಲರೂ ದೈವಿಕವಾದ ಒಂದೇ ನೀರನ್ನು ಕುಡಿದರು. ಹೇಗೆಂದರೆ ಅವರನ್ನು ಹಿಂಬಾಲಿಸುತ್ತಿದ್ದ ದೈವಿಕವಾದ ಬಂಡೆಯೊಳಗಿಂದ ಬಂದ ನೀರನ್ನು ಕುಡಿಯುತ್ತಿದ್ದರು. ಆ ಬಂಡೆ ಕ್ರಿಸ್ತನೇ.
ki go ñu bonñokayenla yaala n ña u Tienu kani, kelima bi den ñu ya tangu ya ñima n ñani U Tienu kani, yaagu n den yegi leni ba. Laa tangu den tie kilisiti.
5 ೫ ಆದರೂ ಅವರಲ್ಲಿ ಬಹು ಮಂದಿಯನ್ನು ದೇವರು ಮೆಚ್ಚಲಿಲ್ಲ. ಆದ್ದರಿಂದ ಅವರು ಸಂಹರಿಸಲ್ಪಟ್ಟರು ಮತ್ತು ಅವರ ಶವಗಳು ಅಡವಿಯಲ್ಲೆಲ್ಲ ಬಿದ್ದವು.
Ama bi siiga boncianla ki den mangidi U Tienu pali, lani n teni ke bi den kpe mi fanpienma nni.
6 ೬ ಅವರು ಕೆಟ್ಟ ವಿಷಯಗಳನ್ನು ಮೋಹಿಸದಂತೆ ನಾವು ಮೋಹಿಸುವವರಾಗಬಾರದೆಂಬುದಕ್ಕಾಗಿ ಈ ಸಂಗತಿಗಳು ನಮಗೆ ನಿದರ್ಶನಗಳಾಗಿವೆ.
Lankuli tie ti po li bonbangikaala, ki bua ki tuodi ki bangi ti ke tin da bua yaala n bia nani bani yeni.
7 ೭ ಅವರಲ್ಲಿ ಕೆಲವರು ವಿಗ್ರಹಾರಾಧಕರಾಗಿದ್ದರು, “ಜನರು ತಿನ್ನುವುದಕ್ಕೂ, ಕುಡಿಯುವುದಕ್ಕೂ ಕುಳಿತುಕೊಂಡರು. ಕಾಮಾಭಿಲಾಷೆಯಿಂದ ಕುಣಿದಾಡುವುದಕ್ಕೆ ಎದ್ದರು” ಎಂದು ಬರೆದಿದೆಯಲ್ಲಾ. ನೀವು ಅವರ ಹಾಗೆ ವಿಗ್ರಹಾರಾಧಕರಾಗಬೇಡಿರಿ.
Yin da hoadi i buli nani bi siiga bi tianba n den tieni maama. Nani lan diani maama: «Bi den kali ki dini ki go ñu, lani n pendi bi den fii ki jeli ki ciaga.»
8 ೮ ಅವರಲ್ಲಿ ಕೆಲವರು ಜಾರತ್ವ ಮಾಡಿ ಒಂದೇ ದಿನದಲ್ಲಿ ಇಪ್ಪತ್ತು ಮೂರು ಸಾವಿರ ಜನರು ಸಾವನ್ನಪ್ಪಿದರು. ಅವರ ಹಾಗೆ ನಾವು ಜಾರತ್ವ ಮಾಡದೆ ಇರೋಣ.
Tin da pa ti yula mi conconma mo nani bi siiga bi tianba n den puni bi yula mipo maama, ke piilie n niba tuda taa den kpe dayenli.
9 ೯ ಅವರಲ್ಲಿ ಕೆಲವರು ಕರ್ತನನ್ನು ಪರೀಕ್ಷಿಸಿ ಸರ್ಪಗಳಿಂದ ನಾಶವಾದರು. ನಾವು ಪರೀಕ್ಷಿಸದೆ ಇರೋಣ.
Tin da biigi o Diedo nani bi siiga bi tianba n den tiedi maama ke i we ku ba.
10 ೧೦ ಇದಲ್ಲದೆ ಅವರಲ್ಲಿ ಕೆಲವರು ಗೊಣಗುಟ್ಟಿ ಸಂಹಾರಕ ದೂತನ ಕೈಯಿಂದ ನಾಶವಾದರು. ನೀವು ಗುಣಗುಟ್ಟಬೇಡಿರಿ.
Yin da yenbidi mo nani bi siiga bi tianba n den yenbidi maama, ke mi kuuma maleki den ku ba.
11 ೧೧ ಅವರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನರೂಪವಾಗಿವೆ. ಮತ್ತು ಯುಗಾಂತ್ಯಕ್ಕೆ ಬಂದಿರುವವರಾದ ನಮಗೆ ಇದು ಎಚ್ಚರಿಕೆಯ ಮಾತುಗಳಾಗಿ ಬರೆದಿವೆ. (aiōn )
Laa bonla kuli den baa bipo ki baa tie bi niba kuli po li bonbangikaala. U Tienu den teni ke likuli diani ki baa tie tipo i dundi, tinba yaaba n ye handuna juodima dana siiga. (aiōn )
12 ೧೨ ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳದಂತೆ ಎಚ್ಚರಿಕೆಯಾಗಿರಲಿ.
Lanyaapo yua n tama ke o se wan fangi o yuli ki da baa.
13 ೧೩ ಮನುಷ್ಯರಿಗೆ ಸಾಧಾರಣವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲವಲ್ಲ. ದೇವರು ನಂಬಿಗಸ್ತನು. ನಿಮ್ಮ ಶಕ್ತಿಗೆ ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವುದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.
Tulinmaba kuli kan cua yi kani kaa tie yaama n kpendi bi nisaaliba kuli po. U Tienu tie dugika, o kan tuo ya tulinma n cie yi fidu bianu n cua yi kani. Ama mi biigima ya cua yi kani, o baa hanbi yipo u sanu ke yin fidi ki juuni ki ña lienni
14 ೧೪ ಆದ್ದರಿಂದ ಪ್ರಿಯರೇ, ವಿಗ್ರಹಾರಾಧನೆಯನ್ನು ಬಿಟ್ಟು ದೂರವಾಗಿರಿ.
Lanyaapo n buakaaba, yin sani mani ki foagidi leni i buli hoadima.
15 ೧೫ ನೀವು ವಿವೇಕಿಗಳೆಂದು ಇದನ್ನು ಹೇಳುತ್ತೇನೆ. ನಾನು ಹೇಳುವುದನ್ನು ನೀವೇ ಯೋಚಿಸಿರಿ.
N maadi leni yi kelima yi tie yanfodanba, yin bigi mani mi maadi yaama na.
16 ೧೬ ನಾವು ದೇವರ ಸ್ತೋತ್ರಮಾಡಿ ಪಾನಪಾತ್ರೆಯಲ್ಲಿ ಪಾನ ಮಾಡುವುದು ಕ್ರಿಸ್ತನ ರಕ್ತದಲ್ಲಿ ಪಾಲುಗಾರರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ? ನಾವು ರೊಟ್ಟಿಯನ್ನು ಮುರಿದು ತಿನ್ನುವುದು ಕ್ರಿಸ್ತನ ದೇಹದಲ್ಲಿ ಪಾಲುಗಾರರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ?
Li seli tadiñokaaga tin tuondi U Tienu yaaga yaapo, naani kaa tie mi taanyenma leni Kilisiti soama po kaa? Tin cabidi ya dupen, naani tii tie mi taanyenma leni Kilisiti gbanandi po kaa?
17 ೧೭ ರೊಟ್ಟಿ ಒಂದೇ ಆಗಿರುವ ಹಾಗೆ ಅನೇಕರಾಗಿರುವ ನಾವೆಲ್ಲರು ಒಂದೇ ದೇಹದಂತಿದ್ದೇವೆ. ಯಾಕೆಂದರೆ ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಪಾಲು ತೆಗೆದುಕೊಂಡು ತಿನ್ನುತ್ತೇವೆ.
Dupen tie yendo, tinba yaaba n yaba moko tie gbananyendi, kelima tikuli taani ki boagidi laa dupen yendo
18 ೧೮ ಇಸ್ರಾಯೇಲ್ಯ ಜನರ ಕುರಿತು ಯೋಚಿಸಿರಿ. ಯಜ್ಞಮಾಡಿದ್ದನ್ನು ತಿನ್ನುವವರು ಯಜ್ಞವೇದಿಯೊಡನೆ ಪಾಲುಗಾರರಾಗಿದ್ದಾರಲ್ಲವೇ.
Kpaagi mani Isalele yaaba po, bi ya dini tipadijiedi, naani baa pia taayenma leni U Tienu kaa?
19 ೧೯ ಹಾಗಾದರೆ ನಾನು ಏನು ಹೇಳಿದ ಹಾಗಾಯಿತು? ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥವು ವಾಸ್ತವವೆಂದೋ ಅಥವಾ ವಿಗ್ರಹವು ವಾಸ್ತವವೆಂದು ನನ್ನ ಅಭಿಪ್ರಾಯವೋ? ಅಲ್ಲ,
N bua ki yedi be? Ke o bulo tie bonmoanla bi? Bi ke ban padi yaala o bulo tie bonmoanla bi? Kalam.
20 ೨೦ ಆದರೆ ಅನ್ಯಜನರು ತಾವು ಅರ್ಪಿಸುವ ಬಲಿಗಳನ್ನು ದೇವರಿಗಲ್ಲ, ದೆವ್ವಗಳಿಗೆ ಅರ್ಪಿಸುತ್ತಾರೆಂಬುದು ನನ್ನ ಅಭಿಪ್ರಾಯವು. ನೀವು ದೆವ್ವಗಳೊಡನೆ ಪಾಲುಗಾರರಾಗಿರಬೇಕೆಂಬುದು ನನ್ನ ಇಷ್ಟವಲ್ಲ.
N bua ki yedi ke yaaba n padi i buli yeni padi mu cicibiadimu po yo, baa padi U Tienu po ka. Mii bua ke yin ya pia hantaado leni mu cicibiadimu.
21 ೨೧ ನೀವು ಕರ್ತನ ಪಾನಪಾತ್ರೆಯಲ್ಲಿಯೂ ಹಾಗೂ ದೆವ್ವಗಳ ಪಾನಪಾತ್ರೆಯಲ್ಲಿಯೂ ಕುಡಿಯಲಾರಿರಿ. ಕರ್ತನ ಪಂಕ್ತಿಯಲ್ಲಿಯೂ ಮತ್ತು ದೆವ್ವಗಳ ಪಂಕ್ತಿಯಲ್ಲಿಯೂ ಊಟಮಾಡಲಾರಿರಿ.
Yi kan fidi ki ño o Diedo tadiñokaaga ki go ño mu cicibiadimu ya tadiñokaaga. Yi kan taani ki je o Diedo jiema, ki go taani li je mu cicibiadimu mo ya jiema.
22 ೨೨ ಕರ್ತನಿಗೆ ಕೋಪವನ್ನುಂಟುಮಾಡಿ ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೋ?
Ti baa tieni yeni ki ñuuni o Diedo li mutuoli bii? Ti pia o fidu ki cie o bi?
23 ೨೩ “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಅಧಿಕಾರವುಂಟು.” ಆದರೆ ಎಲ್ಲವೂ ಪ್ರಯೋಜನಕರವಾಗಿರುವುದಿಲ್ಲ. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಅಧಿಕಾರವುಂಟು” ಆದರೆ ಎಲ್ಲವೂ ಜನರನ್ನು ಭಕ್ತಿಯಲ್ಲಿ ಬೆಳೆಸುವುದಿಲ್ಲ.
Yi tua: «Liba kuli ki go kua» yeni, ama li bonla kuli ka hani, «Li ba kuli ki go kua, ama li bonla kuli ka todi.
24 ೨೪ ಪ್ರತಿಯೊಬ್ಬನು ತನ್ನ ಹಿತವನ್ನು ಚಿಂತಿಸದೇ ಪರಹಿತವನ್ನು ಚಿಂತಿಸಲಿ.
Oba kuli da lingi o yuceli bebe ya hamu, ama wan ya lingi yaala n tie o lieba moko yaapo.
25 ೨೫ ಮಾಂಸದ ಅಂಗಡಿಯಲ್ಲಿ ಮಾರುವಂಥದ್ದು ಏನಿದ್ದರೂ ಅದನ್ನು ಮನಸ್ಸಾಕ್ಷಿಯಲ್ಲಿ ಸಂಶಯ ಹುಟ್ಟಿಸುವಂತೆ ವಿಚಾರ ಮಾಡದೇ ತಿನ್ನಿರಿ.
Yi pia u sanu ki hamani ya nandi kuadi ki daaga nni kuli, ki da tuo yi pala siedi n ya bangi liba kuli po,
26 ೨೬ “ಭೂಮಿಯು ಅದರಲ್ಲಿರುವ ಸಮಸ್ತವೂ ಕರ್ತನದಲ್ಲವೇ.”
kelima li diani ki yedi: «O Diedo die ki tinga Leni yaala n ye ki niinni kuli.»
27 ೨೭ ಕ್ರಿಸ್ತನನ್ನು ನಂಬದವರಲ್ಲಿ ಒಬ್ಬನು ನಿಮ್ಮನ್ನು ಊಟಕ್ಕೆ ಕರೆಯುವಾಗ ಹೋಗುವುದಕ್ಕೆ ನಿಮಗಿಷ್ಟವಿದ್ದರೆ ನಿಮಗೇನು ಬಡಿಸಿದರೂ ಮನಸ್ಸಾಕ್ಷಿಯನ್ನು ಪ್ರಶ್ನಿಸದೇ ಅದನ್ನು ತಿನ್ನಿರಿ.
Yua ki daani ya yini yi ke yin cua ki je leni o, ke yi bua ki gedi, je mani wan teni ya jiema kuli, ki da buali kelima yi pali siedi po.
28 ೨೮ ಆದರೆ ಒಬ್ಬನು ನಿಮಗೆ “ಇದು ವಿಗ್ರಹಾಲಯದಲ್ಲಿ ಬಲಿಕೊಟ್ಟದ್ದು” ಎಂದು ಹೇಳಿದರೆ ಈ ಸಂಗತಿಯನ್ನು ತಿಳಿಸಿದವನ ನಿಮಿತ್ತವಾಗಿಯೂ ಮನಸ್ಸಾಕ್ಷಿಯ ನಿಮಿತ್ತವಾಗಿಯೂ ಅದನ್ನು ತಿನ್ನಬೇಡಿರಿ.
Ama o nilo ya yedi yi: «Ya nandi n tie na tie padinandi, » da je mani kelima ya nilo n waani yi la po, leni li pali siedo po.
29 ೨೯ ಅದು ನಿನ್ನ ಸ್ವಂತ ಮನಸ್ಸಾಕ್ಷಿಗಾಗಿ ಅಲ್ಲ; ಮತ್ತೊಬ್ಬನ ಮನಸ್ಸಾಕ್ಷಿಗಾಗಿಯೇ ಹೇಳಲಾಗಿದೆ. ಮತ್ತೊಬ್ಬನ ಮನಸ್ಸಾಕ್ಷಿಯ ನಿಮಿತ್ತ ನನ್ನ ಸ್ವಾತಂತ್ರ್ಯಕ್ಕೆ ಯಾಕೆ ತೀರ್ಪಾಗಬೇಕು?
N baa ya nilo n waani yi yeni ya pali siedo, mii maadi yi ya pali siedo ka. Be yaaapo ke nitoa pali siedi ba bu leni min pia u sanu ki tieni yaala yaapo?
30 ೩೦ ನಾನು ಕೃತಜ್ಞತೆಯೊಡನೆ ಊಟಮಾಡಿ ದೇವರನ್ನು ಸ್ತುತಿಸಿದ ಮೇಲೆ ಆ ಪದಾರ್ಥಗಳ ನಿಮಿತ್ತ ನನಗೆ ಯಾಕೆ ದೂಷಣೆಯಾಗಬೇಕು?
N ya tuondi U Tienu n jiema po, be yaapo ke bi baa jaligin nni min tuondi U Tienu ya jiema po?
31 ೩೧ ಹೀಗಿರಲಾಗಿ ನೀವು ತಿಂದರೂ, ಕುಡಿದರೂ, ಇನ್ನೇನು ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.
Lani, yi ya baa je, leni yi ya baa ño, leni yin baa tieni yaala kuli, tieni mani li kuli U Tienu ya kpiagidi po.
32 ೩೨ ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ವಿಘ್ನವಾಗಬೇಡಿರಿ.
Yin da tieni mani yaala n baa teni Jufinba leni yaaba kaa tie Jufinba leni U Tienu n yini yaaba n tuudi ki baa ti tuonbiadi nni.
33 ೩೩ ನಾನಂತೂ ಸ್ವಪ್ರಯೋಜನಕ್ಕಾಗಿ ಚಿಂತಿಸದೇ ಮನುಷ್ಯರೆಲ್ಲರು ರಕ್ಷಣೆ ಹೊಂದಬೇಕೆಂದು ಅವರ ಪ್ರಯೋಜನಕ್ಕಾಗಿ ಚಿಂತಿಸಿ, ಎಲ್ಲರನ್ನು ಎಲ್ಲಾ ವಿಷಯಗಳಲ್ಲಿ ಮೆಚ್ಚಿಸುವವನಾಗಿದ್ದೇನೆ.
N moko moandi ki tiendi yeni ki baa dagidi leni bi niba kuli min tiendi yaala kuli nni. Mii tiendi yeni ki bua ki lingi yuceli hamu kaa, n lingi yaaba yaba ya hamu po, ke ban baa ki tindi