< ಕೊರಿಂಥದವರಿಗೆ ಬರೆದ ಮೊದಲನೆಯ ಪತ್ರಿಕೆ 12 >
1 ೧ ಸಹೋದರರೇ ಪವಿತ್ರಾತ್ಮನಿಂದುಂಟಾಗುವ ವರಗಳನ್ನು ಕುರಿತು ನಿಮಗೆ ತಿಳಿವಳಿಕೆಯಿರಬೇಕೆಂದು ನಾನು ಅಪೇಕ್ಷಿಸುತ್ತೇನೆ.
E quanto aos [dons] espirituais, irmãos, não quero que sejais ignorantes.
2 ೨ ನೀವು ಅನ್ಯಜನರಾಗಿದ್ದಾಗ ಮೂಕ ವಿಗ್ರಹಗಳು ನಿಮ್ಮನ್ನು ನಡೆಸಿದ ಹಾಗೆ ನೀವು ಅವುಗಳ ಬಳಿಗೆ ಹೋಗುತ್ತಿದ್ದಿರೆಂದು ಬಲ್ಲಿರಿ.
Vós sabeis que éreis gentios, vós vos desviáveis para os ídolos mudos, conforme éreis guiados.
3 ೩ ಹೀಗಿರುವುದರಿಂದ ನಾನು ನಿಮಗೆ ತಿಳಿಸುವುದನ್ನು ಕೇಳಿರಿ. ದೇವರಾತ್ಮನ ಪ್ರೇರಣೆಯಿಂದ ಮಾತನಾಡುವ ಯಾವ ಮನುಷ್ಯನಾದರೂ “ಯೇಸುವನ್ನು ಶಾಪಗ್ರಸ್ತನೆಂದು” ಹೇಳುವುದಿಲ್ಲ. ಮತ್ತು ಪವಿತ್ರಾತ್ಮನ ಪ್ರೇರಣೆಯಿಂದಲೇ ಹೊರತು ಯಾವ ಮನುಷ್ಯನಾದರೂ “ಯೇಸುವನ್ನು ಕರ್ತನೆಂದು” ಹೇಳಲಾರನು.
Por isso eu vos deixo claro que ninguém que fala pelo Espírito de Deus chama a Jesus de maldito; e ninguém pode dizer [que] Jesus [é] o Senhor, a não ser pelo Espírito Santo.
4 ೪ ವರಗಳಲ್ಲಿ ಬೇರೆ ಬೇರೆ ವಿಧಗಳುಂಟು. ಆದರೆ ದೇವರಾತ್ಮನು ಒಬ್ಬನೇ.
E há variedade de dons, mas o Espírito é o mesmo.
5 ೫ ಸೇವೆಗಳಲ್ಲಿ ಬೇರೆ ಬೇರೆ ವಿಧಗಳುಂಟು ಆದರೆ ಕರ್ತನು ಒಬ್ಬನೇ.
E há variedade de trabalhos [na Igreja], mas o Senhor é o mesmo.
6 ೬ ಕಾರ್ಯಗಳಲ್ಲಿ ಬೇರೆ ಬೇರೆ ವಿಧಗಳುಂಟು ಆದರೆ ಸರ್ವರಲ್ಲಿಯೂ ಸರ್ವ ಕಾರ್ಯಗಳನ್ನು ಸಾಧಿಸುವ ದೇವರು ಒಬ್ಬನೇ.
E há variedade de operações, mas é o mesmo Deus que opera tudo em todos.
7 ೭ ಆದರೆ ಪ್ರತಿಯೊಬ್ಬನಲ್ಲಿ ತೋರಿಬರುವ ದೇವರಾತ್ಮನ ವರಗಳು ಸರ್ವರ ಪ್ರಯೋಜನಕ್ಕಾಗಿ ಕೊಡಲ್ಪಟ್ಟಿವೆ.
Mas a cada um é dada a manifestação do Espírito, para o que for conveniente.
8 ೮ ಒಬ್ಬನಿಗೆ ದೇವರಾತ್ಮನ ಮೂಲಕ ಜ್ಞಾನವಾಕ್ಯವು ಮತ್ತೊಬ್ಬನಿಗೆ ಆ ಆತ್ಮನಿಂದಲೇ ತಿಳಿವಳಿಕೆಯ ವಾಕ್ಯವು
Porque a um é dada, pelo Espírito, palavra de sabedoria; e a outro palavra de conhecimento, pelo mesmo Espírito.
9 ೯ ಒಬ್ಬನಿಗೆ ಆ ಆತ್ಮನಿಂದಲೇ ನಂಬಿಕೆಯು ಮತ್ತೊಬ್ಬನಿಗೆ ಆ ಒಬ್ಬ ಆತ್ಮನಿಂದಲೇ ನಾನಾ ರೋಗಗಳನ್ನು ವಾಸಿಮಾಡುವ ವರವು,
e a outro fé pelo mesmo Espírito; e a outro dons de curas, pelo mesmo Espírito.
10 ೧೦ ಮತ್ತೊಬ್ಬನಿಗೆ ಮಹತ್ಕಾರ್ಯಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಒಬ್ಬನಿಗೆ ಆತ್ಮವನ್ನು ವಿವೇಚಿಸುವ ವರವು, ಮತ್ತೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಒಬ್ಬನಿಗೆ ಭಾಷೆಗಳ ಅರ್ಥವನ್ನು ಬಿಡಿಸಿ ಹೇಳುವ ವರವು ಕೊಡಲ್ಪಡುತ್ತದೆ.
E a outro operações de milagres; e a outro profecia; e a outro o [dom de] discernir aos espíritos; e a outro variedade de línguas; e a outro interpretação de línguas.
11 ೧೧ ಆದರೆ ಈ ಎಲ್ಲವುಗಳಲ್ಲಿ ಕಾರ್ಯ ಮಾಡುವ ಆ ಒಬ್ಬ ಆತ್ಮನೇ ವರಗಳನ್ನೆಲ್ಲಾ ತನ್ನ ಚಿತ್ತಾನುಸಾರವಾಗಿ ಒಬ್ಬೊಬ್ಬನಿಗೆ ಹಂಚಿಕೊಡುವವನಾಗಿದ್ದಾನೆ.
Mas todas estas coisas [quem] opera [é] um e o mesmo Espírito, repartindo particularmente a cada um como quer.
12 ೧೨ ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ದೇಹದ ಅಂಗಗಳೆಲ್ಲವೂ ಅನೇಕವಾಗಿದ್ದು ಒಂದೇ ದೇಹವಾಗಿದೆಯೋ, ಹಾಗೆಯೇ ಕ್ರಿಸ್ತನು ಇದ್ದಾನೆ.
Porque assim como o corpo é um, e tem muitos membros, e todos os membros deste único corpo, sendo muitos, compõem um só corpo; assim também é Cristo.
13 ೧೩ ಯೆಹೂದ್ಯರಾಗಲಿ, ಗ್ರೀಕರಾಗಲಿ, ದಾಸರಾಗಲಿ, ಸ್ವತಂತ್ರರಾಗಲಿ ನಾವೆಲ್ಲರೂ ಒಂದೇ ದೇಹವಾಗುವುದಕ್ಕಾಗಿ ಒಂದೇ ಆತ್ಮನಲ್ಲಿ ದೀಕ್ಷಾಸ್ನಾನಮಾಡಿಸಿಕೊಂಡೆವು. ಒಂದೇ ಆತ್ಮವು ನಮ್ಮೆಲ್ಲರಿಗೆ ಪಾನವಾಗಿ ಕೊಡಲ್ಪಟ್ಟಿತು.
Porque também todos nós somos batizados em um [só] Espírito, para um [só] corpo, quer judeus, quer gregos, quer servos, quer livres; e para todos nós foi dado de beber um [só] Espírito.
14 ೧೪ ದೇಹವು ಒಂದೇ ಅಂಗವಲ್ಲ. ಅನೇಕ ಅಂಗಗಳುಳ್ಳದ್ದಾಗಿದೆ.
Porque também o corpo não é um [só] membro, mas muitos.
15 ೧೫ ಕಾಲು “ನಾನು ಕೈಯಲ್ಲದ ಕಾರಣ ದೇಹಕ್ಕೆ ಸೇರಿಲ್ಲವೆಂದು” ಹೇಳಿದರೂ ಅದು ದೇಹಕ್ಕೆ ಸೇರದೆ ಇರುವುದೋ?
Se o pé disser: Por eu não ser mão, não sou do corpo; Por isso, ele não é do corpo?
16 ೧೬ ಕಿವಿ “ನಾನು ಕಣ್ಣಲ್ಲದ ಕಾರಣ ನಾನು ದೇಹಕ್ಕೆ ಸೇರಿಲ್ಲವೆಂದು” ಹೇಳಿದರೂ ಅದು ದೇಹಕ್ಕೆ ಸೇರದೆ ಇರುವುದೋ?
E se a orelha disser: Por eu não ser olho, não sou do corpo; Por isso, ela não é do corpo?
17 ೧೭ ದೇಹವೆಲ್ಲಾ ಕಣ್ಣಾದರೆ ನೀವು ಏನೂ ಕೇಳಲಾಗುತ್ತಿರಲಿಲ್ಲ. ದೇಹವೆಲ್ಲಾ ಕಿವಿಯಾದರೆ ನೀವು ಯಾವ ವಾಸನೆಯನ್ನು ಮೂಸಲಾಗುತ್ತಿರಲಿಲ್ಲ.
Se todo o corpo fosse olho, onde [estaria] o ouvido? Se [fosse] todo ouvido, onde [estaria] o olfato?
18 ೧೮ ಆದರೆ ದೇವರು ಆ ಅಂಗಗಳಲ್ಲಿ ಪ್ರತಿಯೊಂದನ್ನು ತನಗೆ ಸರಿಯಾಗಿ ತೋಚಿದ ಪ್ರಕಾರ ದೇಹದೊಳಗೆ ಇಟ್ಟಿದ್ದಾನೆ.
Mas agora Deus pôs os membros no corpo, a cada qual deles como ele quis.
19 ೧೯ ಅವೆಲ್ಲವೂ ಒಂದೇ ಅಂಗವಾಗಿದ್ದರೆ ದೇಹವೆಲ್ಲಿರುವುದು?
Porque se todos fossem um [só] membro, onde [estaria] o corpo?
20 ೨೦ ಆದರೆ ಅಂಗಗಳು ಅನೇಕವಾಗಿದೆ ಆದರೆ ದೇಹವು ಒಂದೇ.
Mas há agora muitos membros, porém um [só] corpo.
21 ೨೧ ಕಣ್ಣು ಕೈಗೆ, “ನೀನು ನನಗೆ ಅವಶ್ಯವಿಲ್ಲವೆಂದೂ,” ತಲೆಯು “ಪಾದಗಳಿಗೆ ನೀವು ನನಗೆ ಅವಶ್ಯವಿಲ್ಲವೆಂದೂ” ಹೇಳುವುದಕ್ಕಾಗುವುದಿಲ್ಲ.
E o olho não pode dizer à mão: Não tenho necessidade de ti; Nem a cabeça aos pés: Não tenho necessidade de vós;
22 ೨೨ ದೇಹದಲ್ಲಿ ಅಲ್ಪಮಾನವುಳ್ಳವುಗಳು ಎಂದೆಣಿಸಿ ಕಾಣುವ ಅಂಗಗಳನ್ನು ಅತ್ಯವಶ್ಯವೆಂದು ತಿಳಿಯಬೇಕಲ್ಲವೋ?
Antes até os membros do corpo que [nos] parecem ser os mais fracos, são muito mais necessários.
23 ೨೩ ಮತ್ತು ನಾವು ದೇಹದಲ್ಲಿ ಅಲ್ಪಮಾನವುಳ್ಳವುಗಳು ಎಂದೆಣಿಸುವ ಭಾಗಗಳಿಗೆ ಉಡಿಗೆಯಿಂದ ಹೆಚ್ಚಾದ ಮಾನವನ್ನು ಕೊಡುವುದುಂಟಲ್ಲಾ. ಹೀಗೆ ಮಾನವಿಲ್ಲದ ಅಂಗಗಳಿಗೆ ಹೆಚ್ಚಾದ ಮಾನವುಂಟಾಗುತ್ತದೆ.
E os que pensamos serem os menos honrados do corpo, a esses muito mais honramos; e os nossos mais desprezíveis têm muito mais respeito.
24 ೨೪ ಮಾನವುಳ್ಳ ಅಂಗಗಳಿಗೆ ಏನೂ ಅವಶ್ಯವಿಲ್ಲ. ದೇಹದಲ್ಲಿ ಭೇದವೇನೂ ಇರದೇ ಅಂಗಗಳು ಒಂದಕ್ಕೊಂದರ ಹಿತವನ್ನು ಚಿಂತಿಸುವ ಹಾಗೆ ದೇವರು ಕೊರತೆಯುಳ್ಳದ್ದಕ್ಕೆ ಹೆಚ್ಚಾದ ಮಾನವನ್ನು ಕೊಟ್ಟು ದೇಹವನ್ನು ಹದವಾಗಿ ಜೋಡಿಸಿದ್ದಾನೆ.
Porém os nosso mais respeitáveis não têm [tanta] necessidade; mas [assim] Deus juntou o corpo, dando muito mais honra ao que tinha falta [dela].
Para que não haja divisão no corpo, mas que os membros tenham igual cuidado uns com os outros.
26 ೨೬ ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ. ಒಂದು ಅಂಗ ಗೌರವಿಸಲ್ಪಟ್ಟರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ.
E seja que, [caso] um membro sofra, [também] os membros sofrem juntos; e [caso] um membro seja honrado, todos os membros se alegram juntos.
27 ೨೭ ನೀವು ಕ್ರಿಸ್ತನ ದೇಹವು ಮತ್ತು ಒಬ್ಬೊಬ್ಬರಾಗಿ ಅದಕ್ಕೆ ಅಂಗಗಳಾಗಿದ್ದೀರಿ.
E vós sois o corpo de Cristo, e membros em particular.
28 ೨೮ ದೇವರು ತನ್ನ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ಇಟ್ಟಿದ್ದಾನೆ. ಆ ಮೇಲೆ ಮಹತ್ಕಾರ್ಯ ಮಾಡುವ ಶಕ್ತಿಯನ್ನು, ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ, ಪರಸಹಾಯ ಮಾಡುವ ಗುಣವನ್ನೂ, ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನು ಮತ್ತು ವಿವಿಧ ಭಾಷೆಗಳನ್ನಾಡುವ ವರವನ್ನೂ ಅವರವರಿಗೆ ಬೇರೆ ಬೇರೆಯಾಗಿ ಕೊಟ್ಟಿದ್ದಾನೆ.
E Deus pôs a uns na Igreja: em primeiro lugar apóstolos, em segundo profetas, em terceiro mestres; depois milagres, dons de curas, socorros, lideranças, variedades de línguas.
29 ೨೯ ಎಲ್ಲರು ಅಪೊಸ್ತಲರೋ? ಎಲ್ಲರು ಪ್ರವಾದಿಗಳೋ? ಎಲ್ಲರೂ ಬೋಧಕರೋ? ಎಲ್ಲರೂ ಮಹತ್ಕಾರ್ಯಗಳನ್ನು ಮಾಡುವವರೋ?
Por acaso são todos apóstolos? São todos profetas? São todos mestres? São todos com dons de milagres?
30 ೩೦ ರೋಗ ವಾಸಿಮಾಡುವ ವರಗಳು ಎಲ್ಲರಿಗೂ ಉಂಟೋ? ಎಲ್ಲರೂ ಅನ್ಯಭಾಷೆಗಳನ್ನಾಡುವರೋ? ಅನ್ಯಭಾಷೆಗಳ ಅರ್ಥವನ್ನು ಹೇಳುವುದಕ್ಕೆ ಎಲ್ಲರಿಗೂ ಶಕ್ತಿಯುಂಟೋ?
Tem todos dons de curas? Falam todos [várias] línguas? Interpretam todos?
31 ೩೧ ಇವುಗಳಲ್ಲಿ ಶ್ರೇಷ್ಠ ವರಗಳನ್ನು ಆಸಕ್ತಿಯಿಂದ ಅಪೇಕ್ಷಿಸಿರಿ. ಇನ್ನೂ ಸರ್ವೋತ್ತಮವಾದ ಮಾರ್ಗವೊಂದನ್ನು ನಿಮಗೆ ತೋರಿಸುತ್ತೇನೆ.
Porém desejai com zelo pelos melhores dons; e eu vos mostro um caminho ainda mais excelente.