< ಕೊರಿಂಥದವರಿಗೆ ಬರೆದ ಮೊದಲನೆಯ ಪತ್ರಿಕೆ 13 >
1 ೧ ನಾನು ಮನುಷ್ಯರ ಭಾಷೆಗಳನ್ನೂ, ದೇವದೂತರ ಭಾಷೆಗಳನ್ನೂ ಮಾತನಾಡುವವನಾದರೂ ಪ್ರೀತಿಯಿಲ್ಲದವನಾಗಿದ್ದರೆ ನಾದಕೊಡುವ ಕಂಚಿನ ಜಾಗಟೆ, ಗಣಗಣಿಸುವ ಘಂಟೆ ಆಗಿದ್ದೇನೆ.
Si mwen pale avèk lang a lèzòm ak zanj yo, men mwen pa gen lanmou, mwen tankou yon klòch k ap fè gwo bwi oubyen yon senbal k ap sone.
2 ೨ ನನಗೆ ಪ್ರವಾದನ ವರವಿದ್ದರೂ, ಎಲ್ಲಾ ರಹಸ್ಯಗಳೂ, ಸಕಲ ವಿಧವಾದ ವಿದ್ಯೆಗಳನ್ನು ತಿಳಿದ್ದರೂ, ಬೆಟ್ಟಗಳನ್ನೂ ತೆಗೆದಿಡುವುಷ್ಟು ನಂಬಿಕೆಯಿದ್ದರೂ, ಪ್ರೀತಿಯಿಲ್ಲದವನಾಗಿದ್ದರೆ ನಾನು ಏನೂ ಅಲ್ಲದವನಾಗಿದ್ದೇನೆ.
Si m gen don pwofesi, e konnen tout mistè ak tout konesans; epi si mwen gen tout lafwa, kòmsi pou m ta kapab deplase mòn yo, men mwen pa gen lanmou, mwen pa anyen.
3 ೩ ನನಗಿರುವುದೆಲ್ಲವನ್ನು ಬಡವರಿಗೆ ಅನ್ನದಾನಮಾಡಿದರೂ, ನನ್ನ ದೇಹವನ್ನು ಸುಡುವುದಕ್ಕೆ ಒಪ್ಪಿಸಿದರೂ, ಪ್ರೀತಿಯು ನನಗಿಲ್ಲದಿದ್ದರೆ ನನಗೇನು ಪ್ರಯೋಜನವಿಲ್ಲ. ನಾನು ಬರಿದಾಗಿರುವನು.
Si mwen bay tout sa ke m posede pou bay manje a pòv yo, e si mwen livre kò m pou brile, men mwen pa gen lanmou, sa p ap rapòte m anyen.
4 ೪ ಪ್ರೀತಿಯು ಬಹು ತಾಳ್ಮೆಯುಳ್ಳದ್ದು, ದಯೆಯುಳ್ಳದ್ದು. ಪ್ರೀತಿಯು ಹೊಟ್ಟೆಕಿಚ್ಚುಪಡುವುದಿಲ್ಲ, ಹೊಗಳಿಕೊಳ್ಳುವುದಿಲ್ಲ. ಅದು ಗರ್ವಪಡುವುದಿಲ್ಲ, ಅಸಭ್ಯವಾಗಿ ನಡೆಯುವುದಿಲ್ಲ.
Lanmou pasyan, lanmou dous; li pa jalou. Lanmou pa vante tèt li e li pa awogan.
5 ೫ ಸ್ವಪ್ರಯೋಜನವನ್ನು ಚಿಂತಿಸುವುದಿಲ್ಲ. ಬೇಗ ಸಿಟ್ಟುಗೊಳ್ಳುವುದಿಲ್ಲ. ಅಪಕಾರವನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳುವುದಿಲ್ಲ.
Li pa aji malonètman, ni li pa chache pwòp enterè pa l. Li pa fè kòlè pa teni kont de mal li resevwa.
6 ೬ ಅನ್ಯಾಯದಲ್ಲಿ ಸಂತೋಷಪಡುವುದಿಲ್ಲ ಆದರೆ ಸತ್ಯದಲ್ಲಿ ಸಂತೋಷಪಡುತ್ತದೆ.
Li pa rejwi nan lenjistis, men rejwi nan verite a.
7 ೭ ಎಲ್ಲವನ್ನು ತಾಳಿಕೊಳ್ಳುತ್ತದೆ. ಎಲ್ಲವನ್ನು ನಂಬುತ್ತದೆ. ಎಲ್ಲವನ್ನು ನಿರೀಕ್ಷಿಸುತ್ತದೆ. ಎಲ್ಲವನ್ನು ಸಹಿಸಿಕೊಳ್ಳುತ್ತದೆ.
Li sipòte tout bagay, kwè tout bagay, espere tout bagay, andire tout bagay.
8 ೮ ಪ್ರೀತಿಯು ಎಂದಿಗೂ ನಿಂತುಹೋಗುವುದಿಲ್ಲ. ಪ್ರವಾದನೆಗಳಾದರೂ ಇಲ್ಲದಂತಾಗುವವು. ಅನ್ಯಭಾಷೆಗಳೋ ನಿಂತುಹೋಗುವವು. ತಿಳಿವಳಿಕೆಯೋ ಇಲ್ಲದಂತಾಗುವುದು.
Lanmou pa janm disparèt. Si gen don pwofesi, y ap vin disparèt. Si gen don lang, yo va fini. Si gen konesans, li va anile.
9 ೯ ಅಪೂರ್ಣವಾಗಿ ತಿಳಿದುಕೊಳ್ಳುತ್ತೇವೆ; ಅಪೂರ್ಣವಾಗಿ ಪ್ರವಾದಿಸುತ್ತೇವೆ.
Paske nou konnen yon ti pati e nou pwofetize yon ti pati;
10 ೧೦ ಆದರೆ ಸಂಪೂರ್ಣವಾದದ್ದು ಬಂದಾಗ ಅಪೂರ್ಣವಾದದ್ದು ಇಲ್ಲದಂತಾಗುವುದು.
men lè sa ki pafè a vini, sa ki poko konplè a va disparèt.
11 ೧೧ ನಾನು ಬಾಲಕನಾಗಿದ್ದಾಗ ಬಾಲಕನ ರೀತಿಯಲ್ಲಿ ಮಾತನಾಡಿದೆನು. ಬಾಲಕನ ಹಾಗೆ ಯೋಚಿಸಿದೆನು. ಬಾಲಕನಂತೆ ವಿವೇಚಿಸಿದೆನು. ಪ್ರಾಯಸ್ಥನಾದ ಮೇಲೆ ಬಾಲ್ಯದವುಗಳನ್ನು ಬಿಟ್ಟುಬಿಟ್ಟೆನು.
Lè m te timoun, mwen te konn pale tankou yon timoun, panse tankou yon timoun, rezone tankou yon timoun. Lè m te vin gran, mwen te kite bagay timoun yo.
12 ೧೨ ಈಗ ಕನ್ನಡಿಯಲ್ಲಿ ಕಾಣಿಸುವಂತೆ ದೇವರ ಮುಖವು ನಮಗೆ ಮೊಬ್ಬಾಗಿ ಕಾಣಿಸುತ್ತದೆ, ಆದರೆ ಆಗ ನೇರವಾಗಿ ಮುಖಾಮುಖಿಯಾಗಿ ಆತನನ್ನು ನೋಡುವೆವು. ಈಗ ಅಪೂರ್ಣವಾಗಿ ನನಗೆ ತಿಳಿದಿದೆ. ಆದರೆ ಆಗ ದೇವರು ನನ್ನನ್ನು ಸಂಪೂರ್ಣವಾಗಿ ತಿಳಿದುಕೊಂಡಂತೆ ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು.
Paske koulye a nou wè twoub, konsi nan yon glas, men answit nou va wè fasafas. Koulye a m konnen yon ti pati, men answit, mwen va konnen tout bagay menm jan ke Bondye konnen tout bagay de mwen an.
13 ೧೩ ಹೀಗಿರುವುದರಿಂದ, ನಂಬಿಕೆ, ನಿರೀಕ್ಷೆ, ಪ್ರೀತಿ ಈ ಮೂರೇ ನಿಲ್ಲುತ್ತದೆ. ಇವುಗಳಲ್ಲಿ ದೊಡ್ಡದು ಪ್ರೀತಿಯೇ.
Men koulye a, lafwa, lesperans, ak lanmou; rete twa bagay sa yo. Men pi gran nan bagay sa yo, se lanmou.