< ಕೊರಿಂಥದವರಿಗೆ ಬರೆದ ಮೊದಲನೆಯ ಪತ್ರಿಕೆ 14 >
1 ೧ ಪ್ರತಿನಿತ್ಯ ಪ್ರೀತಿಯಿಂದ ಜೀವಿಸಲು ಆಶಿಸಿರಿ ಮತ್ತು ಪವಿತ್ರಾತ್ಮನಿಂದುಂಟಾಗುವ ವರಗಳನ್ನು, ಅದರೊಳಗೂ ವಿಶೇಷವಾಗಿ ಪ್ರವಾದನಾ ವರವನ್ನೇ ಆಸಕ್ತಿಯಿಂದ ಅಪೇಕ್ಷಿಸಿರಿ.
Jagt der Liebe nach! Strebt auch nach den Geistesgaben, vor allem nach der Weissagung!
2 ೨ ಅನ್ಯಭಾಷೆಗಳನ್ನಾಡುವವನು ದೇವರ ಸಂಗಡ ಮಾತನಾಡುತ್ತಾನೆಯೇ ಹೊರತು ಮನುಷ್ಯರ ಸಂಗಡ ಅಲ್ಲ. ಅವನು ಆತ್ಮ ಪ್ರೇರಿತನಾಗಿ ಗುಪ್ತ ವಿಷಯಗಳನ್ನಾಡುತ್ತಾನೆ. ಅವನು ಮಾತನಾಡುವ ಮಾತುಗಳನ್ನು ಯಾರೂ ಅರ್ಥಮಾಡಿಕೊಳ್ಳುವುದಿಲ್ಲ.
Wer in Zungen redet, der redet nicht für Menschen, sondern für Gott. Es kann ihn ja niemand verstehen; durch die Eingebung des Geistes redet er Geheimnisse.
3 ೩ ಆದರೆ ಪ್ರವಾದಿಸುವವನಾದರೋ, ಅವನ ಮಾತುಗಳಿಂದ ಭಕ್ತಿವೃದ್ಧಿಯನ್ನೂ, ಪ್ರೋತ್ಸಾಹವನ್ನೂ ಸಂತೈಸುವಿಕೆಯನ್ನೂ ಉಂಟುಮಾಡುವವು.
Der Weissager aber wendet sich mit seiner Rede an die Menschen: er erbaut, ermahnt und tröstet sie.
4 ೪ ಅನ್ಯಭಾಷೆಗಳನ್ನಾಡುವವನು ತನಗೆ ತಾನೇ ಆತ್ಮೀಕ ವೃದ್ಧಿಯನ್ನುಂಟುಮಾಡಿಕೊಳ್ಳುತ್ತಾನೆ, ಆದರೆ ಪ್ರವಾದಿಸುವವನು ಸಭೆಗೆ ಭಕ್ತಿವೃದ್ಧಿಯನ್ನುಂಟು ಮಾಡುತ್ತಾನೆ.
Der Zungenredner erbaut sich selbst, der Weissager erbaut die Gemeinde.
5 ೫ ನೀವೆಲ್ಲರೂ ಅನ್ಯಭಾಷೆಗಳನ್ನಾಡಬೇಕೆಂದು ನಾನು ಅಪೇಕ್ಷಿಸಿದರೂ, ಅದಕ್ಕಿಂತಲೂ ನೀವು ಪ್ರವಾದಿಸಬೇಕೆಂಬುದೆ ನನ್ನಿಷ್ಟವಾಗಿದೆ. ಅನ್ಯಭಾಷೆಗಳನ್ನಾಡುವವನು ಸಭೆಯು ಅಭಿವೃದ್ಧಿಯಾಗುವುದಕ್ಕಾಗಿ ಆ ಅನ್ಯಭಾಷೆಯ ಅರ್ಥವನ್ನು ವಿವೇಚಿಸಿ ಹೇಳದೆ ಹೋದರೆ ಅವನಿಗಿಂತ ಪ್ರವಾದಿಸುವವನು ಶ್ರೇಷ್ಠನು.
Ich wollte, ihr könntet alle in Zungen reden. Doch noch viel lieber wäre es mir: ihr weissagtet. Denn der Weissager steht höher als der Zungenredner, außer wenn der Zungenredner seine Worte auch auslegt und so die Gemeinde erbaut wird.
6 ೬ ಆದರೆ ಸಹೋದರರೇ, ನಾನು ನಿಮ್ಮ ಬಳಿಗೆ ಬಂದು ದೇವರು ತಿಳಿಸಿದ್ದನ್ನು ಪ್ರಕಟಿಸದೆ, ಜ್ಞಾನವಾಕ್ಯಗಳನ್ನಾಡದೆ, ಪ್ರವಾದನೆಯನ್ನು ಹೇಳದೆ, ಉಪದೇಶಮಾಡದೆ, ಅನ್ಯಭಾಷೆಗಳನ್ನು ಮಾತ್ರ ಮಾತನಾಡುವವನಾಗಿದ್ದರೆ ನನ್ನಿಂದ ನಿಮಗೇನು ಪ್ರಯೋಜನವಾದೀತು?
Käme ich nun, liebe Brüder, zu euch und redete in Zungen, was nützte euch das, wenn ich nicht auch zu euch spräche in Offenbarung, Erkenntnis, Weissagung oder Lehre?
7 ೭ ಕೊಳಲು, ವೀಣೆ ಮೊದಲಾದ ನಿರ್ಜೀವವಾದ್ಯಗಳು ನಾದಗಳಲ್ಲಿ ಯಾವ ವ್ಯತ್ಯಾಸವನ್ನೂ ತೋರಿಸದಿದ್ದರೆ; ನುಡಿಸಿದ ವಾದ್ಯ ಇಂಥದ್ದೇ ಎಂದು ಹೇಗೆ ತಿಳಿಯುವುದು?
Es ist hier ebenso wie bei leblosen Musikwerkzeugen: Sind zum Beispiel auf einer Flöte oder Zither die Töne nicht ganz deutlich, wie kann man dann wissen, welche Weise darauf gespielt wird?
8 ೮ ತುತ್ತೂರಿಯು ಅಸ್ಪಷ್ಟ ಶಬ್ದವನ್ನು ಮೊಳಗಿಸಿದರೆ ಯಾರು ಯುದ್ಧಕ್ಕೆ ಸಿದ್ಧಮಾಡಿಕೊಳ್ಳುವರು?
Oder: gibt die Trompete (im Krieg) ein unklares Zeichen, wer wird sich dann zum Kampf rüsten?
9 ೯ ಹಾಗೆಯೇ ನೀವೂ ಸಹ ಸ್ಪಷ್ಟವಾದ ಭಾಷೆಯನ್ನು ನಿಮ್ಮ ಬಾಯಿಂದ ಮಾತನಾಡದೆ ಹೋದರೆ, ನಿಮ್ಮ ಮಾತಿನ ಅರ್ಥವನ್ನು ಹೇಗೆ ತಿಳಿದುಕೊಳ್ಳಲು ಸಾಧ್ಯ? ನೀವು ಗಾಳಿಯ ಸಂಗಡ ಮಾತನಾಡಿದ ಹಾಗಿರುವುದಷ್ಟೆ.
So ist's nun auch mit euch: redet ihr mit eurer Zunge nicht klar und deutlich, so kann man nicht verstehen, was ihr sprecht. Ihr redet dann in den Wind.
10 ೧೦ ಲೋಕದಲ್ಲಿ ಅನೇಕ ಭಾಷೆಗಳಿವೆ, ಅವುಗಳಲ್ಲಿ ಒಂದಾದರೂ ಅರ್ಥರಹಿತವಾದವುಗಳಿಲ್ಲ.
Es gibt in der Welt so viele verschiedene Sprachen, und jede hat ihre ganz bestimmten Laute.
11 ೧೧ ಭಾಷೆಯ ಅರ್ಥವು ನನಗೆ ತಿಳಿಯದಿದ್ದರೆ ಮಾತನಾಡುವವನಿಗೆ ನಾನು ಪರದೇಶದವನಂತಿರುವೆನು; ಮಾತನಾಡುವವನು ನನಗೆ ಪರದೇಶಿಯವನಂತಿರುತ್ತಾನೆ.
Ist mir aber eine Sprache so fremd, daß ich den Sinn ihrer Worte nicht kenne, so bleibe ich dem, der sie redet, unverständlich, und er versteht mich nicht.
12 ೧೨ ಹಾಗೆಯೇ ನೀವು ಆತ್ಮೀಕವಾದ ವರಗಳಿಗಾಗಿ ಅತ್ಯಾಸಕ್ತಿಯುಳ್ಳವರಾಗಿರುವುದರಿಂದ ಸಭೆಗೆ ಹೆಚ್ಚಿನ ಅಭಿವೃದ್ಧಿ ಉಂಟಾಗುವ ಹಾಗೆ ತವಕಪಡಿರಿ.
Genau so ist's in euerm Fall. Ihr trachtet nach geistlichen Gaben. Sucht nun an den Gaben reich zu werden, die der Erbauung der Gemeinde dienen!
13 ೧೩ ಆದ್ದರಿಂದ ಅನ್ಯಭಾಷೆಯನ್ನಾಡುವವನು ತನಗೆ ಅದರ ಅರ್ಥವನ್ನು ವಿವೇಚಿಸಿ ಹೇಳುವ ವರಕ್ಕಾಗಿ ದೇವರನ್ನು ಪ್ರಾರ್ಥಿಸಲಿ.
Wer in Zungen redet, der soll deshalb auch um die Gabe der Auslegung beten.
14 ೧೪ ಯಾಕೆಂದರೆ ನಾನು ಅನ್ಯಭಾಷೆಯಲ್ಲಿ ದೇವರನ್ನು ಪ್ರಾರ್ಥಿಸಿದರೆ ನನ್ನಾತ್ಮವು ಪ್ರಾರ್ಥಿಸುತ್ತಿರುತ್ತದೆ. ಆದರೆ ನನ್ನ ಬುದ್ಧಿಯು ನಿಷ್ಫಲವಾಗಿರುವುದು.
Denn wenn ich in Zungenrede bete, so betet wohl mein Geist, doch mein Verstand ist dabei unbeteiligt.
15 ೧೫ ಆದ್ದರಿಂದ ನಾನಾದರೋ ಆತ್ಮನಿಂದಲೂ ಪ್ರಾರ್ಥಿಸುವೆನು, ಬುದ್ಧಿಯಿಂದಲೂ ಪ್ರಾರ್ಥಿಸುವೆನು; ಆತ್ಮನಿಂದ ಹಾಡುವೆನು, ಬುದ್ಧಿಯಿಂದಲೂ ಹಾಡುವೆನು.
Wie soll es denn nun sein? Ich will mit meinem Geist beten, und ich will auch mit meinem Verstand beten. Ich will lobsingen mit meinem Geist, und ich will auch lobsingen mit meinem Verstand.
16 ೧೬ ನೀನು ಆತ್ಮನಿಂದ ಮಾತ್ರ ದೇವರ ಸ್ತೋತ್ರ ಮಾಡಿದರೆ ನೀನು ಹೇಳಿದ್ದು ತಿಳಿಯದೆ ಇರುವ ಇನ್ನೊಬ್ಬನು ನೀನು ಮಾಡುವ ಕೃತಜ್ಞತಾಸ್ತುತಿಗೆ ಅವನು “ಆಮೆನ್” ಎಂದು ಹೇಗೆ ಹೇಳಬಲ್ಲನು? ನೀನು ಮಾತನಾಡಿದು ಅವನಿಗೆ ತಿಳಿಯುವುದಿಲ್ಲವಲ್ಲಾ?
Dankst du Gott nur mit deinem Geist (im Zungenreden), wie kann da jemand, der (das Zungenreden) nicht auszulegen weiß, zu deinem Dankgebet Amen sagen? Er versteht ja gar nicht, was du sagst.
17 ೧೭ ನೀನು ಎಷ್ಟು ಚೆನ್ನಾಗಿ ಕೃತಜ್ಞತಾಸ್ತುತಿ ಮಾಡಿದರೂ, ಆದರಿಂದ ಬೇರೊಬ್ಬನು ಭಕ್ತಿವೃದ್ಧಿಹೊಂದುವುದಿಲ್ಲ.
Das Dankgebet, das du sprichst, mag noch so schön sein, der andere wird doch nicht dadurch erbaut.
18 ೧೮ ನಾನು ನಿಮ್ಮೆಲ್ಲರಿಗಿಂತಲೂ ಹೆಚ್ಚಾಗಿ ಅನ್ಯಭಾಷೆಗಳನ್ನಾಡುತ್ತೇನೆಂದು ದೇವರನ್ನು ಕೊಂಡಾಡುತ್ತೇನೆ.
Ich rede — Gott sei Dank dafür! — viel mehr in Zungen als ihr alle.
19 ೧೯ ಆದರೂ ಸಭೆಯಲ್ಲಿ ಅನ್ಯಭಾಷೆಯಿಂದ ಹತ್ತು ಸಾವಿರ ಮಾತುಗಳನ್ನಾಡುವುದಕ್ಕಿಂತ, ನನ್ನ ಬುದ್ಧಿಯಿಂದ ಐದೇ ಮಾತುಗಳನ್ನಾಡಿ ಇತರರಿಗೆ ಉಪದೇಶಮಾಡುವುದು ನನಗೆ ಉತ್ತಮವೆನಿಸುತ್ತದೆ.
In einer Gemeindeversammlung aber will ich lieber fünf Worte mit meinem Verstand reden — um dadurch auch andere zu belehren — als zehntausend Worte in Zungen.
20 ೨೦ ಸಹೋದರರೇ, ಬಾಲಕರಂತೆ ಆಲೋಚಿಸಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಂತಿರಿ; ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಿ.
Brüder, seid nicht Kinder an Einsicht und Verständnis! Bleibt Kinder, wenn es sich ums Böse handelt; an Einsicht und Verständnis aber werdet gereifte Menschen!
21 ೨೧ “ಅನ್ಯಭಾಷೆಯವರ ಮೂಲಕವಾಗಿಯೂ ಅನ್ಯದೇಶಸ್ಥರ ಬಾಯಿಂದಲೂ ನಾನು ಈ ಜನರ ಸಂಗಡ ಮಾತನಾಡುವೆನು; ಆದರೂ ಅವರು ನನ್ನ ಮಾತಿಗೆ ಕಿವಿಗೊಡುವುದಿಲ್ಲವೆಂದು ಕರ್ತನು ಹೇಳುತ್ತಾನೆಂಬುದಾಗಿ” ಧರ್ಮಶಾಸ್ತ್ರದಲ್ಲಿ ಬರೆದಿದೆ.
Im Gesetz steht geschrieben: In anderen Zungen und durch fremde Lippen will ich zu diesem Volk reden, und trotzdem werden sie nicht auf mich hören — spricht der Herr.
22 ೨೨ ಆದ್ದರಿಂದ ಅನ್ಯಭಾಷೆಗಳನ್ನಾಡುವುದು ಯೇಸುವನ್ನು ನಂಬದವರಿಗೆ ಸೂಚನೆಯಾಗಿದೆಯೇ ಹೊರತು ಯೇಸುವನ್ನು ನಂಬುವವರಿಗೆ ಸೂಚನೆಯಲ್ಲವೆಂದು ನಾವು ತಿಳಿದುಕೊಳ್ಳಬೇಕು. ಆದರೆ ಪ್ರವಾದನೆಯು ಯೇಸುವನ್ನು ನಂಬದವರಿಗಾಗಿಯಲ್ಲ ನಂಬುವವರಿಗಾಗಿಯೇ ಇದೆ.
Aus diesem Wort folgt: Die Zungen sind nicht ein göttlich Zeichen, das die Hörer zum Glauben führt, sondern bei dem sie ungläubig bleiben. Die Weissagung dagegen hat zur Folge, daß die Hörer nicht ungläubig bleiben, sondern gläubig werden.
23 ೨೩ ಹೀಗಿರುವಲ್ಲಿ ಸಭೆಯೆಲ್ಲಾ ಒಂದೇ ಸ್ಥಳದಲ್ಲಿ ಸೇರಿಬಂದಾಗ ಎಲ್ಲರೂ ಅನ್ಯಭಾಷೆಗಳನ್ನಾಡಿದರೆ ಈ ಭಾಷೆಯನ್ನು ತಿಳಿಯದ ಬೇರೆಯವರು ಅಥವಾ ಕ್ರಿಸ್ತ ನಂಬಿಕೆಯಿಲ್ಲದವರು ಒಳಗೆ ಬಂದು ನೋಡಿ, ನಿಮಗೆ ಹುಚ್ಚು ಹಿಡಿದಿದೆ ಎಂದು ಹೇಳುವುದಿಲ್ಲವೋ?
Wenn also in einer Versammlung der ganzen Gemeinde alle mit Zungen redeten, und es kämen Laien oder Ungläubige hinein, würden die nicht sagen, ihr wärt von Sinnen?
24 ೨೪ ಆದರೆ ನೀವೆಲ್ಲರು ಪ್ರವಾದಿಸುತ್ತಿರಲು ಕ್ರಿಸ್ತ ನಂಬಿಕೆಯಿಲ್ಲದವನಾಗಲಿ, ಅಪರಿಚಿತನಾಗಲಿ ಒಳಗೆ ಬಂದರೆ ಅವನು ಎಲ್ಲರ ಮಾತನ್ನು ಕೇಳಿ ತಾನು ಪಾಪಿಯೆಂಬ ಅರುಹನ್ನು ಹೊಂದುವನು, ಎಲ್ಲರ ಮಾತಿನಿಂದ ಪರಿಶೋಧಿತನಾಗುವನು,
Wenn aber alle weissagen, und es tritt dann ein Ungläubiger oder Laie ein, der wird von allen (in seinem Gewissen) überführt und gleichsam ins Verhör genommen;
25 ೨೫ ಅವನ ಹೃದಯದ ರಹಸ್ಯಗಳು ಬಯಲಾಗುವವು; ಅವನು ಅಡ್ಡಬಿದ್ದು ದೇವರನ್ನು ಆರಾಧಿಸಿ, ದೇವರು ನಿಜವಾಗಿ ನಿಮ್ಮಲ್ಲಿದ್ದಾನೆಂಬುದನ್ನು ಘೋಷಿಸುವನು.
die verborgenen Gedanken seines Herzens werden aufgedeckt, und tief ergriffen wird er auf sein Antlitz fallen, Gott anbeten und bekennen, daß Gott wahrhaftig in eurer Mitte ist.
26 ೨೬ ಹಾಗಾದರೇನು, ಸಹೋದರರೇ? ನೀವು ಸಭೆಯಲ್ಲಿ ಸೇರಿಬರುವಾಗ ಒಬ್ಬನು ಹಾಡುವುದೂ, ಒಬ್ಬನು ಉಪದೇಶಮಾಡುವುದೂ, ಒಬ್ಬನು ತನಗೆ ಪ್ರಕಟವಾದದ್ದನ್ನು ತಿಳಿಸುವುದೂ, ಇನ್ನೂ ಒಬ್ಬನು ಅನ್ಯಭಾಷೆಯನ್ನಾಡುವುದೂ, ಒಬ್ಬನು ಅದರ ಅರ್ಥವನ್ನು ಹೇಳುವುದುಂಟು. ನೀವು ಏನು ಮಾಡಿದರೂ ಸಭೆಯ ಭಕ್ತಿವೃದ್ಧಿಗಾಗಿಯೇ ಮಾಡಿರಿ.
Wie soll es nun gehalten werden, Brüder? Wenn ihr zusammenkommt, so hat der eine einen Lobgesang, der andere einen Lehrvortrag, der andere eine Offenbarung, der andere ein Reden in Zungen, der andere eine Auslegung der Zungen. Alles soll der Erbauung dienen.
27 ೨೭ ಅನ್ಯಭಾಷೆಗಳನ್ನಾಡುವುದಾದರೆ ಇಬ್ಬರು ಅಥವಾ ಅವಶ್ಯವಿದ್ದರೆ ಮೂವರಿಗಿಂತ ಹೆಚ್ಚಿಲ್ಲದೆ ಒಬ್ಬೊಬ್ಬರಾಗಿ ಮಾತನಾಡಬೇಕು;
In Zungen sollen nur zwei oder höchstens drei reden, aber nacheinander, und einer soll auslegen.
28 ೨೮ ಮತ್ತು ಒಬ್ಬನು ಅದರ ಅರ್ಥವನ್ನು ಹೇಳಬೇಕು. ಅರ್ಥವನ್ನು ಹೇಳುವವನಿಲ್ಲದಿದ್ದರೆ ಅನ್ಯಭಾಷೆಗಳನ್ನಾಡುವವನು ಸಭೆಯಲ್ಲಿ ಸುಮ್ಮನಿರಲಿ; ತನ್ನೊಂದಿಗೂ ಮತ್ತು ದೇವರೊಂದಿಗೂ ಮಾತನಾಡಿಕೊಳ್ಳಲಿ.
Ist kein Ausleger da, so sollen die Zungenredner in der Gemeindeversammlung schweigen; sie mögen dann (still) mit sich und Gott reden.
29 ೨೯ ಇಬ್ಬರು ಮೂವರು ಪ್ರವಾದಿಗಳು ಮಾತನಾಡಲಿ, ಮಿಕ್ಕಾದವರು ವಿವೇಚನೆಯಿಂದ ಕೇಳಲಿ.
Von den Propheten mögen zwei oder drei reden, und die anderen mögen das Gesprochene beurteilen.
30 ೩೦ ಕುಳಿತಿರುವ ಮತ್ತೊಬ್ಬನಿಗೆ ಪ್ರಕಟನೆ ಉಂಟಾದರೆ ಮೊದಲಿನವನು ಸುಮ್ಮನಾಗಲಿ
Wird aber einem anderen, der dasitzt, eine Offenbarung zuteil, dann soll der erste schweigen.
31 ೩೧ ನೀವೆಲ್ಲರೂ ಒಬ್ಬೊಬ್ಬರಾಗಿ ಪ್ರವಾದಿಸಿದರೆ ಎಲ್ಲರೂ ಕಲಿತುಕೊಳ್ಳುವರು, ಎಲ್ಲರೂ ಪ್ರೋತ್ಸಾಹ ಹೊಂದುವರು.
Denn ihr könnt alle weissagen, doch nacheinander, damit alle lernen und alle ermahnt werden.
32 ೩೨ ಪ್ರವಾದಿಗಳ ಆತ್ಮಗಳು ಪ್ರವಾದಿಗಳ ಸ್ವಾಧೀನದಲ್ಲಿರುತ್ತವೆ.
Die Propheten haben ja die Herrschaft über ihren Geist.
33 ೩೩ ದೇವರು ಸಮಾಧಾನಕ್ಕೆ ಕಾರಣನೇ ಹೊರತು ಗಲಿಬಿಲಿಗೆ ಕಾರಣನಲ್ಲ.
Denn Gott ist nicht ein Gott der Unordnung, sondern des Friedens.
34 ೩೪ ದೇವಜನರ ಎಲ್ಲಾ ಸಭೆಗಳಲ್ಲಿರುವ ಪ್ರಕಾರ ಸ್ತ್ರೀಯರು ಸಭೆಯ ಕೂಟಗಳಲ್ಲಿ ಮೌನವಾಗಿರಬೇಕು; ಮಾತನಾಡಲು ಅವರಿಗೆ ಅವಕಾಶವಿಲ್ಲ; ಅವರು ಅಧೀನರಾಗಿರಬೇಕು; ಧರ್ಮಶಾಸ್ತ್ರದಲ್ಲಿಯೂ ಹೀಗೆ ಹೇಳಿದೆಯಲ್ಲಾ.
Wie in allen Gemeinden der Heiligen, so sollen auch (bei euch) die Frauen in den Gemeindeversammlungen schweigen. Sie haben keine Erlaubnis zu reden; sie sollen sich vielmehr unterordnen, wie auch das Gesetz sagt.
35 ೩೫ ಅವರು ಏನಾದರೂ ತಿಳಿದು ಕೊಳ್ಳುವುದಕ್ಕೆ ಅಪೇಕ್ಷಿಸಿದರೆ ಮನೆಯಲ್ಲಿ ತಮ್ಮ ಗಂಡಂದಿರನ್ನು ಕೇಳಿಕೊಳ್ಳಲಿ. ಸ್ತ್ರೀಯರು ಸಭೆಯಲ್ಲಿ ಮಾತನಾಡುವುದು ಅಪಮಾನಕರವಾದದ್ದು.
Wünschen sie aber irgendwie Belehrung, so mögen sie daheim ihre Männer fragen. Es schickt sich nicht für eine Frau, in einer Gemeindeversammlung zu reden.
36 ೩೬ ದೇವರ ವಾಕ್ಯವು ನಿಮ್ಮಿಂದಲೇ ಹೊರಟಿತೋ? ನಿಮಗೆ ಮಾತ್ರವೇ ಬಂದಿತೋ?
Ist denn das Wort Gottes von euch ausgegangen, oder ist es nur zu euch gekommen?
37 ೩೭ ಯಾವನಾದರೂ ತನ್ನನ್ನು ಪ್ರವಾದಿಯೆಂದಾಗಲಿ ಆತ್ಮೀಕನೆಂದಾಗಲಿ ಭಾವಿಸಿಕೊಂಡರೆ ನಾನು ನಿಮಗೆ ಬರೆದಿರುವುದೆಲ್ಲಾ ಕರ್ತನ ಆಜ್ಞೆ ಎಂದು ಚೆನ್ನಾಗಿ ತಿಳಿದುಕೊಳ್ಳಲಿ.
Wer nun glaubt, ein Prophet oder sonst ein geistlich Begabter zu sein, der erkenne in dem, was ich euch schreibe, des Herrn Gebot.
38 ೩೮ ಯಾವನಾದರೂ ತನಗೆ ಇದು ಗೊತ್ತಿಲ್ಲವೆಂದರೆ ಅವನು ಗುರುತಿಲ್ಲದವನಂತೆ ಇರಲಿ.
Wer das nicht anerkennen will, der wird auch nicht anerkannt.
39 ೩೯ ಆದಕಾರಣ ನನ್ನ ಸಹೋದರರೇ, ಪ್ರವಾದನಾವರವನ್ನು ಆಸಕ್ತಿಯಿಂದ ಅಪೇಕ್ಷಿಸಿರಿ, ಮತ್ತು ಅನ್ಯಭಾಷೆಗಳನ್ನಾಡುವವರಿಗೆ ಅಡ್ಡಿಮಾಡಬೇಡಿರಿ.
Also, meine Brüder: trachtet nach der Weissagung, und das Zungenreden hindert nicht!
40 ೪೦ ಆದರೆ ಎಲ್ಲವೂ ಯೋಗ್ಯವಾಗಿಯೂ ಹಾಗೂ ಕ್ರಮದಿಂದಲೂ ನಡೆಯಲಿ.
Alles aber soll mit Anstand und in Ordnung zugehen.