< ಕೊರಿಂಥದವರಿಗೆ ಬರೆದ ಮೊದಲನೆಯ ಪತ್ರಿಕೆ 16 >

1 ಈಗ ದೇವಜನರಿಗೋಸ್ಕರ ಹಣ ಸಂಗ್ರಹಣೆ ವಿಚಾರದ ಕುರಿತು, ನಾನು ಗಲಾತ್ಯ ಪ್ರಾಂತ್ಯದ ಸಭೆಗಳಿಗೆ ಹೇಳಿಕೊಟ್ಟಿರುವ ಕ್ರಮದಂತೆ ನೀವೂ ಮಾಡಿರಿ.
Kutsallara yapılacak para yardımına gelince: Galatya kiliselerine ne buyurduysam, siz de öyle yapın.
2 ನಿಮ್ಮಲ್ಲಿ ಪ್ರತಿಯೊಬ್ಬನು ತನಗೆ ಬಂದಂಥ ಸಂಪಾದನೆಯಲ್ಲಿ ಸಾಧ್ಯವಾದಷ್ಟನ್ನು ವಾರದ ಮೊದಲನೆಯ ದಿನದಲ್ಲಿ ಸಂಗ್ರಹಿಸಿ ತನ್ನ ಮನೆಯಲ್ಲಿಟ್ಟುಕೊಂಡಿರಬೇಕು. ಇದರಿಂದ ನಾನು ಬಂದಾಗ ಹಣ ಸಂಗ್ರಹಣೆ ಮಾಡುವ ಅಗತ್ಯವಿರುವುದಿಲ್ಲ.
Haftanın ilk günü herkes kazancına göre bir miktar para ayırıp biriktirsin. Öyle ki, yanınıza geldiğimde para toplamaya gerek kalmasın.
3 ಮತ್ತು ನಾನು ಬಂದ ಮೇಲೆ ನೀವು ಯಾರನ್ನು ಪ್ರಾಮಾಣಿಕರೆಂದು ಸೂಚಿಸುವಿರೋ, ಅವರೊಂದಿಗೆ ನಿಮ್ಮ ಕೊಡುಗೆಯನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋಗುವುದಕ್ಕೆ ಪತ್ರಗಳನ್ನು ಕೊಟ್ಟು ಕಳುಹಿಸುವೆನು.
Oraya vardığımda, bağışlarınızı götürmek üzere uygun gördüğünüz kişileri tanıtıcı mektuplarla Yeruşalim'e göndereceğim.
4 ಮತ್ತೆ ನಾನು ಸಹ ಹೋಗುವುದು ಯುಕ್ತವಾಗಿ ತೋರಿದರೆ ಅವರು ನನ್ನ ಜೊತೆಯಲ್ಲಿ ಬರಬಹುದು.
Benim de gitmeme değerse, onları yanıma alıp gideceğim.
5 ನಾನು ಹಾದುಹೋಗಬೇಕೆಂದಿರುವ ಮಕೆದೋನ್ಯ ಸೀಮೆಯನ್ನು ದಾಟುವಾಗ ನಿಮ್ಮ ಬಳಿಗೆ ಬಂದು ಬಹುಶಃ ನಿಮ್ಮ ಬಳಿಯಲ್ಲೇ ಉಳಿದುಕೊಳ್ಳುವೆನು.
Makedonya'dan geçtikten sonra yanınıza geleceğim. Çünkü Makedonya'dan geçmek niyetindeyim.
6 ಅಥವಾ ನಿಮ್ಮಲ್ಲಿ ಹಿಮಕಾಲವನ್ನಾದರೂ ಕಳೆಯುವೆನು; ಹಾಗೆಯೇ ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಸಾಗಕಳುಹಿಸಲು ಸಹಾಯಮಾಡಬಹುದು.
Belki bir süre yanınızda kalırım, hatta kışı da sizinle geçirebilirim. Öyle ki, sonra nereye gidecek olsam, bana yardım edebilesiniz.
7 ನಾನು ಹಾದುಹೋಗುವ ಈ ಸ್ವಲ್ಪ ಸಮಯದಲ್ಲಿ ನಿಮ್ಮನ್ನು ನೋಡಲು ಬಯಸುವುದಿಲ್ಲ. ಕರ್ತನ ಅಪ್ಪಣೆಯಾದರೆ ನಿಮ್ಮ ಬಳಿಯಲ್ಲಿ ಕೆಲವು ಕಾಲ ತಂಗಲು ಬಯಸುತ್ತೇನೆ.
Sizi öyle kısaca görüp geçmek istemiyorum. Rab'bin izniyle uzunca bir süre yanınızda kalmayı umut ediyorum.
8 ಪಂಚಾಶತ್ತಮ ದಿನ ಹಬ್ಬದ ತನಕ ಎಫೆಸದಲ್ಲಿರುವೆನು;
Ama Pentikost Günü'ne dek Efes'te kalacağım.
9 ಯಾಕೆಂದರೆ ಸೇವೆಗೆ ಅನುಕೂಲವೂ, ಸಫಲವೂ ಆಗಿರುವ ಹೆಬ್ಬಾಗಿಲೊಂದು ನನಗಾಗಿ ತೆರೆಯಲ್ಪಟ್ಟಿದೆ. ಹಾಗೆಯೇ ವಿರೋಧಿಗಳೂ ಅನೇಕರಿದ್ದಾರೆ.
Çünkü büyük ve etkili işler yapmam için burada bana bir kapı açıldı. Ne var ki, bana karşı çıkanlar çoktur.
10 ೧೦ ತಿಮೊಥೆಯನು ಬಂದರೆ ಅವನು ನಿಮ್ಮಲ್ಲಿ ನಿರ್ಭಯನಾಗಿರುವಂತೆ ನೋಡಿಕೊಳ್ಳಿರಿ; ಅವನು ಸಹ ನನ್ನ ಹಾಗೆಯೇ ಕರ್ತನ ಸೇವೆಯನ್ನು ಮಾಡುತ್ತಿದ್ದಾನಲ್ಲಾ.
Timoteos yanınıza gelirse, bir şeyden korkmamasına dikkat edin. Çünkü o da benim gibi Rab'bin işini yapıyor.
11 ೧೧ ಆದ್ದರಿಂದ ಯಾರೂ ಅವನನ್ನು ತಿರಸ್ಕರಿಸಬಾರದು. ಅವನು ನನ್ನ ಬಳಿಗೆ ಬರುವಂತೆ ಅವನನ್ನು ಸಮಾಧಾನದಿಂದ ಕಳುಹಿಸಿರಿ; ಅವನು ಸಹೋದರರೊಂದಿಗೆ ಬರುವುದನ್ನು ಎದುರುನೋಡುತ್ತಾ ಇದ್ದೇನೆ.
Kimse onu hor görmesin. Yanıma gelmesi için onu esenlikle uğurlayın. Kardeşlerle birlikte onun da gelmesini bekliyorum.
12 ೧೨ ಸಹೋದರ ಅಪೊಲ್ಲೋಸನ ಕುರಿತು; ಅವನು ಸಹೋದರರೊಂದಿಗೆ ನಿಮ್ಮನ್ನು ಭೇಟಿಮಾಡಬೇಕೆಂದು ನಾನು ಬಹಳವಾಗಿ ಅವನನ್ನು ಪ್ರೋತ್ಸಾಹಿಸಿದೆನು. ಆದರೆ ಅವನು ಈಗ ಬರುವುದಿಲ್ಲ ಎಂದು ನಿರ್ಧರಿಸಿದನು. ಆದರೆ ಒಳ್ಳೆ ಅವಕಾಶ ಸಿಕ್ಕಿದಾಗ ಬರುವನು.
Kardeşimiz Apollos'a gelince, kardeşlerle birlikte size gelmesi için ona çok ricada bulundum, ama şimdilik gelmeye hiç de istekli değil. Fırsat bulunca gelecek.
13 ೧೩ ಎಚ್ಚರವಾಗಿರಿ, ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಲ್ಲಿರಿ. ಧೈರ್ಯವಂತರಾಗಿರಿ, ಬಲಗೊಳ್ಳಿರಿ.
Uyanık kalın, imanda dimdik durun, mert ve güçlü olun.
14 ೧೪ ನೀವು ಮಾಡುವುದನ್ನೆಲ್ಲಾ ಪ್ರೀತಿಯಿಂದ ಮಾಡಿರಿ.
Her şeyi sevgiyle yapın.
15 ೧೫ ಸ್ತೆಫನನ ಮನೆಯವರು ಅಖಾಯದಲ್ಲಿನ ಪ್ರಥಮಫಲವೆಂದು ಹಾಗೂ ಅವರು ದೇವಜನರ ಸೇವೆಗೋಸ್ಕರ ತಮ್ಮನ್ನು ಅರ್ಪಿಸಿದ್ದಾರೆಂದು ನೀವು ಬಲ್ಲವರಾಗಿದ್ದೀರಿ.
Ahaya'da ilk iman eden ve kendilerini kutsalların hizmetine adayan İstefanas'ın ev halkını bilirsiniz. Kardeşler, size yalvarırım, bu gibilere ve onlarla birlikte çalışıp emek verenlerin hepsine bağımlı olun.
16 ೧೬ ನಾನು ನಿಮ್ಮಲ್ಲಿ ಬೇಡುವುದೇನಂದರೆ, ಸೇವೆಯಲ್ಲಿ ನಮಗೆ ಸಹಾಯಮಾಡುವ ಹಾಗೂ ಪ್ರಯಾಸಪಡುವವರೆಲ್ಲರಿಗೂ ನೀವು ಅಧೀನರಾಗಿರಬೇಕು.
17 ೧೭ ಸ್ತೆಫನನೂ, ಪೊರ್ತುನಾತೊಸನೂ, ಅಖಾಯಿಕನೂ ಬಂದದ್ದು ನನಗೆ ಸಂತೋಷವನ್ನುಂಟುಮಾಡಿದೆ. ನಿಮ್ಮಿಂದ ಆಗಿರುವ ಕೊರತೆಯನ್ನು ಅವರು ನೀಗಿಸಿರುವರು.
İstefanas, Fortunatus ve Ahaykos'un gelişine sevindim. Yokluğunuzu bana unutturdular.
18 ೧೮ ಅವರು ನನ್ನ ಆತ್ಮವನ್ನೂ ಮತ್ತು ನಿಮ್ಮ ಆತ್ಮಗಳನ್ನೂ ಚೈತನ್ಯಗೊಳಿಸಿದರಲ್ಲ. ಹೀಗಿರುವುದರಿಂದ ಇಂಥವರನ್ನು ಸನ್ಮಾನಿಸಿರಿ.
Sizin ruhunuzu da benim ruhumu da ferahlattılar. Böylelerinin değerini bilin.
19 ೧೯ ಆಸ್ಯಸೀಮೆಯ ಸಭೆಗಳವರು ನಿಮ್ಮನ್ನು ವಂದಿಸುತ್ತಾರೆ. ಅಕ್ವಿಲನೂ ಮತ್ತು ಪ್ರಿಸ್ಕಿಲ್ಲಳೂ ತಮ್ಮ ಮನೆಯಲ್ಲಿ ಕೂಡಿ ಬರುವ ಸಭೆಯವರೊಂದಿಗೆ ಕರ್ತನ ಹೆಸರಿನಲ್ಲಿ ಬಹಳವಾಗಿ ನಿಮ್ಮನ್ನು ವಂದಿಸುತ್ತಿದ್ದಾರೆ.
Asya İli'ndeki kiliseler size selam eder. Akvila ve Priska, evlerinde buluşan toplulukla birlikte Rab'de size çok selam ederler.
20 ೨೦ ಸಹೋದರರೆಲ್ಲರೂ ನಿಮಗೆ ವಂದನೆ ಹೇಳುತ್ತಿದ್ದಾರೆ. ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.
Buradaki bütün kardeşlerin size selamı var. Birbirinizi kutsal öpüşle selamlayın.
21 ೨೧ ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆಯನ್ನು ಬರೆದಿದ್ದೇನೆ.
Ben Pavlus, bu selamı kendi elimle yazıyorum.
22 ೨೨ ಯಾವನಾದರೂ ಕರ್ತನನ್ನು ಪ್ರೀತಿಸದಿದ್ದರೆ ಅವನು ಶಾಪಗ್ರಸ್ತನಾಗಲಿ. ನಮ್ಮ ಕರ್ತನೇ ಬಾ!
Rab'bi sevmeyene lanet olsun. Maranata!
23 ೨೩ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ
Rab İsa'nın lütfu sizinle birlikte olsun.
24 ೨೪ ಕ್ರಿಸ್ತ ಯೇಸುವಿನಲ್ಲಿ ನನ್ನ ಪ್ರೀತಿಯು ನಿಮ್ಮೆಲ್ಲರೊಂದಿಗೆ ಇರಲಿ. ಅಮೆನ್.
Hepinize Mesih İsa'da sevgiler! Amin.

< ಕೊರಿಂಥದವರಿಗೆ ಬರೆದ ಮೊದಲನೆಯ ಪತ್ರಿಕೆ 16 >