< ಕೊರಿಂಥದವರಿಗೆ ಬರೆದ ಮೊದಲನೆಯ ಪತ್ರಿಕೆ 3 >
1 ೧ ಆದರೆ ಸಹೋದರರೇ ನಾನಂತೂ ಆತ್ಮೀಕರೊಂದಿಗೆ ಮಾತನಾಡುವಂತೆ ನಿಮ್ಮ ಸಂಗಡ ಮಾತನಾಡದೆ ಪ್ರಾಪಂಚಿಕರೂ ಕ್ರಿಸ್ತನ ವಿಷಯದಲ್ಲಿ ಎಳೆಗೂಸುಗಳೂ ಆಗಿರುವವರ ಹಾಗೆ ನಿಮ್ಮ ಸಂಗಡ ಮಾತನಾಡಬೇಕಾಯಿತು.
I, therefore, brethren, have not been able to speak unto you, as unto men of the Spirit, but as unto men of the flesh—as unto babes in Christ: —
2 ೨ ನಿಮಗೆ ಹಾಲು ಕುಡಿಸಿದೆನು ಆಹಾರ ಕೊಡಲಿಲ್ಲ. ಆಹಾರವನ್ನು ತಿನ್ನುವುದಕ್ಕೆ ನೀವು ಇನ್ನೂ ಸಮರ್ಥರಾಗಿರಲಿಲ್ಲ. ಈಗಲೂ ನೀವು ಸಮರ್ಥರಾಗಿಲ್ಲ.
With milk, have I fed you, not, with meat; for, not yet, have ye been able; —nay! not [yet] even now, are ye able,
3 ೩ ಯಾಕೆಂದರೆ ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ನಿಮ್ಮಲ್ಲಿ ಹೊಟ್ಟೆಕಿಚ್ಚು ಜಗಳಗಳು ಇರುವಲ್ಲಿ, ನೀವು ಪ್ರಾಪಂಚಿಕರಾಗಿದ್ದು ಕೇವಲ ಬೇರೆ ಮನುಷ್ಯರಂತೆ ನಡೆಯುತ್ತೀರಲ್ಲವೆ?
For ye are yet fleshly. For, whereas there are, among you, jealousy and strife, are ye not, fleshly, and, after the manner of men, walking?
4 ೪ ಒಬ್ಬನು, “ನಾನು ಪೌಲನವನು” ಎಂದು, ಮತ್ತೊಬ್ಬನು, “ನಾನು ಅಪೊಲ್ಲೋಸನವನು” ಎಂದು ಹೇಳುತ್ತಿರುವಾಗ ನೀವು ಇನ್ನೂ ಕೇವಲ ಸಾಮಾನ್ಯ ಮನುಷ್ಯರೇ ಆಗಿದ್ದೀರಲ್ಲವೇ?
For, as soon as one beginneth to say—I, indeed, am of Paul! and another—I, of Apollos! are ye not, men?
5 ೫ ಹಾಗಾದರೆ ಅಪೊಲ್ಲೋಸನು ಯಾರು? ಪೌಲನು ಯಾರು? ಅವರ ಸೇವೆಯ ಮುಖಾಂತರ ನೀವು ಕ್ರಿಸ್ತನನ್ನು ನಂಬುವವರಾದಿರಿ ಕರ್ತನು ಪ್ರತಿಯೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆಮಾಡುವವರಾಗಿದ್ದಾರೆ.
What then is Apollos? and, what is Paul? ministers through whom ye believed, and, each, as the Lord, gave to him.
6 ೬ ನಾನು ಸಸಿಯನ್ನು ನೆಟ್ಟೆನು. ಅಪೊಲ್ಲೋಸನು ನೀರನ್ನು ಹೊಯ್ಯಿದನು. ಆದರೆ ಅದನ್ನು ಬೆಳೆಸಿದವನು ದೇವರೇ.
I, planted, Apollos, watered, —but, God, caused to, grow.
7 ೭ ಹೀಗಿರಲಾಗಿ ನೆಡುವವನಾಗಲಿ, ನೀರುಹೊಯ್ಯುವವನಾಗಲಿ ಮುಖ್ಯವಾದವನಲ್ಲ. ಬೆಳೆಸುವ ದೇವರೇ ಪ್ರಾಮುಖ್ಯವಾದಾತನು.
So that, [neither] is he that planteth anything, nor, he that watereth, —but, God, who causeth to, grow.
8 ೮ ನೆಡುವವನೂ, ನೀರು ಹೊಯ್ಯುವವನೂ ಸರಿಸಮಾನರೇ ಆಗಿದ್ದಾರೆ. ಆದರೆ ಪ್ರತಿಯೊಬ್ಬನಿಗೆ ಅವನವನ ಶಮ್ರಕ್ಕೆ ತಕ್ಕಂತೆ ಕೂಲಿಯು ದೊರೆಯುವುದು.
Moreover, he that planteth and he that watereth, are one: —howbeit, each one, his own reward, shall receive, —according to his own labour.
9 ೯ ನಾವು ದೇವರ ಜೊತೆಕೆಲಸದವರು. ನೀವು ದೇವರ ಹೊಲವೂ. ದೇವರ ಮಂದಿರವೂ ಆಗಿದ್ದೀರಿ.
For we are, God’s, fellow-workmen: ye are, God’s, farm, God’s building.
10 ೧೦ ದೇವರು ನನಗೆ ಕೊಟ್ಟ ಕೃಪೆಯ ಪ್ರಕಾರ ನಾನು ಜಾಣ್ಮೆಯುಳ್ಳ ಪ್ರವೀಣನಾದ ಶಿಲ್ಪಿಯಂತೆ ಅಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ. ಆದರೆ ತಾನು ಅದರ ಮೇಲೆ ಹೇಗೆ ಕಟ್ಟುತ್ತಿದ್ದೇನೆಂದು ಪ್ರತಿಯೊಬ್ಬನು ಎಚ್ಚರಿಕೆಯಿಂದಿರಬೇಕು.
According to the favour of God which hath been given unto me, as a wise master-builder, I laid a foundation, whereas, another, is building thereon; but, let each one, see, how he buildeth thereon;
11 ೧೧ ಯೇಸು ಕ್ರಿಸ್ತನೆಂಬ ಅಸ್ತಿವಾರವನ್ನಲ್ಲದೆ ಮತ್ತೊಂದು ಅಸ್ತಿವಾರವನ್ನು ಯಾರೂ ಹಾಕಲಾರರಷ್ಟೆ.
For, other foundation, can, no one, lay, than that which is lying, which is, Jesus Christ.
12 ೧೨ ಆ ಅಸ್ತಿವಾರದ ಮೇಲೆ ಚಿನ್ನ, ಬೆಳ್ಳಿ, ರತ್ನಗಳು, ಕಟ್ಟಿಗೆ, ಹುಲ್ಲು, ಆಪು ಮುಂತಾದವುಗಳಲ್ಲಿ ಯಾವುದರಿಂದ ಕಟ್ಟಿದರೂ,
But, if anyone is building, upon the foundation—gold, silver, precious stones, wood, hay, straw,
13 ೧೩ ಅವನವನ ಕೆಲಸವು ಪ್ರಕಟವಾಗುವುದು. ಕ್ರಿಸ್ತನು ಬರುವ ದಿನವು ಬೆಂಕಿಯೊಡನೆ ಉದಯವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವುದು. ಅವನವನ ಕೆಲಸವೆಂಥದೆಂಬುದನ್ನು ಆ ಬೆಂಕಿ ಶೋಧಿಸುವುದು.
Each one’s work, shall be made, manifest; for, the day, will make it plain, because, by fire, is it to be revealed, —and, each one’s work, of what sort it is, the fire itself will prove: —
14 ೧೪ ಒಬ್ಬನು ಆ ಅಸ್ತಿವಾರದ ಮೇಲೆ ಕಟ್ಟಿದ್ದು ಉಳಿದರೆ ಅವನಿಗೆ ಪ್ರತಿಫಲ ಸಿಕ್ಕುವುದು.
If, anyone’s work, shall abide, which he built, a reward, shall he receive, —
15 ೧೫ ಒಬ್ಬನು ಕಟ್ಟಿದ್ದು ಸುಟ್ಟು ಹೋದರೆ ಅವನಿಗೆ ನಷ್ಟವಾಗುವುದು. ತಾನಾದರೋ ರಕ್ಷಣೆ ಹೊಂದುವನು. ಆದರೆ ಬೆಂಕಿಯೊಳಗಿಂದ ತಪ್ಪಿಸಿಕೊಂಡವನ ಹಾಗಿರುವನು.
If, anyone’s work, shall be burnt up, he shall suffer loss, but shall, himself, be saved—though, thus, as through fire.
16 ೧೬ ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?
Know ye not that ye are a shrine of God, and that the Spirit of God within you doth dwell?
17 ೧೭ ಯಾವನಾದರೂ ದೇವರ ಆಲಯವನ್ನು ನಾಶಪಡಿಸಿದರೆ ದೇವರು ಅವನನ್ನು ನಾಶಪಡಿಸುವನು. ಯಾಕೆಂದರೆ ದೇವರ ಆಲಯವು ಪವಿತ್ರವಾದದ್ದು ಆ ಆಲಯವು ನೀವೇ ಆಗಿದ್ದೀರಿ.
If anyone doth mar the shrine of God, God, will mar him; for the shrine of God is holy, —and such are ye.
18 ೧೮ ಯಾವನೂ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳದಿರಲಿ ನಿಮ್ಮಲ್ಲಿ ಯಾವನಾದರೂ ಲೋಕಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿಕೊಳ್ಳುವುದಾದರೆ ಅವನು ಜ್ಞಾನಿಯಾಗುವುದಕ್ಕಾಗಿ “ಮೂರ್ಖನಾಗಲಿ” (aiōn )
Let no one be deceiving himself: —if anyone imagineth himself to be wise among you, in this age, let him become foolish, that he may become wise; (aiōn )
19 ೧೯ ಯಾಕೆಂದರೆ ಇಹಲೋಕದ ಜ್ಞಾನವು ದೇವರ ಮುಂದೆ ಮೂರ್ಖತನವಾಗಿದೆ. “ಆತನು ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೆ ಹಿಡಿದುಕೊಳ್ಳುತ್ತಾನೆಂತಲೂ,”
For, the wisdom of this world, is, foolishness with God; for it is written—He that taketh the wise in their knavery, —
20 ೨೦ “ಜ್ಞಾನಿಗಳ ಯೋಚನೆಗಳು ನಿಷ್ಫಲವಾದವುಗಳೆಂದು ಕರ್ತನು ತಿಳಿದುಕೊಳ್ಳುತ್ತಾನೆಂತಲೂ” ಬರೆದದೆಯಲ್ಲಾ
And again—The Lord taketh note of the speculations of the wise, that they are vain.
21 ೨೧ ಆದಕಾರಣ ಮನುಷ್ಯಮಾತ್ರದವರ ವಿಷಯದಲ್ಲಿ ಯಾರೂ ಹೊಗಳಿಕೊಳ್ಳದಿರಲಿ. ಯಾಕೆಂದರೆ ಸಮಸ್ತವೂ ನಿಮಗಾಗಿಯೇ ಇದೆ.
So then, let, no one, be boasting in men; for, all things, are yours—
22 ೨೨ ಪೌಲನಾಗಲಿ, ಅಪೊಲ್ಲೋಸನಾಗಲಿ, ಕೇಫನಾಗಲಿ ಲೋಕವಾಗಲಿ, ಜೀವವಾಗಲಿ ಮರಣವಾಗಲಿ ಈಗಿನ ಸಂಗತಿಗಳಾಗಲಿ ಮುಂದಣ ಸಂಗತಿಗಳಾಗಲಿ ಸಮಸ್ತವೂ ನಿಮ್ಮದೇ.
Whether Paul, or Apollos, or Cephas, or the world, or life, or death, or things present, or things to come, all, are, yours,
23 ೨೩ ನೀವಂತೂ ಕ್ರಿಸ್ತನವರು, ಕ್ರಿಸ್ತನು ದೇವರಿನವನು.
And, ye, are Christ’s, —and, Christ, is, God’s.