< ಕೊರಿಂಥದವರಿಗೆ ಬರೆದ ಮೊದಲನೆಯ ಪತ್ರಿಕೆ 3 >

1 ಆದರೆ ಸಹೋದರರೇ ನಾನಂತೂ ಆತ್ಮೀಕರೊಂದಿಗೆ ಮಾತನಾಡುವಂತೆ ನಿಮ್ಮ ಸಂಗಡ ಮಾತನಾಡದೆ ಪ್ರಾಪಂಚಿಕರೂ ಕ್ರಿಸ್ತನ ವಿಷಯದಲ್ಲಿ ಎಳೆಗೂಸುಗಳೂ ಆಗಿರುವವರ ಹಾಗೆ ನಿಮ್ಮ ಸಂಗಡ ಮಾತನಾಡಬೇಕಾಯಿತು.
第三項 尚コリント人の争論を咎む 兄弟等よ、我は曩に霊的人物に對するが如くにして汝等に語る事能はず、肉的人物即ちキリストに於る小兒に語るが如くにして、
2 ನಿಮಗೆ ಹಾಲು ಕುಡಿಸಿದೆನು ಆಹಾರ ಕೊಡಲಿಲ್ಲ. ಆಹಾರವನ್ನು ತಿನ್ನುವುದಕ್ಕೆ ನೀವು ಇನ್ನೂ ಸಮರ್ಥರಾಗಿರಲಿಲ್ಲ. ಈಗಲೂ ನೀವು ಸಮರ್ಥರಾಗಿಲ್ಲ.
汝等に乳を飲ましめ、堅き食物を與へざりき。是其時汝等未だ之に適はざりし故なりしが、汝等は今も尚肉的人物なるを以て之に適はざるなり。
3 ಯಾಕೆಂದರೆ ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ನಿಮ್ಮಲ್ಲಿ ಹೊಟ್ಟೆಕಿಚ್ಚು ಜಗಳಗಳು ಇರುವಲ್ಲಿ, ನೀವು ಪ್ರಾಪಂಚಿಕರಾಗಿದ್ದು ಕೇವಲ ಬೇರೆ ಮನುಷ್ಯರಂತೆ ನಡೆಯುತ್ತೀರಲ್ಲವೆ?
即ち汝等の間に嫉妬と争論とあるは、是肉的にして人の如く歩むに非ずや。
4 ಒಬ್ಬನು, “ನಾನು ಪೌಲನವನು” ಎಂದು, ಮತ್ತೊಬ್ಬನು, “ನಾನು ಅಪೊಲ್ಲೋಸನವನು” ಎಂದು ಹೇಳುತ್ತಿರುವಾಗ ನೀವು ಇನ್ನೂ ಕೇವಲ ಸಾಮಾನ್ಯ ಮನುಷ್ಯರೇ ಆಗಿದ್ದೀರಲ್ಲವೇ?
或人我はパウロのものなりと云ふを、他の人我はアポルロのものなりと云へば、汝等尚人たるに非ずや。然らばアポルロ何者ぞ、パウロ何者ぞ、
5 ಹಾಗಾದರೆ ಅಪೊಲ್ಲೋಸನು ಯಾರು? ಪೌಲನು ಯಾರು? ಅವರ ಸೇವೆಯ ಮುಖಾಂತರ ನೀವು ಕ್ರಿಸ್ತನನ್ನು ನಂಬುವವರಾದಿರಿ ಕರ್ತನು ಪ್ರತಿಯೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆಮಾಡುವವರಾಗಿದ್ದಾರೆ.
彼等は汝等が頼りて以て信ぜし僕にして、而も主の各に賜ひたる儘の者に過ぎず。
6 ನಾನು ಸಸಿಯನ್ನು ನೆಟ್ಟೆನು. ಅಪೊಲ್ಲೋಸನು ನೀರನ್ನು ಹೊಯ್ಯಿದನು. ಆದರೆ ಅದನ್ನು ಬೆಳೆಸಿದವನು ದೇವರೇ.
我は植ゑ、アポルロは水濯げり、然れど發育を賜ひしは神なり。
7 ಹೀಗಿರಲಾಗಿ ನೆಡುವವನಾಗಲಿ, ನೀರುಹೊಯ್ಯುವವನಾಗಲಿ ಮುಖ್ಯವಾದವನಲ್ಲ. ಬೆಳೆಸುವ ದೇವರೇ ಪ್ರಾಮುಖ್ಯವಾದಾತನು.
然れば植うる人も水濯ぐ人も、共に數ふるに足らず、唯發育を賜ふ神あるのみ。
8 ನೆಡುವವನೂ, ನೀರು ಹೊಯ್ಯುವವನೂ ಸರಿಸಮಾನರೇ ಆಗಿದ್ದಾರೆ. ಆದರೆ ಪ್ರತಿಯೊಬ್ಬನಿಗೆ ಅವನವನ ಶಮ್ರಕ್ಕೆ ತಕ್ಕಂತೆ ಕೂಲಿಯು ದೊರೆಯುವುದು.
植うる人も水濯ぐ人も一にして、各其勞に随ひ、面々の報を受くべきなり。
9 ನಾವು ದೇವರ ಜೊತೆಕೆಲಸದವರು. ನೀವು ದೇವರ ಹೊಲವೂ. ದೇವರ ಮಂದಿರವೂ ಆಗಿದ್ದೀರಿ.
蓋我等は神の助手にして、汝等は神の耕作地なり。神の建築物なり。
10 ೧೦ ದೇವರು ನನಗೆ ಕೊಟ್ಟ ಕೃಪೆಯ ಪ್ರಕಾರ ನಾನು ಜಾಣ್ಮೆಯುಳ್ಳ ಪ್ರವೀಣನಾದ ಶಿಲ್ಪಿಯಂತೆ ಅಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ. ಆದರೆ ತಾನು ಅದರ ಮೇಲೆ ಹೇಗೆ ಕಟ್ಟುತ್ತಿದ್ದೇನೆಂದು ಪ್ರತಿಯೊಬ್ಬನು ಎಚ್ಚರಿಕೆಯಿಂದಿರಬೇಕು.
我は、賜はりたる神の恩寵に從ひて、敏き建築者の如く基礎を据ゑしに、他人は其上に建築す、各如何にして其上に建築すべきかを慮るべし。
11 ೧೧ ಯೇಸು ಕ್ರಿಸ್ತನೆಂಬ ಅಸ್ತಿವಾರವನ್ನಲ್ಲದೆ ಮತ್ತೊಂದು ಅಸ್ತಿವಾರವನ್ನು ಯಾರೂ ಹಾಕಲಾರರಷ್ಟೆ.
其は据ゑられたる基礎即ちキリスト、イエズスを除きては、誰も他の基礎を置く事能はざればなり。
12 ೧೨ ಆ ಅಸ್ತಿವಾರದ ಮೇಲೆ ಚಿನ್ನ, ಬೆಳ್ಳಿ, ರತ್ನಗಳು, ಕಟ್ಟಿಗೆ, ಹುಲ್ಲು, ಆಪು ಮುಂತಾದವುಗಳಲ್ಲಿ ಯಾವುದರಿಂದ ಕಟ್ಟಿದರೂ,
人若此基礎の上に、金、銀、寳石、木、草、藁を以て建築せば、
13 ೧೩ ಅವನವನ ಕೆಲಸವು ಪ್ರಕಟವಾಗುವುದು. ಕ್ರಿಸ್ತನು ಬರುವ ದಿನವು ಬೆಂಕಿಯೊಡನೆ ಉದಯವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವುದು. ಅವನವನ ಕೆಲಸವೆಂಥದೆಂಬುದನ್ನು ಆ ಬೆಂಕಿ ಶೋಧಿಸುವುದು.
面々の建物顕れん、蓋主の日に於て明にせらるべし、其は火を以て顕され、火は面々の建物の如何を試すべければなり。
14 ೧೪ ಒಬ್ಬನು ಆ ಅಸ್ತಿವಾರದ ಮೇಲೆ ಕಟ್ಟಿದ್ದು ಉಳಿದರೆ ಅವನಿಗೆ ಪ್ರತಿಫಲ ಸಿಕ್ಕುವುದು.
若誰にもあれ、其上に建築したる建物にして之に堪へなば、其人は報を得べく、
15 ೧೫ ಒಬ್ಬನು ಕಟ್ಟಿದ್ದು ಸುಟ್ಟು ಹೋದರೆ ಅವನಿಗೆ ನಷ್ಟವಾಗುವುದು. ತಾನಾದರೋ ರಕ್ಷಣೆ ಹೊಂದುವನು. ಆದರೆ ಬೆಂಕಿಯೊಳಗಿಂದ ತಪ್ಪಿಸಿಕೊಂಡವನ ಹಾಗಿರುವನು.
若其建物焼けなば其人は損を受けん、然れど己は殆ど火を経たる如くに救はるべし。
16 ೧೬ ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?
汝等は其身が神の聖殿なる事、神の霊汝等の中に住み給ふ事を知らざるか。
17 ೧೭ ಯಾವನಾದರೂ ದೇವರ ಆಲಯವನ್ನು ನಾಶಪಡಿಸಿದರೆ ದೇವರು ಅವನನ್ನು ನಾಶಪಡಿಸುವನು. ಯಾಕೆಂದರೆ ದೇವರ ಆಲಯವು ಪವಿತ್ರವಾದದ್ದು ಆ ಆಲಯವು ನೀವೇ ಆಗಿದ್ದೀರಿ.
人若神殿を毀たば神之を亡ぼし給ふべし、蓋神殿は聖にして汝等は即ち其なり。
18 ೧೮ ಯಾವನೂ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳದಿರಲಿ ನಿಮ್ಮಲ್ಲಿ ಯಾವನಾದರೂ ಲೋಕಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿಕೊಳ್ಳುವುದಾದರೆ ಅವನು ಜ್ಞಾನಿಯಾಗುವುದಕ್ಕಾಗಿ “ಮೂರ್ಖನಾಗಲಿ” (aiōn g165)
誰も自ら欺くこと勿れ、汝等の中に己を敏しと思ふ者あらば、智者たらん為に此世に於て愚なるべし。 (aiōn g165)
19 ೧೯ ಯಾಕೆಂದರೆ ಇಹಲೋಕದ ಜ್ಞಾನವು ದೇವರ ಮುಂದೆ ಮೂರ್ಖತನವಾಗಿದೆ. “ಆತನು ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೆ ಹಿಡಿದುಕೊಳ್ಳುತ್ತಾನೆಂತಲೂ,”
其は此世の智恵は神の御前に愚なればなり。蓋録して、「我智者等を其狡猾によりて捕へん」、とあり。
20 ೨೦ “ಜ್ಞಾನಿಗಳ ಯೋಚನೆಗಳು ನಿಷ್ಫಲವಾದವುಗಳೆಂದು ಕರ್ತನು ತಿಳಿದುಕೊಳ್ಳುತ್ತಾನೆಂತಲೂ” ಬರೆದದೆಯಲ್ಲಾ
又、「主は智者等の思の徒なるを知り給ふ」、とあり。
21 ೨೧ ಆದಕಾರಣ ಮನುಷ್ಯಮಾತ್ರದವರ ವಿಷಯದಲ್ಲಿ ಯಾರೂ ಹೊಗಳಿಕೊಳ್ಳದಿರಲಿ. ಯಾಕೆಂದರೆ ಸಮಸ್ತವೂ ನಿಮಗಾಗಿಯೇ ಇದೆ.
然れば誰も人を以て誇と為すべからず、
22 ೨೨ ಪೌಲನಾಗಲಿ, ಅಪೊಲ್ಲೋಸನಾಗಲಿ, ಕೇಫನಾಗಲಿ ಲೋಕವಾಗಲಿ, ಜೀವವಾಗಲಿ ಮರಣವಾಗಲಿ ಈಗಿನ ಸಂಗತಿಗಳಾಗಲಿ ಮುಂದಣ ಸಂಗತಿಗಳಾಗಲಿ ಸಮಸ್ತವೂ ನಿಮ್ಮದೇ.
蓋萬事は汝等のものなり、或はパウロ、或はアポルロ、或はケファ、或は世、或は生、或は死、或は現在の事、或は未來の事、即ち一切は汝等のものなり、
23 ೨೩ ನೀವಂತೂ ಕ್ರಿಸ್ತನವರು, ಕ್ರಿಸ್ತನು ದೇವರಿನವನು.
然れど汝等はキリストのものにして、キリストは神のものなり。

< ಕೊರಿಂಥದವರಿಗೆ ಬರೆದ ಮೊದಲನೆಯ ಪತ್ರಿಕೆ 3 >