< ಕೊರಿಂಥದವರಿಗೆ ಬರೆದ ಮೊದಲನೆಯ ಪತ್ರಿಕೆ 4 >
1 ೧ ಜನರು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರ ಗುಪ್ತವಾಗಿದ್ದ ಸತ್ಯಾರ್ಥಗಳ ವಿಷಯದಲ್ಲಿ ದೇವರ ಮನೆವಾರ್ತೆಯವರೆಂತಲೂ ಪರಿಗಣಿಸಲಿ.
第四項 パウロ自己の弁解 然れば人は宜しく、我等をキリストの僕、神の奥義の分配者と思ふべし。
2 ೨ ಹೀಗಿರಲು ನಿರ್ವಾಹಕರು ನಂಬಿಗಸ್ತರಾಗಿ ಕಂಡುಬರುವದು ಅಗತ್ಯವಲ್ಲವೇ.
然て分配者に要求する所は其忠實なる事なれど、
3 ೩ ನನಗಾದರೂ ನಿಮ್ಮಿಂದಾಗಲಿ ಅಥವಾ ಮನುಷ್ಯರು ಮಾಡುವ ವಿಚಾರಣೆಯಾಗಲಿ ತೀರಾ ಲಘುವೆನಿಸಿದೆ. ನಾನೂ ನನ್ನನ್ನು ನ್ಯಾಯತೀರ್ಪು ಮಾಡಿಕೊಳ್ಳುವುದಿಲ್ಲ.
我は汝等により、或は人の裁判によりて是非せらるることを、聊も意と為ず、又自ら是非する事をも為ざるなり。
4 ೪ ನನ್ನಲ್ಲಿ ದೋಷವಿದೆಯೆಂದು ನನ್ನ ಮನಸ್ಸಿಗೆ ತೋರುವುದಿಲ್ಲವಾದರೂ ನಾನು ನಿರ್ದೋಷಿಯೆಂದು ನಿರ್ಣಯಿಸುವಂತಿಲ್ಲ. ನನ್ನನ್ನು ನ್ಯಾಯವಿಚಾರಣೆ ಮಾಡುವವನು ಕರ್ತನೇ.
蓋良心に何の咎むる事はなけれども、之に由りて義とせらるるには非ず、我を是非し給ふ者は主なり。
5 ೫ ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು.
然れば汝等主の來り給ふ迄は、時に先ちて是非すること勿れ、主は暗夜の隠れたる所をを照らし、心の謀を發き給ふべし、其時面々に神より誉を得ん。
6 ೬ ಪ್ರಿಯರೇ, ನಾನು ನಿಮಗೋಸ್ಕರವಾಗಿ ನನ್ನಗೂ ಅಪೊಲ್ಲೋಸನಿಗೂ ಈ ನಿಯಮಗಳನ್ನೆಲ್ಲಾ ಅನ್ವಯಿಸಿಕೊಂಡು ಹೇಳಿದ್ದೇನೆ. ಆದ್ದರಿಂದ ನೀವು “ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನು ಮೀರಿಹೋಗಬಾರದು,” ಎಂಬ ಈ ವಾಕ್ಯದ ಅರ್ಥವನ್ನು ನಮ್ಮಿಂದ ಕಲಿತುಕೊಂಡು, ನಿಮ್ಮಲ್ಲಿ ಯಾವನಾದರೂ ಒಬ್ಬನನ್ನು ವಿರೋಧಿಸಿ ಮತ್ತೊಬ್ಬನ ಪಕ್ಷವನ್ನು ಹಿಡಿದು ಉಬ್ಬಿಕೊಳ್ಳಬಾರದು ಎಂಬುದಕ್ಕಾಗಿದೆ.
兄弟等よ、我が是等の事を、我とアポルロとに引當てて云ひしは、是汝等の為、即ち我等の例を以て、録されたる以外に、一人を揚げ一人を蔑げて誇らざらん事を汝等に學ばしめん為なり。
7 ೭ ನಿನ್ನನ್ನು ಇತರರಿಗಿಂತಲೂ ಶ್ರೇಷ್ಠನನ್ನಾಗಿ ಮಾಡಿದವರು ಯಾರು? ದೇವರಿಂದ ಹೊಂದದೆ ಇರುವಂಥದು ನಿನ್ನಲ್ಲಿ ಒಂದಾದರೂ ಉಂಟೋ? ಹೊಂದಿದ ಮೇಲೆ ಹೊಂದಿದ್ದಲ್ಲವೆಂಬಂತೆ ಯಾಕೆ ಕೊಚ್ಚಿಕೊಳ್ಳುತ್ತೀ?
蓋汝を差別する者は誰ぞや、汝の有てる物にして、貰はざりし物は何かある、貰ひしならば、何ぞ貰はざりしが如くに誇るや。
8 ೮ ಇಷ್ಟು ಬೇಗನೆ ನೀವು ತೃಪ್ತರಾದಿರಿ. ಇಷ್ಟುಬೇಗನೆ ಐಶ್ವರ್ಯವಂತರಾದಿರಿ. ನಮ್ಮ ಸಹಾಯವಿಲ್ಲದೆ ಅರಸರಂತೆ ಆದಿರಿ. ನೀವು ನಿಜವಾಗಿ ಆಳುವವರಾಗಿದ್ದರೇ ನನಗೆ ಆನಂದವಾಗುತ್ತಿತ್ತು. ಆಗ ನಾವು ಸಹ ನಿಮ್ಮೊಂದಿಗೆ ಆಳುತ್ತಿದ್ದೇವು.
汝等既に飽足れり、既に富めり、我等を措きて王となれり。然り汝等王たれかし、然らば我等も汝等と共に王たるを得ん。
9 ೯ ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣದ ತೀರ್ಪು ಹೊಂದಿದವರಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ. ನಾವು ಲೋಕದಲ್ಲಿ ದೇವದೂತರಿಗೂ, ಮನುಷ್ಯರಿಗೂ ಅಂತೂ ಜಗತ್ತಿಗೆಲ್ಲಾ ಹಾಸ್ಯಾಸ್ಪದವಾದ ನೋಟವಾದೆವು.
蓋我想ふに、神は使徒たる我等を、後の者、死に定まりたる者として見せ給へり。即ち我等は全世界、天使等にも人間にも観物とせられたるなり。
10 ೧೦ ನಾವಂತೂ ಕ್ರಿಸ್ತನ ನಿಮಿತ್ತ ಮೂರ್ಖರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ. ನಾವು ಬಲಹೀನರು, ನೀವು ಬಲಿಷ್ಠರು, ನೀವು ಗೌರವವುಳ್ಳವರು, ನಾವು ನಿಂದಿಸಲ್ಪಟ್ಟವರು.
我等はキリストの為に愚者なるに、汝等はキリストに於て智者なり、我等は弱くして汝等は強く、汝等は尊くして我等は卑し。
11 ೧೧ ಈ ಗಳಿಗೆಯವರೆಗೂ ನಾವು ಹಸಿದವರೂ, ಬಾಯಾರಿಕೆಯುಳ್ಳವರೂ, ವಸ್ತ್ರವಿಲ್ಲದವರೂ, ಪೆಟ್ಟು ತಿನ್ನುವವರೂ ಮನೆಯಿಲ್ಲದವರೂ,
今の時に至る迄も、我等は飢ゑ、又渇き、又素肌なり、又頬を打たれ、又定まれる住所なく、
12 ೧೨ ಸ್ವಂತ ಕೈಗಳಿಂದ ಕೆಲಸಮಾಡಿ ದುಡಿಯುವವರೂ ಆಗಿದ್ದೇವೆ. ಶಪಿಸುವವರನ್ನು ಆಶೀರ್ವದಿಸುತ್ತೇವೆ. ಜನರು ಹಿಂಸಿಸುವಾಗ ಸಹಿಸಿಕೊಳ್ಳುತ್ತೇವೆ.
又手業を営みて勞し、詛はれては祝し、迫害せられては忍び、
13 ೧೩ ಅಪವಾದ ಹೊರಿಸುವವರನ್ನು ಕನಿಕರದಿಂದ ಮಾತನಾಡಿಸುತ್ತೇವೆ. ನಾವು ಈಗಿನವರೆಗೂ ಲೋಕದ ಕಸವೋ ಎಲ್ಲಾದಕ್ಕಿಂತಲೂ ಹೀನವೋ ಎಂಬಂತೆ ಆಗಿದ್ದೇವೆ.
罵られては祈り、今に至る迄も世の芥、衆人の捨物の如くになれり。
14 ೧೪ ನಿಮ್ಮನ್ನು ನಾಚಿಕೆಪಡಿಸುವುದಕ್ಕಾಗಿ ಬರೆಯದೆ ನನ್ನ ಪ್ರಿಯ ಮಕ್ಕಳೆಂದು ಭಾವಿಸಿ ನಿಮಗೆ ಬುದ್ಧಿ ಹೇಳುವುದಕ್ಕಾಗಿಯೇ ಈ ಮಾತುಗಳನ್ನು ಬರೆದಿದ್ದೇನೆ.
我が斯く書記せるは、汝等を辱めんとには非ず、唯我至愛なる子として誡むるのみ。
15 ೧೫ ನಿಮಗೆ ಕ್ರಿಸ್ತನಲ್ಲಿ ಬೋಧಕರು ಸಾವಿರಾರು ಮಂದಿ ಇದ್ದರೂ ತಂದೆಗಳು ಬಹು ಮಂದಿ ಇಲ್ಲ ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದ ತಂದೆಯಾಗಿದ್ದೇನೆ.
蓋汝等キリストに於て、師は一萬ありとも父は數多からず、其は福音を以て汝等をキリスト、イエズスに生みたるは我なればなり。
16 ೧೬ ಆದ್ದರಿಂದ ನನ್ನನ್ನು ಅನುಸರಿಸುವವರಾಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
故に我汝等に希ふ、(我がキリストに倣へる如く)汝等も我に倣へ。
17 ೧೭ ಈ ಕಾರಣದಿಂದ ಕರ್ತನಲ್ಲಿ ನನ್ನ ಪ್ರಿಯ ಮತ್ತು ನಂಬಿಗಸ್ತ ಮಗನಾದ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೇನೆ. ನಾನು ಪ್ರತಿಯೊಂದು ಸಭೆಗಳಲ್ಲಿಯೂ, ಎಲ್ಲೆಲ್ಲಿಯೂ ಬೋಧಿಸುವ ಹಾಗೆ ಕ್ರಿಸ್ತನಲ್ಲಿರುವ ನನ್ನ ನಡವಳಿಕೆಗಳನ್ನು ಅವನು ನಿಮ್ಮ ನೆನಪಿಗೆ ತರುವನು.
我は之が為に、主に於て忠實なる我至愛の子チモテオを汝等に遣はしたるが、彼はキリスト、イエズスに於る我道、即ち至る處の各教會に我が教ふる所を、汝等に思出さしめん。
18 ೧೮ ನಿಮ್ಮಲ್ಲಿ ಕೆಲವರು ಪೌಲನು ನಮ್ಮ ಬಳಿಗೆ ಬರುವುದಿಲ್ಲವೆಂದು ತಿಳಿದು ಉಬ್ಬಿಕೊಂಡಿದ್ದಾರೆ.
或人々は我汝等に至らずとて誇れども、
19 ೧೯ ಆದರೆ ಕರ್ತನ ಚಿತ್ತವಾದರೆ ನಾನು ಬೇಗನೆ ನಿಮ್ಮ ಬಳಿಗೆ ಬಂದು ಉಬ್ಬಿಕೊಂಡಿರುವವರ ಮಾತನ್ನು ಮಾತ್ರವಲ್ಲ ಅವರ ಬಲವನ್ನು ಕಂಡುಹಿಡಿಯುತ್ತೇನೆ.
主の思召ならば、我は速に汝等に至り、誇れる人々の言を措きて其實力を知らんとす。
20 ೨೦ ದೇವರ ರಾಜ್ಯವು ಮಾತಿನಲ್ಲಿ ಅಲ್ಲ, ಶಕ್ತಿಯಲ್ಲಿ ಅಡಗಿದೆ.
是神の國は言にあるに非ずして實力にあればなり。
21 ೨೧ ನಿಮ್ಮ ಇಷ್ಟವೇನು? ಬೆತ್ತ ತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯದ ಆತ್ಮದಿಂದಲೂ ಕೂಡಿದವನಾಗಿ ಬರಲೋ?
汝等は敦をか望める、我が鞭を以て汝等に至らん事か、将愛と温和の心とを以て至らん事か。