< ಕೊರಿಂಥದವರಿಗೆ ಬರೆದ ಮೊದಲನೆಯ ಪತ್ರಿಕೆ 5 >

1 ನಿಮ್ಮಲ್ಲಿ ಜಾರತ್ವವುಂಟೆಂಬ ಸುದ್ದಿಯನ್ನು ನಾನು ಕೇಳಿದ್ದೇನೆ. ಒಬ್ಬನು ತನ್ನ ತಂದೆಯ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ. ಅಂಥ ಜಾರತ್ವವು ಅನ್ಯಜನರಲ್ಲಿಯೂ ಸಹ ಇಲ್ಲ.
Hintte giddon laymatethi de7eyssi zigirettees. Hessa mela laymatethi hari attoshin, ammanonna asaykka oothokona. Hintte giddon ba aawa machcheera tunida asi de7ees.
2 ಹೀಗಿದ್ದರೂ ನೀವು ದುಃಖಿಸದೆ, ಈ ಕಾರ್ಯಮಾಡಿದವನನ್ನು ನಿಮ್ಮೊಳಗಿಂದ ಬಹಿಷ್ಕರಿಸದೆ, ಉಬ್ಬಿಕೊಂಡಿದ್ದೀರಲ್ಲಾ.
Hessan hintte qiirottanawunne yeellatanaw bessennee shin, otorttideta. Hessa mela borssobaa oothida uraa hintte giddofe kessanaw bessennee?
3 ನಾನಂತೂ ಶಾರೀರಿಕವಾಗಿ ನಿಮ್ಮಿಂದ ದೂರವಾಗಿದ್ದರೂ, ಆತ್ಮದಿಂದ ಹತ್ತಿರದಲ್ಲಿದ್ದು ಈ ಕಾರ್ಯ ಮಾಡಿದವನನ್ನು ಕುರಿತು ಆಗಲೇ ನಿಮ್ಮ ಹತ್ತಿರವಿದ್ದವನಂತೆ ತೀರ್ಪು ಮಾಡಿದ್ದೇನೆ.
Taani ashon hinttera doona ixxikokka ayyaanan ta hinttera de7ays. Taani hinttera de7iya asada hanada hessa mela oosuwa oothida uraa bolla pirddas.
4 ನಮ್ಮ ಕರ್ತನಾದ ಯೇಸುವಿನ ನಾಮದಲ್ಲಿ ನೀವೆಲ್ಲರೂ ಸೇರಿ ಬರುವಾಗ ನಾನು ಆತ್ಮದಿಂದ ನಿಮ್ಮೊಂದಿಗಿರುತ್ತೇನೆ ಹಾಗೂ
Nu Godaa Yesuus Kiristtoosa sunthan hintte shiiqiya wode taani ayyaanan hinttera daana. Hessan Godaa Yesuus Kiristtoosa wolqqay hinttera gidana.
5 ಅವನನ್ನು ಸೈತಾನನಿಗೆ ಒಪ್ಪಿಸಿರಿ ಯಾಕೆಂದರೆ ಕರ್ತನಾದ ಯೇಸುವಿನ ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವುದಕ್ಕಾಗಿ ಅವನ ಶರೀರಭಾವವು ನಾಶವಾಗುವಂತೆ ಕರ್ತನಾದ ಯೇಸುವಿನ ಶಕ್ತಿಯಿಂದ ತೀರ್ಪು ಮಾಡಿದ್ದೇನೆ.
He uraa nagara ashoy dhayidi, iya ayyaanay Godaa Yesuusa pirdda gallasan attana mela I Xalahes aadhdhi imetto.
6 ನೀವು ಹೊಗಳಿಕೊಳ್ಳುವುದು ಒಳ್ಳೆಯದಲ್ಲ. ಸ್ವಲ್ಪ ಹುಳಿ ಕಲಸಿದರೆ ಕಣಕವೆಲ್ಲಾ ಹುಳಿಯಾಗುತ್ತದೆಂಬುದು ನಿಮಗೆ ತಿಳಿಯದೋ?
Hintte ceeqoy lo77o gidenna. Guutha irshshoy munuqa ubbaa dentheyssa erekketiyye?
7 ನೀವು ಹುಳಿಯಿಲ್ಲದವರೆನಿಸಿಕೊಂಡದ್ದರಿಂದ ಹಳೇ ಹುಳಿಯನ್ನು ತೆಗೆದುಹಾಕಿ ಹೊಸ ಕಣಕದಂತಾಗಿರಿ. ಯಾಕೆಂದರೆ ಈಗಾಗಲೇ ನಮ್ಮ ಪಸ್ಕ ಯಜ್ಞದ ಕುರಿಮರಿಯು ಬಲಿಯಾಗಿದೆ; ಆ ಕುರಿಮರಿ ಯಾವುದೆಂದರೆ ಕ್ರಿಸ್ತನೇ.
Hintte ha77i irshshoy baynna munuqa gidana mela, nagara irshshuwaa hinttefe kessite. Nu Faasika dorssaa gidida Kiristtoosi yarshshettis.
8 ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ಮತ್ತು ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೇ ಪ್ರಾಮಾಣಿಕತೆ ಹಾಗೂ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯನ್ನೇ ತೆಗೆದುಕೊಂಡು ಹಬ್ಬವನ್ನು ಆಚರಿಸೋಣ.
Hessi gisho, geneynne iitatethi de7iya irshshuwaara gidonnashin, tumatethinne geeshshatethi de7iya uythara nu baaliya bonchchoos.
9 ಜಾರರ ಸಹವಾಸ ಮಾಡಬಾರದೆಂದು ನನ್ನ ಪತ್ರಿಕೆಯಲ್ಲಿ ಬರೆದಿದ್ದೇನೆ.
Ta kase xaafida dabddaabbiyan hintte laymatiya asaara gayttonna mela hinttew odas.
10 ೧೦ ಅದು ಈ ಲೋಕದಲ್ಲಿರುವ ಜಾರರು, ಆಸೆಬುರುಕರು, ಸುಲುಕೊಳ್ಳುವವರು, ವಿಗ್ರಹಾರಾಧಕರು, ಮೊದಲಾದವರ ಸಹವಾಸವನ್ನು ಬಿಟ್ಟುಬಿಡಬೇಕೆಂಬ ಅರ್ಥದಲ್ಲಿ ಅಲ್ಲ; ಹಾಗೆ ಬಿಡಬೇಕಾದರೆ ನೀವು ಈ ಲೋಕವನ್ನೇ ಬಿಟ್ಟುಹೋಗಬೇಕಾದೀತು.
Hessa guussay ha alamiyan de7iya laymateyssatara woykko uuzetara woykko kaysotara woykko eeqa goynneyssatara polo gayttofite guussu gidenna. Hessa gidikko, ha alamiyappe hintte keyanaw bessees shin attis.
11 ೧೧ ಆದರೆ ಕ್ರೈಸ್ತ ಸಹೋದರನೆನಿಸಿಕೊಂಡವನು ಜಾರನು, ಲೋಭಿಯು, ವಿಗ್ರಹಾರಾಧಕನು, ಜಗಳಗಂಟನೂ, ಕುಡುಕನು, ಸುಲುಕೊಳ್ಳುವವನೂ ಆಗಿದ್ದ ಪಕ್ಷದಲ್ಲಿ ಅವನ ಸಹವಾಸ ಮಾಡಬಾರದು. ಅಂಥವನ ಸಂಗಡ ಊಟ ಸಹ ಮಾಡಬಾರದು ಎಂದು ಬರೆದಿದ್ದೇನೆ.
Shin ammanays yaagishe laymateyssatara woykko uuzetara woykko eeqa goynneyssatara woykko cayeyssatara woykko mathotteyssatara woykko kaysotara gayttofite gada hinttew odays. Hessa mela asara hari attoshin, kathika mooppite.
12 ೧೨ ಸಭೆಯ ಹೊರಗಿರುವವರನ್ನು ತೀರ್ಪುಮಾಡುವುದಕ್ಕೆ ನನಗೇನಧಿಕಾರವಿದೆ? ಒಳಗಿನವರನ್ನು ತೀರ್ಪುಮಾಡುವವರು ನೀವೇ ಅಲ್ಲವೇ.
Woosa keethafe karera de7eyssata bolla pirddanaw tana aybe gathey? Woosa keethan de7eyssata bolla hintte pirddeketiyye?
13 ೧೩ ಹೊರಗಿರುವವರನ್ನು ತೀರ್ಪುಮಾಡುವವನು ದೇವರು. “ನಿಮ್ಮ ಮಧ್ಯದಲ್ಲಿರುವ ಆ ದುಷ್ಟ ವ್ಯಕ್ತಿಯನ್ನು ತೆಗೆದುಹಾಕಿರಿ.”
Shin karera de7eyssata bolla Xoossay pirddana. He iitabaa oothiya uraa hintte giddofe kessite.

< ಕೊರಿಂಥದವರಿಗೆ ಬರೆದ ಮೊದಲನೆಯ ಪತ್ರಿಕೆ 5 >