< ಕೊರಿಂಥದವರಿಗೆ ಬರೆದ ಮೊದಲನೆಯ ಪತ್ರಿಕೆ 8 >
1 ೧ ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥಗಳ ವಿಷಯವನ್ನು ಕುರಿತಾದರೋ. “ನಮ್ಮೆಲ್ಲರಿಗೆ ಜ್ಞಾನವುಂಟೆಂದು” ನಾವು ಬಲ್ಲೆವು. ತಿಳಿವಳಿಕೆಯು ಉಬ್ಬಿಸುತ್ತದೆ, ಆದರೆ ಪ್ರೀತಿಯು ಭಕ್ತಿಯನ್ನು ಬೆಳೆಸುತ್ತದೆ.
至論祭邪神的肉,我們知道「我們都有知識。」但知識只會使人傲慢自大,愛德才能立人。
2 ೨ ಒಬ್ಬನು ತಾನು ಏನಾದರೂ ತಿಳಿದುಕೊಂಡಿದ್ದೇನೆಂದು ಭಾವಿಸುವುದಾದರೆ ಅವನು ತಿಳಿಯಬೇಕಾದ ರೀತಿಯಿಂದ ಇನ್ನೂ ತಿಳಿದುಕೊಂಡಿರುವುದಿಲ್ಲ.
若人自以為知道什麼,這是他還不知道他該怎樣知道。
3 ೩ ಆದರೆ ಯಾವನು ದೇವರನ್ನು ಪ್ರೀತಿಸುತ್ತಾನೋ ದೇವರು ಅವನನ್ನು ತಿಳಿದುಕೊಂಡಿದ್ದಾನೆ.
而誰若愛天主,這人才為天主所認識。
4 ೪ ಆದ್ದರಿಂದ ವಿಗ್ರಹಗಳಿಗೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನುವುದರ ವಿಷಯದಲ್ಲಿ, “ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದು” ನಮಗೆ ತಿಳಿದಿದೆ ಮತ್ತು “ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ” ಬಲ್ಲೆವು.
至論吃祭邪神的肉,我們知道:世上並沒有什麼邪神;也知道:除了一個天主外,沒有什麼神。
5 ೫ ಆಕಾಶದಲ್ಲಿಯಾಗಲಿ ಭೂಮಿಯ ಮೇಲಾಗಲಿ ದೇವರುಗಳೆನಿಸಿಕೊಳ್ಳುವಂಥವುಗಳು ಅನೇಕವಿದ್ದರೂ, “ದೇವರುಗಳೆಂದೂ ಕರ್ತರೆಂದೂ ಪೂಜಿಸುವಂಥವುಗಳು” ಬಹಳವಿದ್ದರೂ,
因為雖然有稱為神的,或在天上,或在地下,就如那許多「神」和許多「主,」
6 ೬ “ನಮಗಾದರೋ ಒಬ್ಬನೇ ತಂದೆಯಾದ ದೇವರು; ಆತನೇ ಸಮಸ್ತಕ್ಕೂ ಮೂಲಕಾರಣನು; ನಾವು ಜೀವಿಸುವುದು ಆತನಿಗಾಗಿಯೇ, ಮತ್ತು ಒಬ್ಬನೇ ಕರ್ತನಾದ ಯೇಸು ಕ್ರಿಸ್ತನೆಂಬ ಏಕ ಕರ್ತನು ನಮಗಿದ್ದಾನೆ. ಆತನ ಮುಖಾಂತರವೇ ಸಮಸ್ತವೂ ಉಂಟಾಯಿತು. ನಾವೂ ಆತನ ಮುಖಾಂತರ ಉಂಟಾದೆವು.”
可是為我們只有一個天主,就是聖父,萬物都出於祂,而我們也歸於祂;也只有一個主,就是耶穌基督,萬物藉祂而有,我們也藉祂而有。
7 ೭ ಆದಾಗ್ಯೂ, ಈ ತಿಳಿವಳಿಕೆಯು ಎಲ್ಲರಲ್ಲಿಯೂ ಇಲ್ಲ. ಪ್ರತಿಯಾಗಿ, ಕೆಲವರು ಈ ವರೆಗೂ ವಿಗ್ರಹಗಳ ಬಳಿಗೆ ಹೋಗುವ ರೂಢಿಯಲ್ಲಿದರಿಂದ ತಾವು ತಿನ್ನುವ ಈ ಆಹಾರವು ವಿಗ್ರಹಕ್ಕೆ ಅರ್ಪಿಸಿದ್ದೆಂದು ತಿನ್ನುತ್ತಾರೆ; ಅವರ ಮನಸ್ಸಾಕ್ಷಿಯು ಬಲಹೀನವಾದ್ದದರಿಂದ ಕಲುಷಿತವಾಗಿ ಹೋಗಿದೆ.
不過這種知識不是人人都有的;有些人直到如今因拜慣了邪神,以為所吃的是祭邪神的肉,因為他們的良心軟弱,就受了玷污。
8 ೮ ಆದರೆ ನಾವು ತಿನ್ನುವ ಆಹಾರವು ದೇವರನ್ನು ಮೆಚ್ಚಿಸುವುದಿಲ್ಲ. ತಿನ್ನದಿರುವುದರಿಂದ ನಷ್ಟವೂ ಇಲ್ಲ, ತಿನ್ನುವುದರಿಂದ ಲಾಭವೂ ಇಲ್ಲ.
其實,食物不能使我們取悅天主:我們不吃也無損,吃了也無益。
9 ೯ ಆದರೆ ಈ ನಿಮ್ಮ ಸ್ವಾತಂತ್ರ್ಯವು ನಂಬಿಕೆಯಲ್ಲಿ ಬಲಹೀನನಾದವನಿಗೆ ಅಡ್ಡಿಯಾಗದಂತೆ ಎಚ್ಚರವಾಗಿರಿ.
但你們要慬慎,免得你們這自由的決擇,成了軟人的絆腳石。
10 ೧೦ ಜ್ಞಾನಿಯಾದ ನೀನೇ ವಿಗ್ರಹಾಲಯದಲ್ಲಿ ಊಟಕ್ಕೆ ಕುಳಿತಿರುವುದನ್ನು ದುರ್ಬಲವಾದ ಮನಸ್ಸಾಕ್ಷಿಯುಳ್ಳ ಸಹೋದರನು ಕಂಡರೆ ಅವನೂ ಕೂಡ ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನುವುದಕ್ಕೆ ಧೈರ್ಯಗೊಂಡನಲ್ಲವೇ.
因為,如果有人看見你們這有知識的,在邪神廟裏坐席,他的良心若是軟弱,豈不受到鼓勵而去吃祭邪神的肉嗎?
11 ೧೧ ಹೀಗೆ ಈ ನಿನ್ನ ಜ್ಞಾನದಿಂದ ಆ ಬಲಹೀನ ಸಹೋದರನು ನಾಶವಾಗುತ್ತಾನೆ. ಅವನಿಗಾಗಿಯೂ ಕ್ರಿಸ್ತನು ತನ್ನ ಪ್ರಾಣ ಕೊಟ್ಟನಲ್ಲವೇ.
那麼這軟弱的人,基督為他而死的弟兄,也就因了你的知識而喪亡!
12 ೧೨ ಹೀಗಿರಲಾಗಿ ನೀವು ಸಹೋದರರ ವಿರುದ್ಧ ಪಾಪ ಮಾಡಿ ಅವರ ದುರ್ಬಲವಾದ ಮನಸ್ಸಾಕ್ಷಿಯನ್ನು ನೋಯಿಸಿದರೆ ನೀವು ಕ್ರಿಸ್ತನ ವಿರುದ್ಧ ಪಾಪಮಾಡುವವರಾಗುತ್ತೀರಿ.
你們這樣得罪了修士們,了傷了他們軟弱的良心,就是得罪基督。
13 ೧೩ ಆದ್ದರಿಂದ ಆಹಾರಪದಾರ್ಥವು ನನ್ನ ಸಹೋದರನಿಗೆ ಅಡ್ಡಿಯಾಗುವುದಾದರೆ ನಾನು ಎಂದಿಗೂ ಮಾಂಸವನ್ನು ತಿನ್ನುವುದಿಲ್ಲ; ನಾನು ನನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವುದಿಲ್ಲಾ. (aiōn )
為此,若是食物使我的弟兄跌倒,我就永遠不吃肉,免得叫我的弟兄跌倒。 (aiōn )