< ಕೊರಿಂಥದವರಿಗೆ ಬರೆದ ಮೊದಲನೆಯ ಪತ್ರಿಕೆ 9 >
1 ೧ ನಾನು ಸ್ವತಂತ್ರನಲ್ಲವೋ? ನಾನು ಅಪೊಸ್ತಲನಲ್ಲವೋ? ನಮ್ಮ ಕರ್ತನಾದ ಯೇಸುವನ್ನು ನಾನು ಕಂಡವನಲ್ಲವೇ? ನಾನು ಕರ್ತನಲ್ಲಿ ಮಾಡಿದ ಸೇವೆಯ ಪ್ರತಿಫಲವು ನೀವೇ ಅಲ್ಲವೇ?
Non sum liber? Non sum Apostolus? Nonne Christum Iesum Dominum nostrum vidi? Nonne opus meum vos estis in Domino?
2 ೨ ಇತರರಿಗೆ ನಾನು ಅಪೊಸ್ತಲನಲ್ಲದಿದ್ದರೂ ನಿಮಗಾದರೋ ಅಪೊಸ್ತಲನಾಗಿದ್ದೇನೆ. ನಾನು ಕರ್ತನ ಅಪೊಸ್ತಲನಾಗಿದ್ದೇನೆಂಬುದಕ್ಕೆ ನೀವೇ ನನ್ನ ಮುದ್ರೆಯಾಗಿದ್ದಿರಿ.
Et si aliis non sum Apostolus, sed tamen vobis sum: nam signaculum Apostolatus mei vos estis in Domino.
3 ೩ ನನ್ನನ್ನು ವಿಮರ್ಶಿಸುವವರಿಗೆ ನನ್ನ ಪ್ರತ್ಯುತ್ತರವೇನೆಂದರೆ,
mea defensio apud eos, qui me interrogant, haec est:
4 ೪ ಅನ್ನ, ಪಾನಗಳಿಗೆ ನಮಗೆ ಹಕ್ಕಿಲ್ಲವೇ?
Numquid non habemus potestatem manducandi, et bibendi?
5 ೫ ಕ್ರೈಸ್ತವಿಶ್ವಾಸಿಯಾದ ಹೆಂಡತಿಯನ್ನು ಕರೆದುಕೊಂಡು ಸಂಚರಿಸುವುದಕ್ಕೆ ಮಿಕ್ಕಾದ ಅಪೊಸ್ತಲರಂತೆಯೂ, ಕರ್ತನ ಸಹೋದರರಂತೆಯ, ಮತ್ತು ಕೇಫನಂತೆಯೂ ನಮಗೆ ಹಕ್ಕಿಲ್ಲವೇ?
Numquid non habemus potestatem mulierem sororem circumducendi sicut et ceteri Apostoli, et fratres Domini, et Cephas?
6 ೬ ಅಥವಾ, ದುಡಿಯದೆ ಜೀವಿಸುವುದಕ್ಕೆ ನನಗೂ ಬಾರ್ನಬನಿಗೂ ಹಕ್ಕಿಲ್ಲವೇ?
Aut ego solus, et Barnabas, non habemus potestatem hoc operandi?
7 ೭ ಯಾವ ಸಿಪಾಯಿಯಾದರೂ ಸ್ವಂತ ಖರ್ಚಿನಿಂದ ಸೇವೆ ಮಾಡುವುದುಂಟೋ? ದ್ರಾಕ್ಷಾತೋಟವನ್ನು ಮಾಡಿದವನು ಅದರ ಫಲವನ್ನು ತಿನ್ನದೇ ಇರುವುದುಂಟೋ? ತನ್ನ ಹಿಂಡನ್ನು ಸಾಕುವವನು ಅವುಗಳ ಹಾಲನ್ನು ಕುಡಿಯದೆ ಜೀವಿಸುವುದುಂಟೋ?
Quis militat suis stipendiis umquam? Quis plantat vineam, et de fructu eius non edit? Quis pascit gregem, et de lacte gregis non manducat?
8 ೮ ನಾನು ಹೇಳಿದ್ದು ಬರೀ ಲೋಕವಾಡಿಕೆಯ ಮಾತೋ? ಧರ್ಮಶಾಸ್ತ್ರವೂ ಇದನ್ನು ಹೇಳುವುದಿಲ್ಲವೋ?
Numquid secundum hominem haec dico? An et lex haec non dicit?
9 ೯ “ಕಣತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದೆಂದು” ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿದೆ. ದೇವರು ಚಿಂತಿಸುವುದು ಎತ್ತುಗಳಿಗಾಗಿಯೋ?
Scriptum est enim in lege Moysi: Non alligabis os bovi trituranti. Numquid de bobus cura est Deo?
10 ೧೦ ಖಂಡಿತವಾಗಿ ನಮಗೋಸ್ಕರವಾಗಿಯೇ ಆತನು ಹೇಳುತ್ತಾನಲ್ಲವೇ? ಹೌದು, ನಮಗೋಸ್ಕರ ಬರೆಯಲ್ಪಟ್ಟಿದೆ. ಉಳುವವನು ಬೆಳೆಯಲ್ಲಿ ತನಗೆ ಪಾಲು ದೊರಕುವ ನಿರೀಕ್ಷೆಯಿಂದ ಉಳಬೇಕು, ಹಾಗೂ ಒಕ್ಕುವವನು ತನಗೆ ಸುಗ್ಗಿಯಲ್ಲಿ ಪಾಲು ದೊರಕುವುದೆಂದು ನಿರೀಕ್ಷೆಯಲ್ಲಿ ಒಕ್ಕಬೇಕು.
An propter nos utique hoc dicit? Nam propter nos scripta sunt. quoniam debet in spe qui arat, arare: et qui triturat, in spe fructus percipiendi.
11 ೧೧ ನಾವು ನಿಮ್ಮಲ್ಲಿ ಆತ್ಮೀಕವಾದ ಬೀಜವನ್ನು ಬಿತ್ತಿದ ಮೇಲೆ ನಿಮ್ಮಿಂದ ಭೌತಿಕವಾದ ಪೈರನ್ನು ಕೊಯ್ಯುವುದು ದೊಡ್ಡ ವಿಷಯವೋ?
Si nos vobis spiritualia seminavimus, magnum est si nos carnalia vestra metamus?
12 ೧೨ ಈ ಅಧಿಕಾರ ಇತರರಿಗೆ ನಿಮ್ಮ ಮೇಲೆ ಇದ್ದರೆ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ? ಆದರೂ ನಾವು ಆ ಅಧಿಕಾರವನ್ನು ಚಲಾಯಿಸಲಿಲ್ಲ, ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನು ಸಹಿಸಿಕೊಂಡೆವು.
Si alii potestatis vestrae participes sunt, quare non potius nos? Sed non usi sumus hac potestate: sed omnia sustinemus, ne quod offendiculum demus Evangelio Christi.
13 ೧೩ ದೇವಾಲಯದಲ್ಲಿ ಸೇವೆ ಸಲ್ಲಿಸುವವರು ದೇವಾಲಯದಿಂದ ತಮ್ಮ ಬದುಕನ್ನು ಸಾಗಿಸಬೇಕೆಂದೂ ಮತ್ತು ಯಜ್ಞವೇದಿಯ ಬಳಿ ಸೇವೆಮಾಡುವವರು ಆ ವೇದಿಗೆ ಬರುವ ಪದಾರ್ಥಗಳಲ್ಲಿ ಪಾಲುಹೊಂದುತ್ತಾರೆಂಬುದೂ ನಿಮಗೆ ತಿಳಿಯದೋ?
Nescitis quoniam qui in sacrario operantur, quae de sacrario sunt, edunt: et qui altaria deserviunt, cum altari participant?
14 ೧೪ ಅದೇ ರೀತಿಯಾಗಿ ಕರ್ತನು ಸಹ ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ತಮ್ಮ ಜೀವನಮಾಡಬೇಕೆಂದು ಆಜ್ಞಾಪಿಸಿದ್ದಾನೆ.
Ita et Dominus ordinavit iis, qui Evangelium annunciant, de Evangelio vivere.
15 ೧೫ ನಾನಂತೂ ಇವುಗಳಲ್ಲಿ ಒಂದನ್ನೂ ಪಾಲಿಸಲಿಲ್ಲ. ನನಗೆ ಏನಾದರೂ ಸಿಕ್ಕಬೇಕೆಂಬ ಉದ್ದೇಶದಿಂದ ನಾನು ಇದನ್ನು ಬರೆಯುತ್ತಿಲ್ಲ. ಯಾರಾದರೂ ಈ ಹೊಗಳಿಕೆಯನ್ನು ವ್ಯರ್ಥಮಾಡುವುದಕ್ಕಿಂತ ಸಾಯುವುದೇ ನನಗೆ ಲೇಸು.
Ego autem nullo horum usus sum. Non autem scripsi haec ut ita fiant in me: bonum est enim mihi magis mori, quam ut gloriam meam quis evacuet.
16 ೧೬ ನಾನು ಸುವಾರ್ತೆಯನ್ನು ಸಾರಿದರೂ ಹೊಗಳಿಕೊಳ್ಳುವುದಕ್ಕೆ ನನಗೇನೂ ಆಸ್ಪದವಿಲ್ಲ; ಸಾರಲೇ ಬೇಕೆಂಬ ನಿರ್ಬಂಧ ನನ್ನ ಮೇಲಿದೆ, ನಾನು ಸುವಾರ್ತೆಯನ್ನು ಸಾರದಿದ್ದರೆ ನನ್ನ ಗತಿಯನ್ನು ಏನೆಂದು ಹೇಳಲಿ!
Nam si evangelizavero, non est mihi gloria: necessitas enim mihi incumbit: vae enim mihi est, si non evangelizavero.
17 ೧೭ ನಾನು ಸ್ವಂತ ಇಷ್ಟದಿಂದ ಈ ಕೆಲಸವನ್ನು ಮಾಡಿದರೆ ನನಗೆ ಪ್ರತಿಫಲ ದೊರೆಯುವುದು; ಇಲ್ಲದಿದ್ದರೂ ಈ ಕರ್ತವ್ಯ ನನ್ನ ವಶಕ್ಕೆ ಒಪ್ಪಿಸಿಕೊಡಲ್ಪಟ್ಟಿದೆ.
Si enim volens hoc ago, mercedem habeo: si autem invitus, dispensatio mihi credita est.
18 ೧೮ ಹಾಗಾದರೆ ನನಗೆ ಸಿಗುವ ಬಹುಮಾನವೇನು? ನಾನು ಸುವಾರ್ತೆಯನ್ನು ಸಾರುವಾಗ ಅದರಿಂದ ದೊರೆಯುವ ಪ್ರತಿಫಲವನ್ನು ಪಡೆಯದೇ ಅದನ್ನು ಉಚಿತವಾಗಿ ಸಾರುವುದೇ ನನಗೆ ದೊರೆಯುವ ಪ್ರತಿಫಲವಾಗಿದೆ.
Quae est ergo merces mea? Ut Evangelium praedicans, sine sumptu ponam Evangelium, ut non abutar potestate mea in Evangelio.
19 ೧೯ ನಾನು ಎಲ್ಲಾ ವಿಷಯಗಳಲ್ಲಿ ಸ್ವತಂತ್ರನಾಗಿದ್ದರೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳಬೇಕೆಂದು ನಾನು ಎಲ್ಲರಿಗೂ ದಾಸನಾದೆನು.
Nam cum liber essem ex omnibus, omnium me servum feci, ut plures lucrifacerem.
20 ೨೦ ಯೆಹೂದ್ಯರನ್ನು ಸಂಪಾದಿಸಿಕೊಳ್ಳುವುದಕ್ಕೆ ಯೆಹೂದ್ಯರಿಗೆ ಯೆಹೂದ್ಯನಂತಾದೆನು. ನಾನು ಧರ್ಮಶಾಸ್ತ್ರಕ್ಕೆ ಅಧೀನನಲ್ಲದವನಾದರೂ, ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ಅವರಿಗೋಸ್ಕರ ಧರ್ಮಶಾಸ್ತ್ರಕ್ಕೆ ಅಧೀನನಂತಾದೆನು.
Et factus sum Iudaeis tamquam Iudaeus, ut Iudaeos lucrarer.
21 ೨೧ ನಾನು ದೇವರ ಧರ್ಮಶಾಸ್ತ್ರ ಇಲ್ಲದವನಲ್ಲ, ಕ್ರಿಸ್ತನ ನಿಯಮಕ್ಕೊಳಗಾದವನೇ; ಆದರೂ ಧರ್ಮಶಾಸ್ತ್ರಕ್ಕೆ ಹೊರತಾದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ಧರ್ಮಶಾಸ್ತ್ರ ಬಾಹಿರನಂತಾದೆನು.
iis qui sub lege sunt, quasi sub lege essem (cum ipse non essem sub lege) ut eos, qui sub lege erant, lucrifacerem. iis, qui sine lege erant, tamquam sine lege essem (cum sine lege Dei non essem: sed in lege essem Christi) ut lucrifacerem eos, qui sine lege erant.
22 ೨೨ ಬಲವಿಲ್ಲದವರನ್ನು ಸಂಪಾದಿಸುವುದಕ್ಕಾಗಿ ನಾನೂ ಬಲವಿಲ್ಲದವನಾದೆನು. ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಎಲ್ಲರಿಗೂ ಎಲ್ಲರಂತಾದೆನು.
Factus sum infirmis infirmus, ut infirmos lucrifacerem. Omnibus omnia factus sum, ut omnes facerem salvos.
23 ೨೩ ಇದೆಲ್ಲವನ್ನು ಸುವಾರ್ತೆಗೋಸ್ಕರವೇ ಮಾಡಿ, ನಾನು ಇತರರ ಸಂಗಡ ಸುವಾರ್ತೆಯ ಆಶೀರ್ವಾದದಲ್ಲಿ ಪಾಲುಗಾರನಾಗಬೇಕೆಂದು ಇದನ್ನು ಮಾಡುತ್ತಿದ್ದೇನೆ.
Omnia autem facio propter Evangelium: ut particeps eius efficiar.
24 ೨೪ ಕ್ರೀಡಾಂಗಣದಲ್ಲಿ ಅನೇಕರು ಓಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ, ಆದರೂ ಒಬ್ಬನು ಮಾತ್ರ ಜಯಮಾಲೆಯನ್ನು ಪಡೆಯುತ್ತಾನೆ ಎಂಬುದು ನಿಮಗೆ ತಿಳಿಯದೋ? ಅವರಂತೆ ನೀವೂ ಸಹ ಬಹುಮಾನವನ್ನು ಗೆಲ್ಲಬೇಕೆಂದು ಓಡಿರಿ.
Nescitis quod ii, qui in stadio currunt, omnes quidem currunt, sed unus accipit bravium? Sic currite ut comprehendatis.
25 ೨೫ ಪ್ರತಿಯೊಬ್ಬ ಕ್ರೀಡಾಪಟುವು ತನ್ನ ತರಬೇತಿಯ ಎಲ್ಲಾ ವಿಷಯಗಳಲ್ಲಿ ಶಮೆದಮೆಯುಳ್ಳವನಾಗಿರುತ್ತಾನೆ. ಅವರು ಬಾಡಿ ಹೋಗುವ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುತ್ತಾರೆ; ನಾವಾದರೋ ಬಾಡಿಹೋಗದ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುವವರಾಗಿದ್ದೇವೆ.
Omnis autem, qui in agone contendit, ab omnibus se abstinet, et illi quidem ut corruptibilem coronam accipiant: nos autem incorruptam.
26 ೨೬ ಆದ್ದರಿಂದ ನಾನು ಸಹ ಗೊತ್ತುಗುರಿಯಿಲ್ಲದವನಂತೆ ಓಡುವುದಿಲ್ಲ; ಗಾಳಿಯೊಂದಿಗೆ ಗುದ್ದಾಡುವವನಂತೆ ಹೋರಾಡುವುದಿಲ್ಲ.
Ego igitur sic curro, non quasi in incertum: sic pugno, non quasi aerem verberans:
27 ೨೭ ಇತರರಿಗೆ ಬೋಧಿಸಿದ ಮೇಲೆ ನಾನೇ ಅಯೋಗ್ಯನಾಗದಂತೆ, ನನ್ನ ದೇಹವನ್ನು ದಂಡಿಸಿ ಸ್ವಾಧಿನದಲ್ಲಿಟ್ಟುಕೊಳ್ಳುತ್ತೇನೆ.
sed castigo corpus meum, et in servitutem redigo: ne forte cum aliis praedicaverim, ipse reprobus efficiar.